ಲೇಖಕ: admin

ಮಡಿಕೇರಿ ಜ.31 NEWS DESK : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಜನಜಾಗೃತಿ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಚಾಲನೆ ನೀಡಿದರು. 23 ಅಸಂಘಟಿತ ವರ್ಗಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಪರ್‍ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ ಟೆಂಟ್/ ಪೆಂಡಾಲ್‍ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಹಾಗೂ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರು(ಮೆಕ್ಯಾನಿಕ್…

Read More

ಮಡಿಕೇರಿ ಜ.31 NEWS DESK :  ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‍ಸೈಟ್ explorekodagu.com ನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆಯ ಮುಖಾಂತರ ಕೊಡಗು ಪ್ರವಾಸೋದ್ಯಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‍ಸೈಟ್ ಅನ್ನು ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಬಿಡುಗಡೆ ಮಾಡಿದರು. ಈ ವೆಬ್‍ಸೈಟ್‍ನಲ್ಲಿ ಕೊಡಗಿನ ಸುಂದರ ಪ್ರವಾಸಿ ತಾಣಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸಲು ಮೀಸಲಾಗಿರುವ ಸಮಗ್ರ ಆನ್‍ಲೈನ್ ವೇದಿಕೆಯಾಗಿದೆ ಎಂದು ಘೋಷಿಸಲು ಹೆಮ್ಮೆ ಸಂಗತಿಯಾಗಿದೆ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ, ವಿಶ್ವಾಸಾರ್ಹ ಪ್ರಯಾಣ ಅನುಭವವನ್ನು ಖಚಿತಪಡಿಸಿಕೊಳ್ಳಲು ವೆಬ್‍ಸೈಟ್‍ನಲ್ಲಿ ಅಧಿಕೃತವಾಗಿ ನೋಂದಾಯಿತ ಮತ್ತು ಪ್ರಮಾಣೀಕೃತ ಹೋಂಸ್ಟೇಗಳು, ರೆಸಾರ್ಟ್‍ಗಳು, ರೆಸ್ಟೋರೆಂಟ್‍ಗಳು, ಪ್ರವಾಸಿ ಮಾರ್ಗದರ್ಶಿಗಳು, ಟ್ಯಾಕ್ಸಿ ನಿರ್ವಾಹಕರು ಮತ್ತು ಜಿಲ್ಲೆಯ ಅಧೀಕೃತ ಕಾರ್ಯ ಕ್ರಮಗಳನ್ನು ಮಾತ್ರ ಪಟ್ಟಿ ಮಾಡಲಾಗಿರುತ್ತದೆ. ವೆಬ್‍ಸೈಟ್‍ನಲ್ಲಿ ಪ್ರಮುಖ ಲಕ್ಷಣಗಳು: ಜಿಲ್ಲೆಯ ನೋಂದಾಯಿತ ಹೋಂಸ್ಟೇಗಳು ಮತ್ತು…

Read More

ಮಡಿಕೇರಿ ಜ.31 NEWS DESK : ವಿವಿಧ ಕ್ಷೇತ್ರಗಳಿಗೆ ಗಣನೀಯ ಕೊಡುಗೆ ನೀಡಿ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯರಿಗೆ ಸಚಿವ ಸ್ಥಾನ ನೀಡಬೇಕೆಂದು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಸರಕಾರವನ್ನು ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಕೃತಿ ಸಿರಿಬಳಗ ಟ್ರಸ್ಟ್‍ನ ಟ್ರಸ್ಟಿ ಕೆ.ಎಂ.ಗಣೇಶ್ ಒಂದು ಕಾಲದಲ್ಲಿ ಕೊಡಗು ರಾಜ್ಯವಾಗಿತ್ತು. ಬಳಿಕ ವಿಶಾಲ ಕರ್ನಾಟಕದೊಂದಿಗೆ ವಿಲೀನವಾಗಿ ಜಿಲ್ಲೆಯಾಗಿ ಪರಿವರ್ತಿತವಾಯಿತು. ಇಂತಹ ಪುಟ್ಟ ಕೊಡಗು, ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ನೀಡಿದ, ವಿಧಾನ ಪರಿಷತ್ತಿಗೆ ನಾಯಕರನ್ನು ನೀಡಿದ ಜಿಲ್ಲೆಯಾಗಿದೆ. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲ ಘಟ್ಟದಲ್ಲಿ ಜಿಲ್ಲೆಯ ಮೂವರು ಶಾಸಕರಿಗೆ ಸಚಿವ ಸ್ಥಾನವನ್ನು ನೀಡಲಾಗಿತ್ತು. ನಂತರದ ವರ್ಷಗಳಲ್ಲಿ ಮೂರು ವಿಧಾನ ಸಭಾ ಕ್ಷೇತ್ರ ಎರಡಕ್ಕೆ ಇಳಿದು, ಕಳೆದ ಒಂದೂವರೆ ದಶಕಗಳಿಂದ ಜಿಲ್ಲೆಯ ಯಾವೊಬ್ಬ ಶಾಸಕರಿಗು ಸಚಿವ ಸ್ಥಾನವನ್ನು ಯಾವುದೇ ಸರ್ಕಾರ ನೀಡಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲು ನಾವು ಜಿಲ್ಲೆಯ ಶಾಸಕರೊಬ್ಬರಿಗೆ…

