ಮಡಿಕೇರಿ ಜ.23 NEWS DESK : 2023-24ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ…
ಲೇಖಕ: admin
ಮಡಿಕೇರಿ NEWS DESK ಜ.23 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ಟ್ಯಾಗ್ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಶ್ರೇಷ್ಠ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರ ವಿಭಾಗೀಯ ಪೀಠ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರಾದ ಹೈಕೋರ್ಟ್ ವಕೀಲ ಕಿರಣ್ ನಾರಾಯಣ್ ವಿಚಾರಣೆ ಸಂದರ್ಭ ಭಾಗಿಯಾಗಿದ್ದರು. ಸಿಎನ್‌ಸಿ ಬೇಡಿಕೆಗೆ ಆಕ್ಷೇಪ ಸಲ್ಲಿಸಿದ ಪ್ರತಿವಾದಿಗಳ ಅಹವಾಲನ್ನು ಕೂಡ ಆಲಿಸಿದ ಮುಖ್ಯ ನ್ಯಾಯಾಧೀಶರು ಇತರ ಮಧ್ಯಸ್ಥಿಕೆ ಅರ್ಜಿಗಳನ್ನು ಅನುಮತಿಸಿದರು ಮತ್ತು ಇನ್ನು ಮುಂದೆ ಸೇರಿಸಲಾಗುವುದಿಲ್ಲ ಎಂದು ಹೇಳಿದರು. 3ನೇ ಮಾರ್ಚ್ 2025 ರೊಳಗೆ ತಮ್ಮ ಮನವಿಯನ್ನು ಪೂರ್ಣಗೊಳಿಸಲು ಕಕ್ಷಿದಾರರಿಗೆ…
ಮಡಿಕೇರಿ ಜ.23 NEWS DESK : ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ `ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಂಬಂಧ ಜ.25 ರಂದು ಬೆಳಗ್ಗೆ 11 ಗಂಟೆಗೆ ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಹೋಬಳಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ `ಜಿಲ್ಲಾ ಮಟ್ಟದ ಜನಸ್ಪಂದನ’ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
ಮಡಿಕೇರಿ ಜ.23 NEWS DESK : ಹುತಾತ್ಮರ ದಿನಾಚರಣೆಯನ್ನು ಜ.30 ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಳೆದ ಬಾರಿಯಂತೆ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗಿ ಮೆರವಣಿಗೆ ಮೂಲಕ ಗಾಂಧಿ ಮಂಟಪದಲ್ಲಿರಿಸಿ ಸರ್ವಧರ್ಮ ಪ್ರಾರ್ಥನೆ ಮೂಲಕ ಹುತಾತ್ಮರ ದಿನಾಚರಣೆ ಆಚರಿಸಬೇಕಿದೆ ಎಂದರು. ಜಿಲ್ಲಾ ಖಜಾನೆಯಿಂದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಾಲಂಕಾರ ಮೂಲಕ ವಿಶೇಷ ಗೌರವ ಸಲ್ಲಿಸಿ, ನಂತರ ಪೊಲೀಸ್ ಗೌರವದೊಂದಿಗೆ ಮೆರವಣಿಗೆ ಮೂಲಕ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಮೂಲಕ ಗಾಂಧಿ ಮಂಟಪಕ್ಕೆ ತೆರಳಿ ಅಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ. ಬಳಿಕ ಪೊಲೀಸ್ ಗೌರವ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ…
