ಲೇಖಕ: admin

ಮಡಿಕೇರಿ ಫೆ.27 NEWS DESK : ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆ, ಹುದ್ದೆಯ ಸಂಖ್ಯೆ 01, ಶೈಕ್ಷಣಿಕ ವಿದ್ಯಾರ್ಹತೆ ಬಿ.ಈ ಅಥವಾ ಬಿಟೆಕ್, ಬಿಸಿಎ, ಎಂಸಿಎ, ಕಂಪ್ಯೂಟರ್ ಸೈನ್ಸ್ ಅಥವಾ ಇನ್‍ಫಾರ್ಮೇಸನ್, ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಟೆಲಿಕಾಂ, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಕಂಪನಿ, ಸಂಸ್ಥೆಗಳಲ್ಲಿ ಕನಿಷ್ಠ 2 ವóರ್ಷಗಳ ಅನುಭವ ಹೊಂದಿರಬೇಕು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷವಾಗಿರಬೇಕು. ವೇತನ ರೂ.30,053 (ಎಲ್ಲಾ ತೆರಿಗೆ ಹಾಗೂ ಇತ್ಯಾದಿ ಕಡಿತಗೊಳಿಸಿ), ಅರ್ಜಿ…

Read More

ಮಡಿಕೇರಿ NEWS DESK ಫೆ26 : ಮಡಿಕೇರಿ ನಗರ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯ ನಾಗರಿಕರ ಸಭೆ ನಡೆಯಿತು. ಸಭೆಯಲ್ಲಿ ಅಪರಾಧ ತಡೆಗಟ್ಟುವಿಕೆ, ಸಂಚಾರ ನಿಯಮ ಪಾಲನೆ, ಸಿಸಿಟಿವಿ ಆಳವಡಿಕೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ನಾಗರೀಕರ ಸಹಕಾರದ ಕುರಿತು ಚರ್ಚಿಸಲಾಯಿತು.

Read More

ಮಡಿಕೇರಿ NEWS DESK ಫೆ.26 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆಯಿಂದಲೇ ರುದ್ರಹೋಮ, ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಿತು. ಅಲ್ಲದೆ ವಿವಿಧ ವಿಶೇಷ ಪೂಜಾ ಕೈಂಕರ್ಯ ಮತ್ತು ಅರ್ಚನೆಗಳಿಗೆ ಸಾಕ್ಷಿಯಾದ ನೂರಾರು ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Read More

ಮಡಿಕೇರಿ NEWS DESK ಫೆ.26 : ನಗರದ ಕೊಡಗು ವಿದ್ಯಾಲಯದಲ್ಲಿ  ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರುರಾದ ಸುಮಿತ್ರಾ, ಆಡಳಿತ ನಿರ್ವಹಣಾಧಿಕಾರಿ  ಪಿ.ರವಿ ಮತ್ತು ವಿಜ್ಞಾನ ಶಿಕ್ಷಕರು ಸಸಿಗೆ  ನೀರು ಸಿಂಪಡಿಸುವ  ಮೂಲಕ ಉದ್ಘಾಟಿಸಿದರು. ವಿಜ್ಞಾನ ದಿನಾಚರಣೆಯ ಮುಖ್ಯ ಆಕರ್ಷಣೆಯಾಗಿ 3 ರಿಂದ  5ನೇ ತರಗತಿಯ ವಿದ್ಯಾರ್ಥಿಗಳು ವೈವಿಧ್ಯಮಯ ವಿಜ್ಞಾನ ಪ್ರದರ್ಶನ ನಡೆಸಿದರು. ಪ್ರತಿ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿ  ಕೊಠಡಿಗಳಲ್ಲಿ ವೈಜ್ಞಾನಿಕ ಮಾದರಿಗಳನ್ನು ನಿರ್ಮಿಸಿ, ಅವುಗಳ ಕಾರ್ಯವಿಧಾನವನ್ನು ವಿವರಿಸಿದರು. ಈ ಮಾದರಿಗಳು ವಿಜ್ಞಾನ ಪ್ರಕ್ರಿಯೆಗಳ ತಿಳುವಳಿಕೆಯನ್ನು ಜಾಗೃತಗೊಳಿಸಿ,  ವಿದ್ಯಾರ್ಥಿಗಳ ಉತ್ಸಾಹ ಮತ್ತು ಸೃಜನಶೀಲತೆಯನ್ನು ಪ್ರತಿಬಿಂಬಿಸಿದವು. 6 ರಿಂದ 9ನೇ ತರಗತಿಯ ವಿದ್ಯಾರ್ಥಿ  ತಂಡಗಳು ಫ್ರಾತ್ಯಕ್ಷಿಕೆಗಳ   ಮೂಲಕ ವ್ಯಜ್ಯಾನಿಕ  ವಿಚಾರಗಳನ್ನು ವಿವರಿಸಿದರು.  ವಿಶೇಷವಾಗಿ, ಕೊಡಗಿನ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಸುಧಾರಿತ ಪರಿಹಾರಗಳನ್ನು ಕಂಡುಹಿಡಿದ   ವಿದ್ಯಾರ್ಥಿಗಳ ತಂಡದ ಪ್ರಸ್ತುತಿ ನೋಡುಗರ  ಮೆಚ್ಚುಗೆ ಪಡೆಯಿತು.  ವಿಜ್ಞಾನ ಶಿಕ್ಷಕಿ  ಶ್ರುತಿ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು. ಶಾಲಾ…

