ವಿರಾಜಪೇಟೆ ಆ.11 NEWS DESK : ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಹಾಗೂ ಶಿಸ್ತಿನ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಅಧಿಕಾರ ವಹಿಸಿ ಮಾತನಾಡಿದ ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಲೇಪಾಕ್ಷಿ ಐ.ಡಿ., ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣ, ಶಿಸ್ತು ಹಾಗೂ ದೇಶಪ್ರೇಮವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು. ಅಧಿಕಾರ ಸ್ವೀಕರಿಸಿದ ವಿದ್ಯಾರ್ಥಿ ನಾಯಕರು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿ ನಡೆದುಕೊಳ್ಳಬೇಕು. ಶಾಲಾ ಹಂತದಲ್ಲಿ ದೊರೆಯುವ ಇಂತಹ ಜವಾಬ್ದಾರಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಅಡಿಪಾಯವಾಗುತ್ತವೆ ಎಂದು ಹೇಳಿದರು. :: ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ಬಿ.ಬಿ. ಮಾದಪ್ಪ :: ಗೌರವ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಟ್ರಸ್ಟ್ ಅಧ್ಯಕ್ಷ ರೋಟೇರಿಯನ್ ಬಿ.ಬಿ. ಮಾದಪ್ಪ ಮಾತನಾಡಿ, ನಾಯಕತ್ವ ಎಂಬುದು ಕೇವಲ ಹುದ್ದೆಯಲ್ಲ, ಅದೊಂದು ಜವಾಬ್ದಾರಿ. ನೂತನವಾಗಿ ಆಯ್ಕೆಯಾದ ಶಾಲಾ ನಾಯಕರು ಶಾಲೆಯ ಶಿಸ್ತು ಮತ್ತು ಗೌರವವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು…
ಲೇಖಕ: admin
ವಿರಾಜಪೇಟೆ ಆ.11 NEWS DESK : ಶ್ರೀ ಕ್ಷೇತ್ರ ಮಲೆತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ ವಾರ್ಷಿಕ ಶ್ರಾವಣ ಮಹೋತ್ಸವವು ಆ.15 ರಿಂದ ಸೆ.5 ರವರೆಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಬರುವ 4 ಪವಿತ್ರ ಶ್ರಾವಣ ಶನಿವಾರಗಳಂದು ಸಕಲ ಧಾರ್ಮಿಕ ಪೂಜಾ ವಿಧಿ-ವಿಧಾನಗಳೊಂದಿಗೆ ಮಹೋತ್ಸವವನ್ನು ಆಚರಿಸಲಾಗುವುದು. ಶ್ರಾವಣ ಮಾಸದ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಅಂಗವಾಗಿ ಆಗಸ್ಟ್ 14 ಶುಕ್ರವಾರದಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ನಡೆಸಿ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಲಾಗುತ್ತದೆ. ರಾತ್ರಿ 7 ಗಂಟೆಗೆ ದುರ್ಗಾ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಪ್ರತಿ ಶ್ರಾವಣ ಶನಿವಾರ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಆ.15 ಶನಿವಾರ ಬೆಳಿಗ್ಗೆ 5 ಗಂಟೆಗೆ ಶ್ರೀ ಶನೀಶ್ವರ ದೇವರಿಗೆ ಅಭಿಷೇಕ, 6 ಗಂಟೆಗೆ ಅಲಂಕಾರ ಪೂಜೆ, 8 ಗಂಟೆಗೆ ನವಗ್ರಹ ಪೂಜೆ, 11 ಗಂಟೆಗೆ ಶ್ರೀ ದೇವರ ದರ್ಶನ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ ಹಾಗೂ ಮಹಾ…
ಮಡಿಕೇರಿ ಆ.11 NEWS DESK : ಮೈಸೂರು ವಿಶ್ವವಿದ್ಯಾನಿಲಯದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿಗೆ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಬಿ.ವಿ.ಎ/ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ. ಭರ್ತಿಮಾಡಿದ ಅರ್ಜಿ ಸಲ್ಲಿಸಲು ಆ. 14 ಕೊನೆಯ ದಿನವಾಗಿದೆ. ಎಂ.ವಿ.ಎ.ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್ “ಸಿಬಿಸಿಎಸ್” ಪದ್ಧತಿಯ ಕೋರ್ಸು ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ, ಶಿಲ್ಪಕಲೆ ಮತ್ತು ಅಚ್ಚುಕಲೆ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನಾಂಕ: 18-08-2026 ಆಗಿದೆ. ಆಸಕ್ತರು ನಿಗಧಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2438931 ಮೂಲಕ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಡೀನ್ ತಿಳಿಸಿದ್ದಾರೆ.
