ಲೇಖಕ: admin

ಮಡಿಕೇರಿ NEWS DESK ಜ.26 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ರಾಜಾಸೀಟು ಉದ್ಯಾನವನಕ್ಕೆ ಭೇಟಿ ನೀಡಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದರು. ಹಸಿರ ಪ್ರಕೃತಿಯ ನಡುವೆ ಕಂಗೊಳಿಸುತ್ತಿರುವ ಪುಷ್ಪ ರಾಶಿಯನ್ನು ಕಂಡು ಸಚಿವರು ಮನಸೋತರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಇದ್ದರು.

Read More

ಮೈಸೂರು NEWS DESK ಜ.26 : ತರಕಾರಿ ಮತ್ತು ಬೆಲ್ಲದ ಆಸೆಗಾಗಿ ಕಾಡಾನೆಯೊಂದು ಗುಂಡ್ಲುಪೇಟೆಯ ಬಂಡೀಪುರ ರಸ್ತೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ ಮಾಡುತ್ತಿದ್ದು, ಸವಾರರು ಆತಂಕಗೊಂಡಿದ್ದಾರೆ. ಪ್ರತಿದಿನ ಈ ಮಾರ್ಗದಲ್ಲಿ ಕಾಣಿಸಿಕೊಳ್ಳುವ ಕಾಡಾನೆ ಲಾರಿಗಳನ್ನು ಅಡ್ಡಗಟ್ಟುತ್ತಿದೆ, ಅಲ್ಲದೆ ಇತರ ವಾಹನಗಳ ಮೇಲೆ ದಾಳಿಗೆ ಮುಂದಾಗುತ್ತಿದೆ. ಆನೆಯನ್ನು ಕಂಡು ಆತಂಕಗೊಂಡ ಬೈಕ್ ಸವಾರರೊಬ್ಬರು ಬೈಕ್ ಬಿಟ್ಟು ಓಡುವ ಸಂದರ್ಭ ಕಾಡಾನೆ ದಾಳಿ ಮಾಡಲು ಯತ್ನಿಸಿದೆ. ಆದರೆ ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಕಾಡಾನೆಯನ್ನು ಕಾಡಿಗಟ್ಟುವ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗುತ್ತಿದೆ. ವಾಹನಗಳು ಹೆಚ್ಚು ಓಡಾಡುವ ಸಂದರ್ಭ ಕಾರ್ಯಾಚರಣೆ ನಡೆಸಿದರೆ ವಾಹನಗಳ ಮೇಲೆ ದಾಳಿ ಆನೆ ನಡೆಸುವ ಸಾಧ್ಯತೆಗಳಿರುವುದರಿಂದ ಸೂಕ್ತ ಸಮಯಕ್ಕಾಗಿ ಅರಣ್ಯ ಸಿಬ್ಬಂದಿಗಳು ಎದುರು ನೋಡುತ್ತಿದ್ದಾರೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ-766 ಮೂಲಕ ಹಾದು ಹೋಗಿರುವ ಬಂಡೀಪುರ ರಸ್ತೆಯಲ್ಲಿ ಈ ಒಂಟಿ ಸಲಗ ಉಪಟಳ ನೀಡುತ್ತಿದೆ.

