ಲೇಖಕ: admin

ಸುಂಟಿಕೊಪ್ಪ ಮಾ.12 NEWS DESK : ಮಂಗಳೂರಿನಿಂದ ಆರಂಭಗೊಂಡಿರುವ ನಂದಿ ರಥಯಾತ್ರೆಗೆ ಕೊಡಗಿನಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಕೊಡಗು ಜಿಲ್ಲಾ ವಿಶ್ವಹಿಂದೂ ಪರಿಷತ್ ಮಾಜಿ ಕಾರ್ಯದರ್ಶಿ ಡಿ.ನರಸಿಂಹ ಹಾಗೂ ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ನಂತರ ಮೆರವಣಿಗೆಯೊಂದಿಗೆ ನಗರದ ಬೀದಿಗಳಲ್ಲಿ ಸಾಗಿ ಶ್ರೀ ಪುರಂ ಅಯ್ಯಪ್ಪ ದೇವಾಲಯದವರೆಗೆ ಸಾಗಿ ಅಲ್ಲಿಂದ ಕುಶಾಲನಗರ ಕಡೆಗೆ ಬಿಳ್ಕೋಡಲಾಯಿತು. ಈ ಸಂದರ್ಭ ಗ್ರಾ.ಪಂ.ಬಿ.ಎಂ.ಸುರೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ, ಸಹದೇವ, ಹರೀಶ್, ಬಿ.ಎಸ್.ಆನಂದ, ವಾಸು, ಮುರುಳೀಧರ್ ಕಾಮತ್, ಶಾಂತಿ ನಂಜುಂಡ ಸೇರಿದಂತೆ ಮತ್ತಿತರರು ಇದ್ದರು.

Read More

ಸುಂಟಿಕೊಪ್ಪ ಮಾ.12 NEWS DESK : ಗೃಹಿಣಿಯರು ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ತೆರಯುವ ಮೂಲಕ ತಿಂಗಳಿಗೆ ಇಂತಿಷ್ಟು ತಮ್ಮ ಖಾತೆಯಲ್ಲಿ ಸಂಗ್ರಹಿಸಿಡುವುದರಿಂದ ತುರ್ತು ಸಂದರ್ಭದಲ್ಲಿ ಉಪಯೋಗವಾಗುತ್ತಿದೆ. ಅಲ್ಲದೇ ಆರೋಗ್ಯ ಸಮಸ್ಯೆಗಳು ಉಲ್ಬಣಿಸಿದಾಗ ವಿಮೆಯಿಂದ ಚಿಕಿತ್ಸೆ ಪಡೆಯಬಹುದೆಂದು ಎಫ್.ಎಲ್.ಸಿ ಅಧಿಕಾರಿ ನಬಿ ಹೇಳಿದರು. ಲೀಡ್ ಬ್ಯಾಂಕ್ ಯೂನಿಯನ್ ಬ್ಯಾಂಕ್ ಅವಾರ್ಡ್ ಸಂಸ್ಥೆ ವತಿಯಿಂದ ಹೆರೂರು ಗ್ರಾಮದ ಸಮುದಾಯ ಭವನದಲ್ಲಿ ಹಣಕಾಸಿನ ಆರ್ಥಿಕ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಬ್ಯಾಂಕ್‍ಗಳಲ್ಲಿ ವ್ಯವಹಾರ ಮಾಡುವುದರಿಂದ ಸರಕಾರದ ಎಲ್ಲ ಯೋಜನೆ, ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಭವಿಷ್ಯದ ಭದ್ರತೆಗೆ ಮಾಸಿಕ ಆದಾಯದಲ್ಲಿ ಒಂದಷ್ಟು ಹಣವನ್ನು ಉಳಿಸಿ ಆರ್‍ಡಿ ಇತರೆ ಕಟ್ಟುವುದರಿಂದ ನಿಮ್ಮ ಮಕ್ಕಳ ಶಿಕ್ಷಣ, ಮದುವೆ ಇನ್ನಿತರ ಸಂದರ್ಭದಲ್ಲಿ ಉಪಯೋಗ ಬರುತ್ತದೆ ಎಂದು ತಿಳಿಸಿದರು. ಈ ಸಂದರ್ಭ ಆರ್ಥಿಕ ಸಮಾಲೋಚಕರದ ಸಿ.ಜಿ.ಹರೀಶ್ ಇತರರು ಹಾಜರಿದ್ದರು.

