ಲೇಖಕ: admin

  ಮಡಿಕೇರಿ ಫೆ.3 NEWS DESK : ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 33ನೇ ವಾರ್ಷಿಕೋತ್ಸವವು ತಾಳತ್ತಮನೆಯಲ್ಲಿ ಸಂಭ್ರಮದಿಂದ ಆಚರಿಯಲಾಯಿತು. ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ಮಡಿಕೇರಿ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಕ್ಷಿರಿಚ್ ಮಾಲೀಕ ಪಿ.ಟಿ.ಉಣ್ಣಿ ಕೃಷ್ಣ ಉದ್ಘಾಟಿಸಿದರು. ನೇತಾಜಿ ಮಂಡಳಿಯ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ್ ಲೋಚನ, ಮದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೆಚ್.ಜೆ.ಯಾದವ್, ಉದ್ಯಮಿ ಮುದ್ಯನ ಕಿಶನ್, ಮದೆ ಪಂಚಾಯತ್ ಅಧ್ಯಕ್ಷೆ ವಿಮಲಾಕ್ಷಿ, ನಾಪೋಕ್ಲು ಗ್ರಾಮ ಪಂಚಾಯತ್…

Read More

  ಕುಶಾಲನಗರ ಫೆ.3 NEWS DESK :  ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಹಿರಿಯ ಉಪನ್ಯಾಸಕ (ಎ- ದರ್ಜೆಯ ಅಧಿಕಾರ ಹುದ್ದೆ) ರಾಗಿ ಮುಂಬಡ್ತಿ ಹೊಂದಿದ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಅವರಿಗೆ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ ನಡೆದ  ಸಮಾರಂಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳು ಪುಷ್ಪ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, 25 ವರ್ಷಗಳ ಕಾಲ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಪುಷ್ಪ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಉತ್ತಮ ಸಾಧನೆ ಮಾಡಲಿ ಎಂದು ಶುಭಹಾರೈಸಿದರು. ಶಿಕ್ಷಕರ ಪರಿಶ್ರಮ ಮತ್ತು ವಿಶೇಷ ಕಾಳಜಿಯಿಂದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿ ಸಾಧ್ಯ ಎಂದರು. ಸನ್ಮಾನಿತರಾದ ಬಿ.ಎನ್.ಪುಷ್ಪ ಮಾತನಾಡಿ…

Read More

  ಮಡಿಕೇರಿ ಫೆ.3 NEWS DESK : ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮ ಪಂಚಾಯತಿಯಲ್ಲಿ 69.5 ಲಕ್ಷ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.  ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು, ಕ್ಷೇತ್ರದ ಗ್ರಾಮೀಣ ಭಾಗಗಳಿಗೆ ಮೂಲಭೂತ ಸೌಕರ್ಯವನ್ನು ಶೇ.100 ರಷ್ಟು ಒದಗಿಸುವುದು ತಮ್ಮ ಆದ್ಯತೆಯಾಗಿದ್ದು ಇದನ್ನು ಪೂರ್ಣಗೊಳಿಸಲು ಬದ್ದನಿದ್ದೇನೆ ಎಂದು ತಿಳಿಸಿದರು. ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಯವರು ಸೇರಿದಂತೆ ಸಚಿವ ಸಂಪುಟದ ಎಲ್ಲಾ ಸದಸ್ಯರು ಕೊಡಗಿನ ಅಭಿವೃದ್ಧಿ ಬಗ್ಗೆ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದು ಅವರ ಸಹಕಾರಕ್ಕೆ ಧನ್ಯವಾದ ಹೇಳಬಯಸುತ್ತೇನೆ ಎಂದು ತಿಳಿಸಿದರು. ನೂತನವಾಗಿ ನಿರ್ಮಾಣವಾಗುತ್ತಿರುವ ಹೊಸ್ಕೇರಿ ಪಂಚಾಯತಿ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದರು. ಈಗಾಗಲೇ ಪಂಚಾಯತ್ ಭವನ ನಿರ್ಮಾಣಕ್ಕೆ ಈಗಿನ ಸರ್ಕಾರದಿಂದ ಹತ್ತು ಲಕ್ಷ ರೂಗಳ ಅನುದಾನ ಒದಗಿಸಲಾಗಿದ್ದು, ಹೆಚ್ಚುವರಿ ಅನುದಾನ ನೀಡುವ ಭರವಸೆಯನ್ನು ನೀಡಿದರು. ಈ ಸಂಧರ್ಭದಲ್ಲಿ ಹೆಚ್.ಎ.ಹಂಸ, ಗ್ಯಾರೆಂಟಿ ಅನುಷ್ಠಾನ ಸಮಿತಿ…

