ಲೇಖಕ: admin

ಮಡಿಕೇರಿ ಜ.20 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸ್ತ್ರೀಶಕ್ತಿ ಗುಂಪುಗಳಿಗೆ ಹಾಗೂ ತಾಲ್ಲೂಕು ಒಕ್ಕೂಟಗಳಿಗೆ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲೂ ಸಹ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಸ್ತ್ರೀ ಶಕ್ತಿ ಗುಂಪುಗಳಿಗೆ/ ಒಕ್ಕೂಟಗಳಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2024-25ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಗುಂಪು/ಒಕ್ಕೂಟಗಳ ಪ್ರಸ್ತಾವನೆಯನ್ನು ಜ.22 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಈ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9108810782, 9343525589, 9483110552 ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಕೊಡಗು ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‍ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ ಟೆಕ್,ಎಂಇಬಿ ಆರ್ಕ್, ಎಂಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿಎಸ್ಸಿ ಆರ್ಟಿಕಲ್ಚರ್, ಅಗ್ರಿಕಲ್ಚರ್, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಎನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಮೀನುಗಾರಿಕೆ, ಸೆರಿಕಲ್ಚರ್, ಹೋಮ್/ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷನ್ ಅಂಡ್ ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ…

Read More

ಮಡಿಕೇರಿ ಜ.20 NEWS DESK : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 2021-22ನೇ ಸಾಲಿನಿಂದ (ಜುಲೈ/ಜನವರಿ ಆವೃತ್ತಿಯ) 2024-25 ನೇ ಸಾಲಿನವರೆಗೆ (ಜುಲೈ ಆವೃತ್ತಿ) ಪ್ರವೇಶಾತಿ ಪಡೆದಿರುವ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಎಲ್ಲಾ ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯು ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯು ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೊಮಾ, ಪಿಜಿ ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್‍ಗಳ ವಿದ್ಯಾರ್ಥಿಗಳ ಸಿ.ಬಿ.ಸಿ.ಎಸ್ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೇ ಫೆ. 7, ರೂ.200 ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಫೆಬ್ರವರಿ 17 ಕೊನೆಯ ದಿನವಾಗಿದೆ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

Read More

ಮಡಿಕೇರಿ ಜ.20 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಜನವರಿ, 22 ರಂದು ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.  

Read More

ಮಡಿಕೇರಿ ಜ.20 NEWS DESK : ಕೊಡಗು ಜಿಲ್ಲೆಯ ಅರೆಭಾಷಿಕ ಗೌಡ ಜನಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ, ಸುಳ್ಳು ಇತಿಹಾಸ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಅರೆಭಾಷಿಕ ಗೌಡ ಸಂಘಟನೆಗಳು ಮಡಿಕೇರಿಯಲ್ಲಿ ಬೃಹತ್ “ಗೌಡ ಸಮುದಾಯದ ಸ್ವಾಭಿಮಾನದ ನಡೆ” ಮೌನ ಪ್ರತಿಭಟನೆ ನಡೆಯಿತು. ಮಡಿಕೇರಿಯ ಕೊಡಗು ಗೌಡ ಯುವ ವೇದಿಕೆ, ಕೊಡಗು ಗೌಡ ಮಹಿಳಾ ಒಕ್ಕೂಟ, ಕುಶಾಲನಗರದ ಗೌಡ ಯುವಕ ಸಂಘ ಸೇರಿದಂತೆ ವಿವಿಧ ಗೌಡ ಸಂಘಟನೆಗಳ ನೇತೃತ್ವದಲ್ಲಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ ಸಾವಿರಾರು ಗೌಡರು ಯಾವುದೇ ಘೋಷಣೆಗಳನ್ನು ಕೂಗದೆ ಶಿಸ್ತುಬದ್ಧವಾಗಿ ಬೃಹತ್ ಮೆರವಣಿಗೆ ನಡೆಸಿದರು. ::: ಸೇನಾನಿಗಳಿಗೆ ಗೌರವ ::: ಇಂದು ಬೆಳಿಗ್ಗೆ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಫೀಲ್ಟ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಂತರ ಮೆರವಣಿಗೆ ಸಾಗಿ ಬರುವಾಗ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ಹಾಗೂ…