Read More

ಸುಂಟಿಕೊಪ್ಪ ಮಾ.12 NEWS DESK : ಸುಂಟಿಕೊಪ್ಪದಲ್ಲಿ ಆಟೋ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮತ್ತಿಕಾಡು ನಿವಾಸಿ ಅಜಿತ್‍ಕುಮಾರ್ (25) ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಮತ್ತಿಕಾಡು ಹಿಂದೂ ರುದ್ರಭೂಮಿಯಲ್ಲಿ ನಡೆಯಿತು. ಮೃತರು ಪೋಷಕರನ್ನು ಹಾಗೂ ಓರ್ವ ಸಹೋದರಿಯನ್ನು ಆಗಲಿದ್ದಾರೆ. ಸಂತಾಪ : ಅಜಿತ್ ಕುಮಾರ್ ನಿಧನಕ್ಕೆ ಸುಂಟಿಕೊಪ್ಪ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎ.ಎಂ.ಶರೀಫ್ ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Read More

ಕುಶಾಲನಗರ  ಮಾ.12 NEWS DESK : ಜಂಪ್ ಸ್ಮಾಶ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಗೋಲ್ಡನ್ ರಾಕೆಟ್ಸ್ ತಂಡ ಮೊದಲ ಬಹುಮಾನ 30 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು. ಟೀಂ ಆಯುಧಿ ತಂಡ ಎರಡನೇ ಬಹುಮಾನ 20 ಸಾವಿರ ಹಾಗೂ ಟ್ರೋಫಿ ಪಡೆಯಿತು.  ಸೂಪರ್ ಮಾಸ್ಟರ್ಸ್ ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು 10 ಸಾವಿರ ನಗದು ಹಾಗೂ ಟ್ರೋಫಿ ಗಳಿಸಿತು‌. ಪಂದ್ಯಾವಳಿಯಲ್ಲಿ ಟೀಂ ಐಬಿ, ಟೀಂ ವಿಶಾಲ್, ಗೋಲ್ಡನ್ ರಾಕೆಟರ್ಸ್, ಸೂಪರ್ ಮಾಸ್ಟರ್ಸ್, ಟೀಂ ಎಇ, ಜಂಪ್ ಸ್ಮಾಶ್, ಟೀಂ ಆಯುಧಿ ಸೇರಿ ಒಲ ಏಳು ತಂಡಗಳಿಂದ ಒಟ್ಟು 77 ಆಟಗಾರರು ಭಾಗವಹಿಸಿದ್ದರು.  ಪಂದ್ಯಾವಳಿ ಆಯೋಜಿಸಿದ್ದ ಹಿರಿಯ ಆಟಗಾರರೂ ಹಾಗೂ ಗೋಲ್ಡನ್ ರಾಕೆಟರ್ಸ್ ತಂಡದ ಮಾಲೀಕರಾದ ಸೋಮು ಹಾಗೂ ನಿರಂಜನ್ ಈ ಸಂದರ್ಭ ಮಾತನಾಡಿ, ಯಾವುದೇ ಕ್ರೀಡೆಯಾಗಲೀ ಸೋಲು ಅಥವಾ ಗೆಲುವು ಇದ್ದದ್ದೇ.  ಆದರೆ ಸೋತವರು ಮತ್ತೆ ಗೆಲ್ಲುವ…

Read More

ಮಡಿಕೇರಿ ಮಾ.12 NEWS DESK : ಸುಮಾರು 30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೋಟೇರಿ ಯಿಂದ ತುತ್ತಂಡವಾರಿಕೆಗೆ ಇರುವ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಿಂದ ಮೊದಲ ಬಾರಿಕೆ ಅಂಗನವಾಡಿಯಿಂದ ಚಿಂಡಮಾಡ್ ಮಸೀದಿವರೆಗೂ ಸುಮಾರು ರೂ.15 ಲಕ್ಷ ದಲ್ಲಿ ಕಾಮಗಾರಿ ಕೈಗೊಳ್ಳಲಾಯಿತು. ಈಗಾಗಲೇ ಡಾಂಬರೀಕರಣ ಪ್ರಾರಂಭವಾಗಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯ ಅಧ್ಯಕ್ಷ ಕುಸು ಕುಶಾಲಪ್ಪ, ಕೊಳಕೇರಿ ಗ್ರಾ.ಪಂ ಸದಸ್ಯ ಕೆ.ವೈ.ಅಶ್ರಫ್,  ಹೇಮಾ, ಅರುಣ್ ಬೇಬ, ಗಂಗಮ್ಮ, ಎಂ.ಎಂ.ಅಮೀನ  ಹಾಗೂ ನಾಪೋಕ್ಲು, ಕೊಳಕೇರಿಯ ಉಲಮ ನೇತಾರರಾದ ಅಫೀಲ್ ಸಹದಿ ಉಸ್ತಾದ್, ಕಾಂಗ್ರೆಸ್ ಮುಖಂಡರಾದ ಹಾರೀಶ್ ಕೆ.ಎ., ಊರಿನ ಗಣ್ಯ ವ್ಯಕ್ತಿಗಳು, ಉಂಬಯಿ ಹಳೆ ತಾಲೂಕು ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದ ಶಾಸಕ ಪೊನ್ನಣ್ಣ ಹಾಗೂ ಸಹಕರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದರು.