Read More

ಮಡಿಕೇರಿ NEWS DESK ಫೆ.26 : ಅನ್ನಭಾಗ್ಯದ ಅಕ್ಕಿಗೆ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಅಲ್ಲದೆ ಕೆಲವರು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಮಾಹಿತಿ ಲಭಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಎಚ್ಚರಿಕೆ ನೀಡಿದೆ. ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ವಿಷಯ ಪ್ರಸ್ತಾಪಿಸಿದ ಸಮಿತಿಯ ಅಧ್ಯಕ್ಷ ಜಾನ್ಸನ್ ಮಾರ್ಚ್ ತಿಂಗಳಲ್ಲಿ ಅನ್ನಭಾಗ್ಯದ ಅಕ್ಕಿ ಅರ್ಹ ಫಲಾನುಭವಿಗಳಿಗೆ ವಿತರಣೆಯಾಗಲಿದೆ ಎಂದರು. ಈ ಹಿಂದೆ ಅಕ್ಕಿಯ ಬದಲಾಗಿ ಹಣ ನೀಡಲಾಗುತ್ತಿತ್ತು, ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಅಕ್ಕಿಯನ್ನು ವಿತರಿಸಲಾಗುವುದು. ಕೆಲವು ತಾಂತ್ರಿಕ ಸಮಸ್ಯೆಗಳಿದ್ದು, ಶೀಘ್ರ ಬಗೆಹರಿಸಲಾಗುವುದು ಎಂದು ತಿಳಿಸಿದರು. ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯದ ಅಕ್ಕಿಗೆ ಹೆಚ್ಚುವರಿ ಹಣವನ್ನು ಪಡೆಯುತ್ತಿರುವ ಪ್ರಕರಣಗಳು ಕಂಡುಬಂದಿದೆ. ಅಂತಹ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಮತ್ತು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸುವಂತೆ…

Read More

ಮಡಿಕೇರಿ NEWS DESK ಫೆ.25 : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರಪೇಟೆ ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಎಸ್.ಎ.ಅಶೋಕ್ (65) ಎಂಬವರೇ ಮೃತ ದುರ್ದೈವಿಯಾಗಿದ್ದಾರೆ. ಕೃಷಿಕರಾಗಿದ್ದ ಅಶೋಕ್ ಅವರು ಹೆಬ್ಬಾಲೆಯ ಕಡೆ ಬರುತ್ತಿದ್ದಾಗ ಕುಶಾಲನಗರದಿಂದ ಸಿದ್ದಲಿಂಗಪುರ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ NEWS DESK ಫೆ.25 ಕಾಫಿ ಕೊಯ್ಲು ಸಂದರ್ಭ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪೂದ್ದುಮಾನಿ ಗ್ರಾಮದಲ್ಲಿ ನಡೆದಿದೆ. ಹೆಚ್.ಸಿ.ಲೋಹಿತ್(32) ಎಂಬವರೇ ಮೃತಪಟ್ಟ ದುರ್ದೈವಿ ಕಾರ್ಮಿಕರಾಗಿದ್ದಾರೆ. ಲೋಹಿತ್ ಸೋಮವಾರದಿಂದ ನಾಪತ್ತೆಯಾಗಿದ್ದು, ಆತನನ್ನು ಹುಡುಕಾಡುತ್ತಿದ್ದಾಗ ಮಂಗಳವಾರ ಕಾಫಿ ತೋಟದಲ್ಲಿ ಮೃತ ದೇಹ ಪತ್ತೆಯಾಗಿದೆ. ಘಟನೆ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

