ಮಡಿಕೇರಿ ಫೆ.18 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಛತ್ರಪತಿ ಶಿವಾಜಿ ಮಹರಾಜರ ಜಯಂತಿ ಕಾರ್ಯಕ್ರಮವು ಫೆಬ್ರವರಿ, 19 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್ ಭೋಜೇಗೌಡ, ಡಾ.ಧನಂಜಯ ಸರ್ಜಿ, ಮರಾಠ ಸಮಾಜ ಜಿಲ್ಲಾಧ್ಯಕ್ಷರಾದ ಎಸ್.ಆರ್ ಅರುಣ್ ರಾವ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಇತರರು ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಫೆ.17 : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ಹೊರವಲಯದ ಕೆ.ಬೋಯಿಕೇರಿ ಗ್ರಾಮದಲ್ಲಿ ನಡೆದಿದೆ. ದಿ.ಪೊನ್ನಪ್ಪ ಹಾಗೂ ದಮಯಂತಿ ದಂಪತಿಯ ಪುತ್ರ ಬಿ.ಪಿ.ಅನಿಲ್ ಕುಮಾರ್ (ಸತೀಶ್)(40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ವ್ಯಕ್ತಿ ಅವಿವಾಹಿತನಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಯಿ ಹಾಗೂ ಸಹೋದರ ಮನೆಯಲ್ಲಿದ್ದಾಗಲೇ ಕೋಣೆಗೆ ತೆರಳಿದ ಅನಿಲ್ ಕುಮಾರ್ ಗುಂಡು ಹೊಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನವದೆಹಲಿ NEWS DESK ಫೆ.17 : ಪರವಾನಗಿ ರಹಿತ ತಂಬಾಕು ಬೆಳಡಗಾರರಿಗೆ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು *ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮಾಡಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಕರ್ನಾಟಕದ ಬೆಳಗಾರರಿಗೆ ಖುಷಿ ಸುದ್ದಿ ನೀಡಿದೆ. ಪರವಾನಗಿ ರಹಿತ ತಂಬಾಕು ಬೆಳೆಗಾರರು ಎಫ್ ಸಿ ವಿ ತಂಬಾಕು ಮಾರಾಟ ಮಾಡಲು ಅವಕಾಶ ನೀಡಲು ಹಾಗೂ ದಂಡ ವಿಧಿಸದೆ ಇರಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸಂಸದ ಯದುವೀರ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ. ಇದರಿಂದ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಎಫ್.ಸಿ.ವಿ. ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳಯಲಾಗುತ್ತಿದ್ದು 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕ ತಂಬಾಕು ಬೆಳೆಗಾರರ ಸಂಕಷ್ಟವನ್ನು ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ…
