ಕುಶಾಲನಗರ ಆ.12 NEWS DESK : ಆನೆ-ಮಾನವ ಸಹಬಾಳ್ವೆಯ ಕುರಿತು ಪ್ರತಿಯೊಬ್ಬರೂ ಅರಿವು ಮತ್ತು ಮಾಹಿತಿ ಹೊಂದುವ ಮೂಲಕ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅಭಿಪ್ರಾಯಪಟ್ಟರು. ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ವಿಶ್ವ ಆನೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವನ್ಯಜೀವಿಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಯೋಗ ಅತ್ಯಂತ ಅಗತ್ಯ. ಯಾವುದೇ ಸಂದರ್ಭದಲ್ಲೂ ಜೀವಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಸಾರ್ವಜನಿಕರಿಂದ ನಿರಂತರ ಸಹಕಾರ ದೊರೆತಲ್ಲಿ ವನ್ಯಜೀವಿ ಸಂಘರ್ಷ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು. ಆನೆಗಳು ಸೇರಿದಂತೆ ಇತರ ವನ್ಯಜೀವಿಗಳ ಕುರಿತು ಮುಂದಿನ ಪೀಳಿಗೆಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿಯಾಗಿದೆ. ವನ್ಯಜೀವಿ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಜಾಗೃತಿ ಬೆಳೆಸಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ…
ಲೇಖಕ: admin
ಮಡಿಕೇರಿ NEWS DESK ಆ.12 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ “ಪೊಲಿಂಕಾನ ಉತ್ಸವ” ವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ ಹಾಗೂ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಹರಶಿನ, ಕುಂಕುಮ, ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ಪೂಜೆ ಮಾಡಲಾಯಿತು. ನಂತರ ಶ್ರೀಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಬಂದು ವಾದ್ಯಗೋಷ್ಠಿಗಳೊಂದಿಗೆ ಕಾವೇರಿ, ಸುಜ್ಯೋತಿ ಹಾಗೂ ಕನ್ನಿಕೆ ನದಿಗಳ ತ್ರಿವೇಣಿ ಸಂಗಮಕ್ಕೆ ಬರಲಾಯಿತು. ನದಿಗೆ ವಿಶೇಷ ಪೂಜೆ ಸಲ್ಲಿಸಿ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪವನ್ನು ವಿಸರ್ಜಿಸಲಾಯಿತು. ನೂರಾರು ಭಕ್ತರು ‘ಪೊಲಿಂಕಾನ ಉತ್ಸವ’ ಕ್ಕೆ ಸಾಕ್ಷಿಯಾದರು. ಪ್ರತಿವರ್ಷ ಭೀಮನ ಅಮಾವಾಸ್ಯೆಯಂದು ‘ಪೊಲಿಂಕಾನ ಉತ್ಸವ’ ವನ್ನು ಆಚರಿಸಿ ತ್ರಿವೇಣಿ ಸಂಗಮದಲ್ಲಿ ತಾಯಿ ಕಾವೇರಿಗೆ ಬಾಗಿನ ಅರ್ಪಿಸುವ ಪದ್ಧತಿಯನ್ನು ಬಹಳ ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ. ಉತ್ತಮ ಮಳೆಯಾಗಿ ನಾಡಿಗೆ ಸಮೃದ್ಧಿಯನ್ನು ನೀಡುವ ಕಾವೇರಿ ಮಾತೆಗೆ ವಿಶೇಷ…
ಮಡಿಕೇರಿ NEWS DESK ಆ.12 : ಕೊಡವ ಮಕ್ಕಡ ಕೂಟದ 126ನೇ ಪುಸ್ತಕ ಹಿರಿಯ ಪತ್ರಕರ್ತ ಎಂ.ಶ್ರೀಧರ್ ಹೂವಲ್ಲಿ ರಚಿತ “ಕಥಾಂಜಲಿ” ಪುಸ್ತಕ ಬಿಡುಗಡೆ ಸಮಾರಂಭ ಆ.16 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಡಗೂರು ಹೆಚ್.ವಿಶ್ವನಾಥ್ ಅವರು “ಕಥಾಂಜಲಿ” ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಮಾಜ ಸೇವಕರುಗಳಾದ ಕೆ.ಎಂ.ಗಣೇಶ್, ಆಯಲಪಂಡ ಪುಷ್ಪ ಪೂಣಚ್ಚ, ದಮಯಂತಿ ಪೊನ್ನಪ್ಪ ಹಾಗೂ “ಕಥಾಂಜಲಿ” ಪುಸ್ತಕದ ಬರಹಗಾರ ಎಂ.ಶ್ರೀಧರ್ ಹೂವಲ್ಲಿ ಅವರು ಉಪಸ್ಥಿತರಿರುವರು. *ಕಥಾಂಜಲಿ* “ಕಥಾಂಜಲಿ” ಎಂ.ಶ್ರೀಧರ್ ಹೂವಲ್ಲಿ ಅವರು ರಚಿಸಿರುವ ಎರಡನೇ ಕೃತಿಯಾಗಿದ್ದು, ಇದರಲ್ಲಿ ಒಟ್ಟು 11 ಕಥೆಗಳಿವೆ. ಸಾಮಾಜಿಕ ಮತ್ತು ಸಾಂಸಾರಿಕ ಕಥಾ ವಸ್ತು ಅಡಕವಾಗಿದೆ. *ಲೇಖಕರ ಪರಿಚಯ* ಹಿರಿಯ ಪತ್ರಕರ್ತ ಎಂ.ಶ್ರೀಧರ್ ಹೂವಲ್ಲಿ ಅವರು…
ಮಡಿಕೇರಿ NEWS DESK ಆ.12 : ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ನೀಡಿ ಸರಕಾರದ ವಿಶೇಷ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಆದೇಶಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದ ಎ.ಎಸ್.ಪೊನ್ನಣ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರದಲ್ಲಿ ವಿಧಾನಸಭೆಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಈ ಹುದ್ದೆಯ ಬಗ್ಗೆ ಪೊನ್ನಣ್ಣ ಅವರಿಗೆ ಆಸಕ್ತಿ ಇಲ್ಲದ ಕಾರಣ ಮತ್ತು ಕಾರ್ಯಕರ್ತರ ವಿರೋಧದ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮಡಿಕೇರಿ NEWS DESK ಆ. 12 : ಅಂತರರಾಷ್ಟ್ರೀಯ ಖ್ಯಾತಿಯ ಟೆನ್ನಿಸ್ ಆಟಗಾರ ಮಚ್ಚಂಡ ರೋಹನ್ ಬೋಪಣ್ಣ, ಮಾದಾಪುರದಲ್ಲಿನ ಶ್ರೀಮತಿ ಡಿ.