ಸೋಮವಾರಪೇಟೆ ಜ.21 NEWS DESK : ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಪಟ್ಟಣದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ನಡೆದ 38ನೇ ವರ್ಷದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಜೀವನ್ ನೇತೃತ್ವದ ತಂಡ ಪ್ರಥಮ ಸ್ಥಾನ ಪಡೆಯಿತು. ಕುಶಾಲನಗರದ ಜಿ.ಬಿ.ಎಸ್. ತಂಡ ದ್ವಿತೀಯ, ಸೋಮವಾರಪೇಟೆಯ ಸತ್ಯ ಸ್ಪೋಟ್ರ್ಸ್ ಕ್ಲಬ್ ತೃತೀಯ ಸ್ಥಾನಗಳಿಸಿತು. 20 ವರ್ಷದೊಳಗಿನವರ ವಿಭಾಗದಲ್ಲಿ ಸೋಮವಾರಪೇಟೆಯ ರಾಮದೂತ ತಂಡ ಪ್ರಥಮ, ತೇಜಾ ಬ್ರೋ ತಂಡ ದ್ವಿತೀಯ, ಕುಶಾಲನಗರದ ಜೈ ಮಾರುತಿ ತಂಡ ತೃತೀಯ ಸ್ಥಾನ ಪಡೆಯಿತು. ಪ್ರಾಥಮಿಕ ಶಾಲಾ ವಿಭಾಗದ ಸ್ಪರ್ಧೆಯಲ್ಲಿ ಜಿಎಂಪಿ ಶಾಲಾ ತಂಡ ಪ್ರಥಮ, ಓಎಲ್‍ವಿ ಶಾಲಾ ತಂಡ ದ್ವಿತೀಯ ಸ್ಥಾನ ಗಳಿಸಿದವು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜು ವಹಿಸಿದ್ದರು. ವಿಜೇತ ತಂಡಗಳಿಗೆ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಮಧುಸೂದನ್, ಪ.ಪಂ.ಸಿಬ್ಬಂದಿ ಜೀವನ್, ನೇಗಳ್ಳೆ ನಿಂಗಪ್ಪ, ತಲ್ತರೆಶೆಟ್ಟಳ್ಳಿ ರವಿ, ಕರ್ಕಳ್ಳಿ ಇಸಾಕ್, ಶಿಕ್ಷಕ ಪ್ರವೀಣ್, ಸತೀಶ್ ಅವರುಗಳು ಬಹುಮಾನ ವಿತರಿಸಿದರು. ಸಂಘದ…
ಲೇಖಕ: admin
ಸೋಮವಾರಪೇಟೆ ಜ.21 NEWS DESK : ಗ್ರಾಮ ಸಹಾಯಕರ ಸಂಘದಿಂದ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ, ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಯಿತು. ಗ್ರಾಮ ಸಹಾಯಕರುಗಳಿಗೆ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಬೇಕೆಂದು ಮನವಿ ಸಲ್ಲಿಸಿದರು. ಸಂಘದ ಬೇಡಿಕೆಗಳನ್ನು ಆದ್ಯತೆಯ ಮೇರೆ ಈಡೇರಿಸುವ ಭರವಸೆಯನ್ನು ಶಾಸಕರು ನೀಡಿದರು. ಇದೇ ಸಂದರ್ಭ ಶಾಸಕರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮ ಸಹಾಯಕರ ಸಂಘದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಸುರೇಶ್, ಪದಾಧಿಕಾರಿಗಳಾದ ಶಶಿಕುಮಾರ್, ಲೀನಾ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು.