https://www.youtube.com/watch?v=76NRQcFiuCQ&authuser=0 ಮಡಿಕೇರಿ NEWS DESK ಫೆ.25 : ವಿರಾಜಪೇಟೆ ಮಾರ್ಗವಾಗಿ ಕೇರಳಕ್ಕೆ ಅಕ್ಕಿ ಸಾಗಿಸುತಿದ್ದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಕೊಡಗು-ಕೇರಳ ಗಡಿಯ ವಾಟೆಕೊಲ್ಲಿ ಎಂಬಲ್ಲಿ ನಡೆದಿದೆ. ಸೋಮವಾರ ನಡುರಾತ್ರಿ ಆಂಧ್ರಪ್ರದೇಶ ನೋಂದಣಿ ಹೊಂದಿದ್ದ ಲಾರಿಯಲ್ಲಿ ಅಕ್ಕಿಯನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು. ಲಾರಿ ಕೊಡಗು ಗಡಿ ಭಾಗದ ವಾಟೆಕೊಲ್ಲಿ ಎಂಬಲ್ಲಿ ಆಗಮಿಸಿದ ಸಂದರ್ಭ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿ ಸಂಪೂರ್ಣವಾಗಿ ಲಾರಿಯನ್ನು ವ್ಯಾಪಿಸಿ ಅಕ್ಕಿ ಸಹಿತ ಲಾರಿ ಬೆಂಕಗೆ ಆಹುತಿಯಾಗಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ವಿರಾಜಪೇಟೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಿಸಲು ಹರ ಸಾಹಸ ಪಡಬೇಕಾಯಿತು. ಬೆಂಕಿ ಅನಾಹುತದಿಂದ ನೂರಾರು ಚೀಲ ಅಕ್ಕಿ ಮೂಟೆಗಳು ಸುಟ್ಟು ಕರಕಲಾಗಿದ್ದು, ಸುಟ್ಟ ಮೂಟೆಗಳಿಂದ ರಾಶಿಗಟ್ಟಲೆ ಅಕ್ಕಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ.

Read More

ಮಡಿಕೇರಿ NEWS DESK ಫೆ.25 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷವು ಹಲವು ವರ್ಷಗಳಿಂದ ಇದೆ. ಇದರಿಂದ ಸ್ಥಳೀಯರು ತುಂಬಾ ತೊಂದರೆಯಾಗಿದೆ. ಶಾಶ್ವತವಾಗಿ ವನ್ಯಪ್ರಾಣಿ ಹಾವಳಿ ನಿಯಂತ್ರಿಸಲು ಅಗತ್ಯವಿರುವ ಕಡೆ…

Read More

ಮಡಿಕೇರಿ NEWS DESK  ಫೆ.25 : ಕೊಡಗು ಮತ್ತು ನೆರೆಯ ಕೇರಳದ ಪಯ್ಯವೂರಿನ ಈಶ್ವರ ದೇವಸ್ಥಾನದ ನಡುವೆ ಧಾರ್ಮಿಕ ಕಟ್ಟುಪಾಡುಗಳು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿದೆ. ಅಲ್ಲಿನ ದೇವಸ್ಥಾನದ ಕೊಡಗಿನ ತಕ್ಕಮುಖ್ಯಸ್ಥ ಕುಟುಂಬಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗಿದೆ. ಸಮುದಾಯಗಳ ಸಂಘರ್ಷಕ್ಕೆ ಕಾರಣವಾಗುವ ಹೇಳಿಕೆಗಳನ್ನು ಹಾಕಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಡಿಯತ್‌ನಾಡಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಯ್ಯವೂರಿನ ಈಶ್ವರ ದೇವಸ್ಥಾನದ ತಕ್ಕ ಮುಖ್ಯಸ್ಥರು ಹಾಗೂ ಟ್ರಸ್ಟಿಗಳಾದ ಮುಂಡ್ಯೋಳಂಡ ಅಜಿತ್ ಪೂವಯ್ಯ ಸಾಮಾಜಿಕ ಜಾಲತಾಣದಲ್ಲಿ ದೇವಾಲಯದ ವಿಚಾರದ ಹಿನ್ನೆಲೆ ಸಮುದಾಯಗಳ ನಡುವೆ ಸಂಘರ್ಷ ಹುಟ್ಟು ಹಾಕುವಂತಹ ಹೇಳಿಕೆಗಳನ್ನು ಹಾಕಿರುವವರ ವಿರುದ್ಧ ನಾಪೋಕ್ಲು ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದರು. ಕೇರಳದ ಕಣ್ಣೂರು ಜಿಲ್ಲೆಯ ಪಯ್ಯವೂರು ಈಶ್ವರ ದೇವಸ್ಥಾನದ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ವಾರ್ಷಿಕ ಉತ್ಸವದಲ್ಲಿ ಕೊಡಗಿನ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಈ ದೇವಾಲಯಕ್ಕೆ ಕೊಡಗಿನ ಬೊವ್ವೇರಿಯಂಡ ಮತ್ತು ಮುಂಡ್ಯೋಳಂಡ ಕುಟುಂಬಸ್ಥರು ತಕ್ಕ ಮುಖ್ಯಸ್ಥರಾಗಿದ್ದಾರೆ. ಪಯ್ಯವೂರು ಈಶ್ವರ ದೇವಸ್ಥಾನದ ನೈವೇದ್ಯಕ್ಕೆ…

Read More