ಮಡಿಕೇರಿ ಆ.11 NEWS DESK : ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ಎಲ್ಲರೂ ನೌಕರರಾಗಿದ್ದು, ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್‍ನಲ್ಲಿ ವರ್ಚುವಲ್ ಮೂಲಕ ಮಂಗಳವಾರ ನಡೆದ ‘ಸರ್ಕಾರಿ ನೌಕರರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸಮಾಡುವುದು ಶಾಸಕಾಂಗ ಮತ್ತು ಕಾರ್ಯಾಂಗದ ನೌಕರರದ್ದಾಗಿದೆ. ಆ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರೂ ಸ್ತಂಭವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸಲಹೆ ನೀಡಿದರು. ರಾಜ್ಯದ 7 ಕೋಟಿ ಜನರಲ್ಲಿ 5.50 ಲಕ್ಷ ಜನರಿಗೆ ಮಾತ್ರ ಸರ್ಕಾರಿನೌಕರರಿದ್ದು, ಆ ನಿಟ್ಟಿನಲ್ಲಿ ಜನರ ಸೇವೆ ಮಾಡಲು ಇದೊಂದು ಅವಕಾಶವಾಗಿದ್ದು, ಜವಾಬ್ದಾರಿಯಿಂದ ಜನಸಾಮಾನ್ಯರ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ತಾಕೀತು ಮಾಡಿದರು. ಆಡಳಿತ ವ್ಯವಸ್ಥೆಯಲ್ಲಿ ಹೊಸ ಹೊಸ ತಂತ್ರಜ್ಞಾನ, ಗುಣಮಟ್ಟದ ಶಿಕ್ಷಣ ನೀಡುವಲ್ಲಿ ದೇಶಲ್ಲಿ ಕರ್ನಾಟಕ ಮುಂದಿದೆ, ರಾಜ್ಯದಲ್ಲಿ ಬುದ್ದಿವಂತರು ಮತ್ತು ಪ್ರಜ್ಞಾವಂತರು ಹೆಚ್ಚಿದ್ದು, ಎಲ್ಲರೂ ಸೇರಿ…
ಬೆಂಗಳೂರು, ಆ.11 NEWS DESK : ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳಲ್ಲಿ ಸಂಭವಿಸುವ ಆಕಸ್ಮಿಕ ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ತನಿಖಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದು, ಈ ಕುರಿತು ರಾಜ್ಯದ ಎಲ್ಲಾ 30 ಜಿಲ್ಲೆಗಳ ಜಿಲ್ಲಾ ಕೈಗಾರಿಕಾ ಕೇಂದ್ರಗಳ (DIC) ಜಂಟಿ ನಿರ್ದೇಶಕರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಮುಖ್ಯ ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ. 2026 ನೇ ಆ.5 ರಂದು ಯಾದಗಿರಿ ಜಿಲ್ಲೆಯ ಕಡಚೂರು ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿತವಾಗಿರುವ M/s CIL Labouratories Pvt Ltd ಘಟಕದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಈ ದುರಂತದ ಹಿನ್ನೆಲೆಯಲ್ಲಿ ಜಾಗೃತಗೊಂಡಿರುವ ಇಲಾಖೆಯು, ಕೈಗಾರಿಕೆಗಳಲ್ಲಿ ನಡೆಯುವ ಆಕಸ್ಮಿಕ ಅವಘಡಗಳ ನಿರ್ವಹಣೆ ಮತ್ತು ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತುರ್ತು ಕಾರ್ಯಚರಣಾ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ::…
ಸುಂಟಿಕೊಪ್ಪ ಆ.11 NEWS DESK : ಸುಂಟಿಕೊಪ್ಪ 1ವಿಭಾಗದ ನಿವಾಸಿ ಹಾಗೂ ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಜಾನಕಿ ಕುಂಜ್ಞಿರಾಮನ್ (77) ಅವರು ಮಡಿಕೇರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಅಪರಾಹ್ನ 2 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ ನೇರವೇರಲಿದೆ. ಮೃತರು ಇರ್ವರು ಪುತ್ರರನ್ನು ಆಗಲಿದ್ದಾರೆ.