ಸೋಮವಾರಪೇಟೆ ಜ.21 NEWS DESK : ಗಣರಾಜ್ಯೋತ್ಸವ ಆಚರಣೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದೆಂದು ಎಂದು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು. ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣೆ ಕುರಿತು ನಡೆಸುವ ಸಭೆಗೆ ಪ್ರತಿ ಬಾರಿಯೂ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸು ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯಲ್ಲೂ ಜನವರಿ 26ರ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ ನಂತರ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು. ಮಾಜಿ ಸೈನಿಕರನ್ನು ಪಥಸಂಚಲನದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬೇಕು. ಉಳಿದಂತೆ ಪೋಲೀಸ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ. ತಂಡಗಳು ಪಥಸಂಚಲನಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ತಿಳಿಸಿದರು.…
ಮಡಿಕೇರಿ NEWS DESK ಜ.20 : ಮೂರ್ನಾಡು ಸಮೀಪದ ಕಟ್ಟೆಮಾಡ್ ಊರ್ ಮಂದ್ ನಲ್ಲಿ, ಪುತ್ತರಿ ಊರೊರ್ಮೆ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಊರ್ ತಕ್ಕ ಮತ್ತು ಮಂದ್ ಸಮಿತಿಯ ಅಧ್ಯಕ್ಷ ಚಂಗಣಮಕ್ಕಡ ವಿನು ಅಪ್ಪಯ್ಯ ಅವರ ಕೊರವುಕಾರಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಮೂರ್ನಾಡು ಕೊಡವ ಸಮಾಜ ಅಧ್ಯಕ್ಷ ಪುದಿಯೊಕ್ಕಡ ಕಾಶಿ ಕರುಂಬಯ್ಯ, ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ಬೆಳ್ಯಪ್ಪ, ಯುಕೋ ಸಂಚಾಲಕ ಕೊಕ್ಕಲೆಮಾಡ ಮಂಜುಚಿಣ್ಣಪ್ಪ, ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟಿರ ಪೃಥ್ವಿಸುಬ್ಬಯ್ಯ, ಹಳ್ಳಿಗಟ್ಟು ಊರ್ ತಕ್ಕ ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ, ಕನೆಕ್ಟಿಂಗ್ ಕೊಡವಾಸ್ ಸಂಚಾಲಕ ಶಾಂತೆಯAಡ ನಿರನ್ ನಾಚಪ್ಪ ಉಪಸ್ಥಿತರಿದ್ದರು. ಸಭೆಯನ್ನುದ್ದೇಶಿಸಿ ಮಾತಾನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯ ನಮ್ಮ ಪೃಕೃತಿದತ್ತ ಬಳುವಳಿಯಾಗಿದ್ದು, ಇದನ್ನು ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ನಿಲ್ಲಬೇಕಾಗಿದೆ. ಮುಂದಿನ ದಿನಗಳಲ್ಲಿ ಕಟ್ಟೆಮಾಡಿನಲ್ಲಿ ಅಕಾಡೆಮಿಯ…