Read More

  ಮಡಿಕೇರಿ ಫೆ.3 NEWS DESK : ತಾಳತ್ತಮನೆ ಶ್ರೀ ದುರ್ಗಾಭಗವತಿ ದೇವಾಲಯದ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ದೇವಾಲಯದ ವಾರ್ಷಿಕೋತ್ಸವದ ಆಹ್ವಾನ ಪತ್ರಿಕೆಯನ್ನು ಚೌಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಸತ್ಯೇಶ್ ಭಟ್  ಅನಾವರಣಗೊಳಿಸಿದರು. ಸಭೆಯಲ್ಲಿ ದೇವಾಲಯದ ಮುಖ್ಯ ಅರ್ಚಕ  ಕೃಷ್ಣ ಪ್ರಸಾದ್ ಹಾಗೂ ದೇವಾಲಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.

Read More

  ಸೋಮವಾರಪೇಟೆ ಫೆ.3 NEWS DESK : ಆಲೆಕಟ್ಟೆ ರಸ್ತೆಯ ಸಾರ್ವಜನಿಕ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ವಾರ್ಷಿಕ ಪೂಜೆ ಮತ್ತು ವೈಕುಂಠ ಏಕಾದಶಿ ಕಾರ್ಯಕ್ರಮ ಫೆ.10 ರಿಂದ 12ರ ತನಕ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.10 ರಂದು ವೈಕುಂಟ ಏಕಾದಶಿ ಅಂಗವಾಗಿ ಬೆಳಿಗ್ಗೆ 6.30 ರಿಂದ 10 ರವರೆಗೆ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಸಂಜೆ 6 ರಿಂದ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ ಎಂದು ತಿಳಿಸಿದರು. ಫೆ.12ರಂದು ವಾರ್ಷಿಕ ಪೂಜಾ ಮಹೋತ್ಸವ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಬೆಳಿಗ್ಗೆ 9 ರಿಂದ ನವ ಪ್ರಧಾನ ಕಲಾ ಕಲಶಪ್ರತಿಷ್ಠೆ, ವೆಂಕಟರಮಣ ಸ್ವಾಮಿಗೆ ಕಲಾತತ್ವಾಧದಿ ವಾಸ ಹೋಮ, ಶಿಖರಕ್ಕೆ ಕಲಶಾಭಿಷೇಕ, ಸ್ವಾಮಿ ಕಲಶಾಭಿಷೇಕ, ಮಹಾಪೂಜೆ ಮತ್ತು ಮಹಾ ಮಂಗಳಾರತಿ ನಡೆಯುವುದು. ಸಂಜೆ 5 ಗಂಟೆಯಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ದೇವಾಲಯಕ್ಕೆ ಆಗಮಿಸಿದ ಭಕ್ತಾರಿಗೆ ಊಟದ ವ್ಯವಸ್ಥೆ…

