ಲೇಖಕ: admin

ಮಡಿಕೇರಿ ಜ.25 NEWS DESK : ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜ.29 ರಂದು ಕುಶಾಲನಗರದಲ್ಲಿ ಉಚಿತ ಕ್ಯಾನನ್ ಕ್ಯಾಮರಾ ಕಾರ್ಯಾಗಾರ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಛಾಯಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ಅವರು ತಮ್ಮ ಅಧ್ಯಕ್ಷತೆಯಲ್ಲಿ ಕುಶಾಲನಗರದ ಸುಲೋಕ ಟವರ್‍ನಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ವಿಶೇಷ ಆಹ್ವಾನಿತರಾಗಿ ತಾಲ್ಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಕಿರಣ್ ಗೌರಯ್ಯ ಪಾಲ್ಗೊಳ್ಳಲಿದ್ದಾರೆ. ಗಣೇಶ ಫೋಟೋ ಫ್ಯಾಲೆಸ್ ಮತ್ತು ಗಣೇಶ ಕಲರ್ ಲ್ಯಾಬ್ ಮಾಲೀಕ ಶ್ರೀನಿಧಿ, ಕುಶಾಲನಗರ ದೇವಾಲಯಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ.ದಿನೇಶ್ ಶುಭ ನುಡಿಗಳನ್ನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಸ್.ಎಲ್.ಎನ್ ಕಾಫಿ ಸಂಸ್ಥೆಯ ಪ್ರಮುಖರು ಹಾಗೂ ಸಮಾಜ ಸೇವಕರಾದ…

Read More

ಬೆಂಗಳೂರು ಜ.24 NEWS DESK : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.  ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಹೊಸ ಕಾನೂನು ರಚನೆ ಮಾಡುತ್ತೇವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ,…

Read More

ನಾಪೋಕ್ಲು ಜ.24 NEWS DESK  : ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದ ಎಲ್ಲಾ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಹಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಕುಲ್ಲೇಟಿರ ಎಂ.ಅರುಣ, ನಾಯಕಂಡ ಟಿ.ಮುತ್ತಪ್ಪ, ಪಟ್ರಪಂಡ ಎ.ಮುದ್ದಪ್ಪ, ಬೊಟ್ಟೋಳಂಡ ಕೆ.ಕುಟ್ಟಪ್ಪ, ಬೊಟ್ಟೋಳಂಡ  ಎ.ಪೊನ್ನಯ್ಯ,  ಕೊಂಬಂಡ  ಕೆ.ಗಣೇಶ್,  ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಹೆಚ್.ಎ.ಬೊಳ್ಳು ಆಯ್ಕೆಯಾಗಿದ್ದಾರೆ. ಮಹಿಳಾ ಸದಸ್ಯರ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೇಟೋಳಿರ ಗಣಪತಿ ಮುತ್ತಮ್ಮ, ನಾಟೋಳಂಡ ಕಸ್ತೂರಿ ಉತ್ತಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಪಾಡಿಯಮ್ಮನ ಎ.ಮಹೇಶ್ ಹಾಗೂ ಹಿಂದುಳಿದ ವರ್ಗ ಬಿ ಮೀಸಲು ಕ್ಷೇತ್ರದಿಂದ ಕೆಲೇಟಿರ ಟಿ.ಗಣಪತಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಾಳುಗಳಾಗಿ ನಾಮಪತ್ರ ಸಲ್ಲಿಸಲಾಗಿದ್ದ ಮಾಚೇಟ್ಟಿರ ಕುಸು ಕುಶಾಲಪ್ಪ. ಚೋಕಿರ ಪೂವಪ್ಪ, ಮಹಮ್ಮದ್ ಆಲಿ, ಕೊಂಬಂಡ ಸೀತಾರಾಮ ನಾಮಪತ್ರ ಹಿಂಪಡೆದುಕೊಂಡ ಕಾರಣ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಪಂಗಡ ಮೀಸಲು…

Read More

ಮಡಿಕೇರಿ ಜ.25 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜ.26 ರಂದು ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ನಗರದ ಪೊಲೀಸ್ ಮೈದಾನದಲ್ಲಿ ಸಂಜೆ 5.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಮಹಾ ಪೋಷಕರಾದ ಕೆ.ರಾಮರಾಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಕೆ.ಎಸ್.ಸುಂದರ್ ರಾಜ್ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಖ್ಯಾತ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಉಳ್ಳಿಯಡ, ಉದಯೋನ್ಮುಖ ನಟಿ ಎಸ್.ಪಿ.ತೇಜಸ್ವಿನಿ ಶರ್ಮ, ಮುಖ್ಯ ಅತಿಥಿಗಳಾಗಿ ಶಕ್ತಿ ದಿನಪತ್ರಿಕೆಯ ಸಂಪಾದಕರು ಹಾಗೂ ಕಲಾ ಪೋಷಕ ಜಿ.ಚಿದ್ವಿಲಾಸ್, ಸಂಯುಕ್ತ ಕರಾವಳಿ ಸಾಂಸ್ಕೃತಿಕ ಅಧ್ಯಕ್ಷರು ಹಾಗೂ ಶೇಡ್ಸ್ ಇವೆಂಟ್ಸ್ ಮತ್ತು ನೆಟ್‍ವಕ್ರ್ಸ್ ಮಾಲೀಕ ಕೆ.ಕೆ.ನೌಶಾದ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಕೇಶವ ಕನಿಲ, ಜೀ…

