ಲೇಖಕ: admin

ಮಡಿಕೇರಿ ಜ.30 NEWS DESK : ಒಳಮೀಸಲಾತಿಯನ್ನು ಶೀಘ್ರ ಜಾರಿಗೆ ತರಬೇಕೆಂದು ಒತ್ತಾಯಿಸಿ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದ ಪ್ರೊ.ಬಿ.ಕೃಷ್ಣಪ್ಪ ಅವರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ. ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಒಳಮೀಸಲಾತಿ ವರ್ಗೀಕರಣದ ವಿಚಾರವಾಗಿ ಈಗಿನ ಸರಕಾರ ವಿಳಂಬ ಧೋರಣೆ ತಾಳಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪೀಠಿಕೆಯಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವ ಆಶಯವನ್ನು ಬರೆದಿದ್ದಾರೆ. ಅದರ ಅನುಷ್ಠಾನಕ್ಕಾಗಿ ಸಂವಿಧಾನದ 15, 16ರ ಅನುಚ್ಛೇದದಲ್ಲಿ ಶೋಷಿತ ಸಮುದಾಯಗಳು ಸಮಾನವಾಗಿ ಬದುಕಲು ಮೀಸಲಾತಿ ಕಲ್ಪಿಸುವ ಮೂಲಭೂತ ಹಕ್ಕನ್ನು ನೀಡಿದ್ದಾರೆ. ಆದರೆ ಕರ್ನಾಟಕದಲ್ಲಿ ಚರ್ಮಗಾರಿಕೆಗೆ ಸಂಬಂಧಿಸಿದ ಮಾದಿಗ, ಸಮಗಾರ, ಡೋಹರ, ದಕ್ಕಲಿಗ, ಮಚ್ಚಗಾರ ಮತ್ತು ಇತರೆ ಜಾತಿಗಳಿಗೆ ಅವರ…

Read More

ಮಡಿಕೇರಿ ಜ.30 NEWS DESK : ಮೂರ್ನಾಡಿನ ನಿವಾಸಿಯಾಗಿರುವ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಹಾಗೂ ಅವರ ತಾಯಿಯ ಮೇಲೆ ನಡೆದಿರುವ ಹಲ್ಲೆ ಪ್ರಕರಣ ಖಂಡನೀಯವೆಂದು ಮೂರ್ನಾಡು ಗಜಾನನ ಯುವಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇವರ ಸೇವೆಯಲ್ಲಿ ತೊಡಗಿರುವ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದಿರುವ ಹಲ್ಲೆ ಅಮಾನುಷವಾಗಿದೆ, ಪೊಲೀಸ್ ಇಲಾಖೆ ಸೂಕ್ತ ಭದ್ರತೆಯನ್ನು ನೀಡಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡಬೇಕು. ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಹೀನ ಕೃತ್ಯಗಳು ನಡೆಯದಂತೆ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜ.30 NEWS DESK : ಅಮಾಯಕರಾದ ಅರ್ಚಕ ವಿಘ್ನೇಶ್ ಭಟ್ ಹಾಗೂ ಅವರ ತಾಯಿಯ ಮೇಲೆ ನಡೆದಿರುವ ಹಲ್ಲೆ ಪ್ರಕರಣ ಖಂಡನೀಯವೆಂದು ಮೂರ್ನಾಡು ಆಪ್ತಮಿತ್ರ ಬಳಗದ ಅಧ್ಯಕ್ಷರು ಮತ್ತು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಎಲ್ಲರೊಂದಿಗೆ ಸಾಮರಸ್ಯದಿಂದ ಜೀವನ ಸಾಗಿಸುತ್ತಿರುವ ಅರ್ಚಕರ ಮೇಲೆ ಕಿಡಿಗೇಡಿಗಳು ದಾಳಿ ಮಾಡಿರುವುದು ವಿಷಾದಕರ. ಇನ್ನು ಮುಂದೆ ಈ ರೀತಿಯ ಘಟನೆಗಳು ಮತ್ತೆ ಜಿಲ್ಲೆಯಲ್ಲಿ ಸಂಭವಿಸಬಾರದು. ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅರ್ಚಕ ವರ್ಗಕ್ಕೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