ಮಡಿಕೇರಿ NEWS DESK ಫೆ.17 : ವಿವಾಹ ವಾರ್ಷಿಕೋತ್ಸವದ ದಿನದ ಹಿನ್ನೆಲೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕುಂಭಮೇಳದಲ್ಲಿ ಕುಟುಂಬ ಸಹಿತ ಭಾಗಿಯಾದರು. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ತಮ್ಮ ಪತ್ನಿ ದಿವ್ಯಾ ಮಂತರ್ ಹಾಗೂ ಕುಟುಂಬದ ಸದಸ್ಯರುಗಳೊಂದಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ನೆರವೇರಿಸಿದರು. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನನ್ನ ವಿವಾಹ ವಾರ್ಷಿಕೋತ್ಸವದ ಸುದಿನದಂದೇ ಅವಕಾಶ ಸಿಕ್ಕಿದ್ದು, ನಿಜಕ್ಕೂ ಸಂತಸ ತಂದಿದೆ ಎಂದು ಡಾ.ಮಂತರ್ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಮಡಿಕೇರಿ NEWS DESK ಫೆ.17 : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆಯೇ ನೌಕರರು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ್ತಿತ್ತು. ಈ ಕಾರಣದಿಂದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು. ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ, ಇದರಿಂದ ಬೇಸರಗೊಂಡಿರುವ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಇವರಿಗೆ ಕೆಲವು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಹಿಂದೆ ಸರಿದಿದೆ. ಇವರುಗಳು ಕೆಲಸಕ್ಕೆ ಸೇರಿದ ನಂತರ ಇಂತಿಷ್ಟು ಸಮಯದ ಬಳಿಕ ವರ್ಗಾವಣೆಯನ್ನು ಮಾಡಬೇಕು. ವಯಸ್ಸಾದ…
https://www.youtube.com/watch?v=VMYbqxE7QmY&authuser=0 ಮಡಿಕೇರಿ ಫೆ.17 NEWS DESK : ಯಾವುದೇ ಅಧಿಕೃತ ದಾಖಲಾತಿಗಳನ್ನು ಹೊಂದದೆ ವಂಚನೆ ಮಾಡುವ ಉದ್ದೇಶದಿಂದ ಗ್ರಾಹಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಎಸ್.ವಿ ಸ್ಮಾರ್ಟ್ ವಿಷನ್ ಎಂಬ ಸ್ಕೀಂನ ಮಾಲೀಕ ಸೇರಿದಂತೆ ಐವರು ಆರೋಪಿಗಳನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಕೀಂ ಮಾಲೀಕ ಮಂಗಳೂರು ಸುರತ್ಕಲ್ ಮೂಲದ ಮಹಮದ್ ಅಶ್ರಫ್(37), ಮಡಿಕೇರಿಯ ಮಲ್ಲಿಕಾರ್ಜುನ ನಗರದ ನಿವಾಸಿ ಎಂ.ವೈ.ಸುಲೈಮಾನ್(37), ತ್ಯಾಗರಾಜ ಕಾಲೋನಿಯ ಅಬ್ದುಲ್ ಗಫೂರ್(34), ಮೊಹಮದ್ ಅಕ್ರಮ್(34) ಹಾಗೂ ಕುಂಬಳಕೇರಿ ನಿವಾಸಿ ಹೆಚ್.ಎನ್.ಕಿಶೋರ್(41) ಬಂಧಿತ ಆರೋಪಿಗಳಾಗಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜನವರಿ 30ರಿಂದ ಎಸ್.ವಿ. ಸ್ಮಾರ್ಟ್ ವಿಷನ್ ಸ್ಕೀಂ ನಡೆಸಲಾಗುತ್ತಿದ್ದು, ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿದ್ದರು. ಈ ಸ್ಕೀಂನಲ್ಲಿ ಈಗಾಗಲೇ 1100ಕ್ಕೂ ಅಧಿಕ ಮಂದಿ ಸೇರಿಕೊಂಡಿದ್ದಾರೆ. ಸ್ಕೀಂಗೆ ಸೇರಲು ಪ್ರತಿ ತಿಂಗಳು ರೂ. 1 ಸಾವಿರದಂತೆ 24 ಕಂತುಗಳನ್ನು ಗ್ರಾಹಕರು ಕಟ್ಟಬೇಕಾಗಿರುತ್ತದೆ. ಪ್ರತಿ ತಿಂಗಳ 30ನೇ ತಾರೀಖಿನಂದು…