ಮಡಿಕೇರಿ ಜ.23 NEWS DESK : ಅಂತರಾಷ್ಟ್ರೀಯ “ವೃಕ್ಷ” ಸಂಸ್ಥೆ ಹೈದರಾಬಾದ್‌ನಲ್ಲಿ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ FEET ON EARTH FESTIVAL ಎಂಬ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕು ತೋರ ಗ್ರಾಮದ ಕಲಾವಿದರಾದ ಕಬ್ಬೆಮಲೆ ಶಾರದಾ ಸೋಮಯ್ಯ ಹಾಗೂ ತಂಡ “ಕಾಡಿನ ಹಾಡು” ಶೀರ್ಷಿಕೆಯಡಿಯಲ್ಲಿ ಪ್ರದರ್ಶಿಸಿದ ಹಾಡು ಹಾಗೂ ನೃತ್ಯ ಕಲಾವಿದರ ಮೆಚ್ಚುಗೆಗೆ ಪಾತ್ರವಾಗಿದೆ. ಕಬ್ಬೆಮಲೆ ಶಾರದಾ ಸೋಮಯ್ಯ ಅರಣ್ಯ, ಪ್ರಾಣಿ ಸಂಕುಲ, ನದಿ, ಬೆಟ್ಟ-ಗುಡ್ಡಗಳು ಮತ್ತು ಇವುಗಳ ನಡುವೆ ಕಾಡಿನ ಮಕ್ಕಳಾದ ಕುಡಿಯರ ಬದುಕು ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಸುದೀರ್ಘ 40 ನಿಮಿಷಗಳ ಉರ್ಟಿಕೊಟ್ಟ್ ಪಾಟ್ ನೃತ್ಯ ಪ್ರದರ್ಶನ ನೀಡಿದರು. ಕುಡಿಯರ ಯುವ ಕಲಾವಿದರಾದ ಕೆ.ಎಂ.ಜ್ಯೋತಿ, ಕೆ.ಆರ್.ಚಷ್ಮಿತಾ ಮತ್ತು ಕೆ.ಆರ್.ಸೌಮ್ಯ ತಮ್ಮಅದ್ಭುತವಾದ ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮವನ್ನು ಕರ್ನಾಟಕದ ಜನಪದ ತಜ್ಞ ಡಾ. ಸಿರಿಗಂಧ ಶ್ರೀನಿವಾಸ್‌ಮೂರ್ತಿ ಉದ್ಘಾಟಿಸಿದರು. ವರದಿ : ಅಲ್ಲಾರಂಡ ವಿಠಲ ನಂಜಪ್ಪ
ಮಡಿಕೇರಿ ಜ.23 NEWS DESK : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿ ವತಿಯಿಂದ ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ದಶಮಿ ಬಿಡುಗಡೆ ಮತ್ತು ಸನ್ಮಾನ ಸಮಾರಂಭ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ರಾಜಾಸೀಟು ಸಮೀಪದ ರಾಜದರ್ಶನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಉದ್ಘಾಟಿಸಲಿದ್ದು, ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯದ ಸಂಚಾಲಕ ಮೌಲಾನ ಯು.ಅಬ್ದುಸಲಾಮ್, ಮಡಿಕೇರಿ ಸಂತ ಮೈಕಲರ ದೇವಾಲಯದ ಧರ್ಮಾಧಿಕಾರಿ ರೆ.ಫಾ.ಜಾಜ್ ದೀಪಕ್ ಎ. ದಿವ್ಯ ಸಾನಿಧ್ಯ ಹಾಗೂ ಆಶೀರ್ವಚನ ನೀಡಲಿದ್ದಾರೆ. ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಹಿರಿಯ ಟ್ರಸ್ಟಿ ಹಾಗೂ ಮಾಜಿ ಸಚಿವ ಎಂ.ಸಿ.ನಾಣಯ್ಯ ಪುಸ್ತಕ ಬಿಡುಗಡೆ ಮಾಡಲಿದ್ದು, ಕುಂದುರುಮೊಟ್ಟೆ ಶ್ರೀ ಚೌಟಿ…
ಮಡಿಕೇರಿ ಜ.23 NEWS DESK : ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಸೀಮಿತ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಬೇಕೆಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ಶಾಖೆಗೆ ಸುಮಾರು ಮೂರು ದಶಕಗಳ ಹಿಂದೆ ಮಂಜೂರಾಗಿದ್ದ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಗೊಂಡಿದೆ. 1985 ರಿಂದ ಜಿಲ್ಲಾ ಕೇಂದ್ರ್ರದಲ್ಲಿ ಅಂಬೇಡ್ಕರ್ ಭವನ ಮತ್ತು ಅಂಬೇಡ್ಕರ್ ಪತಿಮೆಗೆ ಆಗ್ರಹಿಸಿ ನಿರಂತರವಾದ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಈ ಹಿನ್ನೆಲೆ 1991 ರ ಸುಮಾರಿಗೆ ನಗರ ವ್ಯಾಪ್ತಿಯ 10 ಸೆಂಟ್ಸ್ ಜಾಗವನ್ನು ಜಿಲ್ಲಾಡಳಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿ ಶಾಖೆಗೆ ಭವನ ನಿರ್ಮಾಣಕ್ಕೆಂದು ಮಂಜೂರು ಮಾಡಿತು ಎಂದರು. ಅಂದಿನ ದಿನಗಳಲ್ಲಿ ಡಾ.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಭವನ ನಿರ್ಮಾಣ ಸಮಿತಿಯನ್ನು ರಚಿಸಲಾಯಿತು. ನಂತರ ಸಮಿತಿ ಬದಲಾವಣೆಯಾಗಿದ್ದು, ಅದರಲ್ಲಿ ದಲಿತ ಸಂಘರ್ಷ ಸಮಿತಿಗೆ…
