ಮಡಿಕೇರಿ ಮಾ.5 NEWS DESK : 2023-24 ನೇ ಸಾಲಿನ ಗಾಂಧಿ ಗ್ರಾಮ ರಾಜ್ಯ ಪುರಸ್ಕಾರಕ್ಕೆ ರಾಜ್ಯದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ 5 ಗ್ರಾ.ಪಂ ಗಳು ಆಯ್ಕೆಯಾಗಿವೆ. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾ.ಪಂ, ಸೋಮವಾರಪೇಟೆ ತಾಲ್ಲೂಕಿನ ದುಂಡಳ್ಳಿ, ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ, ಪೊನ್ನಂಪೇಟೆ ತಾಲ್ಲೂಕಿನ ಮಾಯಮುಡಿ ಹಾಗೂ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ಗಳು ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆದುಕೊಳ್ಳಲಿವೆ. ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯಿತಿಗಳನ್ನು ಪ್ರೋತ್ಸಾಹಿಸಲು 2013-14ನೇ ಸಾಲಿನಿಂದ ಪ್ರತಿ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿ ರೂ.5 ಲಕ್ಷಗಳ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತಿದೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಕುರಿತು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ, ದುಂಡಳ್ಳಿ ಗ್ರಾ.ಪಂ ಅಧ್ಯಕ್ಷೆ ಸತ್ಯಾವತಿ, ಹಾಲುಗುಂದ ಗ್ರಾ.ಪಂ ಅಧ್ಯಕ್ಷ ಕುಶ ಅಯ್ಯಪ್ಪ, ಮಾಯಮುಡಿ ಗ್ರಾ.ಪಂ…
ಲೇಖಕ: admin
ಮಡಿಕೇರಿ ಮಾ.5 NEWS DESK : 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಎಫ್3 ಶನಿವಾರಸಂತೆ ಮಾರ್ಗದಲ್ಲಿ, ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.6 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಮಾರ್ಗಗಳ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಮಾ.5 NEWS DESK : ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾ.9 ರಂದು ‘ಮ್ಯಾರಥಾನ್ ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ. ಅದರಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾ.9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ ಹಳೆಯ ಬಸ್ಸು ನಿಲ್ದಾಣ, ಐ.ಜಿ.ವೃತ್ತ, ಮಾರ್ಗವಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ಮ್ಯಾರಥಾನ್ ಓಟ ನಡೆಯಲಿದೆ ಎಂದು ಎಂದು ಸಂಚಾರಿ ಪೊಲೀಸ್ ಠಾಣೆ ಠಾಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಮಾ.5 NEWS DESK : ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2025ನೇ ಸಾಲಿನ ಎಂ.ಡಿ ವೈದ್ಯಕೀಯ ಪರೀಕ್ಷೆಯಲ್ಲಿ Radiation Oncology ವಿಭಾಗದಲ್ಲಿ ಡಾ.ಶ್ರೀಲೇಖ ಕಾರಂತ ಅವರು ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರು ಚೆಂಬು ಗ್ರಾಮದ ಡಾ.ಫಲ್ಗುಣ ಅವರ ಪತ್ನಿ, ಮಡಿಕೇರಿ ಎಪಿಎಂಸಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ ಹಾಗೂ ನಿವೃತ್ತ ಶಿಕ್ಷಕಿ ಕಾಮಾಕ್ಷಿ ಅವರ ಸೊಸೆ. ಬೆಂಗಳೂರಿನ ಇಸ್ರೋ ಸಂಸ್ಥೆಯ ನಿವೃತ್ತ ವಿಜ್ಞಾನಿ ನಾಗೇಶ್ ರಾವ್ ಹಾಗೂ ಆಲ್ ಇಂಡಿಯಾ ರೇಡಿಯೋ ವಿಜ್ಞಾನಿ ಸುಜಾತಾ ಅವರ ಪುತ್ರಿಯಾಗಿರುವ ಡಾ.ಶ್ರೀಲೇಖ ಕಾರಂತ ಅವರು ಬೆಂಗಳೂರಿನ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜ್ ನಲ್ಲಿ ಎಂ.ಡಿ ವಿದ್ಯಾಭ್ಯಾಸ ಪೂರೈಸಿದ್ದಾರೆ.