ಮಡಿಕೇರಿ ಜ.20 : ಕೊಡಗು ವಿಶಾಲ ಕರ್ನಾಟಕದೊಂದಿಗೆ ವಿಲೀನವಾಗಿ ಇಂದು ಒಂದು ಪುಟ್ಟ ಜಿಲ್ಲೆಯಾಗಿ ಉಳಿದಿದೆ. ಕೊಡಗಿನ ಮೂಲ ನಿವಾಸಿಗಳಾದ ಕೊಡವರು ಹಾಗೂ ಕೊಡವ ಸಂಸ್ಕೃತಿಗೆ ಒಳಪಟ್ಟ ಇತರ ಜನಾಂಗಗಳ ಮೇಲೆ ಕಳೆದ ಹಲವು ದಶಕಗಳಿಂದ ನಿರಂತರವಾಗಿ ನಡೆಯುತ್ತಿರುವ ಜನಾಂಗೀಯ ನಿಂದನೆ, ಜನಾಂಗೀಯ ತಾರತಮ್ಯ ಹಾಗೂ ಸಾಮಾಜಿಕ ದೌರ್ಜನ್ಯದ ವಿರುದ್ಧ ಇದೇ ಫೆಬ್ರವರಿ 2ರಿಂದ 7ರವರೆಗೆ ಬ್ರಹತ್ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನೆ ನಡೆಸಲು ಇಂದು ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆಗಳ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನು ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷರು ಸೇರಿದಂತೆ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಭಾಗಿಯಾಗಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕೊಡವ ಸಂಸ್ಕೃತಿಗೆ ಒಳಪಟ್ಟ ಎಲ್ಲಾ ಜನಾಂಗಗಳ ಸಹಕಾರದೊಂದಿಗೆ ದಕ್ಷಿಣ ಕೊಡಗಿನ ಗಡಿಭಾಗವಾದ ಕುಟ್ಟಾದಿಂದ ಜಿಲ್ಲಾಕೇಂದ್ರ ಮಡಿಕೇರಿಯವರೆಗೆ ಬೃಹತ್…
ಕುಶಾಲನಗರ NEWS DESK ಜ.20 : ಕುಶಾಲನಗರ ಡ್ರೀಮ್ಸ್ ಡೇ ಕೇರ್ ಪ್ಲೇ ಹೋಂ ಶಾಲೆಯಲ್ಲಿ ಪುಟಾಣಿಗಳಿಗೆ ಛದ್ಮವೇಷ ಕಾರ್ಯಕ್ರಮ ನಡೆಯಿತು. ಕುಶಾಲನಗರ ಕೊಡವ ಸಮಾಜ ಆವರಣದ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಅವರು ಪಾಲ್ಗೊಂಡು ಮಕ್ಕಳಿಗೆ ಹಿತವಚನ ನುಡಿದರು. ಪುಟಾಣಿ ಮಕ್ಕಳು ವಿವಿಧ ವೇಷಗಳನ್ನು ಧರಿಸಿ ಛದ್ಮವೇಷ ಸ್ಪರ್ಧೆಯಲ್ಲಿ ಪಾಲ್ಗೊಂಡರು. ನಂತರ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪತ್ರಕರ್ತ ಎಂ.ಎನ್.ಚಂದ್ರಮೋಹನ್ ಉಪಸ್ಥಿತರಿದ್ದರು. ಇದೆ ಸಂದರ್ಭ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆ ಪ್ರಮುಖರಾದ ಚೈತನ್ಯ ಸಿ ಮೋಹನ್, ವಿನುತಾ ಇದ್ದರು.
ಬೆಳಗಾವಿ NEWS DESK ಜ.20 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಮಡಿಕೇರಿ NEWS DESK ಜ.20 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಕುರಿತು ಚರ್ಚಿಸಲು ಅರಕಲಗೋಡು ಶಾಸಕ ಹಾಗೂ ಕೊಡಗು ಕೆಡಿಪಿ ಸದಸ್ಯ ಎ.ಮಂಜು ಅವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿಯಾಗಿ ಚರ್ಚಿಸಿದರು ಎಂದು ತಿಳಿದು ಬಂದಿದೆ. NEWS DESK ಕೊಡಗಿನಲ್ಲಿ ಶಾಂತಿ ನೆಲೆಸಬೇಕು, ಎಲ್ಲಾ ಜನಾಂಗದವರು ಒಗ್ಗಟ್ಟಾಗಿ ಶಾಂತಿ, ಪ್ರೀತಿಯಿಂದ ಜೀವನ ಸಾಗಿಸಬೇಕು, ವಿಳಂಬ ಮಾಡದೆ ಅಗತ್ಯ ಕ್ರಮ ಕೈಗೊಳ್ಳಿ. ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನಪ್ರತಿನಿಧಿಗಳು ಹಾಗೂ ಜನಾಂಗಗಳ ಪ್ರಮುಖರ ಸಭೆ ನಡೆಸಿ ಗೊಂದಲ ನಿವಾರಿಸುವಂತೆ ಸಲಹೆ ನೀಡಿದ್ದಾರೆ ಎಂದು ಮಾಹಿತಿ ಲಭಿಸಿದೆ. ಜ.25ಕ್ಕೆ ಜಿಲ್ಲಾಡಳಿತ ಸಭೆ ನಡೆಸುವ ಸಾಧ್ಯತೆಗಳಿದೆ ಎಂದು ತಿಳಿದು ಬಂದಿದೆ. NEWS DESK
