ಮಡಿಕೇರಿ NEWS DESK ಜ.30 : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.2ರಿಂದ 7ರವರೆಗೆ ಕೊಡವರ ಶಾಂತಿಯುತ ಪಾದಯಾತ್ರೆ ನಡೆಯಲಿದೆ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳಿಗೆ ಸಂವಿಧಾನ ಬದ್ಧವಾಗಿ ದೊರಕಬೇಕಾದ, ಹಕ್ಕು ಮತ್ತು ಬೇಡಿಕೆಗೆ ಇದುವರೆಗೂ ಮನ್ನಣೆ ನೀಡದಿರುವುದು ವಿಪರ್ಯಾಸ. ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು, ನಮ್ಮ ಸಂವಿಧಾನಿಕ ಹಕ್ಕು ಮತ್ತು ಸಂಸ್ಕöÈತಿಯ ಭದ್ರತೆಗಾಗಿ, ಜನಾಂಗೀಯ ಅಸ್ತಿತ್ವವನ್ನು ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಕೊಡವ ಸಮಾಜ, ಸಂಘಟನೆಗಳು, ಭಾಷಿಕ ಸಮುದಾಯಗಳ ಸಂಘಟನೆಗಳು, ಎಲ್ಲಾ ಕೊಡವ ಅಭಿಮಾನಿಗಳು ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಮಡಿಕೇರಿಗೆ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ನಮ್ಮ ಹಕ್ಕು ಪ್ರತಿಪಾದನೆ ಮಾಡುವ ಕುರಿತಂತೆ ತೀರ್ಮಾನಿಸಿದ್ದೇವೆ ಎಂದರು. ಕೊಡಗು…
ಲೇಖಕ: admin
ಬೆಂಗಳೂರು ಜ.30 NEWS DESK : ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಜನವರಿ 30, 1948 ರಂದು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟಡ ಬದುಕು, ಅಹಿಂಸೆ, ಸತ್ಯಾಗ್ರಹ, ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗೃಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ…
ಮಡಿಕೇರಿ ಜ.30 NEWS DESK : ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ಅಧಿಕಾರಿ ಆಗಿ ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿದ ಡಾ.ದೇವದಾಸ್ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜ.30 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 126ನೇ ಜನ್ಮದಿನವನ್ನು ಆಚರಿಸಲಾಯಿತು. ಸಮಾಜ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಕಾರ್ಯಪ್ಪನವರ ಜೀವನ ಸಾಧನೆಯ ಬಗ್ಗೆ ತಿಳಿಸಿದರು. ಅವರ ಶಿಸ್ತಿನ ಜೀವನ ಸಾಧನೆಯನ್ನು ಎಲ್ಲರು ಪಾಲಿಸುವಂತಾಗ ಬೇಕೆಂದರು. ಈ ಸಂದರ್ಭ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಮಂಡಿರ ಸದಾಮುದ್ದಪ್ಪ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ನಂದಿನೆರವಂಡ ರವಿಬಸಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಕಾಂಡೆರ ಲಲ್ಲು ಕುಟ್ಟಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಕನ್ನಂಡ ಕವಿತಾ ಬೊಳ್ಳಪ್ಪ, ಮಾಜಿ ನಿರ್ದೆಶಕರಾದ ಪುಟ್ಟಿಚಂಡ ಡಾನ್ ದೇವಯ್ಯ, ಕೊಡವ ಸಮಾಜ ಸಿಬ್ಬಂದಿ ವರ್ಗ, ಸೌಹಾರ್ದ ಸಹಕಾರ ಬ್ಯಾಂಕಿನ ಸಿಬ್ಬಂದಿ ವರ್ಗ, ಕೊಡವ ವಿದ್ಯಾನಿಧಿಯ ಸಿಬ್ಬಂದಿ ವರ್ಗ ಹಾಜರಿದ್ದರು.
ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸರ್ವೋದಯ ದಿನವನ್ನು ಆಚರಿಸಲಾಯಿತು. ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಗೌರವಸಲ್ಲಿಸಿದರು.
