ಮಡಿಕೇರಿ ಫೆ.25 NEWS DESK : ನಗರದ ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯಲ್ಲಿರುವ ‘ಅಂಬೇಡ್ಕರ್ ಭವನ’ಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ಗೊಂದಲವನ್ನು ಮುಂದಿನ ಮೂರು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಗೆಹರಿಸಬೇಕು, ಇಲ್ಲವಾದಲ್ಲಿ ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕರು ಹಾಗೂ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷರಾದ ಹೆಚ್.ಎಲ್.ದಿವಾಕರ್, ಅಂಬೇರ‍್ಕರ್ ಭವನಕ್ಕೆ ಜಾಗವನ್ನು ಪಡೆದುಕೊಳ್ಳುವ ಹಾಗೂ ಭವನ ನಿರ್ಮಾಣ ಹಂತದಲ್ಲಿ ರಚಿಸಲಾಗಿದ್ದ ಬಿ.ಆರ್.ಅಂಬೇಡ್ಕರ್ ಭವನ ಸಮಿತಿಯಲ್ಲಿ ಜಿಲ್ಲೆಯ ಎಲ್ಲಾ ಭಾಗಗಳ ದಲಿತ ಪ್ರಮುಖರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲಾಗಿತ್ತು. ಆ ನಂತರ ಸಮಿತಿಯ ಅಧ್ಯಕ್ಷರ ಬದಲಾವಣೆಯೊಂದಿಗೆ ಸಮಿತಿಯಲ್ಲಿದ್ದ ಸದಸ್ಯರುಗಳನ್ನು ತೆಗೆಯುತ್ತಾ ಬಂದಿದ್ದು, ಪ್ರಸ್ತುತ ಕೇವಲ 12 ಸದಸ್ಯರು ಮಾತ್ರ ಇದ್ದಾರೆ ಎಂದು ತಿಳಿಸಿದರು. ಭವನ ನಿಮಾಣದ ಸಂದರ್ಭ ಅದಕ್ಕಾಗಿ ಜನಪ್ರತಿನಿಧಿಗಳ ಹಾಗೂ ನಗರಸಭೆಯ ಅನುದಾನವನ್ನು ವಿನಿಯೋಗಿಸಲಾಗಿದೆ. ದಲಿತರ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಭವನ ಮೀಸಲಾಗಿದೆ.…
ಲೇಖಕ: admin
ಮಡಿಕೇರಿ ಫೆ.25 NEWS DESK : ಕೊಡಗು ವಿಶ್ವವಿದ್ಯಾಲಯ ಉಳಿಸಿ ಅಭಿವೃದ್ಧಿಗೊಳಿಸುವ ಸಂಬಂಧ ಸಂಪುಟದಲ್ಲಿ ಪ್ರಸ್ತಾಪ ಮಾಡುವುದರೊಂದಿಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದುಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ರಾವ್ ಹೇಳಿದರು. ಅವರು ಕುಶಾಲನಗರದಲ್ಲಿ ಕನ್ನಡ ಸ್ನೇಹ ಸಿರಿ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಕಳೆದ ಒಂದು ವರ್ಷದಿಂದ ಹಮ್ಮಿಕೊಂಡು ಬರಲಾದ ಕಾರ್ಯಕ್ರಮಗಳ ಪೈಕಿ 50ನೇ ಸಂಭ್ರಮಾಚರಣೆಯ ಕುಶಲ್ಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಕೆಲವು ವಿವಿಗಳ ನಿರ್ವಹಣೆ ಕೊರತೆ ಹಾಗೂ ಸ್ಥಳೀಯ ಜನರ ಇಚ್ಚಶಕ್ತಿ ಇಲ್ಲದ ಹಿನ್ನೆಲೆಯಲ್ಲಿ ವಿಲೀನಗೊಳಿಸುವ ಪ್ರಸ್ತಾವನೆ ಇರುವುದಾಗಿ ಹೇಳಿದ ಅವರು ಕೊಡಗು ಜಿಲ್ಲೆಗೆ ವಿಶೇಷ ಆದ್ಯತೆಯೊಂದಿಗೆ ವಿವಿ ರದ್ಧತಿ ಪ್ರಸ್ತಾವನೆ ಕೈಬಿಡುವಂತೆ ಮಾಡುವ ಭರವಸೆ ದಿನೇಶ್ ಗುಂಡೂರಾವ್ ವ್ಯಕ್ತಪಡಿಸಿದರು. ಅಂದಿನ ಮುಖ್ಯಮಂತ್ರಿಗಳಾಗಿದ್ದ ವೀರೇಂದ್ರ ಪಾಟೀಲ್ ನಂತರ ತನ್ನ ತಂದೆಯವರು ಹಾಗೂ ಮುಖ್ಯಮಂತ್ರಿಗಳಾಗಿದ್ದ ಆರ್ ಗುಂಡುರಾಯರು ಕುಶಾಲನಗರದಲ್ಲಿ ಅನೇಕ ಅಭಿವೃದ್ಧಿ ಜನಪರ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳುವ ಕಾಳಜಿ ವಹಿಸಿದ್ದರು ಎಂದು ಸ್ಮರಿಸಿದರು. …