ಮಡಿಕೇರಿ ಜ.20 NEWS DESK : ಅಲ್-ಅಮೀನ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಫೆ.27 ರಂದು ಕೊಡಗು ಜಿಲ್ಲೆಯ ಬಡ ಮುಸ್ಲಿಂ ಯುವತಿಯರಿಗೆ ಸುಂಟಿಕೊಪ್ಪದ ಎಸ್.ಎಸ್.ಇಂಟರ್ ನ್ಯಾಷನಲ್ ಹಾಲ್‍ನಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ನಡೆಸಲು ನಿರ್ಧರಿಸಿದ್ದು, ಇದಕ್ಕಾಗಿ ವಧುವಿನ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಹೆಚ್.ಅಹ್ಮದ್ ಹಾಜಿ ಹಾಗೂ ಕಾರ್ಯದರ್ಶಿ ಎಂ.ಇ.ಮೊಹಿದ್ದೀನ್ ತಿಳಿಸಿದ್ದಾರೆ. ಕಳೆದ 21 ವರ್ಷಗಳಿಂದ ಬಡ ಮುಸ್ಲಿಂ ಯುವತಿಯರಿಗೆ ಉಚಿತ ಸಾಮೂಹಿಕ ವಿವಾಹವನ್ನು ನಡೆಸಿಕೊಂಡು ಬರತ್ತಿರುವ ಆಲ್-ಅಮೀನ್ ಕೊಡಗು ಜಿಲ್ಲಾ ಸಮಿತಿಯು ಇದೀಗ ತನ್ನ ಕಾರ್ಯ ಸಾಧನೆಯ 22ನೇ ವರ್ಷಕ್ಕೆ ಪದಾರ್ಪಣೆ ಮಾಡಿದೆ. ವರ್ಷಕ್ಕೆ ಇಪ್ಪತ್ತೈದು ಯುವತಿಯರ ವಿವಾಹವನ್ನು ಉಚಿತವಾಗಿ ನಡೆಸಿಕೊಡುವ ಗುರಿಯನ್ನು ಸಮಿತಿ ಹೊಂದಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ 21 ವರ್ಷಗಳಲ್ಲಿ 463 ಮುಸ್ಲಿಂ ಯುವತಿಯರು ವೈವಾಹಿಕ ಜೀವನಕ್ಕೆ ಕಾಲಿರಿಸುವಂತೆ ಮಾಡುವಲ್ಲಿ ಸಮಿತಿಯು ಗಣನೀಯ ಸಾಧನೆಯನ್ನು ಮಾಡಿದೆ. ಈ ವರ್ಷವೂ ವಧುವಿಗೆ ತಲಾ ಒಂದು ಜೊತೆ ಉಡುಪು, ವರನಿಗೂ ಒಂದು…
ಮಡಿಕೇರಿ ಜ.20 NEWS DESK : ಮಂಗಳೂರಿನ ಯೆನೊಪೊಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಮಹಿಳಾ ಯೋಗ ಕ್ಷೇಮ ಚಿಕಿತ್ಸಾಲಯ ಸಹಯೋಗದಲ್ಲಿ ಉಚಿತ ಕೃತ ಅಂಗಾಂಗಳ ವಿತರಣಾ ಶಿಬಿರ ನಡೆಯಲಿದೆ. ಮೈಸೂರು ಸುಯೋಗ್ ಆಸ್ಪತ್ರೆ ಇವರ ವತಿಯಿಂದ 2ಡಿ ಎಕೋ ಮತ್ತು ಇಸಿಜಿ ಸೇರಿದಂತೆ ಉಚಿತ ಹೃದಯ ತಪಾಸಣೆ ಮತ್ತು ಉಚಿತ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ತಜ್ಞ ವೈದ್ಯರುಗಳಿಂದ ಸಮಾಲೋಚನೆ. ಕೊಡಗು ವೈದ್ಯಕೀಯ ಕಾಲೇಜಿನ ಎಲ್ಲಾ ತಜ್ಞರಿಂದ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವು ಜ.26 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಪೊಲೀಸ್ ಮೈತ್ರಿ ಭವನದಲ್ಲಿ ನಡೆಯಲಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಜ.24 ರೊಳಗೆ ದೂ.ಸಂ. 8792874030 ಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು. ರೋಗಿಗಳು ಹಳೆಯ ವೈದ್ಯಕೀಯ ದಾಖಲೆಗಳನ್ನು ಹಾಗೂ ಆಧಾರ್ ಕಾರ್ಡ್, ಭಾವಚಿತ್ರ ತರಬೇಕು. ಅದೇ ದಿನ ಕೊಡಗಿನ ಸಂಸ್ಕೃತಿ ಸಿರಿ ಬಳಗ ಟ್ರಸ್ಟ್…