ಮಡಿಕೇರಿ ಫೆ.17 NEWS DESK : ಭಾಗ್ಯಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ರಕ್ಕಣೆಗಾಗಿ 2006-07 ರಲ್ಲಿ ರಾಜ್ಯದಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಗೆ 2006-07 ರಲ್ಲಿ ಜಿಲ್ಲೆಯ 1355 ಫಲಾನುಭವಿಗಳು ನೋಂದಾಯಿಸಿ ಬಾಂಡ್ ಪಡೆದಿದ್ದಾರೆ. ಈ ಸಾಲಿನಲ್ಲಿ ಬಾಂಡ್ ಪಡೆದಿರುವ 18 ವರ್ಷ ಪೂರ್ಣಗೊಂಡ ಫಲಾನುಭವಿಗಳು ತಮ್ಮ ಪೋಷಕರೊಂದಿಗೆ ದಾಖಲಾತಿ ಹಾಗೂ ಫಲಾನುಭವಿಯ ಆಧಾರ್ ಕಾರ್ಡ್ ಜೋಡಣೆಯಾಗಿರುವ ಸಂಖ್ಯೆಯ ಮೊಬೈಲ್ ನೊಂದಿಗೆ ತಮ್ಮ ವ್ಯಾಪ್ತಿಗೆ ಬರುವ ಸಿಡಿಪಿಒ ಕಚೇರಿಗೆ ಖುದ್ದಾಗಿ ಅವಶ್ಯವಿರುವ ನಮೂನೆಗಳಿಗೆ ಸಹಿ ಮಾಡಿ ಮೊತ್ತ ಪಡೆದುಕೊಳ್ಳವುದು. ದಾಖಲೆಗಳು ಎಲ್‍ಐಸಿ ಸಂಸ್ಧೆಯಿಂದ ನೀಡಲಾದ ಭರ್ತಿ ಮಾಡಿದ ನಮೂನೆ. ಚಾಲ್ತಿಯಲ್ಲಿರುವ ಬ್ಯಾಂಕ್ ಅಕೌಂಟ್ ಸಂಖ್ಯೆ, ಐಎಪ್‍ಎಸ್‍ಸಿ ಕೋಡ್ ಮತ್ತು ಆಧಾರ್ ಸಂಖ್ಯೆ ಅವಶ್ಯಕತೆ ಮೂಲ (0 ಬ್ಯಾಲನ್ಸ್ ಇದ್ದಲ್ಲಿ ಅದನ್ನು ತೆಗೆಸಬೇಕು) ಭಾಗ್ಯಲಕ್ಷ್ಮಿ ಮೂಲ ಬಾಂಟ್ ಲಗತ್ತಿಸುವುದು, ಮಗುವಿನ ಜನನ ಪ್ರಮಾಣ ಪತ್ರ ಲಗತ್ತಿಸುವುದು, ತಂದೆ-ತಾಯಿ ಪೋಷಕರ ಮಗುವಿನ ಹೆಸರು ಬದಲಾವಣೆಯಾಗಿದ್ದಲ್ಲಿ ಸಿಡಿಪಿಒ ಅವರಿಂದ ದೃಢೀಕರಣ…
ಮಡಿಕೇರಿ ಫೆ.17 NEWS DESK : ಪ್ರಧಾನಮಂತ್ರಿ ‘ವಿಶ್ವಕರ್ಮ’ ಯೋಜನೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ, ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮದಡಿ ಇದುವರೆಗೆ ಜಿಲ್ಲೆಯ 103 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಮಂದಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗಿದೆ, ಜೊತೆಗೆ ಪ್ರಮಾಣ ಪತ್ರ ವಿತರಿಸಲಾಗಿದೆ ಎಂಬ ಮಾಹಿತಿಯ ಪಟ್ಟಿ ಒದಗಿಸುವಂತೆ ಸಲಹೆ ನೀಡಿದರು. ಈ ಕುರಿತು ಮಾಹಿತಿ ನೀಡಿದ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಶಿವಲಿಂಗಯ್ಯ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಟೈಲರ್, ಕಾರ್‍ಪೆಂಟರ್, ಬಾರ್ಬರ್ಸ್, ಲಾಂಡ್ರಿ ವರ್ಕರ್ಸ್, ಗಾರ್‍ಲೆಂಡ್ ಮೇಕರ್, ಡಾಲ್ ಆಂಡ್ ಟಾಯ್ ಮೇಕರ್, ಪೋಟರ್, ಗೋಲ್ಡ್‍ಸ್ಮಿತ್, ಮೆಟಲ್ ಸ್ಮಿತ್, ಬೋಟ್ ಮೇಕರ್, ಆರ್‍ಮೊರರ್, ಸ್ಟೋನ್ ಕಾರ್‍ವರ್, ಲಾಕ್‍ಸ್ಮಿತ್, ಕೊಬ್ಲರ್ ಮತ್ತಿತರ ಕಾರ್ಯಕ್ರಮದಡಿ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 2075 ಅರ್ಜಿ…