Read More

ಮಡಿಕೇರಿ NEWS DESK ಜ.26 : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಾಚಾರವಿಲ್ಲದೆ 52 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ನೇರವಾಗಿ ಜನರಿಗೆ ತಲುಪಿಸುತ್ತಿರುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ಮಡಿಕೇರಿ ಜಿಲ್ಲೆಯ ಶನಿವಾರಸಂತೆ ತಾಲ್ಲೂಕಿನ ಕೊಡ್ಲಿಪೇಟೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅಭಿವೃದ್ದಿಗೊಳಿಸಲಾಗಿರುವ ನಂದಿಪುರ ಕೆರೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಆಗಸ್ಟ್ 2023 ತಿಂಗಳಲ್ಲಿ ಈ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು. ನಮ್ಮ ಇಲಾಖೆಯ ವತಿಯಿಂದ 3.90 ಕೋಟಿ ವೆಚ್ಚದಲ್ಲಿ ನಂದಿಪುರ ಕೆರೆಯನ್ನು ಅಭಿವೃದ್ದಿಗೊಳಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಲಾಖೆಯು ಕೆರೆಗಳ ಸೌಂದರ್ಯಿಕರಣ ಮಾಡಿದ ಏಕೈಕ ಕೆರೆ ಇದಾಗಿದೆ. ನಗರ ಪ್ರದೇಶಗಳಲ್ಲಿ ಅಭಿವೃದ್ದಿಗೊಳಿಸುವ ರೀತಿಯಲ್ಲಿ ವಾಕಿಂಗ್ ಟ್ರ‍್ಯಾಕ್, ಮಕ್ಕಳಿಗೆ ಆಟವಾಡುವ ಪ್ರದೇಶಗಳನ್ನು ಅಭಿವೃದ್ದಿಗೊಳಿಸಲಾಗಿದೆ. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ಹಿರಿಯ ವಕೀಲರಾದ ಕೊಡ್ಲಿಪೇಟೆಯ ಚಂದ್ರಮೌಳಿಯವರು ಈ ಯೋಜನೆಯನ್ನು…

Read More

ಮಡಿಕೇರಿ NEWS DESK ಜ.26 : ಆದಿಮಸಂಜಾತ ಕೊಡವರನ್ನು ಒಳಗೊಂಡ ಪರಿಪೂರ್ಣ ಮತ್ತು ಅರ್ಥಪೂರ್ಣ ಗಣರಾಜ್ಯಕ್ಕಾಗಿ ಒತ್ತಾಯಿಸಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು 76ನೇ ಗಣರಾಜ್ಯೋತ್ಸವದ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತವಾಗಿ ಮಂಡಿಸಿತು. ಸೂಕ್ಷ್ಮಾತಿಸೂಕ್ಷ್ಮ ನಗಣ್ಯ ಸಂಖ್ಯೆಯ ಕೊಡವರ ಗೌರವಾನ್ವಿತ ಗುರಿಗಳು ಮತ್ತು ಶಾಸನ ಬದ್ಧ ಹಕ್ಕೊತ್ತಾಯಗಳ ಅನುಷ್ಠಾನಕ್ಕಾಗಿ ಜಿಲ್ಲಾಡಳಿತ ಮೂಲಕ ಸರಕಾರಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಇದೇ ಸಂದರ್ಭ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ದೇಶದ ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಲ್ಯೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ವಿಶ್ವರಾಷ್ಟ್ರ ಸಂಸ್ಥೆಯ ಘೋಷಣೆ ಪ್ರಕಾರ ಅಂತರಾಷ್ಟ್ರೀಯ ಕಾನೂನಿನನ್ವಯ ಆದಿಮಸಂಜಾತ ಕೊಡವರಿಗೆ ಮಾನ್ಯತೆ ಮತ್ತು ಸೂಕ್ಷ್ಮಾತಿಸೂಕ್ಷ್ಮ ಕೊಡವ ಬುಡಕಟ್ಟು ಕುಲಕ್ಕೆ ಎಸ್‌ಟಿ ಟ್ಯಾಗ್ ಪರಿಗಣಿತೆಯೊಂದಿಗೆ ಸಿಎನ್‌ಸಿ ಪ್ರತಿಪಾದಿಸಿರುವ ಕೊಡವರ ಭೂಮಿ, ಭಾಷೆ, ಸಂಸ್ಕೃತಿ, ಜನಪದ ಇತ್ಯಾದಿ ಅಶೋತ್ತರಗಳಿಗೆ ರಾಜ್ಯಾಂಗ ಖಾತರಿಯ ಕಾನೂನುಬದ್ಧ ಹಕ್ಕುಗಳನ್ನು ನೀಡಬೇಕೆಂದು ಒತ್ತಾಯಿಸಿದರು.…

