ಮಡಿಕೇರಿ ಫೆ.17 NEWS DESK : ಕೃಷಿ ಫಸಲು ನಷ್ಟ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಠಾನಕ್ಕೆ 2 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕಳೆದ ಮೂರು ದಶಕಗಳಿಂದ ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕಾಗಿ ಕಳೆದ ತಿಂಗಳು ಮುಖ್ಯಮಂತ್ರಿಗಳು, ಅರಣ್ಯ ಸಚಿವರು, ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಉಪಸ್ಥಿತಿಯಲ್ಲಿ ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ, ಉಪಟಳ ನೀಡುವ ಕಾಡಾನೆಗಳನ್ನು ಸ್ಥಳಾಂತರಿಸುವ ಸಾಫ್ಟ್ ರಿಲೀಸ್ ಏರಿಯಾಕ್ಕೆ ಅಗತ್ಯವಾದ ಜಾಗವನ್ನು ಗುರುತಿಸಲು ಸರ್ಕಾರ ಸಮ್ಮತಿಯನ್ನು ನೀಡಿದೆ. ಗುರುತು ಮಾಡಿದ ಪುಂಡಾನೆಗಳ ಸ್ಥಳಾಂತರಕ್ಕೆ ಗುರುತಿಸುವ ಪ್ರದೇಶ ಅರಣ್ಯ ಪ್ರದೇಶವೇ ಆಗಿರಬಹುದು. ಆದರೆ, ಒಮ್ಮೆ ಜಾಗ ಗುರುತಿಸಲ್ಪಟ್ಟ ಬಳಿಕ, ಒಟ್ಟು ಪ್ರದೇಶದ ಸುತ್ತ ಕಾಡಾನೆಗಳು ಮರಳಿ ಬಾರದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗಳನ್ನು ಅಳವಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ…
ಲೇಖಕ: admin
ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲೆಗೆ ಕಳಸಪ್ರಾಯದಂತೆ ಇರುವ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಕ್ತಿ ತುಂಬಬಲ್ಲ ಕೊಡಗು ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಪಿ.ಪಿ.ಸುಕುಮಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ವಿಶ್ವ ವಿದ್ಯಾಲಯ ಬೇಕು ಎನ್ನುವ ಚಿಂತಕರ, ಜ್ಞಾನದಾಹಿಗಳ ಹಾಗೂ ವಿದ್ಯಾರ್ಥಿಗಳ ಕನಸು ಸುಮಾರು ಎರಡು ವರ್ಷಗಳ ಹಿಂದೆ ನನಸಾಯಿತು. ಆದರೆ ಪ್ರಸ್ತುತ ರಾಜ್ಯದಲ್ಲಿರುವ ಸರ್ಕಾರ ವಿವಿಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಇದು ಕೊಡಗಿನ ಜನರ ಭಾವನೆಗೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವ ವಿದ್ಯಾಲಯವೆಂದರೆ ವಿದ್ವಾಂಸರ ಕೂಟವಿರುವ ಜ್ಞಾನದ ಒಡಲು, ಜಗತ್ತಿನ ಭೂಪಟದಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಈ ವಿವಿಯನ್ನು ಉಳಿಸಿ ಬೆಳೆಸುವ ಅಗತ್ಯವಿತ್ತು. ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಸವರಾಜು ಬೊಮ್ಮಾಯಿ ಅವರು ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ…