Read More

ಮಡಿಕೇರಿ ಮಾ.12 NEWS DESK : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75% ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in  ಅಡಿಯಲ್ಲಿ ಪ್ರಾರಭಿಸಲಾಗಿದ್ದು, ಅದರಂತೆ ಸೇವಾಸಿಂಧು ಪೋರ್ಟಲ್‍ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ Admission for Morarji Desai Residential ಸೇವೆಯ ವೆಬ್ ಪೋರ್ಟಲ್‍ನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾರ್ಚ್, 25 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ…

Read More

ವಿರಾಜಪೇಟೆ NEWS DESK ಮಾ.11 : ವಿರಾಜಪೇಟೆ ತಾಲ್ಲೂಕು ತಹಶೀಲ್ದಾರರಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಎಚ್.ಎನ್. ರಾಮಚಂದ್ರ ಇವರನ್ನು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಆಪ್ತ ಕಾರ್ಯದರ್ಶಿ  ಹುದ್ದೆಗೆ ವರ್ಗಾಯಿಸಿದ ಹಿನ್ನೆಲೆ ಸರ್ಕಾರದ ಆದೇಶದಂತೆ  ಕಾರ್ಯಭಾರವನ್ನು ಇಂದು ವಹಿಸಿಕೊಂಡಿದ್ದಾರೆ.

Read More

ಮಡಿಕೇರಿ NEWS DESK ಮಾ.11 : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ.  2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಮಾರ್ಚ್, ಏಪ್ರಿಲ್, ಮೇ ಮಾಹೆಯ ಸ್ವಯಂ…

Read More

ಮಡಿಕೇರಿ NEWS DESK ಮಾ.11 : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು  ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ  ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75%  ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಅಡಿಯಲ್ಲಿ ಪ್ರಾರಭಿಸಲಾಗಿದ್ದು, ಅದರಂತೆ ಸೇವಾಸಿಂಧು ಪೋರ್ಟಲ್‍ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯAdmission for Morarji Desai Residential Schools ಸೇವೆಯ ವೆಬ್ ಪೋರ್ಟಲ್‍ನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾರ್ಚ್, 25 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ…

Read More

ಮಡಿಕೇರಿ NEWS DESK ಮಾ.11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಭಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ”ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಇವರು ಉದ್ಘಾಟಿಸಿ ಮಾತನಾಡಿ ಎಲ್ಲಾ ಹೆಣ್ಣು ಮಕ್ಕಳು ಪೂಜಿಸಲ್ಪಡುವವರಾಗಿದ್ದು, ಇವರಲ್ಲಿ ಅಷ್ಟದೇವತೆಗಳು ನೆಲೆಸುತ್ತಾರೆ. ಪ್ರತಿ ಮನೆಯ ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು, ಸಮಾಜದಲ್ಲಿ ಮಹಿಳೆಯರಿಗೆ ಇರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿ ಮನೆಯಲ್ಲೂ ಹೆಣ್ಣು ಮಕ್ಕಳನ್ನು ಗೌರವಿಸಬೇಕು ಎಂದು ಹೇಳಿದರು. ಸ್ತ್ರೀಶಕ್ತಿ ಒಕ್ಕೂಟದ ರಾಜ್ಯಧ್ಯಕ್ಷರಾದ ರೆಹನಾ ಸುಲ್ತಾನ ಅವರು ಮಾತನಾಡಿ…

Read More