ಮಡಿಕೇರಿ ಮಾ.10 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ(49) ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸಂತಾಪ ಸೂಚಿಸಿದ್ದಾರೆ. ಪಕ್ಷಾತೀತ ನಾಯಕ ಶಿವು ಮಾದಪ್ಪ ಅವರ ಅಗಲಿಕೆ ಅತೀವ ನೋವು ತಂದಿದೆ, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದ ಶಿವು ಮಾದಪ್ಪ ಅವರು ಸ್ನೇಹಜೀವಿಯಾಗಿದ್ದರು. ಸಮಾಜಸೇವೆಯೊಂದಿಗೆ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರ ಅಕಾಲಿಕ ನಿಧನ ದಿಗ್ಭ್ರಮೆ ಮೂಡಿಸಿದೆ ಎಂದು ಎ.ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.
ಲೇಖಕ: admin
ಕುಶಾಲನಗರ ಮಾ.10 NEWS DESK : ಸ್ತ್ರೀ ಯು ನಾಲ್ಕು ಗೋಡೆಗಳ ನಡುವೆ ಕಾಲ ಕಳೆಯುವ ಕಾಲವೀಗ ಕಣ್ಮರೆಯಾಗಿ ಪುರುಷ ಪ್ರಧಾನ ಸಮಾಜದಲ್ಲಿ ಪುರುಷನಷ್ಟೇ ಧೀಮಂತಿಕೆಯಿಂದ ಬದುಕಲು ಸಾಧ್ಯವಿದೆ. ಶಕ್ತಿ ಸಮಾಜದ ಬೆಳವಣಿಗೆಗೆ ಪೂರಕವಾಗಿದೆ ಎಂದು ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ ಅಧ್ಯಾಪಕ ಕೆ.ಪಿ. ಜಯಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸಹಯೋಗದಲ್ಲಿ ಕುಶಾಲನಗರ ಪಟ್ಟಣದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ತಳಮಟ್ಟದಿಂದ ಮೇಲೆ ಬಂದು ಸಮಾಜದ ಎಲ್ಲಾ ಸ್ತರಗಳಲ್ಲಿ ಮಹಿಳೆಯರು ಬೆಳೆದಿದ್ದಾರೆ. ಮಹಿಳೆಯು ಮಾತೃ ಸ್ವರೂಪಿ, ತನ್ನ ಜೀವನದಲ್ಲಿ ಎಲ್ಲಾ ಹಂತದ ಕಷ್ಟಗಳನ್ನು ಸಹನೆಯಿಂದ ದಾಟಿಕೊಂಡು ಮುನ್ನಡೆಯುತ್ತಾಳೆ. ಈ ಹಿಂದೆ ಮಹಿಳೆಯು ಕೇವಲ ಅಡುಗೆ ಕೋಣೆಗೆ ಮಾತ್ರ ಸೀಮಿತವಾಗುತ್ತಿದ್ದಳು. ಆದರೆ ಪ್ರಸ್ತುತ ಸಮಾಜದ ಎಲ್ಲಾ ರಂಗಗಳಲ್ಲಿ ಪುರುಷನ ಸಮಾನಾಗಿ…
ಕುಶಾಲನಗರ ಮಾ.10 NEWS DESK : ಕುಟುಂಬ ಹಾಗೂ ಸಮಾಜದಲ್ಲಿ ಹೆಣ್ಣು ತ್ಯಾಗದ ಸಂಕೇತ. ಹೆಣ್ಣನ್ನು ಸೌಂದರ್ಯಕ್ಕಿಂತ ಸಾಮರ್ಥ್ಯದ ಮೂಲಕ ಅರ್ಥ ಮಾಡಿಕೊಳ್ಳಬೇಕು. ತಾಯಿಯಿಲ್ಲದೆ ಒಂದು ದಿನವೂ ಮನೆ ಪರಿಪೂರ್ಣವಾಗುವುದಿಲ್ಲ ಎಂದು ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ಅಧ್ಯಕ್ಷೆ ತೇಜ ದಿನೇಶ್ ಹೇಳಿದರು. ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ವತಿಯಿಂದ ಸ್ಥಳೀಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳೆಯರು ಇಂದು ಸಾಮಾಜಿಕ , ರಾಜಕೀಯ ಹಾಗೂ ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುವ ಮೂಲಕ ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಎತ್ತಿಹಿಡಿಯುತ್ತಿದ್ದಾಳೆ ಎಂದರು. ಸಮಾಜದಲ್ಲಿ ಮಹಿಳೆ ವಿವಿಧ ರೀತಿಯ ಸ್ಥಾನಗಳನ್ನು ಅಲಂಕರಿಸುವ ಮೂಲಕ ನೀಡಿರುವ ಜವಾಬ್ದಾರಿಯನ್ನು ನಿರ್ವಹಣೆ ಮಾಡುತ್ತಿದ್ದಾಳೆ. ಅದರ ಜತೆಯಲ್ಲಿ ಆಕೆಗೆ ಆತ್ಮವಿಶ್ವಾಸ ತುಂಬುವ ಕೆಲಸ ಸಮಾಜದಿಂದ ಆಗಬೇಕಿದೆ ಎಂದು ತೇಜ ದಿನೇಶ್ ಅಭಿಪ್ರಾಯಪಟ್ಟರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪಿ.ನವೀನ್ ಕುಮಾರ್ ಮಾತನಾಡಿ, ‘ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ.…
ಮಡಿಕೇರಿ NEWS DESK ಮಾ.9 : ಕಾಫಿ ಖರೀದಿ ಸಂದರ್ಭ ರಶೀದಿ ನೀಡದೆ ಹಾಗೂ ಮಾರಾಟ ಮಾಡುವವರ ಸಂಪೂರ್ಣ ವಿವರವನ್ನು ಪಡೆದುಕೊಳ್ಳದೆ ವ್ಯವಹಾರ ನಡೆಸಿದಲ್ಲಿ ಮತ್ತು ಕಳ್ಳತನ ಮಾಡಿರುವ ಕಾಫಿಯನ್ನು ಖರೀದಿ ಮಾಡಿರುವುದು ಕಂಡುಬಂದಲ್ಲಿ ಕಾಫಿ ಟ್ರೇಡರ್ಸ್ ಮಾಲೀಕರನ್ನು ನೇರ ಹೊಣೆಗಾರರನ್ನಾಗಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ NEWS DESK ಮಾ.9 : ಕೊಡಗು ಗೌಡ ಯುವ ವೇದಿಕೆ : ಮೈಸೂರು ಘಟಕದ ನೂತನ ಕಾರ್ಯಕಾರಣಿ >> ಅಧ್ಯಕ್ಷ ಮೊಟ್ಟನ ಕೌಶಿಕ್, ಉಪಾಧ್ಯಕ್ಷ ಗುಡ್ಡೆಮನೆ ಕಿರಣ್, ಕಾರ್ಯದರ್ಶಿ ಹಿರನ್ ಕೊಂಬAಡ, ಸಹ ಕಾರ್ಯದರ್ಶಿ ಕೃತಿಕ ಕಡ್ಯದ, ಖಜಾಂಚಿ ಯೋಗೇಶ್, ಕ್ರೀಡಾ ಸಮಿತಿ ಆಕಾಶ್ ಕಲ್ಪಡ, ಅನ್ವಿತ ಕಾಳೆರಮ್ಮನ, ಸಾಂಸ್ಕೃತಿಕ ಸಮಿತಿ ರಕ್ಷಿತ್ ಪಾಣತ್ತಲೆ, ಸಚಿತ ಕುಂಟುಪುಣಿ, ಸಾಮಾಜಿಕ ಜಾಲತಾಣ ಕಡ್ಯದ ನವೀನ್
ಮಡಿಕೇರಿ NEWS DESK ಮಾ.9 : ವಿವಿಧ ತೋಟಗಳ ಕಣದಲ್ಲಿ ಒಣಗಿಸಲು ಇಟ್ಟಿದ್ದ ಕಾಫಿಯನ್ನು ಕಳವು ಮಾಡಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮದ ಶಾಂತಿನಗರದ ನಿವಾಸಿಗಳಾದ ಕೆ.ಬಿ.ಶಫೀಕ್ (26), ಟಿ.ಜೆ.ಪ್ರಾನ್ಸಿಸ್ (29), ಪೊನ್ನಪ್ಪಸಂತೆ ಗ್ರಾಮದ ಎಂ.ಬಿ.ಯಾಸಿನ್ (28) ಹಾಗೂ ನೋಕ್ಯ ಗ್ರಾಮದ ಅನೀಸ್ ಎಂ.ಜಿ (24) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ 2550 ಕೆ.ಜಿ ಕಾಫಿ, ಒಂದು ಪಿಕಪ್ ವಾಹನ, ಒಂದು ಮಾರುತಿ ಕಾರು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ-ಬಾಣಂಗಾಲ ಗ್ರಾಮದ ಹುಂಡಿ ಪ್ರದೇಶದ ನಿವಾಸಿ ಸಜಿ ಥಾಮಸ್ ಅವರ ತೋಟದ ಕಣದಲ್ಲಿ ಒಣಗಿಸಲು ಇಟ್ಟಿದ್ದ ಅಂದಾಜು 12 ಚೀಲ ಹಸಿ ಕಾಫಿ ಇದೇ ಜ.16 ರಂದು ಮತ್ತು 800 ಕೆ.ಜಿ ಹಸಿ ಕಾಫಿ ಫೆ.26 ರಂದು ಕಳ್ಳತನವಾಗಿತ್ತು. ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದ ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದರು. ಮಡಿಕೇರಿ…