ಮಡಿಕೇರಿ ಜ.30 NEWS DESK : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಅತ್ತೂರಿನ ನ್ಯಾಶನಲ್ ಅಕಾಡೆಮಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಬಿ.ಎ.ಆದಿಲ್ (ಅಪ್ಪು) ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಟ್ರೋಫಿಯನ್ನು ಗೆದ್ದುಕೊಂಡಿದ್ದಾನೆ. “ಪಶ್ಚಿಮ ಘಟ್ಟ ಸಂರಕ್ಷಣೆಯಲ್ಲಿ ನಮ್ಮೆಲ್ಲರ ಪಾತ್ರ” ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಬಿ.ಎ.ಆದಿಲ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ನಗರದ ರೋಶನಾರದಲ್ಲಿ ನಡೆದ ಫೀ.ಮಾ.ಕೆ.ಎಂ.ಕಾರ್ಯಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಯಪ್ಪ ಅವರ ಪುತ್ರಿ ನಳಿನಿ ಕಾರ್ಯಪ್ಪ ಟ್ರೋಫಿ ವಿತರಿಸಿದರು. ಆದಿಲ್ ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯು.ಕೆ.ಅಶ್ರಫ್ ಹಾಗೂ ಅತ್ತೂರು ಗದ್ದೆಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನಾ ದಂಪತಿಯ ಪುತ್ರ.
ಮಡಿಕೇರಿ ಜ.30 NEWS DESK : ಮೂರ್ನಾಡಿನಲ್ಲಿ ಹಲ್ಲೆಗೆ ಒಳಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರನ್ನು ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿಯಾಗಿ ಸಾಂತ್ವನ ಹೇಳಿದರು. ಅರ್ಚಕರಿಗೆ ಧೈರ್ಯ ತುಂಬಿದ ಶಾಸಕರು ಕಾನೂನು ಕ್ರಮದ ಭರವಸೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ NEWS DESK ಜ.30 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ಮಡಿಕೇರಿಯಲ್ಲಿ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮೈದಾನದಲ್ಲಿರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟçಪಿತ ಮಹಾತ್ಮ ಗಾಂಧಿಗೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಸರ್ವಧರ್ಮ ಗುರುಗಳು ಸಂದೇಶಗಳನ್ನು ಬೋಧಿಸಿದರು. ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.…
ಮಡಿಕೇರಿ ಜ.30 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ಮಡಿಕೇರಿಯಲ್ಲಿ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮೈದಾನದಲ್ಲಿರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಸರ್ವಧರ್ಮ ಗುರುಗಳು ಸಂದೇಶಗಳನ್ನು ಬೋಧಿಸಿದರು. ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.…
ನಾಪೋಕ್ಲು ಜ.30 NEWS DESK : ನಾಪೋಕ್ಲು ಹೋಬಳಿ ಮಟ್ಟದ ಪಿಂಚಣಿ ಆದಲತ್ ನಡೆಸುವುದರಿಂದ ವಯೋವೃದ್ಧರಿಗೆ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಕಂದಾಯ ಪರಿವೀಕ್ಷಕ ರವಿಕುಮಾರ್ ಹೇಳಿದರು. ಚೆಯ್ಯಡಾಂಣೆ ನರಿಯಂದಡ ಗ್ರಾ.ಪಂ ವ್ಯಾಪ್ತಿಗೆ ಒಳಪಟ್ಟ ಗ್ರಾಮಸ್ಥರಿಗೆ ಚೆಯ್ಯಡಾಂಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಹೋಬಳಿ ಮಟ್ಟದ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರದ ಆದೇಶದಂತೆ ಮಾನ್ಯ ತಹಶೀಲ್ದಾರ್ ಅವರ ನಿರ್ದೇಶನದಂತೆ ನರಿಯಂದಡ ಗ್ರಾಮದಲ್ಲಿ ಪಿಂಚಣಿ ಅದಾಲತ್ ನಡೆಸಲಾಗಿದೆ. ಆಧಾರ್ ಕಾರ್ಡ್ ಈಕೆ ವೈಸಿ ಮಾಡಿಸದೆ ಇರುವುದರಿಂದ ಹಾಗೂ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡದೇ ಇರುವುದರಿಂದ ಫಲಾನುಭವಿಗಳು ಪಿಂಚಣಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅವರಿಗೆ ಸಕಾಲದಲ್ಲಿ ಪಿಂಚಣಿ ಸೌಲಭ್ಯ ದೊರಕಲು ನೆರವಾಗುವಂತೆ ಪಿಂಚಣಿ ಆಯೋಜಿಸಲಾಗಿದೆ ಎಂದರು. ನರಿಯಂದಡ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಸದಸ್ಯರಾದ ಮಹಮ್ಮದ್, ರಾಜೇಶ್ ಅಚ್ಚಯ್ಯ,…






