ಲೇಖಕ: admin

ಸೋಮವಾರಪೇಟೆ ಸೆ.30 NEWS DESK : ಕೊಡ್ಲಿಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಡ್ಲಿಪೇಟೆ ಹೋಬಳಿ ಘಟಕದ ನೂತನ ಸದಸ್ಯರ ಸೇರ್ಪಡೆ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕರವೇ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಂಚಾಲಕಿ ಶ್ರೀಮತಿ ದೀಪಾ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕವಿತಾ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಂಘಟಕ ಹಾಗೂ ಹೋರಾಟಗಾರ ವಸಂತ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.  ಕರವೇ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ದಾಸ್ ಮಾತನಾಡಿ, ಸಂಘಟನೆಯ ಶಿಸ್ತು ಹಾಗೂ ಪಾಲಿಸಬೇಕಾದ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು. ನಾಡು, ನುಡಿ ಹಾಗೂ ಜಲರಕ್ಷಣೆ ಸೇರಿದಂತೆ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದ ಸಂದರ್ಭದಲ್ಲಿ ಕಾರ್ಯಕರ್ತರು ಹೋರಾಟಕ್ಕೆ ಸಿದ್ಧರಾಗಿರಬೇಕು ಎಂದು ಕರೆ ನೀಡಿದರು. ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಕುಡುಪಜೆ ಹಾಗೂ ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ…

Read More

ತಿತಿಮತಿ, NEWS DESK ಸೆ.30: ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆರ್ಥಿಕ ವಂಚನೆ ಹಾಗೂ ಸೈಬರ್ ಬೆದರಿಕೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತಮ್ಮ ಗೌಪ್ಯ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದೆ ಎಚ್ಚರಿಕೆಯಿಂದ ಇರಬೇಕು ಎಂದು ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಕಾಳೇಗೌಡ ಸಲಹೆ ನೀಡಿದರು. ಪೊನ್ನಂಪೇಟೆ ತಾಲೂಕಿನ ತಿತಿಮತಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಬಜಾಜ್ ಫೈನಾನ್ಸ್ ಲಿಮಿಟೆಡ್ (BFL), ಗಿರಿಜನ ಲ್ಯಾಂಪ್ ಸೊಸೈಟಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಜಾಹೀರಾತುಗಳ ಮೂಲಕ ಆಮಿಷವೊಡ್ಡಿ, ಒಟಿಪಿ ಹಾಗೂ ಪಿನ್‌ಗಳನ್ನು ಪಡೆದು ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವಂಚಕರು ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಂಕ್, ಸರ್ಕಾರಿ ಇಲಾಖೆ ಅಥವಾ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಲಿಂಕ್‌ಗಳನ್ನು ಮೊಬೈಲ್‌ಗೆ ಕಳುಹಿಸಿ ವೈಯಕ್ತಿಕ ಮಾಹಿತಿಯನ್ನು ಪಡೆಯಲು ವಂಚಕರು ಪ್ರಯತ್ನಿಸುತ್ತಾರೆ. ಇಂತಹ ಯಾವುದೇ ಆಮಿಷಗಳಿಗೆ ಸಾರ್ವಜನಿಕರು ಬಲಿಯಾಗಬಾರದು ಎಂದು ಕಾಳೇಗೌಡ ಎಚ್ಚರಿಸಿದರು. ಯಾವುದೇ ಬ್ಯಾಂಕಿಂಗ್ ವ್ಯವಹಾರಗಳ ಸಂದರ್ಭದಲ್ಲಿ…

