ಮಡಿಕೇರಿ ಜ.31 NEWS DESK : ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ನಿರ್ಮಿಸಲಾದ ನೂತನ ರಾಜಗೋಪುರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ತಿಹಾಸ ಪ್ರಸಿದ್ಧ ಶ್ರೀ ಶಾಸ್ತಾವು ದೇವರ ಆಶೀರ್ವಾದ ನಾಡಿನ ಎಲ್ಲರ ಮೇಲೆ ಇರಲಿ ಎಂದು ಹಾರೈಸಿದರು. ಜೀವನದಲ್ಲಿ ಯಶಸ್ಸು ಕಾಣಲು ನಮ್ಮ ಪ್ರಯತ್ನದೊಂದಿಗೆ ದೇವರ ಆಶೀರ್ವಾದ ಬೇಕೇಬೇಕು. ಸದ್ಭಾವನೆಯಿಂದ ಸಮಾಜದಲ್ಲಿ ಎಲ್ಲರೂ ಒಂದೇ, ಎಲ್ಲರೂ ಸಹಬಾಳ್ವೆಯಿಂದ ಬಾಳಬೇಕು ಎಂಬ ಭಾವನೆಯಿಂದ ಕೆಲಸ ಮಾಡಿದರೆ ದೇವರು ಖಂಡಿತ ಆಶೀರ್ವಾದ ಮಾಡುತ್ತಾನೆ ಎಂದು ಹೇಳಿದರು. ಈ ಸಂದರ್ಭ ಪೆರಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಜೈರಾಮ್ ಪೆರುಮುಂಡ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ದೇವಸ್ಥಾನದ ಆಡಳಿತ ಮಂಡಳಿ ಮುಖಂಡರು, ಪದಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.
ಲೇಖಕ: admin
ವಿರಾಜಪೇಟೆ ಜ.31 NEWS DESK : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಂಖಡರ ಸಭೆ ವಿರಾಜಪೇಟೆ ನಗರದ ಪುರಭವನದಲ್ಲಿ ನಡೆಯಿತು. ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸ್ಥಾನ 2010ರಿಂದಲೂ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿಲ್ಲ. ಆದುದರಿಂದ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಮಾತನಾಡಿ ಕಾಂಗ್ರೆಸ್‍ನ ವೋಟ್ ಬ್ಯಾಂಕಿನಲ್ಲಿ ಪ್ರಮುಖ ಪಾತ್ರವಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಅಧ್ಯಕ್ಷ ಸ್ಥಾನ ಕೇಳುತ್ತಿದ್ದೇನೆ. ನಮ್ಮಲ್ಲಿ ಯಾರಾದರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದರು. ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ ಮಾತನಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಿಭಾಯಿಸಲು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರುಗಳು ಸಮರ್ಥರಿದ್ದೇವೆ. 2010ರಿಂದಲೂ ಸಿಗದೆ ಇರುವ ಅವಕಾಶವನ್ನು ಈ ಬಾರಿ ಈ ಎರಡು ಸಮುದಾಯಗಳಲ್ಲಿ ಯಾರಿಗಾದರೂ ನೀಡಿ ಸಾಮಾಜಿಕ ನ್ಯಾಯ ಒದಗಿಸಿ ಎಂದರು.…
ಸುಂಟಿಕೊಪ್ಪ ಜ.31 NEWS DESK : ದೇಹದಲ್ಲಿ ಉಂಟಾಗುವ ಕೆಲವು ಭಾದೆಗಳನ್ನು ಫೂಟ್ ಪಲ್ಸ್ ಥೆರಪಿಯಿಂದ ಯಾವುದೇ ಚಿಕಿತ್ಸೆಗಳನ್ನು ಪಡೆದುಕೊಳ್ಳದೆಯೇ ಮುಕ್ತಿ ಹೊಂದಬಹುದಾಗಿದೆ ಎಂದು ಕಂಪಾನಿಯೋ ಕಂಪನಿ ಸಂಸ್ಥೆ ಮುಖ್ಯಸ್ಥ ರತ್ನಾಕರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಲಯನ್ಸ್ ಕ್ಲಬ್ ಹಾಗೂ ಕಂಪಾನಿಯೋ ಕಂಪನಿ ಸಹಯೋಗದಲ್ಲಿ ಮಾದಾಪುರ ರಸ್ತೆಯ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಲಾಗಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದಲ್ಲಿ ಮಾಹಿತಿ ಕಾರ್ಯಾಗಾರ ನೀಡಿದರು. ಫೂಟ್ ಪಲ್ಸ್ ಥೆರಪಿಯಿಂದ ಆಗುವ ಪ್ರಯೋಜನದ ಬಗ್ಗೆ ಮಾಹಿತಿ ನೀಡಿ ಉತ್ತಮ ಆರೋಗ್ಯದಿಂದ ಜೀವನ ನಡೆಸುವಂತೆ ಕರೆ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಶಶಾಂಕ್ ಶ್ರೀನಿವಾಸ್ ಕಾರ್ಯಾಗಾರವನ್ನು ಉದ್ಘಾಟಿಸಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಕಾರ್ಯದರ್ಶಿ ಗ್ಲೇನ್ ಮೆನೇಜಸ್, ಕೋಶಾಧಿಕಾರಿ ಪ್ರೀತಮ್ ಪ್ರಭಾಕರ್, ಹಿರಿಯ ಸದಸ್ಯರಾದ ಶ್ರೀನಿವಾಸ್ ಎಸ್.ಜಿ.ಪೆಮ್ಮಯ್ಯ, ಯಶೋಧರ್ ಪೂಜಾರಿ, ಕೆ.ಪಿ.ಜಗನಾಥ್, ಪಿ.ಜಿ.ಪೆಮ್ಮಯ್ಯ ಸಿ.ಟಿ.ಪೊನ್ನಪ್ಪ, ಹಾಜರಿದ್ದರು.
ಸುಂಟಿಕೊಪ್ಪ ಜ.31 NEWS DESK : ಶಿಕ್ಷಣವನ್ನು ಉತ್ತೇಜಿಸುವ ದಿಸೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಕ್ಕಳ ಶಿಕ್ಷಣಕ್ಕೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಡೆಸ್ಕ್ ಬೆಂಚ್ ವಿತರಿಸುತ್ತಿರುವುದು ಮಹತ್ಕಾರ್ಯವೆಂದು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್ ಹೇಳಿದರು. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಂಚ್ ಡೆಸ್ಕ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕವಾಗಿ ಸಮುದಾಯಕ್ಕೆ ಪ್ರೇರಣೆಯಾಗುವಂತಹ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು. ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಅವರ ಬೇಡಿಕೆ ಅನುಸಾರ ಬೆಂಚ್ ಡೆಸ್ಕ್‍ಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಿರುವುದು ಹರ್ಷದಾಯಕ ವಿಚಾರವಾಗಿದೆ ಎಂದು ಹೇಳಿದರು. ಮಡಿಕೇರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸುಮಾರು 19 ಶಾಲೆಗಳು ಬೇಡಿಕೆ ಸಲ್ಲಿಸಿದಷ್ಟು 159 ಬೆಂಚ್ ಡೆಸ್ಕ್ ವಿತರಣೆ ಮಾಡಲಾಗಿದೆ ಎಂದು ಯೋಜನಾಧಿಕಾರಿ ಪುರುಷೋತ್ತಮ್ ಮಾಹಿತಿ ನೀಡಿದರು.…
ಬೆಂಗಳೂರು NEWS DESK ಜ.30 : ಮೊನ್ನೆಯಷ್ಟೆ ತಂದೆಯ ಪಿಂಡ ಪ್ರಧಾನ ಕಾರ್ಯಕ್ಕೆ ಭಾಗಮಂಡಲ ಹೋಗಿದ್ದೆ. ಕಾವೇರಿ ಸಂಗಮದ ಆ ಬದಿಯಲ್ಲಿ ಕಾರ್ಯ ನೆರವೇರಿಸುತ್ತಿರುವಾಗ ಫಳ ಫಳನೆ ಹೊಳೆಯುತ್ತಿದ್ದ ಫ್ಲೈ ಓವರ್ ಕಾಣಿಸಿತು. ಅರೇ ಇದೇನಿದು ಫ್ಲೈ ಓವರ್ ಸಿದ್ದವಾಗಿದೆ. ವಾಹನಗಳು ಸಂಚರಿಸುತ್ತಿವೆ. ಒಮ್ಮಗೆ ಆಶ್ಚರ್ಯ ಆಯ್ತು. ಕೈಂಕರ್ಯ ಮುಗಿಸಿದ ಬಳಿಕ ಅದೇ ಫ್ಲೈ ಓವರ್ ಕೆಳಗೆ ಹೋಗಿ ಸಂಪೂರ್ಣ ವೀಕ್ಷಿಸಿದೆ. ಫ್ಲೈ ಓವರ್ ನೋಡುತ್ತಿದ್ದಂತೆ 28 ವರ್ಷ (1997) ಹಿಂದಕ್ಕೆ ಜಾರಿದೆ. ಹಳೆಯ ನೆನಪುಗಳು ಎಳೆ ಎಳೆಯಾಗಿ ಹೊರ ಹೊಮ್ಮತೊಡಗಿದವು. ಅದು 1997. ಶಕ್ತಿ ಪತ್ರಿಕೆಯಲ್ಲಿ ಉಪಸಂಪಾದಕನಾಗಿ ಕೆಲಸ ಮಾಡುತ್ತಿದ್ದೆ. ಒಂದು ವರ್ಷದಲ್ಲಿ ಕೊಡಗಿನ ಒಂದಷ್ಟು ಗಮನಾರ್ಹ ವಿಚಾರಗಳನ್ನು, ಸಮಸ್ಯೆಗಳನ್ನ ಕಣ್ಣಾರೆ ಕಂಡಿದ್ದೆ. 