ಲೇಖಕ: admin

ಮಡಿಕೇರಿ ಫೆ.28 NEWS DESK : ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆದಿವಾಸಿ ಸಮುದಾಯಗಳ ಸಮಸ್ಯೆಗಳಿಗೆ ಮುಂದಿನ 15 ದಿನಗಳೊಳಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನೂರಾರು ಆದಿವಾಸಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಆದಿವಾಸಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಜೇನುಕುರುಬ, ಬೆಟ್ಟಕುರುಬ, ಸೋಲಿಗ, ಯರವ, ಮಲೆಕುಡಿಯ ಸೇರಿದಂತೆ ಆದಿವಾಸಿ ಸಮುದಾಯಕ್ಕೆ ಸೇರಿದ ಜನರು ತಲೆತಲಾಂತರಗಳಿಂದ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಇವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ ಆದಿವಾಸಿ ಮುಖಂಡ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಆರ್.ಕೆ.ಚಂದ್ರ ಅವರ ನೇತೃತ್ವದಲ್ಲಿ ಹಲವು ಹಾಡಿಗಳ ನಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದಿದ್ದರೂ ಕೊಡಗು ಜಿಲ್ಲೆಯ ಮೂಲ ನಿವಾಸಿಗಳಾದ ಆದಿವಾಸಿಗಳು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಇಂದಿಗೂ ಸ್ವಂತ ಸೂರಿಲ್ಲದೆ, ಟಾರ್ಪಲ್ ಶೀಟ್ ನಂತಹ ಗುಡಿಸಲುಗಳಲ್ಲಿ…

Read More

ಮಡಿಕೇರಿ ಫೆ.28 NEWS DESK : ತಮ್ಮ ಗ್ರಾಮಕ್ಕೆ ಹೆದ್ದಾರಿಯಿಂದ ರಸ್ತೆ ಸಂಪರ್ಕ ಹೊಂದಲು ಹತ್ತಾರು ರೈತರು ಸ್ವಯಂ ಪ್ರೇರಣೆಯಿಂದ ತಮ್ಮ ಜಮೀನುಗಳನ್ನು ನೀಡಲು ಮುಂದಾಗಿದ್ದು, ರೈತರ ನಡೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ತಾಲೂಕಿನ ಅರ್ವತ್ತೋಕ್ಲು ಗ್ರಾಮಕ್ಕೆ ಮಡಿಕೇರಿ-ಭಾಗಮಂಡಲ ರಸ್ತೆಯ ಅಪ್ಪಂಗಳದಿಂದ ಎರಡು ಕಿ.ಮೀ ನಷ್ಟು ದೂರದ ಕಾಲು ದಾರಿಯಿದೆ. ಆದರೆ ವಾಹನದ ಮೂಲಕ ಗ್ರಾಮ ತಲುಪಬೇಕು ಅಂದರೆ ತಾಳತ್ ಮನೆ, ಮೇಕೇರಿ, ಬಿಳಿಗೇರಿ ಗ್ರಾಮದ ಮೂಲಕ ಸುಮಾರು 10 ಕಿ.ಮೀ ದೂರ ಕ್ರಮಿಸಬೇಕು. ಹಾಗಾಗಿ ಗ್ರಾಮಸ್ಥರು ವಾಹನದಲ್ಲಿ ತ್ರಾಸದಾಯಕ ಒಡಾಟವನ್ನು ಮಾಡುತ್ತಿದ್ದರು. 2003 ರಲ್ಲಿ ಒಮ್ಮೆ ಎರಡು ಕಿ.ಮೀ‌ ಕಾಲುದಾರಿಯನ್ನು ವಾಹನ ಸಂಚಾರದ ರಸ್ತೆಯಾಗಿ ಮಾರ್ಪಾಡು ಮಾಡಲು ಸಭೆ ನಡೆಸಿದ್ದರು. ಆದರೆ ರೈತರು ಜಮೀನು ಕಳೆದುಕೊಳ್ಳಲು ಒಪ್ಪದೇ ಇರುವುದರಿಂದ ಯೋಜನೆ ಕಾರ್ಯಗತವಾಗಿರಲಿಲ್ಲ. ಈಗ ಆ ಹಾದಿಯಲ್ಲಿರುವ ಸುಮಾರು ಹದಿನಾರು ರೈತರು ಗ್ರಾಮದ ಜನತೆಯ ಒಳಿತಿನ ದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಜಮೀನನ್ನು…

