ಮಡಿಕೇರಿ ಜ.22 NEWS DESK : ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಜನಾಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಕೊಡಗು ಜಿಲ್ಲೆಯ ಪೈಕೇರ ಮನೋಹರ್ ಮಾದಪ್ಪ, ಉಪಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ ಹಾಗೂ ಕಾರ್ಯದರ್ಶಿಯಾಗಿ ದುಗ್ಗಳ ಕಪಿಲ್ ಆಯ್ಕೆಯಾಗಿದ್ದಾರೆ. ಸುಳ್ಯ ಗೌಡ ಸಮಾಜದಲ್ಲಿ ನಿರ್ಗಮಿತ ಅಧ್ಯಕ್ಷ ಮುಂಡೋಡಿ ನಿತ್ಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಕೋಶಾಧಿಕಾರಿಯಾಗಿ ಪುರುಷೋತ್ತಮ ಮುಂಗಲಿ ಮನೆ, ನಿರ್ದೇಶಕರುಗಳಾಗಿ ಅಂಬೆಕಲ್ ನವೀನ್ ಕುಶಾಲಪ್ಪ, ಎಂ.ಪಿ.ಉಮೇಶ್, ಪುದಿಯನೆರವನ ರಿಷಿತ್ ಮಾದಯ್ಯ, ಅಶೋಕ್ ಶೇಡಿ, ಕೆ.ವಿಜಯ ಗೌಡ ವೇಣೂರು, ಕಿಶೋರ್ ವಲಂಬುರ, ಯಾಲದಾಳು ಸೋಮಯ್ಯ, ಕೊಂಬಾರನ ರೋಶನ್, ಜ್ಞಾನೇಶ್ ಸುಳ್ಯ, ಬಾಲಾಡಿ ಮನೋಜ್, ಪ್ರವೀಣ್ ಕುಂಟ್ಯಾನ, ಪೊನ್ನಚ್ಚನ ಮೋಹನ್, ಧನಂಜಯ್ ಅಡ್ಪಂಗಾಯ ಸೇರಿದಂತೆ ಕೊಡಗಿನಿಂದ 8 ಮತ್ತು ದಕ್ಷಿಣ ಕನ್ನಡದಿಂದ 9 ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಸಲಹಾ ಸಮಿತಿಯ ಸದಸ್ಯರಾಗಿ ಗಂಗಾಧರ, ಡಿ.ಬಿ.ಬಾಲಕೃಷ್ಣ, ಎಸ್.ಆರ್.ಸೂರಯ್ಯ,…
ಲೇಖಕ: admin
ಕುಶಾಲನಗರ ಜ.22 NEWS DESK : ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕ ಸಂಘದ ಆಶ್ರಯದಲ್ಲಿ ಜಿಲ್ಲೆಯ ಸೌಂದರ್ಯ ತಜ್ಞರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. ಕುಶಾಲನಗರ ಸಮೀಪದ ಅತಿಥಿ ಕಂಫರ್ಟ್ಸ್ ಸಭಾಂಗಣದಲ್ಲಿ ಬೆಂಗಳೂರು ಬ್ಯೂಟಿ ಗ್ಯಾಂಗ್ ಸಂಸ್ಥೆಯ ತಜ್ಞರಿಂದ ಸಂಘದ ಸದಸ್ಯರಿಗೆ ಆಧುನಿಕ ಕೇಶ ವಿನ್ಯಾಸದ ಬಗ್ಗೆ ತರಬೇತಿ ಮತ್ತು ಕಾರ್ಯಾಗಾರ ನಡೆಯಿತು. ತಾಲ್ಲೂಕು ಸಂಘದ ಅಧ್ಯಕ್ಷೆ ನಾಗಮಣಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಗಾರವನ್ನು ಕೊಡಗು ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ವನಿತಾ ಚಂದ್ರಮೋಹನ್ ಉದ್ಘಾಟಿಸಿದರು. ಜಿಲ್ಲಾ ಬ್ಯೂಟಿಷಿಯನ್ ಅಸೋಸಿಯೇಷನ್ ಅಧ್ಯಕ್ಷೆ ರತ್ನ ಯತೀಶ್ ಪಾಲ್ಗೊಂಡು ಕಾರ್ಯಾಗಾರಕ್ಕೆ ಶುಭ ಕೋರಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ 70ಕ್ಕೂ ಅಧಿಕ ಸೌಂದರ್ಯವರ್ಧಕ ತಜ್ಞರು ಪಾಲ್ಗೊಂಡಿದ್ದರು. ಕುಶಾಲನಗರ ತಾಲ್ಲೂಕು ಸಂಘದ ಕಾರ್ಯದರ್ಶಿ ಮಧು ಲೋಕೇಶ್ , ಉಪಾಧ್ಯಕ್ಷೆ ಡೆಸಿಲ್ಲ, ಪ್ರಧಾನ ಕಾರ್ಯದರ್ಶಿ ನವ್ಯ, ಸಂಘಟನಾ ಕಾರ್ಯದರ್ಶಿ ತಾಜ್, ಖಜಾಂಚಿ ಲತಾ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಪವಿತ್ರ ರಾಜೇಶ್, ಕಾರ್ಯದರ್ಶಿ ಚೇತನ, ಮಡಿಕೇರಿ ತಾಲ್ಲೂಕು…
ಕುಶಾಲನಗರ ಜ.22 NEWS DESK : ಉಡುಪಿ ಜಿಲ್ಲೆಯಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ 2025 ರಲ್ಲಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿನಿ ಬಳಪಂಡ ಪಂಚಮಿ ಬೆಳ್ಳಿ ಪದಕಗಳಿಸಿದ್ದಾಳೆ. ಪಂಚಮಿ ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕುಶಾಲನಗರದ ನಿವಾಸಿ ಬಳಪಂಡ ಪವನ್ ಬಿದ್ದಪ್ಪ, ಪವಿತ್ರ ದಂಪತಿಯ ಪುತ್ರಿ.