Read More

ವಿರಾಜಪೇಟೆ ಜ.30 NEWS DESK : ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಕೊಡವ ಸಮಾಜದ ಆವರಣದಲ್ಲಿ ಪುತ್ತರಿ ಒತ್ತೋರ್ಮೆ ಕೂಟ ಸಂಭ್ರಮದಿಂದ ನಡೆಯಿತು. ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಳಿಯಪ್ಪ ತಪ್ಪಡಕ ಕಟ್ಟುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಐಚೆಟ್ಟಿರ ಮೀನಾ ಅವರ ನಾಯಕತ್ವದಲ್ಲಿ ನೀಲಕ್ಕ ಗ್ರೂಪ್ ಸದಸ್ಯರು ವಿವಿಧ ರೀತಿಯ ಮನರಂಜನೆ ಹಾಗೂ ಕ್ರೀಡಾ ಪೈಪೋಟಿಗಳನ್ನು ನಡೆಸಿ ನೆರೆದಿದ್ದ ಸದಸ್ಯರನ್ನು ರಂಜಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್, ಇಲ್ಲಿ ಎಲ್ಲ ಮಹಿಳೆಯರಿಗೂ ವೇದಿಕೆ ದೊರಕುವಂತಾಗಿದೆ. ಜಂಜಾಟದ ನಡುವೆ ಇರುವ ಮಹಿಳೆಯರಿಗೆ ಈ ರೀತಿಯ ಕಾರ್ಯಕ್ರಮ ಒಂದು ವೇದಿಕೆ ಕಲ್ಪಿಸಿದೆ. ಮಹಿಳೆಯರು ದಿನನಿತ್ಯ ಯೋಗ, ದ್ಯಾನ ಮಾಡುವ ಅಭ್ಯಾಸವನ್ನಿಟ್ಟುಕೊಳ್ಳಬೇಕು. ಇದರಿಂದ ಏಷ್ಟೋ ಸಮಸ್ಯೆಗಳು ಪರಿಹಾರ ಆಗುತ್ತದೆ. ಒತ್ತಡ ಕಡಿಮೆ ಆಗುತ್ತದೆ. ಪ್ರತಿಯೊಬ್ಬರೂ ಜೀವನದಲ್ಲಿ ಇತ್ತಮ ಹವ್ಯಾಸಗಳನ್ನಿಟ್ಟುಕೊಂಡು ಬದುಕನ್ನು ರೂಪಿಸಿಕೊಳ್ಳುವಂತಾಗಬೇಕೆಂದರು. ತಾಯಿ ಮಕ್ಕಳಿಗೆ ಮೊದಲು ಸಂಸ್ಕಾರ ಕಲಿಸಬೇಕು. ಜೊತೆಗೆ ವಿದ್ಯೆ ಕೊಡಬೇಕು. ಬುದ್ದಿ ಹೇಳಬೇಕು…

Read More

ಮಡಿಕೇರಿ ಜ.30 NEWS DESK : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ಹಲ್ಲೆ ಮಾಡಿದವರನ್ನು ತಕ್ಷಣ ಪೊಲೀಸರು ಬಂಧಿಸಬೇಕೆಂದು ಮೂರ್ನಾಡು ಅಯ್ಯಪ್ಪ ಯುವಕ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಘ್ನೇಶ್ ಭಟ್ ಹಾಗೂ ಅವರ ತಾಯಿಯ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವುದು ಖಂಡನೀಯ. ಪೊಲೀಸ್ ಇಲಾಖೆ ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆಯನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜ.30 NEWS DESK : ದಬ್ಬಡ್ಕದ ಶ್ರೀ ದುರ್ಗಾದೇವಿ  ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗ್ರಾಮಸ್ಥರು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು.

Read More

ಮಡಿಕೇರಿ ಜ.30 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ಮೂರ್ನಾಡು ಶ್ರೀ ರಾಮ ಮಂದಿರ ದೇವಾಲಯ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರ್ಚಕರ ಮನೆಗೆ ಹೋಗಿ ಹಲ್ಲೆ ಮಾಡಿರುವುದು ಅಮಾನವೀಯ ಕೃತ್ಯವಾಗಿದ್ದು, ಅವರ ತಾಯಿಯ ಮೇಲೂ ಹಲ್ಲೆಯಾಗಿರುವುದು ಅತ್ಯಂತ ದು:ಖಕರ ಬೆಳವಣಿಗೆಯಾಗಿದೆ. ಈ ಪ್ರಕರಣವನ್ನು ಪೊಲೀಸ್ ಇಲಾಖೆ ಲಘುವಾಗಿ ಪರಿಗಣಿಸಬಾರದು. ತಕ್ಷಣ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜ.30 NEWS DESK : ದಬ್ಬಡ್ಕ, ಕೊಪ್ಪ ಹಾಗೂ ಕೆದಂಬಾಡಿ ಐನ್ ಮನೆಗೆ ಹೋಗುವ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಕಾಂಗ್ರೆಸ್ ಪಕ್ಷದ ಹಿರಿಯ-ಕಿರಿಯ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಗೂ ಪ್ರಮುಖರು ಹಾಜರಿದ್ದರು.