Read More

ಮಡಿಕೇರಿ ಜ.25 NEWS DESK : ಕರ್ನಾಟಕ ಮಹಿಳಾ ಹಾಕಿ ತಂಡಕ್ಕೆ ನಿಡ್ಯಮಲೆ ದಿಶಾ ಆಯ್ಕೆಯಾಗಿದ್ದಾಳೆ. ಜ.28ರಂದು ಜಾರ್ಖಂಡ್ ನ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಮೂಲತಃ ಭಾಗಮಂಡಲ ನಿವಾಸಿಯಾಗಿರುವ ದಿಶಾ, ದಿನೇಶ್ ಮತ್ತು ಸುಲೋಚನಾ ದಂಪತಿಯ ಪುತ್ರಿ.  ಕೂಡಿಗೆಯ ಕ್ರೀಡಾ ಶಾಲೆಯಲ್ಲಿ ವಿದ್ಯಾಭ್ಯಾಸ ಮತ್ತು ತರಬೇತಿ ಪಡೆದಿದ್ದು, ಪ್ರಸ್ತುತ ಮೈಸೂರಿನ ಟೆರೇಶಿಯನ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ತರಬೇತುದಾರರಾದ ಸುಂದರೇಶ್ ಹಾಗೂ ಅಶ್ವಿನಿ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ.

Read More

ಮಡಿಕೇರಿ ಜ.25 NEWS DESK : ಮಡಿಕೇರಿ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವಾಟೇರಿರ ಪಿ.ಕಾರ್ಯಪ್ಪ ಅಧಿಕಾರ ಸ್ವೀಕರಿಸಿದರು. ಮೂಲತಃ ಮಗ್ಗುಲ ಗ್ರಾಮದವರಾದ ಕಾರ್ಯಪ್ಪ ಅವರು ಈ ಹಿಂದೆ ಕುಂದಾಪುರದಲ್ಲಿ ಕರಾವಳಿ ಮತ್ತು ಸಾಗರ ಕೋಶ ವಿಭಾಗದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಸೇವೆಸಲ್ಲಿಸಿದ್ದರು.

Read More

ಮಡಿಕೇರಿ ಜ.25 NEWS DESK : ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಜಾಲದ ಬಲವರ್ಧನೆಗೆ ಸಂಬಂಧಿಸಿದಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಅನುಮೋದನೆಗೊಂಡಿರುವ ಯೋಜನೆಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಬಳಿ ಇರುವ ಹೆಗ್ಗಡೆ ಸಮಾಜದಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್,  ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಎಂ.ರಾಮಚಂದ್ರ, ವಿವಿಧ ಇಲಾಖಾ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಜರಿದ್ದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಹಾಗೂ ಮಡಿಕೇರಿ ತಾಲ್ಲೂಕಿನ ಭಾಗಶಃ ಪ್ರದೇಶಗಳಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿ :: ಅವಶ್ಯಕತೆ ಇರುವಲ್ಲಿ ಹಳೆಯ ವಿದ್ಯುತ್ ವಾಹಕವನ್ನು ಬದಲಾಯಿಸಿ ಕವರ್ಡ್ ಕಂಡಕ್ಟರ್ ಅಳವಡಿಕೆ, ಮಳೆಗಾಲದಲ್ಲಿ ವಿದ್ಯುತ್ ಅಡಚಣೆಯನ್ನು ಮಿತಗೊಳಿಸಲು ಕಾಡಂಚಿನಲ್ಲಿರುವ ವಿದ್ಯುತ್ ಮಾರ್ಗವನ್ನು ಅವಶ್ಯವಿರುವಲ್ಲಿ…