Read More

  ಬೆಂಗಳೂರು ಫೆ.28 NEWS DESK  : ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ, ತಮ್ಮ ಬೇಡಿಕೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ನಗರದ ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು. ರಸ್ತೆ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ತಲಾ ₹100 ಕೋಟಿ ಅನುದಾನಕ್ಕೆ ಒತ್ತಾಯಿಸಿದರು. ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ‌ನಿಯೋಗದಲ್ಲಿ ಬಿಜೆಪಿ ಪಕ್ಷದ ಶಾಸಕರು,…

Read More

ಮಡಿಕೇರಿ ಫೆ.28 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ನಗರದ ಗೌಡ ಕೊಡಗು ಗೌಡ ಸಮಾಜದಲ್ಲಿ  ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಬರಹಗಾರರಿಗೆ ಪ್ರೋತ್ಸಾಹ ಬಹುಮಾನ ಪ್ರಶಸ್ತಿಯನ್ನು ವಿತರಿಸಿ  ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಇಂತಹ ಕಾರ್ಯಕ್ರಮಗಳು ಸಮುದಾಯದ ಬರಹಗಾರರನ್ನು ಪ್ರೋತ್ಸಾಹಿಸುವುದರೊಂದಿಗೆ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಅಕಾಡೆಮಿಯ ಎಲ್ಲಾ ಕಾರ್ಯಕ್ರಮಗಳು ಸಮುದಾಯದ ಏಳಿಗೆಗೆ ಹಾಗೂ ಅಭಿವೃದ್ಧಿಗೆ ಪೂರಕ ಆಗಿರುವುದರೊಂದಿಗೆ ಅರೆಭಾಷೆ ಜನಾಂಗದ ಇತಿಹಾಸ ಹಾಗೂ ಸಮಗ್ರ ಚಟುವಟಿಕೆಗಳನ್ನು ಜಗತ್ತಿಗೆ ತಿಳಿಸುವಂತೆ ಕಾರ್ಯಪ್ರವೃತ್ತರಾಗಲಿ ಎಂದು ಹೇಳಿದರು. ಅರೆಭಾಷೆ ಸಮುದಾಯಕ್ಕೆ ತನ್ನಿಂದ ಆಗುವ ಎಲ್ಲಾ ರೀತಿಯ ಸಹಾಯವನ್ನು ಒದಗಿಸಲು ಸಿದ್ಧರಿರುವುದಾಗಿ ಹೇಳಿದ ಶಾಸಕರು, ಐನ್ ಮನೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಮನೆಯ ಇತಿಹಾಸವನ್ನು ಜಗತ್ತಿಗೆ ಹೇಳುವ…

Read More

ಕುಶಾಲನಗರ ಫೆ.28 NEWS DESK : ಜಾನಪದ ಗೀತೆಗಳನ್ನು ರಚಿಸಿದವರು ಯಾರೆಂದು ಎಲ್ಲೂ ಉಲ್ಲೇಖವಾಗಿರುವುದಿಲ್ಲ. ವಿಶ್ವದಲ್ಲೇ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ ಎಂದು ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಂಡ್ರಂಗಿ ನಾಗರಾಜ್ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ  ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯ ಬೃಂದಾವನ ಬಡಾವಣೆಯಲ್ಲಿ ಆಯೋಜಿಸಿದ್ದ ಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡು ದತ್ತಿ ಕಾರ್ಯಕ್ರಮದ ಅಂಗವಾಗಿ ಜಾನಪದ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು, ಜಾನಪದವನ್ನು ಈಗಲೂ ಗ್ರಾಮೀಣ ಭಾಗಗಳಲ್ಲಿ ಕೇಳಬಹುದು. ಇದನ್ನು ಮನುಷ್ಯ ಜೀವನದ ಎಲ್ಲ ಘಟ್ಟಗಳಲ್ಲೂ ಬಳಸುತ್ತಾರೆ. ಸುಖ, ದುಃಖಗಳ ಸಂದರ್ಭಗಳ ಅನುಸಾರ ಸ್ಥಳದಲ್ಲೇ ಗೀತೆಗಳನ್ನು ರಚಿಸಿ ಹಾಡುವ ಅದ್ಬುತ ಜ್ಞಾನ ಹೊಂದಿರುವ ಜನರನ್ನು ಕಾಣಬಹುದು. ಜಾನಪದ ಗೀತೆಗಳನ್ನು ಹೆಚ್ಚಾಗಿ ಗ್ರಾಮೀಣ ಜನರು ಬಳಸಿ, ತಾನು ಮಾಡುವ ಕೆಲಸಗಳಲ್ಲಿ ತನ್ಮಯತೆ ಮತ್ತು ಶಕ್ತಿ ಪಡೆಯುತ್ತಾರೆ ಅಂತಹ ಶ್ರೇಷ್ಠ ಶಕ್ತಿಯಿದೆ ಎಂದರು. ಜನಪದ ಮತ್ತು ಜಾನಪದ ಎನ್ನುವ ಎರಡು ವಿಧವನ್ನು ವಿವರಿಸಿದರು.…