ಮಡಿಕೇರಿ ಜ.22 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಮುಂದಿನ ದಿನಗಳಲ್ಲಿ ಜೀವಹಾನಿ ಸಂಭವಿಸಿದರೆ ಅದಕ್ಕೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಕಾಡಾನೆಗಳ ಹಿಂಡು ಮರಿಯಾನೆಗಳೊಂದಿಗೆ ಕಾಫಿ ತೋಟಗಳಲ್ಲೇ ಬೀಡು ಬಿಟ್ಟಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕಗೊಂಡಿದ್ದಾರೆ. ಇದು ಕಾಫಿ ಕೊಯ್ಲಿನ ಸಮಯವಾಗಿದ್ದು, ಕಾಡಾನೆಗಳ ದಾಳಿಯ ಆತಂಕದಲ್ಲಿ ಕಾರ್ಮಿಕರು ತೋಟಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ, ಇದರಿಂದ ಬೆಳೆಗಾರರಿಗೆ ನಷ್ಟವಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನಿತ್ಯ ಜೀವಭಯದಿಂದಲೇ ಓಡಾಡುತ್ತಿದ್ದಾರೆ. ಗ್ರಾಮಸ್ಥರ ಕಣ್ಣೊರೆಸಲು ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಳ್ಳುತ್ತದೆ. ಆದರೆ ತಿತಿಮತಿ ಮತ್ತು ಪೊನ್ನಂಪೇಟೆ ವಿಭಾಗದ ಅರಣ್ಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸದೆ ಇರುವುದರಿಂದ ಕಾಡಾನೆಗಳು ಕಾಡಿಗೆ ಮರಳದೆ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸ್ಥಳಾಂತರಗೊಳ್ಳುತ್ತಿವೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎರಡೂ…
ಮಡಿಕೇರಿ NEWS DESK ಜ.22 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಕೊಡಗು ಜಿಲ್ಲಾ ಸಮಿತಿ ಜ.23 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಅಧ್ಯಕ್ಷ ಜಿ.ಕೆ.ದಿನೇಶ್ ಹಾಗೂ ಉಪಾಧ್ಯಕ್ಷ ಹೆಚ್.ಎಸ್.ಯೋಗೇಶ್, ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕನಿಷ್ಟ ವೇತನ ರೂ.31 ಸಾವಿರ ಪಾವತಿ ಮಾಡಬೇಕು, ನೇರವಾಗಿ ಇಲಾಖೆಯಿಂದ ವೇತನ ನೀಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸಿಬ್ಬಂದಿಗಳ ಸಂಖ್ಯೆ ಕಡಿತ ಆದೇಶ ರದ್ದು ಮಾಡಬೇಕು, ಜೀತ ಪದ್ದತಿಯಿಂದ ಮುಕ್ತಿಗೊಳಿಸಬೇಕು, ಬೀದರ್ ಮಾದರಿಯ ಸಹಕಾರ ಸಂಘವನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಣೆ ಮಾಡಬೇಕು, ವಾರದ ರಜೆ, ಬಾಕಿ ಸಂಬಳ, ಹೆರಿಗೆ ರಜೆಯ ವೇತನವನ್ನು ನೀಡಬೇಕು, ಕೆಲಸದ ಸಮಯವನ್ನು ನಿಗದಿಪಡಿಸಬೇಕು, ಇಎಸ್‌ಐ ಮತ್ತು ಪಿಎಫ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ…
ಕುಶಾಲನಗರ ಜ.22 NEWS DESK : ವಾರ್ಷಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ಸಮ್ಮೇಳನದಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳ ತಂಡ ತುಮಕೂರು ತೆರಳಿ ಸಮ್ಮೇಳನದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಜನವರಿ 2024 ರಿಂದ ಡಿಸೆಂಬರ್ ಅಂತ್ಯದ ತನಕ ತಾಲೂಕು ಸಂಘದ ಮೂಲಕ ಸುಮಾರು 60ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಪ್ರಶಸ್ತಿ ಪ್ರದಾನ ಸಂದರ್ಭ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗೂಡೂರು, ಪ್ರಧಾನ ಕಾರ್ಯದರ್ಶಿ ಬಿ.ಸಿ.ಲೋಕೇಶ್, ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಸಂಘದ ಜಿಲ್ಲಾಧ್ಯಕ್ಷರಾದ ಸವಿತಾ ರೈ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನು ಕಾರಿಯಪ್ಪ, ರಾಜ್ಯ ಸಮಿತಿ ಸದಸ್ಯರಾದ ಟಿ.ಎನ್.ಮಂಜುನಾಥ್, ರಾಷ್ಟ್ರೀಯ ಸಮಿತಿ ಸದಸ್ಯರಾದ ಸುನಿಲ್ ಪೊನ್ನೆಟ್ಟಿ, ತಾಲ್ಲೂಕು ಸಂಘದ ಪ್ರಧಾನ…
ಮಡಿಕೇರಿ ಜ.22 NEWS DESK : ರಾಷ್ಟ್ರೀಯ ಔಷಧಿ ವ್ಯಾಪಾರಸ್ಥರ ಸಂಘದ ಸುವರ್ಣ ಮಹೋತ್ಸವ ವರ್ಷಾಚರಣೆ ಹಿನ್ನಲೆ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ಜ.24 ರಂದು ಮಡಿಕೇರಿಯಲ್ಲಿ ರಕ್ತ ಸಂಗ್ರಹಣಾ ಶಿಬಿರ ನಡೆಯಲಿದೆ. ನಗರದ ರೋಟರಿ ಸಭಾಂಗಣದಲ್ಲಿ ಬೆಳಗ್ಗೆ 8.45 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಔಷಧಿ ವ್ಯಾಪಾರಸ್ಥರ ಸಂಘದ ಸದಸ್ಯರು ರಕ್ತ ದಾನ ಮಾಡಲಿದ್ದಾರೆ. ಶಿಬಿರವನ್ನು ಜಿಲ್ಲಾ ಔಷಧಿ ಇಲಾಖೆಯ ನಿಯಂತ್ರಕ ಅಧಿಕಾರಿ ಗುರುನಾಥ್ ಮಗನಗೇರಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ರಕ್ತ ನಿಧಿ ಕೇಂದ್ರದ ಅಧಿಕಾರಿ ಡಾ. ಕೆ.ಪಿ.ಕರುಂಬಯ್ಯ, ಪತ್ರಕರ್ತ ಅನಿಲ್ ಹೆಚ್.ಟಿ. ಪಾಲ್ಗೊಳ್ಳಲಿದ್ದಾರೆ. ಸಂಘದ ಜಿಲ್ಲಾ ಅಧ್ಯಕ್ಷ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅಂಬೇಕಲ್ ಜೀವನ್ ಕುಶಾಲಪ್ಪ, ಜಿಲ್ಲಾ ಖಜಾಂಚಿ ಪ್ರಸಾದ್ ಗೌಡ, ಶಿಬಿರ ಸಂಚಾಲಕ ವಸಂತ್ ಕುಮಾರ್ ಹಾಜರಿರುತ್ತಾರೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಐ.ಪುರುಷೋತ್ತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ಜ.22 NEWS DESK : ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಎ.ಎಂ.ಡಿಯಾ ಪ್ರಥಮ ಸ್ಥಾನ ಪಡೆದಿದ್ದಾಳೆ. ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಎ.ಎಂ.ಡಿಯಾ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾಳೆ. ಇವಳು ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಮತ್ತು ನೀನಾ ಮಾಚಯ್ಯ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.22 NEWS DESK : ಬೈಲುಕುಪ್ಪೆ ಟಿಬೆಟಿಯನ್ ಶಿಬಿರಕ್ಕೆ ಆಗಮಿಸಿರುವ ಟಿಬೆಟಿಯನ್ 14 ನೇ ಧರ್ಮಗುರು ದಲೈಲಾಮಾ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಮ್ಮ ಪತ್ನಿ ದಿವ್ಯಾ ಅವರೊಂದಿಗೆ ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ವಿಶೇಷವಾದ ಕಾಫಿ ಹಾರವನ್ನು ಹಾಕುವುದರ ಮೂಲಕ ದಲೈಲಾಮಾ ಅವರನ್ನು ಗೌರವಿಸಿದರು.
ಮಡಿಕೇರಿ ಜ.22 NEWS DESK : ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಪೊನ್ನಂಪೇಟೆ ಸಮೀಪ ಕೋಣನಕಟ್ಟೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ನಸುಕಿನ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅವರ ನಿವಾಸಕ್ಕೆ ಲಗ್ಗೆ ಇಟ್ಟಿದೆ. ಮನೆಯ ಸುತ್ತಲೂ ಓಡಾಡಿರುವ ಕಾಡಾನೆ ಹೂಕುಂಡಗಳನ್ನು ಹಾನಿಗೊಳಿಸಿದೆ. ಕಾಡಾನೆ ಬಂದು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮಸ್ಥರು ಕಾಡಾನೆ ಹಾವಳಿ ಕುರಿತು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.