ಮಡಿಕೇರಿ ಫೆ.25 NEWS DESK : ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಅಥವಾ ಮತ್ತೊಂದು ವಿವಿಯೊಂದಿಗೆ ವಿಲೀನಗೊಳಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವನ್ನು ಕೊಡಗಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಪುನರ್ ಪರಿಶೀಲಿಸಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಕೊಡಗು ವಿವಿ ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಗುರಿ ಸಾಧನೆಗೆ ಹೆಚ್ಚು ಉಪಯುಕ್ತವಾಗಿದೆ. ಇದನ್ನು ಮುಚ್ಚುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ದೊಡ್ಡ ನಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡ ಕೊಡಗು ವಿವಿ ಈಗಷ್ಟೇ ತನ್ನ ಕ್ಷೇತ್ರವನ್ನು ವಿಸ್ತರಿಸಿಕೊಂಡು ಚೇತರಿಸಿಕೊಳ್ಳುತ್ತಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತವಾರಣ ಸೃಷ್ಟಿಯಾಗುತ್ತಿದೆ, ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಹೊರ ಜಿಲ್ಲೆಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ತಪ್ಪಿದೆ. ಉದ್ಯೋಗ ಸೃಷ್ಟಿ, ಶೈಕ್ಷಣಿಕ ಪ್ರಗತಿ ಮತ್ತು ಜಿಲ್ಲೆಯ ಅಭಿವೃದ್ಧಿಗೂ ವಿವಿ ಪೂರಕವಾಗಿದೆ. ಕೊಡಗಿನ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸದೃಢರಾಗಬೇಕಾದರೆ ಕೊಡಗು…
ಮಡಿಕೇರಿ ಫೆ.25 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಸುಂಟಿಕೊಪ್ಪನಾಡು ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ‘ಸುಂಟಿಕೊಪ್ಪ ನಾಡ್ ಕೊಡವ ಸಾಂಸ್ಕೃತಿಕ ನಮ್ಮೆ’ಯನ್ನು ಮಾ.21ರಂದು ನಡೆಸಲು ತೀರ್ಮಾನಿಸಲಾಗಿದೆ. ಸುಂಟಿಕೊಪ್ಪ ಕೊಡವ ಸಮಾಜ ಅಧ್ಯಕ್ಷ ಚೇಂದ್ರಿಮಾಡ ಕರುಂಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡೊರ್ಮೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ಸುಂಟಿಕೊಪ್ಪ ಭಾಗದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಸಾಂಸ್ಕೃತಿಕ ನಮ್ಮೆಯನ್ನು ಇದೇ ಮೊಟ್ಟ ಮೊದಲಾಗಿ ಆಯೋಜಿಸುತ್ತಿರುವುದು ಸಂತೋಷದ ವಿಷಯ. ನಮ್ಮೆಗೆ ಈ ನಾಡಿನ ಸರ್ವ ಜನಾಂಗಬಾಂಧವರ ಸಹಕಾರ ಹಾಗೂ ಸಹಭಾಗಿತ್ವ ಅತ್ಯವಶ್ಯವಾಗಿದ್ದು, ನಾಡೊರ್ಮೆಯನ್ನು