Read More

ಮಡಿಕೇರಿ ಜ.31 NEWS DESK : ಮರಗೋಡು ಗೌಡ ಈವ್ನಿಂಗ್ ಸ್ಟಾರ್ ವತಿಯಿಂದ ಇದೇ ಮೊದಲ ಬಾರಿಗೆ ಮುಂದಿನ ಏ.26ರಿಂದ ಹದಿನೈದು ದಿನಗಳ ಕಾಲ ಗ್ರಾಮದ ಭಾರತೀಯ ಜೂನಿಯರ್ ಕಾಲೇಜು ಮೈದಾನದಲ್ಲಿ ಗೌಡ ಕುಟುಂಬಗಳ ನಡುವಣ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡ ಈವ್ನಿಂಗ್ ಸ್ಟಾರ್‍ನ ಅಧ್ಯಕ್ಷರಾದ ರೋಷನ್ ಕಟ್ಟೆಮನೆ, ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೌಡ ಸಮುದಾಯದ 100 ರಿಂದ 150 ಕುಟುಂಬ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಂಡಗಳ ಹೆಸರು ನೋಂದಣಿಗೆ ಏಪ್ರಿಲ್ 10ರವರೆಗೆ ಕಾಲಾವಕಾಶವನ್ನು ನೀಡಲಾಗಿದೆಯೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಪ್ರತಿನಿತ್ಯ 10 ಪಂದ್ಯಗಳು ನಡೆಯಲಿದ್ದು, ಪ್ರತಿ ಪಂದ್ಯ 6 ಓವರ್‍ಗಳದ್ದಾಗಿರುತ್ತದೆ. ಪ್ರೀ ಕ್ವಾರ್ಟರ್ ಹಂತದ ಪಂದ್ಯಗಳು 8 ಓವರ್ ಹಾಗೂ ಕ್ವಾರ್ಟರ್ ಫೈನಲ್ ನಂತರದ ಎಲ್ಲಾ ಪಂದ್ಯಗಳು 10 ಓವರ್‍ಗಳದ್ದಾಗಿದ್ದು, ಪ್ರೀ ಕ್ವಾರ್ಟರ್ ನಂತರದ ಎಲ್ಲಾ ಪಂದ್ಯಗಳನ್ನು ಪವರ್ ಪ್ಲೇ ಮೂಲಕ ನಡೆಸಲಾಗುತ್ತದೆಂದು ಎಂದರು. ಪಂದ್ಯಾವಳಿಯನ್ನು 10 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಆಯೋಜನೆ…

Read More

ಮಡಿಕೇರಿ ಜ.31 NEWS DESK :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಕ್ಕ ಮುಖ್ಯಸ್ಥರಾದ…

Read More

ಮಡಿಕೇರಿ ಜ.31 NEWS DESK : ವನ್ಯಜೀವಿ ಮಾನವ ಸಂಘರ್ಷ ಕಾಡಿಂಚಿನ ಊರುಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಆನೆಗಳು, ಚಿರತೆಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಪ್ರಾಣಿಗಳು ಆಹಾರ ಮತ್ತು ನೀರಿಗಾಗಿ ಕಾಡಿನಿಂದ ನಾಡಿಗೆ ಬರುತ್ತಿವೆ. ಹಾಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ ಕೈಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ ::  ಸರ್ಕಾರಿ ಭೂಮಿ ಭೂ ಗುತ್ತಿಗೆ ನೀಡುವುದಕ್ಕೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ ಸರ್ಕಾರಿ ಭೂಮಿ ಕೊಟ್ಟರೆ ವಿರೋಧ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿವೇಶನ ಇಲ್ಲದಿರುವವರಿಗೆ, ಜಮೀನು ಇಲ್ಲದವರಿಗೂ ಭೂಮಿ ಕೊಡುತ್ತೇವೆ ಎಂದರು. ಕಾವೇರಿ ನದಿ ಸ್ವಚ್ಛತೆಯ ಬಗ್ಗೆ ರಚಿಸಲಾಗಿದ್ದ ಸಮಿತಿ ಇನ್ನೂ ವರದಿ ನೀಡಿಲ್ಲ. ವರದಿ ನೀಡಿದ ನಂತರ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಕಾಮಗಾರಿಗೆ ಅನುದಾನ ನೀಡಿ ಶೀಘ್ರಗತಿಯಲ್ಲಿ ಪೂರ್ಣ…