Read More

ಮಡಿಕೇರಿ NEWS DESK ಜ.26 : ಉತ್ತಮ ಉದ್ಯೋಗಾವಕಾಶ ಪಡೆಯುವ ನಿಟ್ಟಿನಲ್ಲಿ ಪದವಿಯ ಜೊತೆಯಲ್ಲಿ ಕೌಶಲ್ಯಾಭಿವೃದ್ದಿ ಅತ್ಯವಶ್ಯಕ, ವಿದ್ಯಾಭ್ಯಾಸದ ಜೊತೆಯಲ್ಲಿಯೇ ಕೌಶಲ್ಯ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಕರೆ ನೀಡಿದರು. ಇಂದು ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ದಿ ಡಿಪ್ಲಮೋ ಕೋರ್ಸ್‌ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಉದ್ಯೋಗ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿವೆ. ಹೊಸ ತಂತ್ರಜ್ಞಾನ ಅಳವಡಿಕೆಯಿಂದಾಗಿ ಉದ್ಯೋಗ ನಿರ್ವಹಣೆಗೆ ಬೇಕಾದಂತಹ ಅವಶ್ಯಕತೆಗಳು ಬದಲಾಗಿವೆ. ಇವುಗಳನ್ನ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ ಆದ್ಯತೆ ನೀಡಿದೆ. ಹಾಗೆಯೇ, ಅಗತ್ಯ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಸರಕಾರ ರೂಪಿಸಿದೆ. ವಿದ್ಯಾರ್ಥಿಗಳು ಉತ್ತಮ ಅವಕಾಶ ಪಡೆಯಲು ಹಾಗೂ ಉದ್ಯೋಗದಲ್ಲಿ ಪ್ರಸ್ತುತರಾಗಿರಲು ತಮ್ಮ ಕ್ಷೇತ್ರದಲ್ಲಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಆದ್ಯತೆ ನೀಡಬೇಕು. ಕೊಡಗು ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳಿಗೆ ಪದವಿಯ ಜೊತೆಯಲ್ಲಿಯೇ ಸ್ಕಿಲ್‌ ಡೆವಲಪ್‌ಮೆಂಟ್‌ ಡಿಪ್ಲಮೋ ಕೋರ್ಸ್‌ನ್ನು ಉಚಿತವಾಗಿ…

Read More

ಮಡಿಕೇರಿ NEWS DESK ಜ.25 : ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮವು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಉಪಸ್ಥಿಯಲ್ಲಿ ಶನಿವಾರ ನಡೆಯಿತು. ವಿರಾಜಪೇಟೆ ತಾಲ್ಲೂಕು ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ‘ಜಿಲ್ಲಾ ಮಟ್ಟದ ಜನಸ್ಪಂದನ’ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು. ಕಂದಾಯ, ಗ್ರಾಮೀಣಾಭಿವೃದ್ಧಿ, ಸೆಸ್ಕ್, ಅರಣ್ಯ, ಸಮಗ್ರ ಗಿರಿಜನ ಕಲ್ಯಾಣ ಇಲಾಖೆ, ವಸತಿ ಯೋಜನೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆ ಕಲ್ಪಿಸುವುದು ಸೇರಿದಂತೆ ಸುಮಾರು 74 ಅರ್ಜಿಗಳು ಸಲ್ಲಿಕೆಯಾದವು. ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಪರಿಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು. ಬಳಿಕ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಿವೇಶನ ಒದಗಿಸುವಂತೆ ಸಾಕಷ್ಟು…