ಚೆನ್ಮಮ್ಮ ಪದವಿ ಪೂವ೯ ಕಾಲೇಜಿಗೆ ಭೇಟಿ ನೀಡಿ ವಿದ್ಯಾಥಿ೯ಗಳೊಂದಿಗೆ ಸಂವಾದ ನಡೆಸಿದರು. 2024ರ ಆಸ್ಟ್ರೇಲಿಯಾ ಓಪನ್ ಡಬಲ್ಸ್ ವಿಶ್ವ ನಂಬರ್ ಒನ್ ಶ್ರೇಯಾಂಕಿತ ಕ್ರೀಡಾತಾರೆ ,ಪದ್ಮಶ್ರೀ,ಏಕಲವ್ಯ ಅರ್ಜುನ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಅಂತರಾಷ್ಟ್ರೀಯ ಟೆನಿಸ್ ಆಟಗಾರರಾಗಿದ್ದ ರೋಹನ್ ಬೋಪಣ್ಣ ವಿದ್ಯಾಥಿ೯ಗಳಿಗೆ ಕ್ರೀಡಾ ಕ್ಷೇತ್ರದ ಮಹತ್ವ ಮತ್ತು ಕ್ರೀಡಾಪಟುವಾಗಲು ಕೈಗೊಳ್ಳಬೇಕಾದ ಪೂವ೯ ತಯಾರಿಯ ಬಗ್ಗೆ ಕೆಲವೊಂದು ಸಲಹೆ ನೀಡಿದರು. ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರವಿರಲಿ ಧೃಡತೆಯಿಂದ ಮುಂದುವರೆದಲ್ಲಿ ಜೀವನದಲ್ಲಿ ಯಶಸ್ಸು ಖಂಡಿತಾ ಸಾಧ್ಯ.ಪ್ರತಿಯೊಬ್ಬರ ಜೀವನದಲ್ಲಿ ಅಡೆತಡೆಗಳು ಬರುವುದು ಸಾಮಾನ್ಯ . ಅವೆಲ್ಲವನ್ನು ಮೀರಿ ಮುನ್ನಗಬೇಕೆಂದು ರೋಹನ್ ಕಿವಿಮಾತು ಹೇಳಿದರು. ತಮ್ಮ ತ್ರಿದ ಫೌಂಡೇಶನ್ ಮೂಲಕ ಬಡ ಹೆಣ್ಣು ಮಕ್ಕಳ ಶಿಕ್ಷೆಣಕ್ಕೆ ಪ್ರೋತ್ಸಾಹ ನೀಡುತ್ತಿರುವ ರೋಹನ್ ಬೋಪಣ್ಣ ಅವರ ಸೇವಾ ಕಾರ್ಯವನ್ನು ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆಯ ಆಡಳಿತ…
ಮಡಿಕೇರಿ NEWS DESK ಆ.12 : ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆದೇಶ ಪತ್ರ ವಿತರಿಸಿದರು. ಸೋಮವಾರಪೇಟೆಯಲ್ಲಿ ಶಾಸಕರ ಕಛೇರಿ ಆವರಣದಲ್ಲಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳನ್ನು ತಮ್ಮ ಮಕ್ಕಳಂತೆ ಪ್ರೀತಿಯಿಂದ ನೋಡಿಕೊಳ್ಳಬೇಕು. ಮಳೆಗಾಲವಾದ ಕಾರಣ ಅಂಗನವಾಡಿ ಕೇಂದ್ರ ಸುಸ್ಥಿತಿಯಲ್ಲಿದೆಯೇ ಎನ್ನುವುದನ್ನು ಗಮನಿಸಬೇಕು ಎಂದು ಕಿವಿಮಾತು ಹೇಳಿದರು. ಮಹಿಳೆಯರು ಹಾಗೂ ಮಕ್ಕಳಿಗೆ ಸಂಬ0ಧಿಸಿದ ಸರಕಾರದ ವಿವಿಧ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡಬೇಕು ಮತ್ತು ಸಮಯ ಪಾಲನೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದರು.
