ಲೇಖಕ: admin

ಮಡಿಕೇರಿ NEWS DESK ಆ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗಾನ ಕೋಗಿಲೆ ಎಸ್.ಜಾನಕಿ ಅವರಿಗೆ ‘ಪುಷ್ಪ ನಮನ, ನುಡಿ ನಮನ, ಗಾನ ನಮನ’ ಕಾರ್ಯಕ್ರಮ ಆ.14 ರಂದು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಗಾಯಕರು, ಶಕ್ತಿ ದಿನಪತ್ರಿಕೆಯ ಸಂಪಾದಕರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಟ್ರಸ್ಟಿ ಜಿ.ಚಿದ್ವಿಲಾಸ್ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಟ್ರಸ್ಟಿ ಅನಿಲ್ ಹೆಚ್.ಟಿ ಅವರು ನುಡಿ ನಮನ ಸಲ್ಲಿಸಲಿದ್ದಾರೆ.…

Read More

ಮಡಿಕೇರಿ ಆ.10 NEWS DESK :  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 14 ರಂದು ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ಅರೆನಾ-ವಿರಾಜಪೇಟೆ, ಇಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ “ನೇರ ಸಂದರ್ಶನ” ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ಅರೆನಾ- ವಿರಾಜಪೇಟೆ, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಸಂದರ್ಶನದಲ್ಲಿ Relationship Manager, Front office Executive, Service Advisor, Driver, and Technician, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಪಿ.ಯು.ಸಿ, ಪದವಿ, ಡಿಪ್ಲೋಮಾ, ಹಾಗೂ ಐ.ಟಿ.ಐ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್– 8296020826 ಇವರನ್ನು…

Read More

ನಾಪೋಕ್ಲು ಆ.10 NEWS DESK : ನಮ್ಮ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಮಕ್ಕಳಲ್ಲಿ ಸಮಾಜದ ಬಗ್ಗೆ ಅರಿವು ಮೂಡಿಸಬೇಕು. ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ಮೂಲಕ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಸೋಲೂರು, ರಾಮನಗರದ ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಬಿಲ್ಲವ ಸಮಾಜದ ವತಿಯಿಂದ ಆಯೋಜಿಸಿದ್ದ 3ನೇ ವರ್ಷದ ಆಟಿಡೊಂಜಿ ದಿನಾಚರಣೆ, ಬಿಲ್ಲವ ಸಮುದಾಯ ಭವನದ ಶಂಕುಸ್ಥಾಪನೆ ಹಾಗೂ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ನಡೆದ ಸಭೆಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ–ವಿಚಾರ ಹಾಗೂ ಪರಂಪರೆಯ ಪರಿಚಯ ಮಾಡಿಕೊಡುವ ಅಗತ್ಯವಿದೆ. ಶ್ರೀ ನಾರಾಯಣಗುರುಗಳ ಧಾರ್ಮಿಕ ಹಾಗೂ ಸಾಮಾಜಿಕ ಸಂದೇಶಗಳನ್ನು ಸ್ಮರಿಸಿಕೊಂಡು, ಸಮಾಜದ ಎಲ್ಲರಿಗೂ ಸನ್ಮಂಗಲ ದೊರೆಯಲಿ ಎಂದು ಆಶಿಸಿದರು. :: ಬಿಲ್ಲವ ಸಮಾಜದ ಕೊಡುಗೆ ಶ್ಲಾಘನೀಯ: ಎ.ಎಸ್. ಪೊನ್ನಣ್ಣ ::  ವಿರಾಜಪೇಟೆ ಶಾಸಕ ಹಾಗೂ ವಿಧಾನಸಭೆಯ…

Read More

ಮಡಿಕೇರಿ ಆ.10 NEWS DESK : ಕೊಡವ ಸಮಾಜ, ಮಡಿಕೇರಿ, ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟ, ಮಡಿಕೇರಿ ಹಾಗೂ ಮಡಿಕೇರಿಯ ಎಲ್ಲಾ ಕೊಡವ ಕೇರಿಗಳ ಸಂಯುಕ್ತ ಆಶ್ರಯದಲ್ಲಿ ನಡೆದ “ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ” ಕಾರ್ಯಕ್ರಮವು  ಮಡಿಕೇರಿ ಕೊಡವ ಸಮಾಜದಲ್ಲಿ ಸಂಭ್ರಮದಿಂದ ನಡೆಯಿತು. ಕೊಡಗು ನೆಲದ ಸಂಸ್ಕೃತಿ, ಸಂಪ್ರದಾಯ ಹಾಗೂ ಪಾರಂಪರಿಕ ಆಹಾರ ಪದ್ಧತಿಯ ವೈವಿಧ್ಯತೆಯನ್ನು ಅನಾವರಣಗೊಳಿಸಿದ ಕಾರ್ಯಕ್ರಮವು ಮರೆಯಾಗುತ್ತಿರುವ ಕೊಡವ ಪಾರಂಪರಿಕ ಆಹಾರ ಪದ್ಧತಿ, ಆಚರಣೆಗಳು, ಜನಪದ ಸಂಸ್ಕೃತಿ ಹಾಗೂ ಪುರಾತನ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಅರ್ಥಪೂರ್ಣ ವೇದಿಕೆಯಾಗಿ ಗಮನ ಸೆಳೆಯಿತು. ಕಕ್ಕಡ ತಿಂಗಳ ವಿಶೇಷತೆ ::  ಕೊಡವ ಸಂಪ್ರದಾಯದಲ್ಲಿ ಕಕ್ಕಡ ತಿಂಗಳಿಗೆ ವಿಶೇಷ ಮಹತ್ವವಿದೆ. ಮಳೆಗಾಲದ ಈ ಅವಧಿಯಲ್ಲಿ ಪ್ರಕೃತಿಯಲ್ಲಿ ದೊರೆಯುವ ವಿವಿಧ ಸಸ್ಯ, ಸೊಪ್ಪು ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ಪದಾರ್ಥಗಳನ್ನು ಬಳಸಿ ತಯಾರಿಸುವ ಪಾರಂಪರಿಕ ಖಾದ್ಯಗಳಿಗೆ ವಿಶೇಷ ಸ್ಥಾನವಿದೆ. ಇದೇ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಕ್ಕಡ ತೀನಿ ಪೈಪೋಟಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕಕ್ಕಡ ಪಾಯಸ,…