ಸುಂಟಿಕೊಪ್ಪ ಪಟ್ಟಣದಲ್ಲಿ ಮೆರವಣಿಗೆ ನಡೆಸುವುದರೊಂದಿಗೆ ಸಾಹಿತಿಕ-ಸಾಂಸ್ಕೃತಿಕಸಿರಿವಂತಿಕೆಯಲ್ಲಿ ನೆರವೇರಿಸುವಂತೆ ಮನವಿ ಮಾಡಿದರು. ನಾಡೊರ್ಮೆಯಲ್ಲಿ ಸುಂಟಿಕೊಪ್ಪ ಭಾಗದಲ್ಲಿ ಜನಾಂಗ, ಸಾಂಸ್ಕೃತಿಕ, ಸಾಹಿತ್ಯ ಹಾಗೂ ನುಡಿಗೆ ದುಡಿದ ಖ್ಯಾತವೆತ್ತ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವಂತೆ ತೀರ್ಮಾನಿಸಲಾಯಿತು. ಸ್ಥಳೀಯ ಪ್ರತಿಭೆಗಳಿಗೆ ವೇದಿಕೆಯಲ್ಲಿ ಅವಕಾಶ ಕಲ್ಪಿಸುವುದಲ್ಲದೆ ಸ್ಥಳೀಯ ವಿಚಾರವಂತರಿಂದ ವಿಚಾರಮಂಡನೆ, ಕವಿಗೋಷ್ಠಿಯಂತಹ ಕಾರ್ಯಕ್ರಮಗಳನ್ನು ನಾಡೊರ್ಮೆಯಲ್ಲಿ ನಡೆಸುವಂತೆ…
ವಿರಾಜಪೇಟೆ ಫೆ.25 NEWS DESK : ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾದ ಸಾಹಿತ್ಯವಾಗಿದ್ದು ಎಲ್ಲರೂ ಸಾಹಿತಿಗಳಾಗಿದಿದ್ದರೂ ನಮ್ಮ ಕನ್ನಡದ ಕವಿಗಳು ಬರೆದಿರುವ ಕತೆ, ಕವನ, ಕಾದಂಬರಿಗಳನ್ನಾದರೂ ಓದುವಂತೆ ಗೋಣಿಕೊಪ್ಪ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ವಿಜಯಲಕ್ಷ್ಮಿ ಮಂಜುನಾಥ್ ಕರೆ ನೀಡಿದರು. ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬಿ.ಜಿ.ರಘುನಾಥ್ ನಾಯ್ಕ್ ಹಾಗೂ ಬಿ.ಆರ್ ಸಾಯಿನಾಥ್ ದತ್ತಿನಿಧಿ ಕಾರ್ಯಕ್ರಮ ನಡೆಯಿತು. ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು, ಮಾತನಾಡಿದರು. ಹಳೆಗನ್ನಡ , ನಡುಗನ್ನಡ, ಆಧುನಿಕ ಕನ್ನಡದ ಮಹಾನ್ ಕವಿಗಳ ಕಾವ್ಯಗಳ ವಿಚಾರಧಾರೆಯ ಮಾತನಾಡಿ, ಕನ್ನಡದ ಕವಿಗಳು ರಾಜಾಶ್ರಯವಿದ್ದಾಗ ಯಾವ ರೀತಿಯ ಸಾಹಿತ್ಯ ಬರೆದರು, ಸಾಮಾಜಿಕವಾಗಿ ಜನಸಾಮಾನ್ಯರ ಜೊತೆ ಬೆರೆತಮೇಲೆ ಯಾವ ಬಗೆಯ ಸಾಹಿತ್ಯ ಹೊರಹೊಮ್ಮಿತು. ಜಗತ್ತು ಆಧುನಿಕತೆಗೆ ತೆರೆದುಕೊಂಡಾಗ ಬಿ.ಎಂಶ್ರೀ ಅಂಥವರು ಟಿ.ಪಿ ಕೈಲಾಸಂ ಹೇಗೆ ಸಾಹಿತ್ಯ ರಚನೆ ಮಾಡಿದರು ಎಂದು ವಿವರಿಸಿದರು. ಅಲ್ಲದೇ ಹೊಸಬಗೆಯ ಸಾಹಿತ್ಯ ಪ್ರಕಾರಗಳು ಎಷ್ಟು ವಿಭಿನ್ನ ನೆಲೆಗಟ್ಟಿನಲ್ಲಿ ಓದುಗರ…
ಮಡಿಕೇರಿ ಫೆ.25 NEWS DESK : ಮೈಸೂರಿನ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 40ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕೊಡಗಿನ ಬರಹಗಾರ್ತಿ, ಚಿತ್ರ ನಿರ್ಮಾಪಕಿ, ನಟಿ ಹಾಗೂ ಸಹನಿರ್ದೇಶಕಿ ಈರಮಂಡ ಹರಿಣಿ ವಿಜಯ್ ಅವರಿಗೆ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಡ್ಡಿ ಕೆರೆ ಗೋಪಾಲ್, ಹಿರಿಯ ಸಾಹಿತಿಗಳಾದ ಡಾ.ಸಿ.ಪಿ.ಕೆ, ಕನ್ನಡಪರ ಚಿಂತಕ ಡಾ.ರಾಜಶೇಖರ್, ಪತ್ರಕರ್ತ ಡಾ.ಭೇರ್ಯ ರಾಮಕುಮಾರ್, ಮಹಾಕವಿ ಡಾ.ಲತಾ ರಾಜಶೇಖರ್, ಸಾಹಿತಿಗಳಾದ ಡಾ.