Read More

ನಾಪೋಕ್ಲು ಫೆ.28 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಉಪಾಧ್ಯಕ್ಷರರಾಗಿ ಸಿ.ಎಸ್.ಸುಮಿತ್ರಾ, ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಧ್ಯಾನಿ ಕುಶಾಲಪ್ಪ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಮಲ್ಲಂಡ ಶ್ರುತಿ ಮುದ್ದಪ್ಪ, ಮೀತಲತಂಡ ಎಂ.ಇಸ್ಮಾಯಿಲ್, ಶರಣಗೌಡ ಹರಗ, ಕಡೆಮಾಡ ಸುವಿತ್ ಸೋಮಣ್ಣ, ಚೊಕ್ಕಂಡ ನಜೀರ್ ಪಾಲಿಬೆಟ್ಟ, ಎಂ.ಬಿ ವಿನ್ಸೆಂಟ್ ವಿನೋದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಫೆ.28 NEWS DESK :  ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ದೈವ ಆರಾಧಕರು ಮತ್ತು  ದೈವ ನರ್ತಕರು  ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಮಾತನಾಡಿ, ದೈವ ಆರಾಧನೆಯು ಕರಾವಳಿ ಸೇರಿದಂತೆ ಕೊಡಗು ಜಿಲ್ಲೆಯಲ್ಲು ಅನೇಕ ವರ್ಷದಿಂದ ಬಹುಮುಖ್ಯ ನಂಬಿಕೆ ಮತ್ತು ಆರಾಧನೆ ಪದ್ದತಿಯಾಗಿದ್ದು, ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮ ಖಂಡನೀಯ, ಸರಕಾರ ತಕ್ಷಣವೇ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಪ್ರಮುಖರಾದ ಹರೀಶ್ ಜಿ.ಆಚಾರ್ಯ, ಬಿ.ಎ.ಜನಾರ್ಧನ, ದಿನೇಶ್, ರಮೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಬೇಡಿಕೆಯ…

Read More

ವಿರಾಜಪೇಟೆ ಫೆ.28 NEWS DESK : ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಕೊಡವಾಮೇ ಬಾಳೋ ಪಾದಯಾತ್ರೆಗೆ ಶ್ರಮಿಸಿದ ಸಂಘಟನೆಗಳ ಪ್ರಮುಖರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಕೊಡವ ಸಮಾಜದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಂಸ್ಕೃತಿ, ಪದ್ಧತಿ, ಪರಂಪರೆಯ ರಕ್ಷಣೆ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುವ ದಿಸೆಯಲ್ಲಿ ಕೊಡವರು ಹಾಗೂ ಕೊಡವ ಭಾಷಿಕ ಸಮುದಾಯದವರಿಂದ ದಕ್ಷಿಣ ಕೊಡಗಿನ ಕುಟ್ಟದಿಂದ ಮಡಿಕೇರಿವರೆಗೆ ‘ಕೊಡವಾಮೆ ಬಾಳೋ’ ಪಾದಯಾತ್ರೆ ಅತ್ಯಂತ ಶಾಂತಿಯುತವಾಗಿ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಪಾದಯಾತ್ರೆ ಯಶಸ್ವಿಗೆ ಶ್ರಮಿಸಿದವರನ್ನು ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಅಲ್ಲಪಂಡ ತಾರ ಗಾಂಧಿ ಅವರು ತಪ್ಪಡಕ ಕಟ್ಟುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಕೊಡವರು ಮತ್ತು ಕೊಡವ ಭಾಷಿಕ ಸಮುದಾಯದವರು ಒಗ್ಗಟ್ಟಿನಿಂದ ನಡೆಸಿದ ಕೊಡವಾಮೆ ಬಾಳೋ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ. ಪಾದಯಾತ್ರೆ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ…