Read More

ವಿರಾಜಪೇಟೆ ಜ.25 NEWS DESK : ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ಯೋಜನೆ ಜಾರಿಗೆ ಬಂದು 24 ವರ್ಷ ಕಳೆದರು ಬಿಸಿ ಊಟ ಯೋಜನೆ ಕಾರ್ಯಕರ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೇತನ ಹೆಚ್ಚಿಸಿಲ್ಲವೆಂದು ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಐಟಿಯು ಸಂಘಟನೆಯ ರಾಜ್ಯ ಸಮಿತಿ ಮತ್ತು ಕೊಡಗು ಜಿಲ್ಲಾ ಸಮಿತಿಯ ಜಂಟಿ ಆಶ್ರಯದಲ್ಲಿ ವಿರಾಜಪೇಟೆ ನಗರ ಶಾಖೆಯಲ್ಲಿ ಬಿಸಿ ಊಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಾ.3 ಮತ್ತು 4 ರಂದು ಬಂದ್‌ ನಡೆಸಲಾಗುತ್ತದೆಂದು ತಿಳಿಸಿದರು. 2014ರ ನಂತರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪರಿಕಲ್ಪನೆ ಬದಲಾಗಿ, ನೀತಿ ಆಯೋಗದ ಶಿಫಾರಸ್ಸಿನಂತೆ 60:40 ಅನುಪಾತದ ಆಧಾರದಲ್ಲಿ ಕೇಂದ್ರ ಸರ್ಕಾರ ತನ್ನ ಮೂಲ ಜವಾಬ್ದಾರಿ ಮರೆತು ನುಣುಚಿಕೊಂಡಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಯ ಆರಂಭದಲ್ಲಿ ವೇತನ ಹೆಚ್ಚಳದ ಭರವಸೆ ನೀಡಿತ್ತಾದರು ಇಂದಿನವರೆಗೂ ಜಾರಿಯಾಗಿಲ್ಲವೆಂದು ಆರೋಪಿಸಿದರು. ಸಿ.ಐ.ಟಿ.ಯು. ಸಂಘಟನೆಯ ರಾಜ್ಯ ಖಜಾಂಚಿಗಳಾದ ಮಹಾದೇವಮ್ಮ, ಬಿಸಿ ಊಟ…

Read More

ಪೊನ್ನಂಪೇಟೆ, ಜ.25 NEWS DESK : ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ವಿಶೇಷ ಅತಿಥಿಗಳಾಗಿ ತೆರಳಿದ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ) ಕೋಶಾಧಿಕಾರಿ ಮತ್ತು ಹೊದ್ದೂರು ಗ್ರಾ.ಪಂ ಅಧ್ಯಕ್ಷ  ಹರಿಶ್ಚಂದ್ರ ಎ.ಹಂಸ ಅವರನ್ನು ಕೆ.ಎಂ.ಎ. ವತಿಯಿಂದ ಬೀಳ್ಕೊಡಲಾಯಿತು. ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಶುಕ್ರವಾರದಂದು ಬೆಳಿಗ್ಗೆ ಕಣ್ಣನೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ನವದೆಹಲಿಗೆ ಪ್ರಯಾಣ ಬೆಳೆಸಿದ ಹೆಚ್.ಎ.ಹಂಸ ಅವರನ್ನು ಕೆ. ಎಂ.ಎ. ಪರವಾಗಿ ಅಧ್ಯಕ್ಷ  ದುದ್ದಿಯಂಡ ಸೂಫಿ ಹಾಜಿ ಪುಷ್ಪಗುಚ್ಛ ನೀಡಿ ಬೀಳ್ಕೊಟ್ಟರು. ಈ ಸಂದರ್ಭ ಪ್ರಯಾಣಕ್ಕೆ ಶುಭ ಹಾರೈಸಿ ಮಾತನಾಡಿದ ಸೂಫಿ ಹಾಜಿ, ಜ. 26 ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ವಿಶೇಷ ಅತಿಥಿಗಳಾಗಿ ತೆರಳಲು ಆಯ್ಕೆಗೊಂಡ ಕರ್ನಾಟಕದ 12 ಗ್ರಾ.ಪಂ ಅಧ್ಯಕ್ಷರ ಪೈಕಿ ಒಬ್ಬರಾಗಿರುವ ಹಂಸ ಅವರ ಸಾಧನೆ ಕೇವಲ ಸಮುದಾಯಕ್ಕೆ ಮಾತ್ರವಲ್ಲ ಇಡೀ ಜಿಲ್ಲೆಗೆ ಹೆಗ್ಗಳಿಕೆ ಮೂಡಿಸಿದೆ. ಹಂಸ ಅವರ ಸಮಾಜಮುಖಿ…

Read More

ಮಡಿಕೇರಿ ಜ.25 NEWS DESK : ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ರೋಸ್ಟರ್ ಬಿಂದುವನ್ನು ಗುರುತಿಸಿ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಡಗು ಜಿಲ್ಲೆಯ ವೆಬ್‍ಸೈಟ್ ನಲ್ಲಿ hಣಣಠಿs://ಞoಜogu.ಟಿiಛಿ.iಟಿ ಆನ್‍ಲೈನ್ ಮೂಲಕ ಭರ್ತಿ ಮಾಡಿ ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಬಹುದು. ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು, ಪರಿಶಿಷ್ಟ ಜಾತಿ, ಸಾಮಾನ್ಯ, ಚೆನ್ನಯ್ಯನಕೋಟೆ, ಸಮಾನ್ಯ, ಸಾಮಾನ್ಯ, ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ, ಪರಿಶಿಷ್ಟ ಪಂಗಡ, ಸಾಮಾನ್ಯ, ಕುಟ್ಟ, ಸಾಮಾನ್ಯ, ಮಹಿಳಾ ಅಭ್ಯರ್ಥಿ, ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ, ಪ್ರವರ್ಗ-1, ಸಾಮಾನ್ಯ, ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಸಾಮಾನ್ಯ,…

Read More