Read More

ಮಡಿಕೇರಿ NEWS DESK ಫೆ.2 : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕೊಡವರ ಶಾಂತಿಯುತ ಪಾದಯಾತ್ರೆ ಆರಂಭಗೊಂಡಿತು. ಎಲ್ಲಾ ಕೊಡವ ಸಮಾಜ, ಕೊಡವ ಸಂಘಟನೆಗಳು, ಕೊಡವ ಭಾಷಿಕ ಸಮುದಾಯಗಳ ಸಂಘಟನೆಗಳು, ಎಲ್ಲಾ ಕೊಡವ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಇಂದು ಪಾದಯಾತ್ರೆ ಆರಂಭಿಸಿದರು. ಎಲ್ಲಾ ದೇಶತಕ್ಕರು, ಕೊಡವ ಸಮಾಜ, ಭಾಷಿಕ ಸಮುದಾಯಗಳ ಸಮಾಜದ ಮುಖ್ಯಸ್ಥರ ಸಮ್ಮುಖದಲ್ಲಿ ಕುಟ್ಟ ಬಸ್ ನಿಲ್ದಾಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಟ್ಟದಿಂದ ಟಿ.ಶೆಟ್ಟಿಗೇರಿ ವರೆಗೆ 15 ಕಿ.ಮೀ ದೂರ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಯಾವುದೇ ಘೋಷಣೆಗಳನ್ನು ಕೂಗದೆ ಸಾಗಿದರು. ಸುಮಾರು 4 ರಿಂದ 5 ಕಿ.ಮೀ ದೂರದ ವರೆಗೆ ಸಾವಿರಾರು ಸಂಖ್ಯೆಯ ಕೊಡವರ ಸಾಲು ಕಂಡು ಬಂತು. ಪಾದಯಾತ್ರೆಯಲ್ಲಿ ಸಾಗುವವರಿಗೆ ಅಲ್ಲಲ್ಲಿ ಆಹಾರ ಮತ್ತು…

Read More

ಮಡಿಕೇರಿ NEWS DESK ಫೆ.2 : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಬಾಡಿ ಜಂಕ್ಷನ್ ಬಳಿ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿ ಸುಮಾರು 3.90 ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ನಿಧಿನ್ (28) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ವಿರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್‌ಐ ಪ್ರಮೋದ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳ ಹಾಗೂ ಪೊಲೀಸರ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಮಾಡುತ್ತಿರುವವರ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಫೆ.2 : ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟçಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನೀಡಿರುವ “ಬಡಪಾಯಿ ಮಹಿಳೆ” ಎಂಬ ಹೇಳಿಕೆ ಖಂಡನೀಯ ಮತ್ತು ಇದು ಬುಡಕಟ್ಟು ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಿಶಿಷ್ಟರ ಮತಬ್ಯಾಂಕ್ ನಿಂದ ಶ್ರೀಮಂತ ರಾಜಕಾರಣ ಮಾಡಿ ದೇಶದ ಎಲ್ಲಾ ಅಧಿಕಾರವನ್ನು ಅನುಭವಿಸಿದ ಕಾಂಗ್ರೆಸ್ಸಿಗರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ಆರಂಭಗೊಂಡು ಇಲ್ಲಿಯವರೆಗೆ ಪರಿಶಿಷ್ಟ ಸಮುದಾಯವನ್ನು ಅಪಮಾನಿಸುತ್ತಲೇ ಬಂದಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷ ಪರಿಶಿಷ್ಟರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ರಾಷ್ಟ್ರಪತಿಗಳ ಕುರಿತು ಸೋನಿಯಾಗಾಂಧಿ ಅವರು ನೀಡಿರುವ ಕೀಳು ಅಭಿರುಚಿಯ ಹೇಳಿಕೆಯೇ ಸಾಕ್ಷಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ಸಿಗರ ಮತಬ್ಯಾಂಕ್ ರಾಜಕಾರಣದ ಬಣ್ಣ ಬಯಲಾಗುತ್ತಿದ್ದು, ಪರಿಶಿಷ್ಟರು ಜಾಗೃತರಾಗುತ್ತಿದ್ದಾರೆ. ದೇಶದ ಉನ್ನತ ಹುದ್ದೆಯನ್ನು ಶ್ರೀಮಂತರು ಹಾಗೂ ಮೇಲ್ವರ್ಗದವರು ಮಾತ್ರ ಅಲಂಕರಿಸಬೇಕೆ, ಪರಿಶಿಷ್ಟರು…