ಮಡಿಕೇರಿ NEWS DESK ಮಾ.9 : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮಾಡುತಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಸತ್ಯನಗರದ ನಿವಾಸಿ ಇಲಿಯಾಸ್ (47) ಬಂಧಿತ ಆರೋಪಿಯಾಗಿದ್ದು, 30 ಕೆಜಿ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ನಗರದ ನಿಸರ್ಗ ಬಡಾವಣೆಯ ಕಿರುಮಕ್ಕಿ ಜಂಕ್ಷನ್ ಸಮೀಪ ಗಾಂಜಾ ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಡಿವೈಎಸ್‌ಪಿ ಮಹೇಶ್ ಕುಮಾರ್.ಎಸ್, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್‌ಐ ವಾಣಿ ಶ್ರೀ ಬಿ.ಎಸ್ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದರು. ಪೊಲೀಸರ ಕಾರ್ಯದಕ್ಷತೆಯ ಕುರಿತು ಶ್ಲಾಘನೆ ವ್ಯಕ್ತಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ಮಾದಕ ವಸ್ತು ದಂಧೆ ಕುರಿತು ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಡಿಕೇರಿ NEWS DESK ಮಾ.9 : ಕೊಡಗು ಜಿಲ್ಲೆಯ ಮೇಲಿನ ಅಪಾರ ಕಾಳಜಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ. ಇದನ್ನು ಸಹಿಸದ ಬಿಜೆಪಿ ಮಂದಿ ಕೇವಲ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಆಸಕ್ತಿಯಿಂದ ಕೊಡಗು ಜಿಲ್ಲೆಗೆ ಹಿಂದೆಂದಿಗಿಂತಲೂ ಅಧಿಕ ಅನುದಾನ ಈ ಬಾರಿಯ ಬಜೆಟ್ ನಲ್ಲಿ ಹರಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಶಾಸಕದ್ವಯರ ಮೇಲೆ ಜಿಲ್ಲೆಯ ಜನರ ಪ್ರೀತಿ ಹೆಚ್ಚಾಗುತ್ತಲೇ ಇದ್ದು, ಇದನ್ನು ಸಹಿಸದ ಬಿಜೆಪಿ ವಿನಾಕಾರಣ ಪ್ರತಿಭಟನೆಗಳನ್ನು ಮಾಡಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದ್ದಾರೆ. ಮಡಿಕೇರಿ – ದೋಣಿಗಲ್ -ಮಾದಾಪುರ – ಸೋಮವಾರಪೇಟೆ – ಶನಿವಾರಸಂತೆ – ಕೊಡ್ಲಿಪೇಟೆಯ 95 ಕಿ.ಮೀ ಅಂತರದ ಮಾರ್ಗವನ್ನು ಸರ್ವಋತು ರಸ್ತೆಯನ್ನಾಗಿ…