1998ರ ಮಳೆಗಾಲ. ಎಂದಿನಂತೆ ಭಾಗಮಂಡಲ ಕಾವೇರಿ, ಕನ್ನಿಕೆ ನದಿ ಪ್ರವಾಹದಿಂದ ಜಲಾವೃತ್ತಗೊಂಡಿತ್ತು. ನಾನು ಈ ಸುದ್ದಿ ಫಾಲೋ ಅಪ್ ಮಾಡುತ್ತಿದ್ದೆ. ಎಲ್ಲಾ ಕಡೆಯಿಂದ ಸಂಪರ್ಕ ಕಡಿತಗೊಂಡು ದ್ವೀಪದಂತಾದ ಭಾಗಮಂಡಲ ಎಂದು ಬರೆದಿದ್ದೆ. ಭಾಗಮಂಡಲ – ತಲಕಾವೇರಿ – ಅಯ್ಯಂಗೇರಿ…
ಮಡಿಕೇರಿ NEWS DESK ಜ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ವಾಹನ ನೀಡಿ ಸಹಕರಿಸಿದ ಆರೋಪದಡಿ ಇಬ್ಬರ ವಿರುದ್ಧ ಕೊಡಗು ಪೊಲೀಸ್ ಪ್ರಕರಣ ದಾಖಲಿಸಿದೆ ಮತ್ತು ಎರಡು ವಾಹನಗಳನ್ನು ವಶಕ್ಕೆ ಪಡೆದಿದೆ. ವಿರಾಜಪೇಟೆ ತಾಲ್ಲೂಕಿನ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ.ಶಿವಪ್ಪ (50) ಹಾಗೂ ಮೈತಾಡಿ ಗ್ರಾಮದ ಬೋಳ್ಯಪಂಡ ಎಂ.ಭೀಮಯ್ಯ (38) ಎಂಬುವವರ ವಿರುದ್ಧ ಆರೋಪಿಗಳಿಗೆ ಸಹಕರಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಕೆಯಾದ ಆರೋಪದಡಿ ನೆಲ್ಲಮಕ್ಕಡ ಎಂ.ಶಿವಪ್ಪ ಅವರ ಮಾರುತಿ ಕಾರು ಮತ್ತು ಅಪರಾಧ ಕೃತ್ಯಕ್ಕೆ ಬಳಸಿದ ಆರೋಪದಡಿ ಬೋಳ್ಯಪಂಡ ಎಂ.ಭೀಮಯ್ಯ ಅವರ ಬೋಲೆರೋ ವಾಹನವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಮಡಿಕೇರಿ ಡಿವೈಎಸ್‌ಪಿ ಸೂರಜ್.ಪಿ.ಎ, ಪಿಐ ಚಂದ್ರಶೇಖರ್ ಹೆಚ್.ವಿ, ಗ್ರಾಮಾಂತರ ಠಾಣೆಯ ಪಿಎಸ್‌ಐ ಶ್ರೀನಿವಾಸ, ಮಡಿಕೇರಿ ಸಂಚಾರಿ ಠಾಣೆಯ ಪಿಎಸ್‌ಐ ಎನ್.ಟಿ.ತಮ್ಮಯ್ಯ, ಉಪವಿಭಾಗ ಮಟ್ಟದ…
ಮಡಿಕೇರಿ NEWS DESK ಜ.30 : ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಘಟಕ ಪಂಚ ಪ್ರಶ್ನೆಗಳನ್ನಿಟ್ಟಿದೆ. ಈ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ 2015 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್.ಕಾಂತರಾಜ್ ಅವರು ವೈಜ್ಞಾನಿಕವಾಗಿ ತಯಾರಿಸಿದ ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯನ್ನು ಯಾಕೆ ಸಚಿವ ಸಂಪುಟ ಅಂಗೀಕರಿಸಿ, ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ಚರ್ಚೆಗೆ ಮಂಡಿಸಿಲ್ಲ? ರಾಹುಲ್ ಗಾಂಧಿಯವರು ಕೇಂದ್ರ ಮಟ್ಟದಲ್ಲಿ ಜಾತಿ ಜನಗಣತಿಗೆ ಒತ್ತು ನೀಡುತ್ತಿರುವಾಗ ರಾಜ್ಯದಲ್ಲಿ ಕಾಂತರಾಜ್ ಆಯೋಗದ ಶಿಫಾರಸ್ಸು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. 2023 ರ ಚುನಾವಣೆ ಪ್ರಣಾಳಿಕೆಯ ಭರವಸೆಯಂತೆ ಹಿಂದಿನ ಬಿಜೆಪಿ ಸರಕಾರ ಮುಸಲ್ಮಾನರಿಂದ ಕಿತ್ತುಕೊಂಡ ಮೀಸಲಾತಿಯನ್ನು ಮರು ಸ್ಥಾಪಿಸುವ ಬದ್ಧತೆ ಏನಾಯಿತು? ಗೆದ್ದು ಅಧಿಕಾರಕ್ಕೆ ಬಂದ ಮೊದಲನೆಯ ಮಂತ್ರಿಮಂಡಲದಲ್ಲಿ ಅನುಷ್ಠಾನಗೊಳಿಸುವ ವಾಗ್ಧಾನ ಜಾರಿಗೆ…
