ಮಡಿಕೇರಿ ಮಾ.4 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸಬಾರದು, ಸಿ ಮತ್ತು ಡಿ ಭೂಮಿಯ ಗೊಂದಲ ನಿವಾರಿಸಬೇಕು, ಪರಿಶಿಷ್ಟರ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಸಬಾರದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಾ.6ರ ಬೆಳಿಗ್ಗೆ 10 ಗಂಟೆಯಿಂದ ಮಾ.7ರ ಮಧ್ಯಾಹ್ನ 2 ಗಂಟೆಯವರೆಗೆ ಅಹೋ ರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಕೊಡಗು ಜಿಲ್ಲಾ ಬಿಜೆಪಿ ನಿರ್ಧರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮೂರು ಪ್ರಮುಖ ಬೇಡಿಕೆಗಳು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುವ ಧರಣಿ ಸತ್ಯಾಗ್ರಹಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಲ್ಲಿ ಮಾ.11 ರಂದು ಸ್ವಯಂ ಪ್ರೇರಿತ ‘ಕೊಡಗು ಬಂದ್’ ಗೆ ಕರೆ ನೀಡುವುದಾಗಿ ತಿಳಿಸಿದರು. ಕೊಡಗಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಬಿಜೆಪಿ ನಡೆಸುವ ಹೋರಾಟಕ್ಕೆ ರಾಜ್ಯ ಸರ್ಕಾರ ತನ್ನ ಬಜೆಟ್ ಅಧಿವೇಶನದಲ್ಲೇ ಸ್ಪಂದಿಸಬೇಕು. ತಪ್ಪಿದಲ್ಲಿ ಬಂದ್ ಗೆ ಕರೆ ಕೊಡುವುದು ಅನಿವಾರ್ಯವಾಗುತ್ತದೆ ಎಂದರು. ಹಿಂದಿನ ಬಿಜೆಪಿ ಸರ್ಕಾರದ…
ಲೇಖಕ: admin
ಮಡಿಕೇರಿ ಮಾ.4 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 9 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ವಿರಾಜಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು, ಕಿರುಗೂರು, ಚೆನ್ನಯ್ಯನಕೋಟೆ, ಪೊನ್ನಂಪೇಟೆ ತಾಲ್ಲೂಕಿನ ನಾಲ್ಕೇರಿ, ಮಡಿಕೇರಿ ತಾಲ್ಲೂಕಿನ ಕರಿಕೆ ಗ್ರಾಮ ಪಂಚಾಯತ್‍ಗಳು. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ನೀಡಿದ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಮೊಬೈಲ್ ಸಂಖ್ಯೆ 9148712473 ಇಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.4 NEWS DESK : ಕರ್ನಾಟಕದಲ್ಲಿ ಕನ್ನಡ ಪರ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಕೊಡಗು ಜಿಲ್ಲೆಯಲ್ಲಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಿಸಲಾಗಿದ್ದು, ಕನ್ನಡ ಭವನದ ಕೊಡಗು ಜಿಲ್ಲಾ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕವಯತ್ರಿ, ಸಂಘಟಕಿ ಎಂ.ಎ.ರುಬೀನಾ ಅವರನ್ನು ಕೊಡಗು ಜಿಲ್ಲಾಧ್ಯಕ್ಷೆಯಾಗಿ ನಾಮನಿರ್ದೇಶನ ಮಾಡಿದ್ದಾರೆ. ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅನುಮೋದಿಸಿದರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಉಪಾಧ್ಯಕ್ಷರಾಗಿ ಪೆರಿಯಂಡ ಯಶೋಧ, ಬೊಟ್ಟೋಳಂಡ ನಿವ್ಯಾ ಕಾವೇರಮ್ಮ, ಕೋಶಾಧಿಕಾರಿಯಾಗಿ ಚಂದನ್ ನಂದರಬೆಟ್ಟು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕರವಂಡ ಸೀಮಾ ಗಣಪತಿ, ಪಳಂಗೀಯಂಡ ಶರತ್ ಬೋಪಣ್ಣ, ಕಿಶೋರ್ ರೈ ಕತ್ತಲೆಕಾಡು, ಕೆ.ಎ.ಸಂಕೇತ್ , ಹೇಮಂತ್ ಪಾರೇರ, ಪಂದ್ಯoಡ ರೇಣುಕಾ ಸೋಮಯ್ಯ, ಅಮ್ಮಾಟoಡ ವಿಂದ್ಯಾ ದೇವಯ್ಯ, ಮೊಣ್ಣಂಡ ವಿನು ಕಾರ್ಯಪ್ಪ, ಕಾಣತಂಡ ಭವ್ಯ ದೇವಯ್ಯ, ಉಡುವೆರ ರೇಖಾ ರಘು ಅವರನ್ನು ಆಯ್ಕೆ ಮಾಡಿ ಸಮಿತಿಯನ್ನು ರಚಿಸಿದ್ದಾರೆ. ಮಾರ್ಚ್ ಕೊನೆಯ ವಾರದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕೇಂದ್ರದಲ್ಲಿ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಗೌರವ ಅಧ್ಯಕ್ಷ ಬೊಳ್ಳಜಿರ…
ಮಡಿಕೇರಿ ಮಾ.4 NEWS DESK : ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಕೊಡಗು ವಿವಿ ಮುಚ್ಚದಂತೆ ಒತ್ತಾಯಿಸಿ ಕೊಡಗು ವಿವಿ ಬೋಧಕರು, ಬೋಧಕೇತರರು, ಕೊಡಗು ವಿವಿ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಬೈಕ್ ಜಾಥಾದ ಮೂಲಕ ಮುಖ್ಯಮಂತ್ರಿಗಳಿಗೆ ಅಂಚೆ ಚೀಟಿ ಅಭಿಯಾನ ಮಾಡಿದರು. ಚಿಕ್ಕಅಳುವಾರದ ವಿವಿ ಕ್ಯಾಂಪಸ್ ನಿಂದ ಕುಶಾಲನಗರದ ತಹಸೀಲ್ದಾರ್ ಕಚೇರಿಯವರೆಗೆ ಸುಮಾರು 16 ಕಿಮೀ ಬೈಕ್ ಜಾಥಾದಲ್ಲಿ ಕ್ರಮಿಸಿ ತಾಲ್ಲೂಕು ಕೇಂದ್ರ ಕುಶಾಲನಗರಕ್ಕೆ ಧಾವಿಸಿದ ತಂಡ ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ವಿವಿ ಹಿತರಕ್ಷಣಾ ಸಮಿತಿ ಗೌರವ ಅಧ್ಯಕ್ಷ ವಿ.ಪಿ.ಶಶಿಧರ್, ಕೊಡಗು ವಿವಿ ಕೊಡಗಿನ ನೆಲದ ಹೆಮ್ಮೆಯ ಪ್ರತೀಕವಾಗಿದೆ. ಸರ್ಕಾರ ಯಾವುದೇ ಇರಲಿ, ತಟ್ಟೆಗೆ ಊಟ ಬಡಿಸಿ ಹಸಿದವರಿಗೆ ಕೊಟ್ಟು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಇಲ್ಲಿ ಕಳೆದ ಎರಡು ವರ್ಷಗಳಿಂದ ಸರ್ಕಾರದಿಂದ ಅನುದಾನ ಇಲ್ಲದಿದ್ದರೂ ವಿವಿ ಶೈಕ್ಷಣಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿದೆ. ಇನ್ಫೋಸಿಸ್, ಟಾಟಾ…
ಮಡಿಕೇರಿ ಮಾ.4 NEWS DESK : ರಾಮನವಮಿ ಪ್ರಯುಕ್ತ ಏ.6 ರಂದು ಮಡಿಕೇರಿಯ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿ ವತಿಯಿಂದ ಏಪ್ರಿಲ್ 5 ಮತ್ತು 6 ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಮೋತ್ಸವ ಸಮಿತಿ ಅಧ್ಯಕ್ಷ ಕೆ.