ಮಡಿಕೇರಿ ಫೆ.17 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷರಾಗಿ ಚಾಮೆರ ದಿನೇಶ್ ಬೆಳ್ಯಪ್ಪ ಅವರನ್ನು ಆಯ್ಕೆಮಾಡಿ ರಾಜ್ಯಧ್ಯಕ್ಷ ಸಿ.ಎನ್.ಅಶೋಕ್ ಆದೇಶಿಸಿದ್ದಾರೆ. ದೇಶದ ನಾನಾ ರಾಜ್ಯಗಳಲ್ಲಿ ತನ್ನ ಘಟಕಗಳ ಮೂಲಕ ಕಾರ್ಯಕ್ಷೇತ್ರ ಹೊಂದಿರುವ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ ಒಂದು ರಾಷ್ಷ್ರೀಯ ಸಂಘಟನೆಯಾಗಿದ್ದು, ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವ ಜೊತೆಗೆ, ಅವರಲ್ಲಿ ಸೃಜನಶೀಲ ಬೆಳವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ದುಡಿಯುತ್ತಿರುವ ಸಂಸ್ಥೆಯು ಕೊಡಗು ಜಿಲ್ಲೆಯಲ್ಲಿ ಚಾಮೆರ ದಿನೇಶ್ ಬೆಳ್ಯಪ್ಪ ಅವರ ಸಾಹಿತ್ಯ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ, ಸರ್ವ ಸದಸ್ಯರ ಸರ್ವಾನುಮತದಿಂದ ಕೊಡಗು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿದ್ದು ಮುಂದೆ ಜಿಲ್ಲೆಯ ಮಕ್ಕಳಲ್ಲಿಯೂ ಪೂರ ಬೆಳವಣಿಗೆಯಾಗಲು ಶ್ರಮಿಸುವಂತೆ ಆಶಿಸಿದ್ದಾರೆ.
ಮಡಿಕೇರಿ ಫೆ.17 NEWS DESK : ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಫೆ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ 10.30 ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಹೇಳಿದ್ದಾರೆ. ಯುನೇಸ್ಕೋದ 2025 ರ ಘೋಷವಾಕ್ಯದಂತೆ ಲ್ಯಾಂಗ್ವೇಜ್ ಮ್ಯಾಟರ್ : ಸ್ವಿಲ್ವರ್ ಜುಬಿಲಿ ಸೆಲಬ್ರೇಷನ್ ಆಫ್ ಇಂಟರ್ ನ್ಯಾಷನಲ್ ಮದರ್ ಲ್ಯಾಂಗ್ವೇಜ್-ಡೇ” ಮಾರ್ಕಿಂಗ್ ದ 25 ಆನಿವರ್ಷರಿ ಅಂಡ್ ಹೈಲೆಟಿಂಗ್ ಲಿಂಗ್ವಿಸ್ಟಿಕ್ ಡೈವರ್ಸಿಟಿ ಆಂಡ್ ಪ್ರಮೋಷನ್ ಆಫ್ ಮದರ್ ಟಂಗ್ಸ್ ಈ ಬಾರಿಯ ಮಹತ್ವವಾಗಿದೆ. ಕೊಡವ ಭಾಷೆ, ಪ್ರಕೃತಿಯ ಆರಾಧಕರಾಗಿರುವ ಆದಿಮಸಂಜಾತ ಕೊಡವರ ಮಾತೃಭಾಷೆಯಾಗಿದ್ದು, ಜೀವನದ ಆತ್ಮವಾಗಿದೆ. ಜನ್ಮ ನೀಡಿದ ತಾಯಿ, ಮಾತೃಭಾಷೆ ಕೊಡವ,…