Read More

ಮಡಿಕೇರಿ NEWS DESK ಜ.26 : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಭೆ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಸಂಬಂಧಿಸಿದ ವಿಚಾರಗಳನ್ನು ಚರ್ಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೋ ಮೇಜರ್ ರಾಘವ ಮಾತನಾಡಿ ಕಾಲೇಜಿನ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ ಸಂಘದ ಕೊಡುಗೆ ಬಹಳಷ್ಟು ಇದೆ. ಕಾಲೇಜಿನ ಕುಂದುಕೊರತೆಗಳಿಗೆ ಸಂಘವು ಬಹಳಷ್ಟು ಸ್ಪಂದನ ನೀಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುವ ಮೂಲಕ ಸ್ನೇಹ ಸಮ್ಮಿಲನದ ಮೂಲಕ ಎಲ್ಲರನ್ನೂ ಒಟ್ಟುಗೂಡಿಸುವಂತ ಸುಂದರ ಕಾರ್ಯಕ್ರಮಕ್ಕೆ ಮನ್ನುಡಿ ಬರೆಯಲಾಯಿತು. ಕಾಲೇಜನ್ನು ಎಲ್ಲಾ ರೀತಿಯಿಂದಲೂ ಅಭಿವೃದ್ಧಿಪಡಿಸುವಲ್ಲಿ ನಮ್ಮ ಹಳೆ ವಿದ್ಯಾರ್ಥಿ ಸಂಘದ ಸಹಕಾರ ಸದಾ ಇರುತ್ತದೆ ಹಾಗು ಕಾಲೇಜಿನಲ್ಲಿ ವಿದ್ಯಾಭ್ಯಾಸ ನಡೆಸಿದ ವಿದ್ಯಾರ್ಥಿಗಳು ಈಗಿನ ಹಳೆ ವಿದ್ಯಾರ್ಥಿ ಸಂಘದ ಜೊತೆ ಕೈ ಜೋಡಿಸಬೇಕು ಎಂದು ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದರು. ಸಂಘದ ವತಿಯಿಂದ ನಡೆದ ಕಾರ್ಯಕ್ರಮಗಳ ವರದಿಯನ್ನು ಸಂಘದ…

Read More

ಮಡಿಕೇರಿ NEWS DESK ಜ.26 : ಕೊಡಗು ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ ಭಾನುವಾರ ಅರ್ಥಪೂರ್ಣವಾಗಿ ನಡೆಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಬೆನಕ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ರ‍್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Read More

ಮಡಿಕೇರಿ NEWS DESK ಜ.26 : ಸಂವಿಧಾನದ ಆಶಯಕ್ಕೆ ಬದ್ಧವಾಗಿ ನಾವೆಲ್ಲರೂ ಕರ್ತವ್ಯ ನಿರ್ವಹಿಸಬೇಕು ಎಂದು ಕೊಡಗು ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕರೆ ನೀಡಿದರು. ನಗರದ ಜಿ.ಪಂ ಕಚೇರಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ರಾಷ್ಟ್ರ ನಾಯಕರ ಆಶಯಗಳನ್ನು ಮೈಗೂಡಿಸಿಕೊಂಡು ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಕೊಡಗು ವಿದ್ಯಾಲಯ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ತಂಡ ಮತ್ತು ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಿದ್ದು ಈ ಬಾರಿಯ ವಿಶೇಷವಾಗಿತ್ತು. ಇದೇ ವೇಳೆ ಮಾನ್ಯ ಜಿ.ಪಂ.ಉಪಕಾರ್ಯದರ್ಶಿ ಜಿ.ಧನರಾಜು, ಮಾನ್ಯ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಮಾನ್ಯ ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಮಾನ್ಯ ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್ ಮತ್ತು ಜಿ.ಪಂ. ಸಿಬ್ಬಂದಿಗಳು ಇದ್ದರು.

Read More

ವಿರಾಜಪೇಟೆ NEWS DESK ಜ.26 : ವಿರಾಜಪೇಟೆ ತಾಲೂಕು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಆಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಶಾಸಕರು ಭಾರತೀಯರ ಬದುಕಿಗೆ ಸಂವಿಧಾನ ನೀಡಿದ ಬಲವನ್ನು ನಾವು ಅರಿತುಕೊಳ್ಳಬೇಕು ಎಂದು ಹೇಳಿದರು. ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More