Read More

ಮಡಿಕೇರಿ ಜ.30 NEWS DESK : ಇತಿಹಾಸ ಪ್ರಸಿದ್ಧ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನವು ಜ.31 ರಿಂದ ಫೆ.2ರ ವರೆಗೆ ಪೇರಡ್ಕ ತೆಕ್ಕಿಲ್ ಮೊಹಮದ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ ಎಂದು ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇರಡ್ಕ ಮುಹಿಯದ್ದೀನ್ ಜುಮ್ಮಾ ಮಸೀದಿ ಮತ್ತು ದರ್ಗಾದಲ್ಲಿ ಜ.31 ರಂದು ಜುಮಾ ನಮಾಜಿನ ಬಳಿಕ ಎಂ.ಜೆ.ಎಂ ಪೇರಡ್ಕ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಧಜ್ವಾರೋಹಣದ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಅಪರಾಹ್ನ 2 ಗಂಟೆಗೆ ಮುಖಾಂ ಅಲಂಕಾರ ಮತ್ತು ಕೂಟು ಪ್ರಾರ್ಥನೆ ನಡೆಯಲಿದ್ದು, ರಾತ್ರಿ 8 ಗಂಟೆಯಿಂದ ಪಾಣಕ್ಕಾಡ್ ಅಲ್‍ಹಾಜ್ ಹಮೀದಲೀ ಶಿಹಾಬ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿ ಖುತ್‍ಮುಲ್ ಖುರಾನ್ ದುಃಆ ನೇತೃತ್ವ ವಹಿಸಲಿದ್ದಾರೆ. ಪತ್ತನಂತಿಟ್ಟ ಅಬ್ದುಲ್ ರಝಾಕ್ ಅಬ್ರಾರಿ ಧಾರ್ಮಿಕ ಪ್ರಭಾಷಣ ಮಾಡಲಿದ್ದು, ವೇದಿಕೆಯಲ್ಲಿ ಸ್ಥಳದಾನಿಗಳಾದ ತೆಕ್ಕಿಲ್ ಬಾಬ ಹಾಜಿ, ತಾಜ್ ಮೊಹಮದ್,…

Read More

ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಹುತಾತ್ಮರಾದ ದಿನದ ಅಂಗವಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಪುಣ್ಯಸ್ಮರಣೆ ಮತ್ತು ಹುತಾತ್ಮರ ದಿನವನ್ನು ಆಚರಿಸಲಾಯಿತು. ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ ಅವರು ನೀಡಿದ ಕೊಡುಗೆ ಅಪಾರ, ಅವರ ಶಾಂತಿಮಾರ್ಗದ ಹೋರಾಟ ಇಂದಿನ ಯುವ ಪೀಳಿಗೆಗೆ ಮಾದರಿಯಾಗಲಿ ಎಂದರು. ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಸೇವಾದಾಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ.ಮೋಹನ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ಸೈನಿಕ ಘಟಕದ ಜಿಲ್ಲಾಧ್ಯಕ್ಷ ಬೊಳ್ಳಿಯಂಡ ಗಣೇಶ್, ಹಿರಿಯರಾದ ಆನಂದ, ಸೇವಾದಾಳದ ಪ್ರಧಾನ ಕಾರ್ಯದರ್ಶಿ ಅಬೀಬ್ ಅಹಮದ್, ಅಜಿಜ್, ಎನ್‍ಎಸ್‍ಯುಐ ಮಡಿಕೇರಿ ನಗರಾಧ್ಯಕ್ಷ ಅರ್ಜುನ್ ಟಿ.ಆರ್, ಬ್ಲಾಕ್…

Read More