ಮಡಿಕೇರಿ NEWS DESK ಜ.30 : ನನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಕೆಲವರು ಕೊಡವರ ಬಗ್ಗೆ ವಿಶೇಷವಾಗಿ ನನ್ನ ಬಗ್ಗೆ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಮತ್ತು ಬೆದರಿಕೆಯ ಕಾಮೆಂಟ್‌ಗಳನ್ನು ರವಾನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದೇ ಜ.26 ರಂದು ಸಿಎನ್‌ಸಿ ಸ್ವಯಂಸೇವಕರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಅಂದು ಸರಕಾರಿ ರಜೆ ಇದ್ದರೂ ಅಲ್ಲಿ ವಾಹನದಲ್ಲಿ ಅಪರಿಚಿತ ವ್ಯಕ್ತಿಗಳು ಜಿಲ್ಲಾಡಳಿತ ಭವನದ ಸುತ್ತಲೂ ತಿರುಗಾಡುತ್ತಿರುವುದು ಕಂಡು ಬಂದಿದೆ ಎಂದು ನಾಚಪ್ಪ ಉಲ್ಲೇಖಿಸಿದ್ದಾರೆ. ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ಈ ದೃಶ್ಯಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಅವರು ಪೊಲೀಸರನ್ನು ವಿನಂತಿಸಿದ್ದಾರೆ. ಕಳೆದ 35 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಪರಿಶಿಷ್ಟ ಪಂಗಡ ಸ್ಥಾನಮಾನ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡಂತೆ ಸ್ಥಳೀಯ ಕೊಡವರ ಹಕ್ಕುಗಳಿಗಾಗಿ ಶಾಂತಿಯುತ…
ಮಡಿಕೇರಿ ಜ.30 NEWS DESK : ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ `ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ `ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ ಗೌರವದೊಂದಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್‍ಪೆಕ್ಟರ್ ಹನುಮಂತ ಕೌಜಲಗಿ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯವು ವೆಂಕಟೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು…
ಮಡಿಕೇರಿ ಜ.30 NEWS DESK : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ-2025 ರ ಅನುಷ್ಠಾನದ ಬಗ್ಗೆ ಮಂಗಳವಾರ ಭಿತ್ತಿ ಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್‍ಗಳನ್ನು ಬಿಡುಗಡೆಗೊಳಿಸಿದರು. ಕರಪತ್ರಗಳನ್ನು ಬಿಡುಗಡೆ ಮಾಡಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಂ.ಕೆ.ಸತೀಶ್ ಕುಮಾರ್ ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಮಾತನಾಡಿ ಜ.30 ರಿಂದ ಫೆ.13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು…