ಕುಶಾಲನಗರ ಫೆ.17 NEWS DESK : ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಫೆ.18 ರಂದು ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಉಚಿತ ಹಾಸ್ಯ ನಗೆ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಧಾತ್ರಿ ರಂಗಸಂಸ್ಥೆ ಕಲಾವಿದರ ಮೂಲಕ ಸಂಜೆ 6 ಗಂಟೆಗೆ ಹಾಸ್ಯ ನಗೆ ನಾಟಕ ಆರಂಭಗೊಳ್ಳಲಿದೆ. ಶ್ರೀ ಕೃಷ್ಣ ಸಂಧಾನ ಎಂಬ ಈ ಹಾಸ್ಯ ನಗೆ ನಾಟಕ 2 ಗಂಟೆ 30 ನಿಮಿಷಗಳ ಅವಧಿ ನಡೆಯಲಿದೆ. ನಾಟಕದ ಉದ್ಘಾಟನೆಯನ್ನು ಉದ್ಯಮಿಗಳು ಹಾಗೂ ಸಮಾಜಸೇವಕರಾದ ರಾಜೇಗೌಡ ಅವರು ನೆರವೇರಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷರಾದ ಆವರ್ತಿ ಆರ್ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗಾಯತ್ರಿ ಕಲ್ಯಾಣ ಮಂಟಪದ ಮಾಲೀಕರಾದ ಕೆ.ಬಿ.ಗಾಯತ್ರಿ ಉಪಸ್ಥಿತರಿರುವರು. ಈ ನಾಟಕ ನೋಡಿ ನಗದೇ ಇರುವ ಪ್ರೇಕ್ಷಕರಿಗೆ ಸ್ಥಳದಲ್ಲೇ ನಗದು…
ಮಡಿಕೇರಿ ಫೆ.17 NEWS DESK : ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಸರ್ಕಾರ ಮುಚ್ಚಬಾರದು ಎಂದು ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಕೊಡಗು ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಅತ್ಯಂತ ಪುಟ್ಟ ಜಿಲ್ಲೆಯಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗುತ್ತಿದೆ. ಇದೀಗ ಯುವ ಸಮೂಹದ ಶೈಕ್ಷಣಿಕ ಭವಿಷ್ಯವನ್ನು ರೂಪಿಸುವ ವಿಶ್ವ ವಿದ್ಯಾಲಯವನ್ನೇ ಮುಚ್ಚಲು ಮುಂದಾಗಿರುವುದು ಕೊಡಗಿನ ಕಡೆಗಣನೆಗೆ ಮತ್ತೊಂದು ನಿದರ್ಶನವಾಗಿದೆ ಎಂದು ಟೀಕಿಸಿದ್ದಾರೆ. ವಿಶ್ವ ವಿದ್ಯಾಲಯಕ್ಕೆ ಸಂಪನ್ಮೂಲ ಒದಗಿಸಲು ಸರ್ಕಾರಕ್ಕೆ ಯಾವುದೇ ಹೊರೆಯಾಗುವುದಿಲ್ಲ. ಆರ್ಥಿಕ ಹೊರೆಯ ನೆಪವೊಡ್ಡಿ ವಿವಿಯನ್ನು ಮುಚ್ಚಿದರೆ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಪ್ರತಿ ಜಿಲ್ಲೆಗೆ ವಿಶ್ವ ವಿದ್ಯಾಲಯ ಬೇಕೆಂಬ ಉದ್ದೇಶದಿಂದ 10 ನೂತನ ವಿವಿ ಗಳನ್ನು ಸ್ಥಾಪಿಸಿತು. ನಂತರ ಬಂದ ಸರ್ಕಾರ ಇದನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಾಗಿತ್ತು. ಆದರೆ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು…
ಮಡಿಕೇರಿ ಫೆ.17 NEWS DESK : ವಿರಾಜಪೇಟೆಯ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಲಭಿಸಿದೆ. ಧಾರವಾಡ ಚೇತನ್ ಫೌಂಡೇಶನ್ ವತಿಯಿಂದ ಮೈಸೂರಿನ ಕನ್ನಡ ಸಾಹಿತ್ಯ ಭವನದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ನುಡಿ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎನ್.ಪದ್ಮ ಪ್ರಶಸ್ತಿಯನ್ನು ಸ್ವೀಕರಿಸಿದರು.