Read More

ಮಡಿಕೇರಿ ಫೆ.28 NEWS DESK : ಪ್ರತಿವರ್ಷದಂತೆ ಈ ಬಾರಿಯೂ ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಸಂಪ್ರದಾಯದಂತೆ ಮಹಾಶಿವರಾತ್ರಿಯ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆ.26 ರಂದು ಮುಂಜಾನೆಯಿಂದಲೇ ಶತರುದ್ರಾಭಿಷೇಕ, ರುದ್ರಹೋಮ ನಡೆಯಿತು. ಮಧ್ಯಾಹ್ನ ರುದ್ರಹೋಮದ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಂಜೆ ತಾಯಂಬಕ ಸೇವೆ, ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ ನಡೆಯಿತು. ಇದೇ ಸಂದರ್ಭ ಭಜನೆ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ರಾತ್ರಿ ದೇವರ ತ್ರಿವೇಣಿ ಸಂಗಮ ಬೇಟಿ, ದೇವರ ಕಟ್ಟೆಪೂಜೆ ಮತ್ತು ಬಾಣಬಿರುಸು ಕಾರ್ಯಕ್ರಮ ನೆರವೇರಿತು. ನಂತರ ಯಕ್ಷ ಕಾವ್ಯ ತರಂಗಿಣಿ ಭಾಗವತ ದಿ|| ಚಂದಪ್ಪ ಪೂಜಾರಿ ಪ್ರತಿಷ್ಠಾನ (ರಿ) ದರ್ಬೆ ಬಂಟ್ವಾಳ ದಕ್ಷಿಣ ಕನ್ನಡ ಇವರಿಂದ ಸ್ವರ ಮಾಧುರಿ ಕಾವ್ಯ ಕನ್ನಿಕೆ ಬಿರುದಾಂಕಿತ ಸಂದ್ಯಾ ಪೂಜಾರಿ ದರ್ಬೆ ಇವರ ದಕ್ಷ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ-ಪ್ರಸಂಗ “ಹರಿ ಹರ ಸುತ…

Read More

ಮಡಿಕೇರಿ ಫೆ.28 NEWS DESK : ಮನುಷ್ಯ ಕೋಟಿ ಕೋಟಿ ಸಂಪಾದಿಸುವುದು ಸಾಧನೆ ಈ ರೀತಿಯ ಸಂಪಾದನೆ ಆತನಿಗೆ ಸಂತೋಷವನ್ನು ನೀಡುತ್ತದೆ. ಆದರೆ ತೃಪ್ತಿ ಬೇಕಾದರೆ ತಾನು ಸಂಪಾದಿಸಿದರಲ್ಲಿ ಸ್ವಲ್ಪ ಸಮಾಜ ಸೇವೆ ಮಾಡಬೇಕು ಎಂದು ವಿರಾಜಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷ  ಪ್ರಣವ್ ಎಂ.ಚಿತ್ರ ಬಾನು ಅಭಿಪ್ರಾಯ ವ್ಯಕ್ತಪಡಿಸಿದರು. ಬಿ.ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವೇರಿ ಪದವಿ ಕಾಲೇಜಿನ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನು ಎಲ್ಲವನ್ನು ಸಮಾಜದಿಂದ ಸಂಪಾದಿಸುತ್ತಾನೆ. ಈ ರೀತಿ ತಾನು ಸಂಪಾದಿಸಿದ ಸಂಪತ್ತಿನ ಅಲ್ಪ ಭಾಗವನ್ನು ಇತರರಿಗೆ ದಾನ ನೀಡಿದರೆ ಅಥವಾ ಸಮಾಜ ಸೇವೆಗೆ ಬಳಸಿದರೆ ದಾನ ನೀಡಿದವನಿಗೆ ಸಂತೋಷ ಹಾಗೂ ತೃಪ್ತಿಯನ್ನು ತಂದುಕೊಡುತ್ತದೆ ಎಂದರು. ಶಾಲೆಯ ಮುಖ್ಯ ಶಿಕ್ಷಕರಾದ ಸುಜಾತ  ಮಾತನಾಡಿ, ಇಂತಹ ಶಿಬಿರಗಳು ನಡೆದಾಗ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ನಾವು ಕೇವಲ ನಾಯಕರಾದರೆ ಸಾಲದು ನಾಯಕರಲ್ಲಿ ಉತ್ತಮ ನಾಯಕರಾಗಬೇಕು. ವಿದ್ಯಾರ್ಥಿ…

Read More