Read More

ನಾಪೋಕ್ಲು, NEWS DESK ಸೆ.30: ಅಮೃತ ಸಿನಿಕ್ರಾಫ್ಟ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಶೆರಟನ್ ಗ್ರಾಂಡ್ ಹೋಟೆಲ್ ಬ್ರಿಗೇಡ್ ಗೇಟ್‌ವೇನಲ್ಲಿ ಆಯೋಜಿಸಲಾಗಿದ್ದ ‘ಎಸಿ ಮಿಸ್ & ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ (Mrs India Women of Substance) ಆವೃತ್ತಿ-9ರ ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ‘ಮಿಸೆಸ್’ ವಿಭಾಗದಲ್ಲಿ ಕೊಡಗಿನ ಪೊನ್ನಂಪೇಟೆಯ ಕರ್ತಮಾಡ ಶಮಾ ಅಪ್ಪಣ್ಣ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡು ಸಾಧನೆ ಮಾಡಿದ್ದಾರೆ. ಸೆಪ್ಟೆಂಬರ್ 27ರಂದು ನಡೆದ ಅಂತಿಮ ಸ್ಪರ್ಧೆಯಲ್ಲಿ ಶಮಾ ಅಪ್ಪಣ್ಣ ಅವರು ತಮ್ಮ ಪ್ರತಿಭೆ, ಜಾಣ್ಮೆ ಹಾಗೂ ಆತ್ಮವಿಶ್ವಾಸದಿಂದ ತೀರ್ಪುಗಾರರ ಗಮನ ಸೆಳೆದು ವಿಜೇತರಾಗಿ ಹೊರಹೊಮ್ಮಿದರು. ಇವರು ಪೊನ್ನಂಪೇಟೆಯ ಕರ್ತಮಾಡ ಡಿಕ್ಕಿ ಅಪ್ಪಣ್ಣ ಅವರ ಧರ್ಮಪತ್ನಿಯಾಗಿದ್ದು, ಹೋದವಾಡ ಗ್ರಾಮದ ಚೌರೀರ ಬೋಪಯ್ಯ ಹಾಗೂ ಶಾರದಾ ದಂಪತಿಯ ಪುತ್ರಿಯಾಗಿದ್ದಾರೆ. ಶಮಾ ಅಪ್ಪಣ್ಣ ಅವರ ಈ ಸಾಧನೆಗೆ ಕೊಡಗಿನಾದ್ಯಂತ ವ್ಯಾಪಕ ಪ್ರಶಂಸೆ ಹಾಗೂ ಅಭಿನಂದನೆಗಳು ವ್ಯಕ್ತವಾಗಿವೆ. ದುಗ್ಗಳ ಸದಾನಂದ

Read More

ವಿರಾಜಪೇಟೆ, NEWS DESK ಸೆ.30: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವಿರಾಜಪೇಟೆ ಹಾಗೂ ಪೊನ್ನಂಪೇಟೆ ಘಟಕಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ವಿರಾಜಪೇಟೆಯ ಸಿಐಟಿಯು ಕಚೇರಿ ಸಭಾಂಗಣದಲ್ಲಿ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ಸಂಯುಕ್ತ ಸಮ್ಮೇಳನ ನಡೆಯಿತು. ಬಿಸಿಯೂಟ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ವಿವಿಧ ಸಮಸ್ಯೆಗಳು, ಆರ್ಥಿಕ ಸಂಕಷ್ಟಗಳು ಹಾಗೂ ಸರಕಾರದ ಸೌಲಭ್ಯಗಳ ಕೊರತೆ ಕುರಿತು ಸಮ್ಮೇಳನದಲ್ಲಿ ಗಂಭೀರ ಚರ್ಚೆ ನಡೆಯಿತು. ಕನಿಷ್ಠ ವೇತನ, ಉದ್ಯೋಗ ಭದ್ರತೆಗೆ ಆಗ್ರಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಎ.ಸಿ. ಸಾಬು, ಬೆಲೆ ಏರಿಕೆಯ ಸಂದರ್ಭದಲ್ಲಿ ಅತಿ ಕಡಿಮೆ ಗೌರವಧನದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದರು. ಅಕ್ಷರ ದಾಸೋಹ ನೌಕರರನ್ನು ಕೇವಲ ಗೌರವ ಸಿಬ್ಬಂದಿಯಾಗಿ ಪರಿಗಣಿಸದೆ ಕಾರ್ಮಿಕರೆಂದು ಗುರುತಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಉದ್ಯೋಗ ಭದ್ರತೆ, ಪಿಂಚಣಿ ಹಾಗೂ ಭವಿಷ್ಯ ನಿಧಿ ಸೌಲಭ್ಯ ಕಲ್ಪಿಸಬೇಕು. ಅಡುಗೆ ವೇಳೆ ಹೊಗೆ, ಭಾರದ ಪಾತ್ರೆಗಳ…