Read More

ಜ.20 ರಿಂದ 26ರ ವರೆಗೆ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ರಾಶಿಯವರಿಗೆ ಮಾನಸಿಕ ಅಶಾಂತಿ, ಹಿರಿಯರ ಆರೋಗ್ಯಕ್ಕೆ ಹಣವ್ಯಯ, ಹಣಕಾಸು ಅಡಚಣೆಮ, ಮಕ್ಕಳಿಂದ ಕಿರಿಕಿರಿ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ಕೆಲಸದ ಒತ್ತಡ, ಸುತ್ತಾಟ, ದೂರ ಪ್ರಯಾಣ, ಹಳೇ ಸ್ನೇಹಿತರ ಭೇಟಿ, ಧನಾಗಮನ, ಸ್ವಲ್ಪ ಅನಾರೋಗ್ಯ, ಬಂಧು ಮಿತ್ರರ ಸ್ನೇಹ ಸಂಪಾದನೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಅತೀಶಯ ಹಣವ್ಯಯ, ಸ್ನೇಹಿತರಿಂದ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಬಂಧುಗಳಿಂದ ಮನಸ್ಥಾಪ, ಮಕ್ಕಳಿಂದ ಕೀರ್ತಿ. ಶುಭಸಂಖ್ಯೆ : 3, 5, 6, 8 :: ಶುಭ ಬಣ್ಣ :: ಕೆಂಪು, ಶ್ಯಾಮ. ಕರ್ಕಾಟಕ ರಾಶಿ ::…

Read More

ಮಡಿಕೇರಿ ಜ.20 NEWS DESK : ನಾಪೋಕ್ಲು ಹೋಬಳಿಯ ನರಿಯದಂಡ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.29 ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನ ಕಾರ್ಯಕ್ರಮ ನಡೆಯಲಿದೆ. ಪಿಂಚಣಿ ದಿನದಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದುಕೊರತೆ ನೋಂದಾಯಿಸುವಂತೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವು ಜನವರಿ, 21 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಗಾಳಿಬೀಡು ಜವಾಹರ್ ನವೋದಯ ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ಮಾರುತಿ ದಾಸಣ್ಣವರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜ.20 NEWS DESK : ಪೊನ್ನಂಪೇಟೆ ತಾಲ್ಲೂಕು ದೇವರಪುರ ಗ್ರಾ.ಪಂ ಅಂಬುಕೊಟ್ಟೆ ವ್ಯಾಪ್ತಿಯಯಲ್ಲಿ ಇತ್ತೀಚೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾನಿಗೀಡಾದ ಅಮುದ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ನಂತರ ಮನೆಯವರೊಂದಿಗೆ ಘಟನೆಯ ವಿವರ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವಘಡಕ್ಕೆ ಕಾರಣವನ್ನು ಪತ್ತೆ ಮಾಡಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಮಾನ್ಯ ಶಾಸಕರು ತಮ್ಮ ವೈಯುಕ್ತಿಕ ಸಹಾಯ ಹಸ್ತ ನೀಡಿದರು.ಸಂದರ್ಭ ಶಾಸಕರು ಕುಟುಂಬಸ್ಥರಿಗೆ ವೈಯಕ್ತಿಕ ನೆರವು ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಮಿದೇರೀರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ  ಪ್ರಮೋದ್ ಗಣಪತಿ, ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಜ.19 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡಿಯರ್ ಅವರು ಇಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದರು. ಸುತ್ತಮುತ್ತಲ ಗ್ರಾಮದ ನಿವಾಸಿಗಳು ಸಂಸದರ ಬಳಿ ತಮ್ಮ ಕುಂದು ಕೊರತೆಗಳನ್ನು ವಿವರಿಸಿದರು. ಇದನ್ನು ಆಲಿಸಿದ ಯದುವೀರ್ ಒಡಿಯರ್ ಅವರು ಸೂಕ್ತ ಭರವಸೆ ನೀಡಿದರು.

Read More