Read More

ಮಡಿಕೇರಿ NEWS DESK ಫೆ.2 : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕೊಡವರ ಶಾಂತಿಯುತ ಪಾದಯಾತ್ರೆ ಆರಂಭಗೊಂಡಿತು. ಎಲ್ಲಾ ಕೊಡವ ಸಮಾಜ, ಕೊಡವ ಸಂಘಟನೆಗಳು, ಕೊಡವ ಭಾಷಿಕ ಸಮುದಾಯಗಳ ಸಂಘಟನೆಗಳು, ಎಲ್ಲಾ ಕೊಡವ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಇಂದು ಪಾದಯಾತ್ರೆ ಆರಂಭಿಸಿದರು. ಎಲ್ಲಾ ದೇಶತಕ್ಕರು, ಕೊಡವ ಸಮಾಜ, ಭಾಷಿಕ ಸಮುದಾಯಗಳ ಸಮಾಜದ ಮುಖ್ಯಸ್ಥರ ಸಮ್ಮುಖದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಟ್ಟ, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡು ಮೂಲಕ ನಡೆಯುವ ಈ ಬೃಹತ್ ಪಾದಯಾತ್ರೆ ಅಂತಿಮವಾಗಿ ಫೆ.7ರಂದು ಮೇಕೇರಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ತಲುಪಲಿದೆ.

Read More

ಮಡಿಕೇರಿ NEWS DESK ಫೆ.2 : ನಾಗರಹೊಳೆ ಉದ್ಯಾನದಲ್ಲಿ ಕಡವೆ ಬೇಟೆಯಾಡಲು ಹೊಂಚು ಹಾಕುತ್ತಿದ್ದ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟಂದಿ ಗ್ರಾಮದ ಐವರು ಆರೋಪಿಗಳು ಬಂಧಿಸಲ್ಪಟ್ಟಿದ್ದಾರೆ. ಇವರನ್ನು ಹೆಚ್ಚಿನ ವಿಚಾರಣೆಗೆ ಒಳ ಪಡಿಸಿದಾಗ ಎರಡು ದಿನಗಳ ಹಿಂದೆ ಕಡವೆಯನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಂಡಿರುವ ವಿಚಾರ ತಿಳಿದು ಬಂದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕುಟ್ಟಂದಿ ಗ್ರಾಮದ ಮೋಟಯ್ಯ, ನಾಚಪ್ಪ, ಸತೀಶ್, ಚಂದನ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು. ಬಂಧಿತರಿಂದ ಕಾರು, ಎರಡು ಎಸ್.ಬಿ.ಬಿ.ಎಲ್. ಒಂಟಿ ನಳಿಕೆಯ ಲೋಡ್ ಮಾಡಿದ್ದ ಬಂದೂಕು, 11ಜೀವಂತ ಕಾಡತೂಸು, ಟಾರ್ಚ್, ಮೊಬೈಲ್‌ಗಳು, ಚೂರಿ, ಪ್ಲಾಸ್ಟಿಕ್ ಚೀಲ, ಕತ್ತಿ, ಅರ, ಟಾರ್ಪಲ್ ಹಾಗೂ ಒಂದು ಬ್ಯಾಗ್‌ನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಫೆ1.ರಂದು ಮುಂಜಾನೆ 3.30ರ ಸುಮಾರಿನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ಬೆನ್ನಟ್ಟಿದ ಗಸ್ತು ನಡೆಸುತ್ತಿದ್ದ ಅರಣ್ಯ ಸಿಬ್ಬಂದಿಗಳು ಆನೆಚೌಕೂರು ಗೇಟ್ ಜಡೆ ಆಲದಮರ ಗೇಟ್ ಸಮೀಪ ಅಡ್ಡಗಟ್ಟಿ ನಿಲ್ಲಿಸಿದರು. ತಪಾಸಣೆ ನಡೆಸಿದ ಸಂದರ್ಭ ಐವರು ಆರೋಪಿಗಳು ಕಾರಿನಲ್ಲಿ ಎರಡು ಒಂಟಿ…

Read More