ರೇವಣ್ಣ ಬಳ್ಳಾರಿ, ಡಾ.ಸೌಜನ್ಯ ಶರತ್, ನೂತನ ಕುಮಾರ್ ಬಿ.ಕೆ ಹಾಗೂ ರೈತಪರ ಚಿಂತಕ ಸರಗೂರು ನಟರಾಜು ಅವರುಗಳ ಸಮ್ಮುಖದಲ್ಲಿ ಈರಮಂಡ ಹರಿಣಿ ವಿಜಯ್ ಪ್ರಶಸ್ತಿ ಸ್ವೀಕರಿಸಿದರು. ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಮತ್ತು ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ವತಿಯಿಂದ ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್…
ಮಡಿಕೇರಿ ಫೆ.25 NEWS DESK : ವಿರಾಜಪೇಟೆ ಕ್ಷೇತ್ರದ ಜ್ವಲಂತ ಸಮಸ್ಯೆಯಾಗಿರುವ ಕಾಡಾನೆ ದಾಳಿ ಹಾಗೂ ಕಾಡು ಪ್ರಾಣಿಗಳ ಉಪಟಳವನ್ನು ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿಯಿಂದ ಮುಖ್ಯಮಂತ್ರಿಗಳು ಮಂಜೂರು ಮಾಡಿರುವ ರೂ.21 ಕೋಟಿಯಲ್ಲಿ ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣ ಮತ್ತಿತರ ಮುಂಜಾಗ್ರತಾ ಕ್ರಮದ ಕಾಮಗಾರಿ ನಡೆಸಲು ಸ್ಥಳ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಶಾಸಕರು ವನ್ಯಜೀವಿ ಉಪಟಳ ಇರುವ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಕಾಮಗಾರಿಗಳನ್ನು ತುರ್ತು ಗತಿಯಲ್ಲಿ ಪ್ರಾರಂಭಿಸಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು. ಈ ಸಂದರ್ಭ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಹಿರಿಯ ಅರಣ್ಯ ಅಧಿಕಾರಿಗಳು, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಂಗ್ರೆಸ್ ಮುಖಂಡರು, ಸ್ಥಳೀಯ ಪ್ರಮುಖರು ಹಾಗೂ ಗ್ರಾಮಸ್ಥರ ತಂಡದೊಂದಿಗೆ…
ಸಿದ್ದಾಪುರ ಫೆ.25 NEWS DESK : ನೆಲ್ಲಿಹುದಿಕೇರಿ ಶ್ರೀ ಮಹಾದೇವ ಮತ್ತು ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಮಾ.1 ರಿಂದ 5ರ ವರೆಗೆ ಶ್ರೀ ಮಹಾದೇವ, ಶ್ರೀ ಮಹಾಗಣಪತಿ ಮತ್ತು ಶ್ರೀ ದುರ್ಗಾದೇವಿ ದೇವರ ಪ್ರತಿಷ್ಠಾ ಅಷ್ಠಬಂಧ, ಬ್ರಹ್ಮಕಳಶೋತ್ಸವ ಹಾಗೂ ವಾರ್ಷಿಕೋತ್ಸವ ನಡೆಯಲಿದೆ. ದೇವಾಲಯದಲ್ಲಿ ಐದು ದಿನಗಳ ಕಾಲ ಪುತ್ತೂರಿನ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್‍ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.1 ರಂದು ಸಂಜೆ 5 ಗಂಟೆಗೆ ತಂತ್ರಿಗಳ ಆಗಮನ, 7 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಪಂಚಗವ್ಯ, ಪುಣ್ಯಾಹ ವಾಚನ, ಆಚಾರ್ಯವರ್ಣ, ಪ್ರಸಾದ ಪರಿಗ್ರಹ, ಪಶುದಾನ ಶುದ್ಧಿ, ಅಂಕುರ ಆರೋಹಣ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ದಿಕ್ಪಾಲಕ ಬಲಿ, ದುರ್ಗಾದೇವರ ಆದಿವಾಸ ಪೂಜೆ, ಶಯನಾದಿವಾಸ ಜರುಗಲಿದೆ. ಮಾ.2 ರಂದು ಬೆಳಿಗ್ಗೆ ಅಂಕುರ ಪೂಜೆ, ಗಣಪತಿ ಹೋಮ, ದುರ್ಗಾದೇವಿ ಪ್ರತಿಷ್ಠಾ ಹೋಮ, ಪ್ರತಿಷ್ಠಾ ಕಳಸ ಪೂಜೆ, 8.30ರ ಮೀನ ಲಗ್ನದ ಶುಭಮೂರ್ತದಲ್ಲಿ ಗಣಪತಿ ಪ್ರತಿಷ್ಠೆ, 11.25ರ…