Read More

ವಿರಾಜಪೇಟೆ, NEWS DESK ಸೆ.30: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವಿರಾಜಪೇಟೆ ತಾಲೂಕು ಗೋಣಿಕೊಪ್ಪ ವಲಯದ ವತಿಯಿಂದ ಗೋಣಿಕೊಪ್ಪದ ಸಮುದಾಯ ಭವನದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಹಾಯಕಿ ನವ್ಯ ಅವರು ಸ್ವಉದ್ಯೋಗದ ವಿವಿಧ ಅವಕಾಶಗಳ ಕುರಿತು ಮಾಹಿತಿ ನೀಡಿದರು. ನಿರುದ್ಯೋಗ ಸಮಸ್ಯೆಯಲ್ಲ, ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಹಲವು ಮಾರ್ಗಗಳಿವೆ ಎಂದು ತಿಳಿಸಿದರು. ಫಾಸ್ಟ್ ಫುಡ್ ತಯಾರಿಕೆ, ಮಹಿಳೆಯರಿಗೆ ಟೈಲರಿಂಗ್, ಅಣಬೆ ಕೃಷಿ, ಜೂಟ್ ಬ್ಯಾಗ್, ಪೇಪರ್ ಬ್ಯಾಗ್ ಹಾಗೂ ಬಟ್ಟೆ ಬ್ಯಾಗ್ ತಯಾರಿಕೆ, ಅಗರಬತ್ತಿ ತಯಾರಿಕೆ ಸೇರಿದಂತೆ ವಿವಿಧ ಸ್ವಉದ್ಯೋಗಗಳನ್ನು ಕೈಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಬಹುದು ಎಂದು ಅವರು ವಿವರಿಸಿದರು. ಗೋಣಿಕೊಪ್ಪ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಮಾಡಲು ನೂರಾರು ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

Read More

ವಿರಾಜಪೇಟೆ, NEWS DESK ಸೆ.30: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಮುಖಂಡರು ಹಾಗೂ ವಂದನೀಯ ಗುರುಗಳ ಪ್ರಮುಖ ನಿಯೋಗವು ಬೆಂಗಳೂರಿನ ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿತು. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಕ್ಷೇತ್ರದ ಅಭಿವೃದ್ಧಿ ಸಮಸ್ಯೆಗಳು, ಕ್ರಿಶ್ಚಿಯನ್ ಸಮುದಾಯ ಹಾಗೂ ಸಾರ್ವಜನಿಕರ ಉನ್ನತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಚಿವರೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯದ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಸಚಿವ ಯು.ಟಿ. ಖಾದರ್ ಅವರು, ಮುಖಂಡರು ಮಂಡಿಸಿದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಸ್ಥಳೀಯ ಅಗತ್ಯಗಳಿಗೆ ಸ್ಪಂದಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ…

Read More

ವಿರಾಜಪೇಟೆ, NEWS DESK ಸೆ.30: ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ವಿರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ. ಮಂಜುನಾಥ್ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಜಿಲ್ಲೆಯ ರಾಜಕೀಯ ಬೆಳವಣಿಗೆಗಳು, ರೈತರ ಸಮಸ್ಯೆಗಳು ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಉತ್ತಮ ಸಮನ್ವಯ ಸಾಧಿಸಲು ಸಮನ್ವಯ ಸಮಿತಿ ರಚಿಸುವಂತೆ ಸಚಿವರಿಗೆ ಮನವಿ ಮಾಡಲಾಯಿತು. ಸಮಿತಿಯ ಮೂಲಕ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಒಗ್ಗಟ್ಟು ಮೂಡಿಸಿ ಚುನಾವಣೆಯನ್ನು ಎದುರಿಸಲು ರೂಪುರೇಷೆ ಸಿದ್ಧಪಡಿಸುವಂತೆ ಕೋರಲಾಯಿತು. ಇದೇ ವೇಳೆ ಕೊಡಗಿನ ಕಾಫಿ ಬೆಳೆಗಾರರು, ಕೃಷಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಬಾರದು ಎಂದು ಕೇಂದ್ರ ಸರ್ಕಾರದ ಮಟ್ಟದಲ್ಲಿ ಧ್ವನಿ…

