ಮಡಿಕೇರಿ ಜ.21 NEWS DESK : ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರು ಐದನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಾದಯ್ಯ ನಾಪಂಡ, ನಿರ್ದೇಶಕರಾಗಿ ಹೆಚ್.ಆರ್.ವಾಸಪ್ಪ, ಮಹೇಶ್ ಪಾಡಿಯಮ್ಮನ, ಕರಿಯಪ್ಪ ನಾಯ್ಕ, ಭುವನೇಶ್ವರ ನಿಡ್ಯಮಲೆ, ಪೂಣಚ್ಚ ಅಮ್ಮಾಟಂಡ, ನಾಚಪ್ಪ ಮಾದೆಯಂಡ, ಜಯಪ್ರಕಾಶ್ ಕುಯ್ಯಂತೋಡು, ರವಿ ಕಾಳನ, ಪ್ರೀಣಾ ಮಡೆಯಂಡ, ಸುಶೀಲ ಕೂರನ, ಹೇಮಲತ ಮಂಡಿರ, ಬೀನಾ ಬೊಳ್ಳಮ್ಮ ಅಲ್ಲಾರಂಡ, ರಮ್ಯ ಕೇಟೋಳಿರ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಮಾಜಿ ಅಧ್ಯಕ್ಷ ಕಾವೇರಪ್ಪ ಬಲ್ಲಚಂಡ, ಮಾಜಿ ಉಪಾಧ್ಯಕ್ಷ ಮುದ್ದಯ್ಯ ಕುಂಡ್ಯೋಳಂಡ, ಗಣಪತಿ ಕೊಂಗೀರಂಡ, ಆರ್‍ಎಂಸಿ ಮಾಜಿ ಅಧ್ಯಕ್ಷ ಮೇದಪ್ಪ ಬೆಪ್ಪುರನ, ಮಾಜಿ ನಿದೇರ್ಶಕರಾದ ಪೊನ್ನಮ್ಮ ಬೆಳ್ಳಿಯಪ್ಪ ಮಾತಂಡ, ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಲೇಖಕ: admin
ಮಡಿಕೇರಿ ಜ.21 NEWS DESK : ಮಹಾಯೋಗಿ ವೇಮನ ತ್ಯಾಗಿ ಜೀವಿ. ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಮಹಾನ್ ಚೇತನ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು ರಾಷ್ಟ್ರಕಂಡ ಖ್ಯಾತ ಸಂತರು, ದಾರ್ಶನಿಕರು, ತಾನು ಕಂಡ ಅನುಭವಿಸಿದ ಸತ್ಯವನ್ನು ಆಡು ಭಾಷೆಯಲ್ಲಿ ವಚನಗಳ ಮೂಲಕ ತಿಳಿಸಿದ್ದಾರೆ ಎಂದರು. ಅವುಗಳಲ್ಲಿ ಆಡಂಬರವಿಲ್ಲ, ವೈಭವಿಕರಣವಿಲ್ಲ, ಎಲ್ಲವೂ ನೇರ ಮತ್ತು ಸ್ಟಷ್ಟ ಸ್ಥಾಪಿತ ಧರ್ಮವೆಂದರು. ಅವರ ಕಾವ್ಯದಲ್ಲಿ ಮಡಿಮೈಲಿಗೆ, ಪಾಪ ಪುಣ್ಯ, ಮೇಲು ಕೀಳು ಎಂಬ ಭಾವನೆಯನ್ನು ಖಂಡಿಸಿದ್ದಾರೆ. ಸಕಲ ಧರ್ಮಗಳ ಸಹಭಾಗಿತ್ವದಲ್ಲಿ ಸಮಾಜ ಸಮಾನತೆ ಕಾಣಬೇಕಾಗಿದೆ ಎಂದರು. ಜನಸಾಮಾನ್ಯರಲ್ಲಿರುವ ಮೌಡ್ಯತೆಯನ್ನು ತೊಡೆದು, ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸರಳವಾದ ಉಪದೇಶ ನೀಡಿದ್ದಾರೆ ಎಂದು ಮಹಾಯೋಗಿ…
ಮಡಿಕೇರಿ ಜ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು 12ನೇ ಶತಮಾನದಲ್ಲಿ ಬಸವಣ್ಣ ಅವರು ಸೇರಿದಂತೆ ಎಲ್ಲಾ ವಚನಕಾರರ ಬಗ್ಗೆ ಮಾಹಿತಿ ತಿಳಿದುಕೊಳ್ಳುವಂತಾಗಬೇಕು. ಅಂಬಿಗರ ಚೌಡಯ್ಯ ಅವರು ಸಮಾಜಕ್ಕೆ ನೀಡಿರುವ ಸುಧಾರಣೆ ಮತ್ತು ಸಂದೇಶಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು. ಗಾಳಿಬೀಡು ನವೋದಯ ವಸತಿ ಶಾಲೆಯ ಉಪನ್ಯಾಸಕ ಮಾರುತಿ ದಾಸಣ್ಣವರ್ ಮಾತನಾಡಿ, ಜಗತ್ತಿನಲ್ಲಿ ಮೊದಲ ಬಾರಿಗೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶರಣರ ಕೊಡುಗೆ ಅಪಾರ ಎಂದು ಬಣ್ಣಿಸಿದರು. ಸಮಾಜದಲ್ಲಿನ ಮೌಢ್ಯಗಳನ್ನು ಹೋಗಲಾಡಿಸಿ ಸಮಾನತೆಯ ಆಂದೋಲನವನ್ನೇ ಹುಟ್ಟು ಹಾಕಿದ ನಿಜ ಚಳುವಳಿ ಎಂದರೆ ಅದು ವಚನ ಚಳುವಳಿ ಎಂದು ಮಾರುತಿ ದಾಸಣ್ಣವರ್ ವರ್ಣಿಸಿದರು. ಹನ್ನೆರಡನೇ ಶತಮಾನದಲ್ಲಿ ಬಂದ…