ಪ್ರತಿ ವರ್ಷ ಆಗಸ್ಟ್ 12 ರಂದು ಭಾರತದಾದ್ಯಂತ ‘ರಾಷ್ಟ್ರೀಯ ಗ್ರಂಥಪಾಲಕರ ದಿನ’ (National Librarians’ Day) ಎಂದು ಆಚರಿಸಲಾಗುತ್ತದೆ. ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದೇ ಖ್ಯಾತರಾದ ಡಾ. ಎಸ್. ಆರ್. ರಂಗನಾಥನ್ (ಸಿಯಾಳಿ ರಾಮಾಮೃತ ರಂಗನಾಥನ್) ಅವರ ಜನ್ಮದಿನದ ಸವಿನೆನಪಿಗಾಗಿ ಈ ದಿನವನ್ನು ಗ್ರಂಥಪಾಲಕರ ಸೇವೆಗೆ ಸಮರ್ಪಿಸಲಾಗಿದೆ. ಡಾ. ಎಸ್. ಆರ್. ರಂಗನಾಥನ್ ಮತ್ತು ಅವರ ಕೊಡುಗೆ 1892 ರ ಆಗಸ್ಟ್ 12 ರಂದು ತಮಿಳುನಾಡಿನಲ್ಲಿ ಜನಿಸಿದ ಡಾ. ಎಸ್. ಆರ್. ರಂಗನಾಥನ್ ಅವರು ಗಣಿತಜ್ಞರಾಗಿದ್ದು, ನಂತರ ಗ್ರಂಥಾಲಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಭಾರತದಲ್ಲಿ ಗ್ರಂಥಾಲಯ ವಿಜ್ಞಾನಕ್ಕೆ ವೈಜ್ಞಾನಿಕ ರೂಪ ನೀಡಿ, ವ್ಯವಸ್ಥಿತವಾಗಿ ಬೆಳೆಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಅವರು ಪ್ರತಿಪಾದಿಸಿದ “ಗ್ರಂಥಾಲಯ ವಿಜ್ಞಾನದ ಐದು ನಿಯಮಗಳು” (Five Laws of Library Science) ಜಗತ್ತಿನಾದ್ಯಂತ ಇಂದು ಗ್ರಂಥಾಲಯಗಳ ನಿರ್ವಹಣೆಗೆ ದಿಕ್ಸೂಚಿಯಾಗಿವೆ: ಪುಸ್ತಕಗಳು ಬಳಕೆಗೆ ಇವೆ (Books are for use) ಪ್ರತಿಯೊಬ್ಬ ಓದುಗನಿಗೂ ಅವನ/ಅವಳ ಪುಸ್ತಕ ಸಿಗಬೇಕು (Every reader his/her book) ಪ್ರತಿಯೊಂದು ಪುಸ್ತಕಕ್ಕೂ ಅದರ ಓದುಗ ಸಿಗಬೇಕು (Every book its reader) ಓದುಗರ ಸಮಯವನ್ನು ಉಳಿಸಿ (Save the time of the reader) ಗ್ರಂಥಾಲಯವು ಬೆಳೆಯುವ ಸಂಸ್ಥೆಯಾಗಿದೆ (The library is a growing organism) ಗ್ರಂಥಪಾಲಕರ ಪಾತ್ರ ಮತ್ತು ಮಹತ್ವ ಸಮಾಜದಲ್ಲಿ ಗ್ರಂಥಪಾಲಕರು ಕೇವಲ ಪುಸ್ತಕಗಳನ್ನು ಜೋಡಿಸಿಡುವವರಲ್ಲ; ಅವರು ಜ್ಞಾನದ ಸಾಗರದಲ್ಲಿ ಸೂಕ್ತ ಮಾಹಿತಿಯನ್ನು ಹುಡುಕಿಕೊಡುವ ಮಾರ್ಗದರ್ಶಕರು. ಜ್ಞಾನ ಸೇತುವೆ: ಓದುಗರು ಮತ್ತು ಅಪಾರ ಜ್ಞಾನ ಭಂಡಾರದ ನಡುವೆ ಸಂಪರ್ಕ ಸೇತುವೆಯಾಗಿ ಗ್ರಂಥಪಾಲಕರು ಕಾರ್ಯನಿರ್ವಹಿಸುತ್ತಾರೆ. ಓದಿನ ಅಭಿರುಚಿ ಬೆಳೆಸುವುದು: ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಓದಿನ ಹವ್ಯಾಸವನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಮಾಹಿತಿ ನಿರ್ವಹಣೆ: ಸಾವಿರಾರು ಪುಸ್ತಕಗಳು, ನಿಯತಕಾಲಿಕೆಗಳು, ಮತ್ತು ಸಂಶೋಧನಾ ಪ್ರಬಂಧಗಳನ್ನು ಸುಲಭವಾಗಿ ಸಿಗುವಂತೆ ವರ್ಗೀಕರಿಸಿ ವ್ಯವಸ್ಥಿತವಾಗಿಡುವುದು ಇವರ ಶ್ರಮ. ಡಿಜಿಟಲ್ ಯುಗದಲ್ಲಿ ಗ್ರಂಥಾಲಯ ಮತ್ತು ಗ್ರಂಥಪಾಲಕರು ಇಂದಿನ ತಂತ್ರಜ್ಞಾನದ ಯುಗದಲ್ಲಿ ಇಂಟರ್ನೆಟ್‌ನಲ್ಲಿ ಕೋಟ್ಯಂತರ ಮಾಹಿತಿ ಬೆರಳ ತುದಿಯಲ್ಲಿ ಲಭ್ಯವಿದೆ. ಆದರೆ, ಅದರಲ್ಲಿ ಸರಿಯಾದ, ಅಧಿಕೃತ ಮತ್ತು ಉಪಯುಕ್ತ ಮಾಹಿತಿಯನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು. ಇಂತಹ ಸಮಯದಲ್ಲಿ ಗ್ರಂಥಪಾಲಕರ ಅಗತ್ಯ ಇನ್ನಷ್ಟು ಹೆಚ್ಚಾಗಿದೆ. ಇ-ಬುಕ್ (e-books), ಡಿಜಿಟಲ್ ಗ್ರಂಥಾಲಯಗಳು (Digital Libraries), ಮತ್ತು ಆನ್‌ಲೈನ್ ಡೇಟಾಬೇಸ್‌ಗಳನ್ನು ನಿರ್ವಹಿಸುವ ಮೂಲಕ ಆಧುನಿಕ ಗ್ರಂಥಪಾಲಕರು ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಸೇವೆಯನ್ನು ನವೀಕರಿಸಿಕೊಂಡಿದ್ದಾರೆ. “ಪುಸ್ತಕಗಳಿಲ್ಲದ ಕೊಠಡಿ ಆತ್ಮವಿಲ್ಲದ ದೇಹದಂತೆ” ಎನ್ನಲಾಗುತ್ತದೆ. ಅಂತಹ ಪುಸ್ತಕಗಳಿಗೆ ಜೀವ ತುಂಬಿ, ಜ್ಞಾನದಾಹಿಗಳಿಗೆ ಸರಿಯಾದ ಹಾದಿ ತೋರಿಸುವ ಗ್ರಂಥಪಾಲಕರ ಸೇವೆ ಗೌರವಾರ್ಹವಾದುದು. ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಈ ಸಂದರ್ಭದಲ್ಲಿ, ಜ್ಞಾನ ಪ್ರಸಾರದಲ್ಲಿ ಹಗಲಿರುಳು ಶ್ರಮಿಸುವ ಎಲ್ಲಾ ಗ್ರಂಥಪಾಲಕರಿಗೂ ರಾಷ್ಟ್ರೀಯ ಗ್ರಂಥಪಾಲಕರ ದಿನದ ಶುಭಾಶಯಗಳು. ಡಾ. ಸ್ವಾಮಿನಾಯಕ ಸಿ.ಕೆ., ಮುಖ್ಯ ಗ್ರಂಥಪಾಲಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ
ವಿರಾಜಪೇಟೆ ಆ.11 NEWS DESK : ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಹಾಗೂ ಶಿಸ್ತಿನ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಅಧಿಕಾರ ವಹಿಸಿ ಮಾತನಾಡಿದ ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಲೇಪಾಕ್ಷಿ ಐ.ಡಿ., ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣ, ಶಿಸ್ತು ಹಾಗೂ ದೇಶಪ್ರೇಮವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು. ಅಧಿಕಾರ ಸ್ವೀಕರಿಸಿದ ವಿದ್ಯಾರ್ಥಿ ನಾಯಕರು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿ ನಡೆದುಕೊಳ್ಳಬೇಕು. ಶಾಲಾ ಹಂತದಲ್ಲಿ ದೊರೆಯುವ ಇಂತಹ ಜವಾಬ್ದಾರಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಅಡಿಪಾಯವಾಗುತ್ತವೆ ಎಂದು ಹೇಳಿದರು. :: ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ಬಿ.ಬಿ. ಮಾದಪ್ಪ :: ಗೌರವ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಟ್ರಸ್ಟ್ ಅಧ್ಯಕ್ಷ ರೋಟೇರಿಯನ್ ಬಿ.ಬಿ. ಮಾದಪ್ಪ ಮಾತನಾಡಿ, ನಾಯಕತ್ವ ಎಂಬುದು ಕೇವಲ ಹುದ್ದೆಯಲ್ಲ, ಅದೊಂದು ಜವಾಬ್ದಾರಿ. ನೂತನವಾಗಿ ಆಯ್ಕೆಯಾದ ಶಾಲಾ ನಾಯಕರು ಶಾಲೆಯ ಶಿಸ್ತು ಮತ್ತು ಗೌರವವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು…