Read More

ಮಡಿಕೇರಿ, NEWS DESK ಸೆ.30: ಕಸ್ತೂರಿ ರಂಗನ್ ವರದಿಯ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ, ಅದರ ಆಧಾರದ ಮೇಲಿನ ಕರಡು ಅಧಿಸೂಚನೆಗೆ ವಿರೋಧವಾಗಿ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. ರೈತರ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ತಮ್ಮ ನಿಲುವನ್ನು ವಿಧಾನಸಭೆಯಲ್ಲಿ ಸ್ಪಷ್ಟವಾಗಿ ಮಂಡಿಸಿರುವುದಾಗಿ ಅವರು ಹೇಳಿದ್ದಾರೆ. ರೈತರ ಪರವಾಗಿ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿರುವ ಡಾ. ಮಂತರ್ ಗೌಡ, ರೈತರ ಹಿತವೇ ತಮ್ಮ ಆದ್ಯತೆಯಾಗಿದ್ದು, ರೈತರ ಬದುಕು ಮತ್ತು ಹಿತಾಸಕ್ತಿಗಳ ರಕ್ಷಣೆಗೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಸೆ.30: ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಎಸ್.ಜೆ. ಅವರ ನೇತೃತ್ವದಲ್ಲಿ ನಡೆಯಿತು. ಕೊಡಗು ಜಿಲ್ಲೆಯನ್ನು ಈಗಾಗಲೇ ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಮುನ್ನವೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸುವಂತೆ ತಿಳಿಸಲಾಯಿತು. ಜಲ ಜೀವನ್ ಮಿಷನ್ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದಿರುವ ಕಡೆಗಳಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸುವಂತೆ ಸೂಚಿಸಲಾಯಿತು. ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಂಡುಬಂದಿರುವ ಸಮಸ್ಯೆಗಳನ್ನು ಸಭೆಯಲ್ಲಿ ಚರ್ಚಿಸಿ, ಅವುಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಸೂಚನೆ ನೀಡಲಾಯಿತು. ವಿಬಿ ಜಿ ರಾಮ್ ಜಿ ಯೋಜನೆಯ ಪ್ರಗತಿ ಕುರಿತು ಚರ್ಚೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆಯಿರುವುದರಿಂದ ಜನರ ಅಗತ್ಯಕ್ಕೆ ಅನುಗುಣವಾಗಿ ಯೋಜನೆಯ ಸೌಲಭ್ಯಗಳನ್ನು ಒದಗಿಸಿ ಪ್ರಗತಿ ಸಾಧಿಸುವಂತೆ…

Read More

ಮಡಿಕೇರಿ, NEWS DESK ಸೆ.30: ವಿಶ್ವ ಹೃದಯ ದಿನದ ಅಂಗವಾಗಿ ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ. ಸನತ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿವರ್ಷ ಸೆಪ್ಟೆಂಬರ್ 29ರಂದು ವಿಶ್ವ ಹೃದಯ ದಿನ ಆಚರಿಸಲಾಗುತ್ತದೆ. ಹೃದಯ ರಕ್ತನಾಳದ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದು ಹಾಗೂ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಸಮಸ್ಯೆಗಳನ್ನು ತಡೆಗಟ್ಟುವ ಕುರಿತು ಅರಿವು ಮೂಡಿಸುವುದು ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು. ಹೃದಯದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ತಂಬಾಕಿನಿಂದ ದೂರವಿರುವುದು, ಒತ್ತಡ ನಿಯಂತ್ರಣ ಹಾಗೂ ನಿಯಮಿತ ಆರೋಗ್ಯ ತಪಾಸಣೆಯನ್ನು ಜೀವನಶೈಲಿಯ ಭಾಗವನ್ನಾಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಮಡಿಕೇರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುನೀಲ್ ಮಾತನಾಡಿ, ಹೃದಯರೋಗಗಳ ಅಪಾಯ, ಲಕ್ಷಣಗಳು ಹಾಗೂ ತಡೆಗಟ್ಟುವ…

Read More