ಮಡಿಕೇರಿ ಮಾ.5 NEWS DESK : ಎನ್‍ಸಿಸಿ ಡೆಕೋರೇಟ್ ಕರ್ನಾಟಕ ಮತ್ತು ಗೋವಾ ಇವರ ಕಾರ್ಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಮೈಸೂರು, ಬೆಳಗಾವಿ, ರಾಯಚೂರು ನಲ್ಲಿ 2024-25 ನೇ ಸಾಲಿನಲ್ಲಿ ಹೊರಗುತ್ತಿಗೆ ಮೇಲೆ ಖಾಲಿ ಇರುವ 10-ಜೆಸಿಒ ಮತ್ತು 19-ಎನ್‍ಸಿಒ ಇನ್‍ಸ್ಟ್ರಕ್ಟರ್ ಸ್ಟಾಪ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಾಜಿ ಸೈನಿಕ ಜೆಸಿಒ ಮತ್ತು ಹವಿಲ್ದಾರ್ ರ‍್ಯಾಂಕಿನ ಎನ್‍ಸಿಒಗಳು https://nis.bisag-n./nis/downloads- public ಜಾಲತಾಣದಲ್ಲಿ ಲಾಗಿನ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಮಾ.5 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಹೆಚ್ಚಿಸಲು ಅಭಿಯಾನಕ್ಕೆ ತೀರ್ಮಾನಿಸಿದ್ದು, ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆಯ ನೀಡಿರುವ ಅವರು, ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಘದ ಸದಸ್ಯತ್ವವನ್ನು ಹೆಚ್ಚಿಸುವ ಸಲುವಾಗಿ ಅಭಿಯಾನವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿತ್ತು. ಅಂತಯೇ ಅಭಿಯಾನವನ್ನು ಆರಂಭಿಸಲಾಗಿದ್ದು, ಹಳೆ ವಿದ್ಯಾರ್ಥಿ ಸಂಘದ ಬ್ಯಾಂಕ್ ಖಾತೆಯ ಕ್ಯೂ ಆರ್ ಕೋಡ್ ಅನ್ನು ಪಡೆದುಕೊಳ್ಳಲಾಗಿದೆ. ಕ್ಯೂ ಆರ್ ಕೋಡ್ ಅಥವಾ ಬ್ಯಾಂಕ್ ಖಾತೆಗೆ ನೇರ ಹಣವನ್ನು ಜಮಾ ಮಾಡಿ ಅದರ ರಶೀದಿ ಅಥವಾ ಸ್ಕ್ರೀನ್ ಶಾಟ್ ಅನ್ನು ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅವರ ಮೊಬೈಲ್ ಸಂಖ್ಯೆ 8762632314 ಅಥವಾ ಕಾಲೇಜಿನ ಸಿಬ್ಬಂದಿ ಹೇಮಾ 7829776447 ಇವರ ವಾಟ್ಸ್ ಆ್ಯಪ್ ಸಂಖ್ಯೆಗೆ ಕಳುಹಿಸುವುದರ ಮುಖಾಂತರ ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 1949ರಲ್ಲಿ ಪ್ರಾರಂಭವಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ…
ಸಿದ್ದಾಪುರ ಮಾ.5 NEWS DESK : ಗುಹ್ಯ ಗ್ರಾಮದ ತೋಟವೊಂದರ ಲೈನ್ ಮನೆಯಲ್ಲಿದ್ದ ನಾಗರಹಾವನ್ನು ಉರಗ ರಕ್ಷಕ ಸುರೇಶ್ ಪೂಜಾರಿ ರಕ್ಷಿಸಿದ್ದಾರೆ. ತೋಟದ ರೈಟರ್ ದೇವಯ್ಯ ಹಾವು ಇರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಸುರೇಶ್ ಪೂಜಾರಿ ಐದು ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು. ಯಾರು ಕೂಡ ಹಾವುಗಳನ್ನು ಕೊಲ್ಲಬೇಡಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ನೀರು ಅರಸಿ ಮನೆಯ ಹತ್ತಿರ ಹಾವುಗಳು ಬರುತ್ತವೆ ಹಾವು ಕಂಡುಬಂದಲ್ಲಿ ತಕ್ಷಣವೇ ಉರಗ ರಕ್ಷಕರಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ಮಾ.5 NEWS DESK : ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ ಸುಂಟಿಕೊಪ್ಪ ಕಂಬಿಬಾಣೆಯ ಯುವಕನ ಶಸ್ತ್ರಚಿಕಿತ್ಸೆಗೆ ಸುಮಾರು 60 ಲಕ್ಷಕ್ಕೂ ಅಧಿಕ ಹಣ ಖರ್ಚಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ.ಉಸ್ಮಾನ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪ ಕಂಬಿಬಾಣೆಯ ನಿವಾಸಿ ಯು.ಎಂ.ಆಸಿಂ ಹಾಗೂ ಕೆ.ಎಂ.ಆರಿಫ್ ದಂಪತಿಯ ದ್ವಿತೀಯ ಪುತ್ರ ಎಂ.ಎ.ಆಬಿದ್ (23) ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಶ್ವಾಸಕೋಶದ ಬದಲಾವಣೆ (ಶ್ವಾಸಕೋಶದ ಕಸಿ) ಮಾಡಬೇಕೆಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ವೈದ್ಯಾಧಿಕಾರಿ ಸೂಚಿಸಿದ್ದಾರೆ. ಈ ಶಸ್ತ್ರ ಚಿಕಿತ್ಸೆಗೆ ಸುಮಾರು 60 ಲಕ್ಷಕ್ಕೂ ಅಧಿಕ ರೂ. ಖರ್ಚಾಗಲಿದ್ದು, ದೊಡ್ಡ ಮೊತ್ತದ ಹಣವನ್ನು ಭರಿಸಲು ಕುಟುಂಬಕ್ಕೆ ಸಾಧ್ಯವಾಗದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಉಸ್ಮಾನ್ ಕೋರಿದರು. ಕಳೆದ 13 ವರ್ಷಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಆಬಿದ್, ಮಂಗಳೂರಿನಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದ ಸಂದರ್ಭ ಅನಾರೋಗ್ಯದಿಂದ ಮನೆಗೆ ಹಿಂತಿರುಗಿ ಬಂದಿದ್ದು, ಜನವರಿಯಲ್ಲಿ ಶ್ವಾಸಕೋಶದ ಸಮಸ್ಯೆ ತೀವ್ರಗೊಂಡಿದೆ. ಚಿಕಿತ್ಸೆ ಪಡೆದು…
ಮಡಿಕೇರಿ ಮಾ.5 NEWS DESK : ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಿದ್ದು, ಈ ನಿಯಮವನ್ನು ಪಾಲಿಸಬೇಕು ಎಂದು ಗೋಣಿಕೊಪ್ಪ ಪೊಲೀಸರು ಸೂಚಿಸಿದ್ದಾರೆ. ಗೋಣಿಕೊಪ್ಪ ಠಾಣೆಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ವಾಹನ ಚಲಾಯಿಸುವಾಗ ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ವಾಹನ ಚಾಲನೆಯ ಸಮಯದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ತಿಳಿಸಿದ ಅಧಿಕಾರಿಗಳು ಮಕ್ಕಳಿಗೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು.
ಮಡಿಕೇರಿ ಮಾ.5 NEWS DESK : ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವಕ್ತಾರರೊಬ್ಬರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು, ಇವರ ವಿರುದ್ಧ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಕ್ಷೇತ್ರದ ಜನತೆಯ ಆಶೀರ್ವಾದದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಕಾರ್ಯವೈಖರಿಯ ಕುರಿತು ವಿಶ್ಲೇಶಿಸುವ ನೈತಿಕತೆ ಕಾಂಗ್ರೆಸ್ ವಕ್ತಾರರಿಗೆ ಇಲ್ಲ. ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ. ಅಲ್ಲದೆ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸಂಸದರ ಕುರಿತು ಅಪಪ್ರಚಾರ ಮಾಡಲಾಗುತ್ತಿದ್ದು, ಕಾಂಗ್ರೆಸ್ ವಕ್ತಾರನೆಂದು ಹೇಳಿಕೊಳ್ಳುತ್ತಿರುವ ಈ ವ್ಯಕ್ತಿಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಇತರೆಡೆಯೂ ಕಾನೂನು ಸುವ್ಯವಸ್ಥೆ…