ಬೆಂಗಳೂರು ಫೆ.17 NEWS DESK : ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಸದಾ ರೈತ ಕುಲದ ಪರವಾಗಿ ಇರ್ತೇನೆ ಎಂದು ಭರವಸೆ ನೀಡಿದರು. ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಸುಮೂಲಕಗ್ರೀವಾಜ್ಞೆರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಪರಿಷತ್ತಿನ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆಯನ್ನು ಆಚರಿಸುವ ಕುರಿತು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ತಾಲ್ಲೂಕು ಅಧ್ಯಕ್ಷರು ಮತ್ತು ಹೋಬಳಿ ಅಧ್ಯಕ್ಷರುಗಳಿಗೆ ಜವಾಬ್ದಾರಿ ಹಂಚಿದ್ದು, ಸ್ವಾಗತ ಸಮಿತಿ ಆಹಾರ ಸಮಿತಿ ಸನ್ಮಾನ ಸಮಿತಿ ಮತ್ತು ಸಾಂಸ್ಕೃತಿಕ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಪದ್ಮನಾಭ, ಸದಸ್ಯರುಗಳಾಗಿ ಎ.ವಿ.ಮಂಜುನಾಥ , ಎಸ್.ಎಸ್.ಸಂಪತ್ ಕುಮಾರ್, ಕೆ.ಟಿ.ಬೇಬಿ ಮ್ಯಾಥ್ಯೂ, ಕೋಳೆರ ದಯಾ ಚಂಗಪ್ಪ, ಕೆ.ಎಸ್.ನಾಗೇಶ್, ಕುಲ್ಲಚಂಡ ಪ್ರಮೋದ್ ಗಣಪತಿ, ಉಳುವಂಗಡ ಕಾವೇರಿ ಉದಯ, ವಿ.ಟಿ.ಮಂಜುನಾಥ್ ಜವಾಬ್ದಾರಿ ವಹಿಸಲಾಯಿತು. ವೇದಿಕೆ ಸಮಿತಿ ಅಧ್ಯಕ್ಷರಾಗಿ ಅಂಬೆಕಲ್ ನವೀನ್ ಸದಸ್ಯರುಗಳಾಗಿ ಎಸ್.ಡಿ.ವಿಜೇತ್, ಸುನಿಲ್ ಪತ್ರವೋ, ನಂಗಾರು ಕೀರ್ತಿ ಪ್ರಸಾದ್, ಈರಮಂಡ ಹರಿಣಿ ವಿಜಯ್, ಪಿ.ಎಫ್ ಸಭಾಸ್ಟಿನ್, ಬಿ.ಬಿ.ನಾಗರಾಜ ಆಚಾರ್, ಬಾನಂಗಡ ಅರುಣ್ ರವರನ್ನು ಆರಿಸಲಾಯಿತು. ಆಹಾರ ಸಮಿತಿ ಅಧ್ಯಕ್ಷರಾಗಿ ಕಡ್ಲೇರ…
ಮಡಿಕೇರಿ ಫೆ.17 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ, ಮಡಿಕೇರಿ. ಕೊಡಗು ಜಿಲ್ಲೆ ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ“ಬೇಟಿ ಬಚವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮದ ಅಂಗವಾಗಿ ತಿತಿಮತಿ ಸರ್ಕಾರಿ ಪ್ರೌಡ ಶಾಲೆಯಲ್ಲಿ “ಸಮಗ್ರ ಮಕ್ಕಳ ಲೈಂಗಿಕ ಶಿಕ್ಷಣದ ಕುರಿತು” ಕಾರ್ಯಕ್ರಮ ನಡೆಯಿತು. ತಿತಿಮತಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಂಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು, ಪ್ರತಿ ಮನೆಯ ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕು. ಅಲ್ಲದೆ ಹೆಣ್ಣು ಮಕ್ಕಳ ಜನನವನ್ನು ಸಂಭ್ರಮಿಸಬೇಕು. ಗಂಡು ಮತ್ತು ಹೆಣ್ಣು ನಡುವೆ ಸಮಾನತೆ ಇರಬೇಕು ಎಂದು ತಿಳಿಸಿದರು. ಕಾನೂನು ಸಲಹೆಗಾರರು, ಸಖಿ ಒನ್ ಸ್ಟಾಪ್ ಸೆಂಟರ್ ಮಡಿಕೇರಿ ಅಂಬಿಕಾ ಮಾತನಾಡಿ ಮಕ್ಕಳಿಗೆ…