ಸುಂಟಿಕೊಪ್ಪ ಜ.21 NEWS DESK : ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಜಾರಿಗೆ ತಂದಿರುವ “ನಮ್ಮ ಶಾಲೆ-ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು ಪ್ರತಿ ಸರಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಗಳು ಕೈಗೆತ್ತಿಕೊಂಡು ಯಶಸ್ಸುಗೊಳಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕೊಡಗು ಜಿಲ್ಲಾ ಉಪನಿರ್ದೇಶಕ ಸಿ.ರಂಗಧಾಮಪ್ಪ ಕರೆ ನೀಡಿದ್ದಾರೆ. ಸುಂಟಿಕೊಪ್ಪ ಸರಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಜಿ.ಯಂ.ಪಿ ಶಾಲಾ ಮೈದಾನದಲ್ಲಿ ನಡೆದ ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಬದಲಾದ ಕಾಲಘಟ್ಟದಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಂಠಿತಗೊಳ್ಳುತ್ತಿದ್ದು, ದಾಖಲಾತಿ ಶೂನ್ಯ ಪ್ರಮಾಣಕ್ಕೆ ತಲುಪಿದರೆ ಅಂತಹ ಶಾಲೆಗಳನ್ನು ಅನಿವಾರ್ಯವಾಗಿ ಮುಚ್ಚಬೇಕಾಗುತ್ತದೆ. ಆದರೆ ಇತ್ತೀಚಿಗೆ ಸರಕಾರಿ ಶಾಲೆಗಳು ಖಾಸಗಿ ಶಿಕ್ಷಣಕ್ಕಿಂತ ಯಾವುದರಲ್ಲಿ ಕಡಿಮೆ ಇಲ್ಲ ಎಂಬುದನ್ನು ದಾಖಲಿಸುತ್ತಿವೆ ಎಂದರು. ಸುಂಟಿಕೊಪ್ಪದ 3 ಸರಕಾರಿ ಶಿಕ್ಷಣ ಸಂಸ್ಥೆಗಳು ಒಂದಾಗಿ ಈ…
ಮಡಿಕೇರಿ NEWS DESK ಜ.21 : ರಾಜ್ಯದ ವಿವಿಧೆಡೆ ದರೋಡೆ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಕೊಡಗು ಜಿಲ್ಲಾ ಪೊಲೀಸ್ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಇಂದು ಮಡಿಕೇರಿಯಲ್ಲಿ ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳು, ಖಾಸಗಿ ಹಣಕಾಸು ಸಂಸ್ಥೆಗಳು ಹಾಗೂ ಆಭರಣದಂಗಡಿಗಳ ಮಾಲೀಕರುಗಳ ಸಭೆಯನ್ನು ನಡೆಸಿದರು. ಎಲ್ಲಾ ಸಂಸ್ಥೆಗಳಲ್ಲಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆ, ಅಪರಾಧ ಪ್ರಕರಣವನ್ನು ತಡೆಗಟ್ಟುವಲ್ಲಿ ಪರಸ್ಪರ ಸಹಕಾರ, ಪೊಲೀಸರ ಪಾತ್ರ ಇತ್ಯಾದಿ ವಿಚಾರಗಳ ಕುರಿತು ಚರ್ಚಿಸಿ ಸಲಹೆಗಳನ್ನು ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಹಾಗೂ ವಿವಿಧ ವಿಭಾಗಗಳ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. :: ಎಸ್ಪಿ ನೀಡಿರುವ ಸಲಹೆಗಳು :: ಬ್ಯಾಂಕ್‍ಗಳು, ಫೈನಾನ್ಸ್ ಸಂಸ್ಥೆಗಳು ಮತ್ತು ಆಭರಣ ಮಳಿಗೆಗಳ ಒಳಗೆ ಮತ್ತು ಹೊರಗೆ ಸಿಸಿಟಿವಿಗಳನ್ನು ಅಳವಡಿಸುವುದು ಹಾಗೂ ಸಿಸಿಟಿವಿಗಳು ಸರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ನಿಯಮಿತವಾಗಿ ಪರಿಶೀಲಿಸುವುದು, ಬ್ಯಾಂಕ್/ಹಣಕಾಸು ಸಂಸ್ಥೆ/ಆಭರಣ ಮಳಿಗೆಗಳು ಹಗಲು ಮತ್ತು ರಾತ್ರಿಯ ದೃಶ್ಯವು ಸರಿಯಾಗಿ ಕಾಣುವಂತಹ ಉತ್ತಮ ಗುಣಮಟ್ಟದ…