ಕುಶಾಲನಗರ ಆ.11 NEWS DESK : ಬೀದಿಬದಿ ಮೀನು ವ್ಯಾಪಾರಿಯನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಬಿಜೆಪಿ ಪ್ರಮುಖರು ಪುರಸಭೆ ಕಚೇರಿಯ ಆವರಣದಲ್ಲೇ ಮೀನು ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕುಶಾಲನಗರ ಪ್ರವಾಸಿ ಮಂದಿರದ ರಸ್ತೆಯಲ್ಲಿ ಬೀದಿಬದಿ ವ್ಯಾಪಾರಿಗಳು ಹಲವು ಸಮಯದಿಂದ ವ್ಯಾಪಾರ ನಡೆಸುತ್ತಿದ್ದು, ಹಾರಂಗಿಯ ವ್ಯಾಪಾರಿಯೊಬ್ಬರು ಹೊಳೆ ಮೀನು ತಂದು ರಸ್ತೆ ಬದಿಯಲ್ಲಿ ಕುಳಿತು ಮಾರಾಟ ಮಾಡುತ್ತಿದ್ದರು. ಈ ವೇಳೆ ಪುರಸಭೆ ಸಿಬ್ಬಂದಿ ಅವರ ವ್ಯಾಪಾರವನ್ನು ತೆರವುಗೊಳಿಸಿದ್ದರು. ಈ ಕುರಿತು ಮಾಹಿತಿ ಪಡೆದ ಬಿಜೆಪಿ ಪ್ರಮುಖರು ವ್ಯಾಪಾರಿಯ ನೆರವಿಗೆ ಧಾವಿಸಿ, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ ಎಂದು ಆರೋಪಿಸಿದರು. ಇದರಿಂದ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಮೀನು ವ್ಯಾಪಾರಿಯ ಬುಟ್ಟಿಯೊಂದಿಗೆ ಪುರಸಭೆ ಕಚೇರಿಗೆ ತೆರಳಿ, ಕಚೇರಿ ಆವರಣದಲ್ಲೇ ಮೀನು ಮಾರಾಟ ಆರಂಭಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಬಿಜೆಪಿ ಪ್ರಮುಖ ಭಾಸ್ಕರ್ ನಾಯಕ್ ಮಾತನಾಡಿ, ಅರಣ್ಯ ಇಲಾಖೆ ಕಚೇರಿ ಮುಂಭಾಗದ ರಸ್ತೆ ಬದಿಯಲ್ಲಿ…
ಮಡಿಕೇರಿ ಆ.11 NEWS DESK : ಆಡಳಿತ ಲೋಪಗಳಿಂದ ಮುಕ್ಕಾಗಿರುವ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತುವಿನ ಘನತೆಯನ್ನು ಮರುಸ್ಥಾಪಿಸಿ, ಅದರ ಪರಂಪರೆ ಇತಿಹಾಸವನ್ನು ಪುನರುಜ್ಜೀವನಗೊಳಿಸುವ ಚಿಂತನೆ ತಮ್ಮದಾಗಿದೆಯೆಂದು ಹಿರಿಯ ಸಾಹಿತಿಗಳು ಹಾಗೂ ಮುಂದಿನ ಕಸಾಪ ಚುನಾವಣಾ ಅಭ್ಯರ್ಥಿಯಾಗಿಯೂ ಗುರುತಿಸಿಕೊಂಡಿರುವ ಜಾಣಗೆರೆ ವೆಂಕಟರಾಮಯ್ಯ ಅವರು ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಮೈಸೂರಿನ ನಾಲ್ವಡಿ ಕೃಷ್ಣರಾಜ ಪಡೆಯರ್ ಅವರು ಸ್ಥಾಪಿಸಿ 112 ವರ್ಷಗಳಿ ಸಂದಿದೆ. ಇಂತಹ ಸಂಸ್ಥೆಯ ಘನತೆ ಗೌರವಗಳಿಗೆ ಕಳೆದೆರಡು ಅವಧಿಗಳಲ್ಲಿನ ದುರಾಡಳಿತ, ಭ್ರಷ್ಟತೆಗಳಿಂದ ಕುಂದುಂಟಾಗಿದೆಯೆಂದು ಅತೀವ ಬೇಸರ ವ್ಯಕ್ತಪಡಿಸಿದರು. ಪ್ರತಿ ಕುಟುಂಬಕ್ಕೊಂದು ಸದಸ್ಯತ್ವವಾಗಬೇಕು- ಕನ್ನಡ ಸಾಹಿತ್ಯ ಪರಿಷತ್ ಪ್ರಸ್ತುತ 4.50 ಲಕ್ಷ ಸದಸ್ಯತ್ವವನ್ನು ಹೊಂದಿದೆ. ರಾಜ್ಯದ ಕನ್ನಡಿಗರ ಸಂಖ್ಯೆಗೆ ಹೋಲಿಸಿದಲ್ಲಿ ಸದಸ್ಯತ್ವ ಅತ್ಯಂತ ಸಣ್ಣ ಪ್ರಮಾಣದ್ದು. ಈ ಹಿನ್ನೆಲೆಯಲ್ಲಿ ಕನ್ನಡ ನಾಡಿನ ಕನ್ನಡಿಗರ ಪ್ರತಿ ಕುಟುಂಬದಿಂದ ಸದಸ್ಯತ್ವ ಪಡೆದುಕೊಳ್ಳುವಂತಾಗಬೇಕು ಮತ್ತು ಆ ಮೂಲಕ ನಿಜ ಅರ್ಥದಲ್ಲಿ ಕಸಾಪ ಕನ್ನಡಿಗರ ಸಂಸ್ಥೆಯಾಗಿ ರೂಪು…