ಮಡಿಕೇರಿ ಫೆ.25 NEWS DESK : ಜ್ಞಾನವನ್ನು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ. ಪ್ರೌಢಶಾಲಾ ಹಂತದಲ್ಲಿ ಉತ್ತಮ ಶಿಕ್ಷಣ ಸಿಕ್ಕಿ ಅಭ್ಯರ್ಥಿಗಳು ಮನಸ್ಸು ಮಾಡಿದರೆ ಯಾವ ಸಾಧನೆ ಬೇಕಾದರೂ ಮಾಡಬಹುದು ಎಂದು ಸಾಹಿತಿ, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಉಳುವಂಗಡ ಕಾವೇರಿ ಉದಯ ನುಡಿದರು. ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆದ ಹತ್ತನೇ ತರಗತಿಯ ಕನ್ನಡ ಮಾಧ್ಯಮ ಪರಿಕ್ಷೆಯಲ್ಲಿ ಮೊದಲಿಗಳಾಗಿ ಬಂದ ಯು.ಅದವಿಯಾ ಸಾಕ್ಷಿ ಎಂದರು. ಮಾದಾಪುರದಂತಹ ಗ್ರಾಮೀಣ ಪ್ರದೇಶದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಜಿಲ್ಲೆಗೆ ಪ್ರಥಮ ಬಂದದ್ದು ನಿಜಕ್ಕೂ ಸಾಧನೆಯೇ ಸರಿ, ಇದು…
ಮಡಿಕೇರಿ ಫೆ.25 NEWS DESK : ಮಹಾಶಿವರಾತ್ರಿಯ ಪ್ರಯುಕ್ತ ಮೈಸೂರಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮೈಸೂರಿನಲ್ಲಿ ವಿಶ್ವನಾಥನ ದಿವ್ಯ ದರ್ಶನ ಮತ್ತು 12 ದಿನಗಳ ಜ್ಞಾನ-ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದೆ. ಮೈಸೂರು ನಗರದ ಹುಣಸೂರು ರಸ್ತೆಯಲ್ಲಿರುವ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಶಿ ವಿಶ್ವನಾಥನ ಮಾದರಿಯ ಮಂದಿರ ನಿರ್ಮಾಣ ಮಾಡಿ ಅನೇಕರಿಗೆ ಈಶ್ವರೀಯ ಸಂದೇಶವನ್ನು ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಮಡಿಕೇರಿ ಬ್ರಹ್ಮಾಕುಮಾರಿ ಶಾಖೆಯ ಸಂಚಾಲಕರಾದ ಬ್ರಹ್ಮಾಕುಮಾರಿ ಧನಲಕ್ಷ್ಮಿ ಅಕ್ಕನವರು ಭಾಗವಹಿಸಿ ಏಕಾಗ್ರತೆ ಕುರಿತಾದ ಚಿಂತನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಡಿಕೇರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ನಿವೃತ್ತ ಉಪನ್ಯಾಸಕರು ಹಾಗೂ ಬರಹಗಾರರಾದ ಕಸ್ತೂರಿ ಗೋವಿಂದಮಯ್ಯ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಚೈತನ್ಯ ದೇವಿ, ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಹಾಗೂ ಮಾನಸಿಕ ನೆಮ್ಮದಿಗಾಗಿ “ಮೈಂಡ್ ಸ್ಪಾ” ವಿಶೇಷ ಉಪನ್ಯಾಸ ಕಾರ್ಯಕ್ರಮ, ರಾಜಯೋಗ ಶಿಬಿರ, ಪ್ರತಿನಿತ್ಯ ವಿಶೇಷ ಗಣ್ಯರಿಂದ ಪ್ರವಚನ ಹಾಗೂ ಆಧ್ಯಾತ್ಮಿಕ ಚಿಂತನಾ ಕಾರ್ಯಕ್ರಮ…