ಮಡಿಕೇರಿ ಫೆ.17 NEWS DESK : ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿ ಗಂಭೀರ ಸ್ವರೂಪದಲ್ಲಿ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಪಂಚಾಯ್ತಿ ವ್ಯಾಪ್ತಿಯ ತೂಬನಕೊಲ್ಲಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರ ಮೇಲ್ವಿಚಾರಕ ವಾಸುದೇವಯ್ಯ ಹಾಗೂ ಕಾರ್ಮಿಕ ಸಹರ್ ಅಲಿ ಕಾಡಾನೆ ದಾಳಿಯಿಂದ ಗಾಯಗೊಂಡು ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಭಾನುವಾರ ರಾತ್ರಿ ಕಾಫಿ ಪಲ್ಪಿಂಗ್ ಕೆಲಸ ಮುಗಿಸಿ ಬೈಕ್ ನಲ್ಲಿ ಇಬ್ಬರು ಕಾಫಿ ತೋಟದ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭ ಹಠಾತ್ತನೆ ಅಡ್ಡಲಾಗಿ ಕಾಡಾನೆ ದಾಳಿಗೆ ಮುಂದಾಗಿದೆ. ಕಾಡಾನೆ ದಾಳಿಯಿಂದ ಪಾರಾಗಲು ಬೈಕನ್ನು ಬಿಟ್ಟು ತೋಟದೊಳಗೆ ಓಡಿ ಹೋಗಲು ಯತ್ನಿಸಿದ್ದಾರೆ. ಈ ಸಂದರ್ಭ ಕಾಡಾನೆ ಹಿಂಬಾಲಿಸಿ ಇಬ್ಬರ ಮೇಲೂ ದಾಳಿ ಮಾಡಿದೆ. ವಾಸುದೇವಯ್ಯ ಅವರಿಗೆ ಕಾಲಿಗೆ ಗಂಭೀರ ಗಾಯ ಹಾಗೂ ಕಾರ್ಮಿಕ ಸಹರ್ ಅಲಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಶಿವರಾಂ, ಉಪ ವಲಯ…
ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲಾ ಬ್ಯುಟಿಶಿಯನ್ ಅಸೋಸಿಯೇಷನ್‍ನ ವಾರ್ಷಿಕ ಮಹಾಸಭೆಯ ಅಂಗವಾಗಿ ಫೆ.18(ಇಂದು) ರಂದು ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯ ಮೈದಾನದಲ್ಲಿ ತಾಲ್ಲೂಕು ಸಂಘಟನೆಗಳ ಸದಸ್ಯರನ್ನು ಒಳಗೊಂಡಂತೆ ಕ್ರೀಡಾಕೂಟ ನಡೆಯಲಿದೆ ಎಂದು ಸಂಘಟನೆಯ ಗೌರವ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ರೀಡಾಕೂಟ ಬೆಳಗ್ಗೆ 10.30 ಕ್ಕೆ ಆರಂಭಗೊಳ್ಳಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಕೂಡಿಗೆ ಕ್ರೀಡಾಶಾಲೆಯ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ, ನಗರಸಭಾ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಸವಿತಾ ರಾಕೇಶ್, ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟದಲ್ಲಿ ಥ್ರೋಬಾಲ್, ಶಾಟ್ ಪುಟ್ ಸೇರಿದಂತೆ ಮನರಂಜನಾ ಸ್ಪರ್ಧೆಗಳು ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಸಂಘಟನೆಯ ಜಿಲ್ಲಾಧ್ಯಕ್ಷರಾದ ರತ್ನ ಯತೀಶ್ ಮಾತನಾಡಿ, ಕೊಡಗು ಜಿಲ್ಲಾ ಬ್ಯುಟಿಶಿಯನ್ ಅಸೋಸಿಯೇಶನ್‍ನ ವಾರ್ಷಿಕ ಮಹಾಸಭೆ ಫೆ.25 ರಂದು ನಗರದ ಸಮುದ್ರ ಹೋಟೆಲ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಮಟೆಗೆ ನಡೆಯಲಿದೆ. ಮುಖ್ಯ…