ಮಡಿಕೇರಿ NEWS DESK ಆ.11 : ಇತ್ತೀಚೆಗೆ ಬಿಡುಗಡೆಗೊಂಡಿರುವ ಕಸ್ತೂರಿ ರಂಗನ್ ವರದಿಯಲ್ಲಿ ಪರಿಸರ ಸೂಕ್ಷ್ಮ ವಲಯವೆಂದು ಸೇರ್ಪಡೆಗೊಂಡಿರುವ ಕುಂದಚೇರಿ ಚೆಟ್ಟಿಮಾನಿ ಗ್ರಾ.ಪಂ ವ್ಯಾಪ್ತಿಯ ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮವನ್ನು ತಕ್ಷಣ ಕೈಬಿಡಬೇಕೆಂದು ಈ ಭಾಗದ ಗ್ರಾಮಸ್ಥರು, ರೈತರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ. ಗ್ರಾ.ಪಂ ಸಭಾಂಗಣದಲ್ಲಿ ಇಂದು ಸಭೆ ನಡೆಸಿದ ಸರ್ವರು ಜು.27 ರಂದು 7ನೇ ಬಾರಿಗೆ ಬಿಡುಗಡೆಗೊಂಡ ಕಸ್ತೂರಿ ರಂಗನ್ ವರದಿಯಲ್ಲಿ ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮವನ್ನು ಸೇರಿಸಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಕೆದಂಬಾಡಿ ಕೀರ್ತಿ ಕುಮಾರ್ ಅವರು ಮಾತನಾಡಿ ಕಸ್ತೂರಿ ರಂಗನ್ ವರದಿಯಿಂದ ಜನರಿಗೆ ಆಗುವ ತೊಂದರೆ ಮತ್ತು ಅನಾನುಕೂಲದ ಬಗ್ಗೆ ಮಾಹಿತಿ ನೀಡಿದರು. ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕೆ.ಯು.ಹ್ಯಾರೀಶ್ ಅವರು ಮಾತನಾಡಿ ಕಸ್ತೂರಿ ರಂಗನ್ ವರದಿಗೆ ಸಂಬ0ಧಪಟ್ಟ0ತೆ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು 2012 ರಲ್ಲಿ ಸಭೆ ನಡೆಸಿ ಎರಡು ಗ್ರಾಮಗಳನ್ನು ಕೈ ಬಿಡುವಂತೆ ಒತ್ತಾಯಿಸಿ…
ಮಡಿಕೇರಿ NEWS DESK ಆ.11 : ಶಿಥಿಲಾವಸ್ಥೆಯಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಹೊಸತೋಟ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಹೊಸತೋಟ ಗ್ರಾಮದ ನಿವಾಸಿಗಳಾದ ನಿತ್ಯ(47) ಹಾಗೂ ಜನಾರ್ಧನ(47) ಮೃತಪಟ್ಟಿರುವ ದುರ್ದೈವಿಗಳು. ಹಳೇ ಶೌಚಾಲಯದ ಬಳಿ ಬರುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಶೌಚ ಗುಂಡಿ ಕುಸಿದು ನಿತ್ಯ ಅದರಲ್ಲಿ ಸಿಲುಕಿಕೊಂಡಿದ್ದರು. ಇದನ್ನು ಗಮನಿಸಿ ನಿತ್ಯನ ರಕ್ಷಣೆಗಾಗಿ ಧಾವಿಸಿದ ಜನಾರ್ಧನ ಅವರು ಕೂಡ ಗುಂಡಿಯಲ್ಲಿ ಸಿಲುಕಿಕೊಂಡರು. ತಕ್ಷಣ ಸ್ಥಳೀಯರು ಇಬ್ಬರನ್ನು ಗುಂಡಿಯಿ0ದ ಮೇಲಕ್ಕೆತ್ತಿ ಮಾದಾಪುರ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲೆ ನಿತ್ಯ ಸಾವನ್ನಪ್ಪ್ಪಿದ್ದರೆ, ಜನಾರ್ಧನ ಚಿಂತಾಜನಕ ಸ್ಥಿತಿಯಲ್ಲಿದ್ದರು ಎಂದು ತಿಳಿದು ಬಂದಿದೆ. ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಇವರು ಕೂಡ ಸಾವನ್ನಪ್ಪಿದ್ದಾರೆ. *ಶಾಸಕರ ಸಾಂತ್ವನ* ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸರಕಾರದಿಂದ ಸೂಕ್ತ ಪರಿಹಾರದ ಭರವಸೆ ನೀಡಿದರು.