Read More

ಮಡಿಕೇರಿ ಆ.10 NEWS DESK : ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮಡಿಕೇರಿ ತಾಲ್ಲೂಕು ಘಟಕದ ಸಾಮಾನ್ಯ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಗರದ ಉಡುಪಿ ಗಾರ್ಡನ್ ಪಾರ್ಟಿ ಹಾಲ್‌ನಲ್ಲಿ ನಡೆಯಿತು. ಕರವೇ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪ್ರವೀಣ್ ಡಿಂಗ ಅವರ ಅಧ್ಯಕ್ಷತೆಯಲ್ಲಿ, ರಾಜ್ಯ ಮಹಿಳಾ ಸಂಚಾಲಕಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ದೀಪಾ ಪೂಜಾರಿ ಅವರ ಸೂಚನೆಯಂತೆ ಸಭೆ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ತಂಡದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜಿಲ್ಲಾ ಸಂಚಾಲಕ ಗೋವಿಂದರಾಜ್ ದಾಸ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಕುದುಪಜೆ ಅವರು ಸಂಘಟನೆ ನಡೆದು ಬಂದ ಹಾದಿ ಹಾಗೂ ಇದುವರೆಗೆ ಕೈಗೊಂಡಿರುವ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಮುನೀರ್ ಮಾಚಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. :: ನೂತನ ಪದಾಧಿಕಾರಿಗಳ ಆಯ್ಕೆ :: ಸಭೆಯಲ್ಲಿ ಕರವೇ ಮಡಿಕೇರಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರವೀಣ್ ಡಿಂಗ ಅಧ್ಯಕ್ಷರಾಗಿ,…

Read More

ಮಡಿಕೇರಿ ಆ.10 NEWS DESK : ಜನತಾ ಕಾಲೋನಿಯಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಎದೆಹಾಲಿನ ಮಹತ್ವ ಮತ್ತು ತಾಯಿ-ಮಗುವಿನ ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆರು ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲನ್ನೇ ನೀಡುವ ಮಹತ್ವ, ಆರು ತಿಂಗಳ ನಂತರ ನೀಡಬೇಕಾದ ಮೇಲು ಆಹಾರ, ಸಮಯಕ್ಕೆ ಸರಿಯಾಗಿ ಚುಚ್ಚುಮದ್ದು ಹಾಕಿಸುವುದು ಹಾಗೂ ಹೆರಿಗೆಗಳ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವ ಕುರಿತು ಮಾಹಿತಿ ನೀಡಲಾಯಿತು. ಅಲ್ಲದೆ, ಮಕ್ಕಳಲ್ಲಿ ಜಂತುಹುಳು ನಿವಾರಣೆಗಾಗಿ ನೀಡಲಾಗುವ ಅಲ್ಬೆಂಡಜೋಲ್ ಮಾತ್ರೆಯ ಬಳಕೆ, ಭಾಗ್ಯಲಕ್ಷ್ಮಿ ಯೋಜನೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಜಾ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಸುಮ ಅವರು ವಿವಿಧ ವಿಷಯಗಳ ಕುರಿತು ವಿವರವಾಗಿ ತಿಳಿಸಿದರು. ಆಶಾ ಕಾರ್ಯಕರ್ತೆ ಹೇಮಾವತಿ, ಅಂಗನವಾಡಿ ಕಾರ್ಯಕರ್ತೆ ರಮ್ಯಾ ಕಾರ್ಯಕ್ರಮವನ್ನು ಆಯೋಜಿಸಿದರು. ಗರ್ಭಿಣಿಯರು,…