ಎಂ ಗಣೇಶ್ ತಿಳಿಸಿದ್ದಾರೆ. ರಾಮೋತ್ಸವ ಸಂಬಂಧ ಕೋದಂಡರಾಮ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಏ.6 ರಂದು ನಡೆಯಲಿರುವ ರಾಮನವಮಿ ಪ್ರಯುಕ್ತ ಮಡಿಕೇರಿಯ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿ ವತಿಯಿಂದ ಏ.5 ರಂದು ನಗರದಲ್ಲಿ ಬೃಹತ್ ಮೆರವಣಿಗೆ ಜರುಗಲಿದೆ. ಏ.5 ಹಾಗೂ 6 ರಂದು ಎರಡು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 10,000 ಮಂದಿಗೆ ಅನ್ನದಾನ ನಡೆಯಲಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಜಾತಿ-ಸಂಘರ್ಷ ಹೆಚ್ಚಾಗುತ್ತಿದೆ. ಹಿಂದೂ ಧರ್ಮದಡಿಯಲ್ಲಿ ಎಲ್ಲರೂ ಒಂದೇ ಎಂಬ ಮನೋಭಾವನೆಯನ್ನು ಮೂಡಿಸಲು, ಒಗ್ಗಟ್ಟನ್ನು ಪ್ರದರ್ಶಿಸಲು ಈ ಬಾರಿ ಜಿಲ್ಲೆಯಲ್ಲಿನ ಸರ್ವಜನಾಂಗದವರನ್ನು ಸೇರಿಸಿ ರಾಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಈ…
ಮಡಿಕೇರಿ ಮಾ.4 NEWS DESK : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದೆಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಪರವಾಗಿ ಹಕ್ಕೊತ್ತಾಯಗಳನ್ನು ಮಂಡಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ…
ವಿರಾಜಪೇಟೆ ಮಾ.4 NEWS DESK : ಕುಟ್ಟಂದಿಯ ಹೆಗ್ಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಸುರಕ್ಷಾ ಅಧಿಕಾರಿಯಾಗಿ 36 ವರ್ಷ 8 ತಿಂಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಕೆ.ರಮಿತ ಅವರಿಗೆ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು, 1988 ರಲ್ಲಿ ಕರ್ತವ್ಯಕ್ಕೆ ಸೇರಿದ ಅವರು 36 ವರ್ಷ ಹಾಗೂ 8 ತಿಂಗಳ ಸುದೀರ್ಘ ಸೇವೆ ಸಲ್ಲಿಸಿ ಕರ್ತವ್ಯದ ಸಂದರ್ಭದಲ್ಲಿ ತಮ್ಮ ಉತ್ತಮ ಸೇವೆಗಾಗಿ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಉತ್ತಮ ಸಾಧನೆ ತೋರಿದ್ದಕ್ಕಾಗಿ ಕೇಂದ್ರ ಸರ್ಕಾರದಿಂದ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಅಲ್ಲದೆ ಸ್ಥಳೀಯ ಗ್ರಾಮೀಣ ಜನರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಕುಟ್ಟಂದಿ ಆರೋಗ್ಯ ಉಪ ಕೇಂದ್ರದ ವೈದ್ಯರಾದ ಡಾ.ಶರಣ್ ಸುಬ್ಬಯ್ಯ, ಶುಶ್ರೂಷಕಿಯರು, ಸಿಬ್ಬಂದಿಗಳು ಹಾಗೂ…
ನಾಪೋಕ್ಲು ಮಾ.4 NEWS DESK : ಮೂರ್ನಾಡು ಹೆಲ್ತ್‍ಫಸ್ಟ್ ಆಸ್ಪತ್ರೆ ವತಿಯಿಂದ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಹೆಲ್ತ್ ಫಸ್ಟ್ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ ಅಧಿಕ ರಕ್ತದೊತ್ತಡ, ಶ್ವಾಸಕೋಶದ ಆರೈಕೆ, ಪೌಷ್ಟಿಕಾಂಶದ ಮೌಲ್ಯಮಾಪನ, ಡಯಾಬಿಟಿಸ್, ಮತ್ತು ಸ್ತನ ಕ್ಯಾನ್ಸರ್ ತಪಾಸಣೆ, ಮಹಿಳೆಯರ ಆರೋಗ್ಯ, ದೃಷ್ಟಿ ತಪಾಸಣೆ ಹಾಗೂ ಮಾರ್ಗದರ್ಶನವನ್ನು ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ನೀಡಿದರು. ಈ ಸಂದರ್ಭ ಜನರಲ್ ಸರ್ಜನ್ ಡಾ. ಬಿ.