ಮಡಿಕೇರಿ ಜ.23 NEWS DESK : ಸಂವಿಧಾನದ ರಕ್ಷಕರು ನಾವೇ ಎಂದು ಹೇಳಿಕೊಳ್ಳುವ ಪಕ್ಷವು ಸ್ವಾತಂತ್ರ್ಯ ಪರ್ವ ಮತ್ತು ನಂತರದ ಅವಧಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ ಎನ್ನುವ ವಿಚಾರಗಳನ್ನು ಜನತೆಯ ಮುಂದಿಡುವ ಉದ್ದೇಶದಿಂದ ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ಸಂಘಟನೆ ಜ.27ರಂದು ಮಡಿಕೇರಿಯಲ್ಲಿ ‘ಸಂವಿಧಾನ್ ಸಮ್ಮಾನ್ ಅಭಿಯಾನ್’ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ವಿ.ಕೆ.ಲೋಕೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ದಲಿತ, ಹಿಂದುಳಿದ ವರ್ಗಗಳ ಸಂಘಟನೆಗಳ ಸಹಕಾರದೊಂದಿಗೆ ನಡೆಯುವ ಸಂವಿಧಾನ್ ಸಮ್ಮಾನ್ ಅಭಿಯಾನ್ ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಉದ್ಘಾಟಿಸಲಿದ್ದಾರೆ. ಮದೆ ಮಹದೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಸಾಮಾಜಿಕ ನ್ಯಾಯ ವೇದಿಕೆಯ ಕಾರ್ಯದರ್ಶಿ ಪರಮಾನಂದ ಎಂ.ಎಸ್.ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ವಿಕಾಸ್ ಪುತ್ತೂರು ಅವರು ರಚಿಸಿರುವ ‘ಸಂವಿಧಾನ ಬದಲಿಸಿದ್ದು ಯಾರು’ ಎನ್ನುವ…
ಬೆಂಗಳೂರು, ಜನವರಿ 23 NEWS DESK : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್ ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು. ರಾಗಿ ತಿಂದವನು ನಿರೋಗಿ ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮ :: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ…
ನಾಪೋಕ್ಲು ಜ.23 NEWS DESK : ದೇಶದಲ್ಲಿ ವಿಶೇಷ ಆಚಾರ, ವಿಚಾರ, ಪದ್ಧತಿ ಪರಂಪರೆಗಳನ್ನು ಹೊಂದಿರುವ ಹೆಮ್ಮೆಯ ಜಿಲ್ಲೆ ನಮ್ಮದು ಎಂದು ಭಾಗಮಂಡಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜೆ.ದಿವಾಕರ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೋರಂಗಾಲ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ದಿ. ಡಾ.ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ರಣ್ಣ ದತ್ತಿ ಉಪನ್ಯಾಸ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾದರು. ಎಲ್ಲರನ್ನೂ ಸರಿ ಸಮಾನರಾಗಿ ಕಾಣುವ ಸಮಾಜ ನಮ್ಮ ಜಿಲ್ಲೆಯಲ್ಲಿದೆ. ಕೊಡಗಿನ ನೆಲ ಜಲವನ್ನು ಕವಿ ಪಂಜೆ ಮಂಗೇಶರಾಯರು ದೇವ ಸನ್ನಿಧಿ ಎಂದು ಬಣ್ಣಿಸಿದ್ದಾರೆ. ಶುದ್ಧ ಗಾಳಿ, ಸ್ವಚ್ಛ ನೆಲ, ನಮ್ಮ ಜಿಲ್ಲೆಯಲ್ಲಿದೆ ಎಂದು ಸಮೀಕ್ಷೆ ಹೇಳಿದೆ. ಹುಟ್ಟಿನಿಂದ ಸಾವಿನವರೆಗೆ ನಮ್ಮಲ್ಲಿ ವಿಶಿಷ್ಟ ಪದ್ದತಿಗಳು ಇದ್ದರೂ ಸಾವು ನೋವಿನಲ್ಲೂ ಸಹಾಯದ ಪದ್ಧತಿ ಇಂದಿಗೂ ನಡೆದು…