ಮಡಿಕೇರಿ NEWS DESK ಮಾ.9 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಮತ್ತು ಅತ್ಯುತ್ತಮ ವರದಿಗಳಿಗೆ ನೀಡಲಾಗುವ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ, ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಮಾಜ ಸೇವಕ ಮಂಡಿಬೆಲೆ ರಾಜಣ್ಣ ಮಾತನಾಡಿ, ಪತ್ರಿಕೋದ್ಯಮ ಇಂದು ಕವಲು ದಾರಿಯಲ್ಲಿದ್ದು, ನಷ್ಟದ ಹಾದಿಯಲ್ಲಿದೆ. ಪತ್ರಕರ್ತರು ವೃತ್ತಿಯನ್ನಾಗಿ ತೆಗೆದುಕೊಂಡು ಪತ್ರಿಕೆಯಲ್ಲಿ ಕೆಲಸ ಮಾಡಿದಲ್ಲಿ ಜೀವನ ನಡೆಸುವುದು ಕಷ್ಟು. ಇದನ್ನು ಕೇವಲ ಪ್ರವೃತ್ತಿಯನ್ನಾಗಿ ಮಾತ್ರ ತೆಗೆದುಕೊಳ್ಳಬಹುದಾಗಿದೆ. ಹೆಚ್ಚಿನ ಪತ್ರಕರ್ತರು ಇಂದು ವೃತ್ತಿಗೆ ಅಗೌರವ ತರುವ ಕೆಲಸ ಮಾಡುತ್ತಿರುವುದನ್ನು ಕಾಣಬಹುದು. ಮೊದಲು ವೃತ್ತಿಗೆ ಗೌರವ ತರುವ ಕೆಲಸವನ್ನು ಪತ್ರಕರ್ತರಿಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉದ್ಯಮಿ ನಾಪಂಡ ಮುತ್ತಪ್ಪ ಮಾತನಾಡಿ, ಯಾವುದೇ ಸಂಘಟನೆಗಳು ವಿಭಜನೆಗೊಳ್ಳುತ್ತಾ ಸಾಗಿದಲ್ಲಿ, ಅದು ತನ್ನ ಶಕ್ತಿಯನ್ನು ಕಳೆದುಕೊಳ್ಳುತ್ತದೆ. ಇದರಿಂದಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ. ಹಿಂದೆ ಪತ್ರಿಕೆಯಲ್ಲಿ ಹಲವಾರು ತನಿಖಾ ವರದಿಗಳು ಬರುತ್ತಿದ್ದವು. ಆದರೆ, ಇಂದು ಅಂತಹ ವರದಿಗಳು ಪತ್ರಿಕೆಯಿಂದ ಮಾಯವಾಗಿವೆ.…
ಮಡಿಕೇರಿ NEWS DESK ಮಾ.9 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 16ನೇ ಬಜೆಟ್ ಜನಸಾಮಾನ್ಯರ ಪರವಾಗಿದೆ. ಆದರೆ ಬಿಜೆಪಿ ಇದನ್ನು ಅಲ್ಪಸಂಖ್ಯಾತರ ಬಜೆಟ್ ಎಂದು ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದೆಯೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಹೆಚ್.ಯು.ಇಸಾಕ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರ್ಕಾರದ ಬಜೆಟ್ ಕೊಡಗು ಜಿಲ್ಲೆಗೂ ವರದಾನವಾಗಿದ್ದು, ಇಬ್ಬರು ಶಾಸಕರ ಪ್ರಯತ್ನದಿಂದ ಆರೋಗ್ಯ, ಶಿಕ್ಷಣ ಕ್ಷೇತ್ರ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ದೊಡ್ಡ ಪ್ರಮಾಣದ ಅನುದಾನ ಘೋಷಣೆಯಾಗಿದೆ. ಜನಪರ ಕಾಳಜಿ ವಹಿಸಿರುವ ಶಾಸಕದ್ವಯರು ಅಭಿನಂದನಾರ್ಹರು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಯ ಮೇಲೂ ಹೆಚ್ಚಿನ ಕಾಳಜಿ ತೋರಿ ಸರ್ವಜನರ ಏಳಿಗೆಗಾಗಿ ಸಮಾನ ಅನುದಾನ ಹಂಚಿಕೆ ಮಾಡಿದ್ದಾರೆ. ಬಜೆಟ್ ಗಾತ್ರದಲ್ಲಿ ಕೇವಲ ಶೇ.1 ರಷ್ಟು ಅನುದಾನ ಮಾತ್ರ ಅಲ್ಪಸಂಖ್ಯಾತರಿಗೆ ಮೀಸಲಿಡಲಾಗಿದೆ. ಆದರೆ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಇದು ಅಲ್ಪಸಂಖ್ಯಾತರ ಬಜೆಟ್ ಎಂದು ಪ್ರತಿಬಿಂಬಿಸಿ ರಾಜಕೀಯ ಲಾಭ ಪಡೆಯುವ ಯತ್ನ…