ವಿ.ಧನಶ್ರೀ ಅವರು ಉಚಿತ ವೈದ್ಯಕೀಯ ಸಮಾಲೋಚನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮೂರ್ನಾಡು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕಣ್ಣು ಅಪ್ಪಚ್ಚು, ಕಾರ್ಯದರ್ಶಿ ಪಿ.ಎಂ.ಅಪ್ಪಣ್ಣ, ಖಜಾಂಚಿ ಅರುಣ್ ಅಪ್ಪಚ್ಚು, ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷ ರೇಖಾ ತಮ್ಮಯ್ಯ, ಕಾರ್ಯದರ್ಶಿ ಗೀತಾ ಪವಿತ್ರ ಹಾಗೂ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಮಾ.4 NEWS DESK : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯನ್ನು ತಲುಪಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ದಾನಿಗಳು, ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯಿಂದ ನೆರವು ನೀಡುವ ಮೂಲಕ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುತ್ತಿದ್ದು, ಶಾಲೆಯ ಆವರಣ, ಗೋಡೆಯನ್ನು ಸ್ವಚ್ಛಗೊಳಿಸಿ ವರ್ಲಿ ಚಿತ್ರಗಳನ್ನು ಬಿಡಿಸುವ ಮೂಲಕ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದೆ. ಬೆಂಗಳೂರು ಮೂಲದ ಜಾಗೃತಿ ಸಮಾಜ ಸೇವಾ ಟ್ರಸ್ಟ್ ಮತ್ತು ಸಿಸ್ಕೊ ಸಂಸ್ಥೆಯ ಸಹಯೋಗದ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದ ಗೋಡೆಯಲ್ಲಿ ವರ್ಲಿ ಚಿತ್ರಕಲೆ, ಸಾಮಾಜಿಕ ಮೌಲ್ಯ, ಪರಿಸರ ಕಾಳಜಿಯ ರೇಖಾ ಚಿತ್ರಗಳು, ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ಸ್ಥಳದಲ್ಲಿಯೇ ತಯಾರಿಸುವ ವಿಧಾನ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಸಾಮಾಗ್ರಿಗಳಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದೆ. ಎರಡು ದಿನಗಳ ಕಾಲ ನಡೆದ ಸೇವಾ ಕಾರ್ಯಕ್ರಮದಲ್ಲಿ ಸಿಸ್ಕೋ ಮತ್ತು ಜಾಗೃತಿ ಸೇವಾ ಟ್ರಸ್ಟ್ ನ…
ಮಡಿಕೇರಿ ಮಾ.4 NEWS DESK : ಹಕ್ಕಿಜ್ವರ ಅಥವಾ ಕೋಳಿ ಜ್ವರ ಶೀತಜ್ವರ ಹೆಚ್5ಎನ್1 ವೈರಸ್ ನಿಂದ ಹರಡುವ ರೋಗ ಇದು ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ. ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಂದು ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಕ್ಕಿ ಜ್ವರದ ಲಕ್ಷಣಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಯನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ರೋಗ ಲಕ್ಷಣಗಳು: ಹಕ್ಕಿ ಜ್ವರದ ಲಕ್ಷಣಗಳು…