Read More

ಮಡಿಕೇರಿ ಜ.31 NEWS DESK :  ತ್ರಿವೇಣಿ ಸಂಗಮ ಮತ್ತು ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Read More

ಸೋಮವಾರಪೇಟೆ ಜ.31 NEWS DESK : ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ ಚೇಂಬರ್ ಆಫ್ ಕಾಮರ್ಸ್‌ನ ಸದಸ್ಯರುಗಳನ್ನು ಸನ್ಮಾನಿಸಲಾಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕರುಗಳಾಗಿ ಆಯ್ಕೆಯಾದ ಪಿ.ಕೆ.ರವಿ, ಬಿ.ರಾಮಶೆಟ್ಟಿ, ಬಿ.ಎನ್.ಮಂಜುನಾಥ್, ಹೆಚ್.ಆರ್.ಪೃಥ್ವಿ, ಕೆ.ಪಿ.ಭಾನುಪ್ರಕಾಶ್ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಧನುರಾಜ್, ಕಾರ್ಯದರ್ಶಿ ಕೆ.ಪಿ.ಸುದರ್ಶನ್, ಸಂಘಟನಾ ಕಾರ್ಯದರ್ಶಿ ಕೆ.ಎನ್.ಜಗದೀಶ್, ನಿರ್ದೇಶಕರಾದ ಬಿ.ಟಿ.ತಿಮ್ಮಶೆಟ್ಟಿ, ಮನುಕುಮಾರ್ ರೈ, ಬಿ.ಆರ್.ಪ್ರಮೋದ್ ಸೇರಿದಂತೆ ಇತರರು ಇದ್ದರು.

Read More

ಮಡಿಕೇರಿ ಜ.31 NEWS DESK :  ಕೊಡಗು ಜಿಲ್ಲೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಕಾವೇರಿ ಹೈಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ  ಆಗಮಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ , ಶಾಸಕರಾದ ಡಾ.ಮಂತರ್ ಗೌಡ,  ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡ ಟಿ.ಪಿ.ರಾಮೇಶ್ ಹಾಜರಿದ್ದರು. ಇದೇ ಸಂದರ್ಭ ಸಶಸ್ತ್ರ ಪಡೆಗಳಿಂದ ಮುಖ್ಯಮಂತ್ರಿಗಳಿಗೆ ಗೌರವ ಸಲ್ಲಿಸಲಾಯಿತು.  

Read More

ಸೋಮವಾರಪೇಟೆ ಜ.31 NEWS DESK : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿ.ಬಿ. ಸೋಮಯ್ಯ ಮತ್ತು ಉಪಾಧ್ಯಕ್ಷರಾಗಿ ಹೆಚ್.ಕೆ. ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 13 ಮಂದಿ ನಿರ್ದೇಶಕರಿರುವ ಸಂಘಕ್ಕೆ ಇಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಬಿ.ಬಿ.ಸಂದೀಪ್ ಅವಿರೋಧ ಆಯ್ಕೆಯಾಗಿರುವುದಾಗಿ ಘೊಷಣೆ ಮಾಡಿದರು. ರೂಪಸತೀಶ್, ಕೃಷ್ಣ, ರವಿರಾಜ್, ಹೆಚ್.ಕೆ.ಮಾದಪ್ಪ, ಬಿ.ಎಂ. ಸುರೇಶ್, ಕೆ.ಕೆ.ಚಂದ್ರಿಕಾ, ಬಿ.ಶಿವಪ್ಪ, ಎಂ.ವಿ.ದೇವರಾಜು, ಬಿ.ಕೆ.ಉದಯ ಕುಮಾರ್, ಬಿ.ಜೆ.ದೀಪಕ್, ಸುಭಾಷ್ ಇದ್ದರು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಇಲಾಖೆಯ ಬಿ.ಬಿ.ಸಂದೀಪ ಹಾಗೂ ಸಂಘದ ವ್ಯವಸ್ಥಾಕ ರವೀಂದ್ರ ಇದ್ದರು.

Read More