ಮಡಿಕೇರಿ ಜ.21 NEWS DESK : ಮಡಿಕೇರಿ ನಗರದ ಪ್ರಸ್ತುತ ಹಾಸನದಲ್ಲಿ ವಾಸವಿರುವ ನಮಿತ ಎಸ್.ಎನ್ ಅವರು ಭೌತಶಾಸ್ತ್ರ ವಿಷಯದಲ್ಲಿ STUDIES ON THE DISTRIBUTION OF URANIUM, RADIUM, RADON AND POLONIUM IN GROUND WATER AND SOIL OF KODAGU DISTRICT, INDIA” ಎಂಬ ಮಹಾಪ್ರಬಂಧವನ್ನು ಡಾ.ಎಂ.ಎಸ್.ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಹೆಚ್‍ಡಿ ಪದವಿ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವದಲ್ಲಿ ಪಿಹೆಚ್‍ಡಿ ಪದವಿ ಪ್ರದಾನ ಮಾಡಲಾಯಿತು. ನಮಿತ ಎಸ್.ಎನ್ ಅವರು ಮಡಿಕೇರಿ ನಗರದ ನಂದೀಶ್ ಎಸ್.ಎಸ್ ಹಾಗೂ ಶಶಿಕಲಾ ಎಸ್.ಎನ್ ದಂಪತಿಯ ಪುತ್ರಿ ಮತ್ತು ಹಾಸನ ನಿವಾಸಿ ಸುಮಂತ್ ಎಂ.ಎಸ್ ಅವರ ಪತ್ನಿ.
ಮಡಿಕೇರಿ ಜ.21 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರಕಾರದ ವಿಶೇಷ ಅತಿಥಿಯಾಗಿ ಆಯ್ಕೆಯಾಗಿರುವ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಅವರನ್ನು ಮಡಿಕೇರಿ ತಾಲ್ಲೂಕು ಪಂಚಾಯತ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಕಾಂತೂರ್-ಮೂರ್ನಾಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ಎಂ.ಚಂದ್ರಮೌಳಿ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖರ್ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಹೊದ್ದೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಮಡಿಕೇರಿ ತಾ.ಪಂ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಹೊದ್ದೂರು ಗ್ರಾ.ಪಂ ಸದಸ್ಯರು ಹಾಗೂ ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜ.21 NEWS DESK : ಪ್ರಸ್ತುತ ದಿನಗಳಲ್ಲಿ ಮಹಿಳಾ ಲೇಖಕಿಯರು ತಮ್ಮ ಬರಹದ ಮೂಲಕ ಸಮಾಜದ ಕಣ್ಣನ್ನು ತೆರೆಸುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ನಿರ್ಮಾಪಕಿ, ಲೇಖಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರು ಬರೆದಿರುವ ಕೊಡವ ಮಕ್ಕಡ ಕೂಟ ಪ್ರಕಟಿಸಿರುವ ಕನ್ನಡ ಪುಸ್ತಕ “ಮುಖಾಮುಖಿ”ಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪುಸ್ತಕಗಳನ್ನು ಓದಿ ಹೆಚ್ಚು ಜ್ಞಾನಾರ್ಜನೆಯನ್ನು ಪಡೆದುಕೊಂಡರೆ ಉನ್ನತ ಸ್ಥಾನಕ್ಕೇರಲು ಸಾಧ್ಯವಿದೆ. ಆದ್ದರಿಂದ ಪ್ರತಿಯೊಬ್ಬರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತವೆ. ಸಾಹಿತ್ಯದಲ್ಲಿ ಅಡಗಿರುವ ಸಾರಾಂಶ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಮುಖಾಮುಖಿ ಪುಸ್ತಕವು ಉತ್ತಮ ಸಂದೇಶವನ್ನು ಹೊಂದಿದ್ದು, ಲೇಖಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರು ಚಲನಚಿತ್ರಗಳ ಮೂಲಕ ರಾಷ್ಟ್ರಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಇದೀಗ ಸಾಹಿತ್ಯ ಕ್ಷೇತ್ರದಲ್ಲಿ…
ಚಿತ್ರದುರ್ಗ ಜ.21 NEWS DESK : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸ ಜಲಾಶಯ ಅಣೆಕಟ್ಟೆ ನಿರ್ಮಾಣಗೊಂಡ ನಂತರ ಮೂರನೇ ಬಾರಿಗೆ ಜಲಾಶಯ ಭರ್ತಿಯಾಗಿ ಕೋಡಿ ಹರಿದಿರುವ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ವಾಣಿವಿಲಾಸ ಜಲಾಶಯಕ್ಕೆ ಭೇಟಿ ನೀಡಿˌವೇದಾವತಿ ನದಿಗೆ ಬಾಗಿನ ಅರ್ಪಿಸಿದರು. ಇದೆ ವೇಳೆ ಜಲಾಶಯದ ಬಳಿ ಇರುವ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿˌ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಬಳಿಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್, ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ರಾಜಮಾತೆ ಕೆಂಪನಂಜಮ್ಮಣ್ಣಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು.
ಕುಶಾಲನಗರ ಜ.21 NEWS DESK : ನಡೆದಾಡುವ ದೇವರೆಂದೇ ಭಕ್ತವಲಯದಲ್ಲಿ ಹೆಸರಾಗಿದ್ದ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯ ಆರನೇ ವರ್ಷದ ಸ್ಮರಣೆ ಕುಶಾಲನಗರದಲ್ಲಿ ನಡೆಯಿತು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಸ್ಥಳೀಯ ಸೋಮೇಶ್ವರ ದೇವಾಲಯದಲ್ಲಿ ಶ್ರೀಗಳ ಸ್ಮರಣೆ ಅಂಗವಾಗಿ ಕುಶಾಲನಗರದ ಕಾಫಿ ಕೃಷಿಕ ಜೆಮ್ಸಿ ಪೊನ್ನಪ್ಪ, ನಿವೃತ್ತ ಕಂದಾಯಾಧಿಕಾರಿ ಎಂ.ಬಿ.ಬಸವರಾಜು ಹಾಗೂ ಕುಶಾಲನಗರದ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷೆ ನೇತ್ರಾವತಿ ಎಂಬವರಿಗೆ ಕಾಯಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಕಾಫಿ ಬೆಳೆಗಾರ ಜೆಮ್ಸಿ ಪೊನ್ನಪ್ಪ ಸಿದ್ದಗಂಗಾ ಮಠದಲ್ಲಿ ಅನ್ನ, ಆಶ್ರಯ ಪಡೆದವರು ಧನ್ಯರು. ಜಾತಿ ಮತಗಳ ಭೇದವೆಣಿಸದೆ ಎಲ್ಲಾ ಧರ್ಮಗಳ ಬಡ ಮಕ್ಕಳಿಗೆ ತ್ರಿವಿಧ ದಾಸೋಹದ ಕಾಯಕ ಮಾಡಿದ ಶಿವಕುಮಾರ ಸ್ವಾಮೀಜಿ ಭೂಮಿ ಇರುವ ತನಕ ಸ್ಮರಣೀಯರು ಎಂದರು. ಕುಶಾಲನಗರ ಗಣಪತಿ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್ ಮಾತನಾಡಿ, ಡಾ.ಶಿವಕುಮಾರ ಸ್ವಾಮೀಜಿ ಇಡೀ ನಾಡು ಕಂಡ ಶ್ರೇಷ್ಠ ಸಂತ. ಇಡೀ ನಾಡು ಬರಗಾಲಕ್ಕೆ ತುತ್ತಾಗಿ…