Read More

ಮಡಿಕೇರಿ ಆ.10 NEWS DESK : ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವಲ್ಲಿ ಆಲ್‍ಬೆಂಡಜೋಲ್ ಮಾತ್ರೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾತ್ರೆ ಕೊಡಿಸಬೇಕು ಎಂದರು. ದೇಶದಾಧ್ಯಂತ ಆಗಸ್ಟ್ 10 ರಂದು “ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಆಗಸ್ಟ್ 17 ರಂದು ಮಾಪ್ ಆಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು 10 ಫೆಬ್ರವರಿ 2015ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು…

Read More

ಮಡಿಕೇರಿ ಆ.10 NEWS DESK : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯಾಪ್ತಿಯ ನಗರದ ಕರ್ನಾಟಕ ಸುವರ್ಣ ಸಮುಚ್ಚಯ ಭವನ, ಗಾಂಧಿ ಸ್ಮಾರಕ ಉದ್ಯನವನ ಹಾಗೂ ಕುಶಾಲನಗರದ ಕಲಾಭವನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಕುಶಾಲನಗರದ ಕಲಾಭವನದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಧ್ವನಿವರ್ಧಕ, ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲು ಹೆಚ್ಚುವರಿಯಾಗಿ 10 ಲಕ್ಷ ರೂ. ಬೇಕಾಗಿದ್ದು, ಇದನ್ನು ಬಿಡುಗಡೆಗೊಳಿಸಲಾಗುವುದು. ಆ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಕೆಆರ್‍ಐಡಿಎಲ್ ಎಂಜಿನಿಯರ್‍ಗೆ ಸೂಚಿಸಿದರು. ಕೆಆರ್‍ಐಡಿಎಲ್ ಎಂಜಿನಿಯರ್ ರಘುನಂದನ್ ಅವರು ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಸುವರ್ಣ ಸಮುಚ್ಚಯ ಭವನಕ್ಕೆ ಇನ್ನೂ ಒಂದು ಕೋಟಿಗೂ ಹೆಚ್ಚು ಹಣ ಬೇಕಿದ್ದು, ಒಂದುವರೆ ತಿಂಗಳಲ್ಲಿ…

Read More

ಸೋಮವಾರಪೇಟೆ NEWS DESK ಆ.10: ಸೋಮವಾರಪೇಟೆ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದ ಪ್ರವಾಸಿಗರ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮೊಗುಚಿಕೊಂಡಿರುವ ಘಟನೆ ತಾಲ್ಲೂಕಿನ ಕುಮಾರಳ್ಳಿ-ಬಾಚಳ್ಳಿ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ನಾಲ್ವರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು 29 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 23 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪ್ರವಾಸಿಗರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿ, ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದರು. ಮಧ್ಯಾಹ್ನ  ಒಂದು ಗಂಟೆ ಸುಮಾರಿಗೆ ಬಾಚಳ್ಳಿ ಗ್ರಾಮದ ಬಳಿ ಬಸ್ ಚಾಲಕ ಶಫಿ ಅವರ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದAತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್‌ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ತಮ್ಮ ವಾಹನಗಳ ಮೂಲಕ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಜಮೀರ್ ಅಹ್ಮದ್ ಹಾಗೂ ಶುಶ್ರೂಷಕರು ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಿದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ  16 ಮಂದಿಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ…

Read More

ಮಡಿಕೇರಿ NEWS DESK ಆ.10 : ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಸ್ಮಾರಕದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಸರ್ವೋದಯ ಸಮಿತಿಯ ಜಿಲ್ಲಾಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅವರ ನೇತೃತ್ವದ ನಿಯೋಗ ಇಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಭೇಟಿ ಮಾಡಿ ಗಾಂಧಿ ಸ್ಮಾರಕಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಿತು. ಜಿಲ್ಲಾ ಖಜಾನೆಯಲ್ಲಿರುವ ಗಾಂಧಿ ಚಿತಾಭಸ್ಮವನ್ನು ರಾಜ್‌ಘಾಟ್ ನಂತೆ ಸ್ಮಾರಕ ನಿರ್ಮಿಸಿ ಶಾಶ್ವತವಾಗಿಟ್ಟು ಗೌರವಿಸುವ ಉದ್ದೇಶದಿಂದ ಗಾಂಧಿ ಸ್ಮಾರಕ ನಿರ್ಮಾಣದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರಕಾರವಿದ್ದಾಗ ಅಂದು ವಿಧಾನಸಭಾ ಅಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಅವರು ಸರ್ವೋದಯ ಸಮಿತಿಯ ಮನವಿಗೆ ಸ್ಪಂದಿಸಿ ರೂ.50 ಲಕ್ಷ ಮಂಜೂರು ಮಾಡಿದ್ದರು. ಈ ಅನುದಾನದ ಮೂಲಕ ನಿರ್ಮಿತಿ ಕೇಂದ್ರದವರು ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸಿದರು. ಆದರೆ ಪ್ರಸ್ತುತ ಮುಂದುವರೆದ ಕಾಮಗಾರಿಗೆ ಅನುದಾನದ ಕೊರತೆಯಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಮ್ಮ ನಿಧಿಯಿಂದ…

Read More