ವಿರಾಜಪೇಟೆ ಆ.11 NEWS DESK : ಶ್ರೀ ಕ್ಷೇತ್ರ ಮಲೆತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ ವಾರ್ಷಿಕ ಶ್ರಾವಣ ಮಹೋತ್ಸವವು ಆ.15 ರಿಂದ ಸೆ.5 ರವರೆಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಬರುವ 4 ಪವಿತ್ರ ಶ್ರಾವಣ ಶನಿವಾರಗಳಂದು ಸಕಲ ಧಾರ್ಮಿಕ ಪೂಜಾ ವಿಧಿ-ವಿಧಾನಗಳೊಂದಿಗೆ ಮಹೋತ್ಸವವನ್ನು ಆಚರಿಸಲಾಗುವುದು. ಶ್ರಾವಣ ಮಾಸದ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಅಂಗವಾಗಿ ಆಗಸ್ಟ್ 14 ಶುಕ್ರವಾರದಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ನಡೆಸಿ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಲಾಗುತ್ತದೆ. ರಾತ್ರಿ 7 ಗಂಟೆಗೆ ದುರ್ಗಾ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಪ್ರತಿ ಶ್ರಾವಣ ಶನಿವಾರ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಆ.15 ಶನಿವಾರ ಬೆಳಿಗ್ಗೆ 5 ಗಂಟೆಗೆ ಶ್ರೀ ಶನೀಶ್ವರ ದೇವರಿಗೆ ಅಭಿಷೇಕ, 6 ಗಂಟೆಗೆ ಅಲಂಕಾರ ಪೂಜೆ, 8 ಗಂಟೆಗೆ ನವಗ್ರಹ ಪೂಜೆ, 11 ಗಂಟೆಗೆ ಶ್ರೀ ದೇವರ ದರ್ಶನ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ ಹಾಗೂ ಮಹಾ…
ಮಡಿಕೇರಿ ಆ.11 NEWS DESK : ಮೈಸೂರು ವಿಶ್ವವಿದ್ಯಾನಿಲಯದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿಗೆ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಬಿ.ವಿ.ಎ/ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ. ಭರ್ತಿಮಾಡಿದ ಅರ್ಜಿ ಸಲ್ಲಿಸಲು ಆ. 14 ಕೊನೆಯ ದಿನವಾಗಿದೆ. ಎಂ.ವಿ.ಎ.ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್ “ಸಿಬಿಸಿಎಸ್” ಪದ್ಧತಿಯ ಕೋರ್ಸು ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ, ಶಿಲ್ಪಕಲೆ ಮತ್ತು ಅಚ್ಚುಕಲೆ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನಾಂಕ: 18-08-2026 ಆಗಿದೆ. ಆಸಕ್ತರು ನಿಗಧಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2438931 ಮೂಲಕ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಡೀನ್ ತಿಳಿಸಿದ್ದಾರೆ.






