ಲೇಖಕ: admin

ಮಡಿಕೇರಿ ಮಾ.5 NEWS DESK : ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವಕ್ತಾರರೊಬ್ಬರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು, ಇವರ ವಿರುದ್ಧ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಕ್ಷೇತ್ರದ ಜನತೆಯ ಆಶೀರ್ವಾದದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಕಾರ್ಯವೈಖರಿಯ ಕುರಿತು ವಿಶ್ಲೇಶಿಸುವ ನೈತಿಕತೆ ಕಾಂಗ್ರೆಸ್ ವಕ್ತಾರರಿಗೆ ಇಲ್ಲ. ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ. ಅಲ್ಲದೆ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸಂಸದರ ಕುರಿತು ಅಪಪ್ರಚಾರ ಮಾಡಲಾಗುತ್ತಿದ್ದು, ಕಾಂಗ್ರೆಸ್ ವಕ್ತಾರನೆಂದು ಹೇಳಿಕೊಳ್ಳುತ್ತಿರುವ ಈ ವ್ಯಕ್ತಿಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಇತರೆಡೆಯೂ ಕಾನೂನು ಸುವ್ಯವಸ್ಥೆ…

Read More

ಮಡಿಕೇರಿ ಮಾ.5 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾ ಭವನದಲ್ಲಿ ಡಾ.ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರವಾದ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆದ 42ನೇ ಸರಣಿ ಕೃತಿ ಲೋಕಾರ್ಪಣೆಯ ಸರಳ ಕಾರ್ಯಕ್ರಮದಲ್ಲಿ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕವನ್ನು ಯು.ಎ.ಇ. ಬಂಟ್ಸ್ ಸಂಘದ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ ಅವರು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಅತ್ಯಂತ ವಿಶಿಷ್ಟ ಶೈಲಿಯಲ್ಲಿ ರಚನೆಗೊಂಡಿದ್ದು, ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅತ್ಯಾಕರ್ಷಕ ವರ್ಣ ಚಿತ್ರದೊಂದಿಗೆ ಓದುಗರ ಮನಮುಟ್ಟುವಲ್ಲಿ ಕೃತಿ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಗೆ ಮುನ್ನುಡಿಯನ್ನು ಬರೆದಿರುವ ಡಾ.ಅರುಣ ನಾಗರಾಜ್ ಮಾತನಾಡಿ ಪುಸ್ತಕದಲ್ಲಿರುವ ಲೇಖನಗಳು ಸಂಪೂರ್ಣ ಮಾಹಿತಿಯೊಂದಿಗೆ ಓದುಗರ ಮನ ಗೆಲ್ಲುತ್ತಿದೆ. ಕೈಯಲ್ಲಿ ಈ…

Read More

ಸಿದ್ದಾಪುರ ಮಾ.5 NEWS DESK : ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) -ಬೆಂಗಳೂರು ಹಾಗೂ ಓ.ಡಿ.ಪಿ. ಸಂಸ್ಥೆ ಮೈಸೂರು ಸಹಭಾಗಿತ್ವದಲ್ಲಿ ಬಾಳೆಗುಂಡಿ ಹಾಡಿಯಲ್ಲಿ  ಬುಡಕಟ್ಟು ಸಮುದಾಯದ ಅಭಿವೃದ್ಧಿ ಕಾರ್ಯಕ್ರಮದಡಿ ಸೋಲಾರ್ ದೀಪಗಳು, ತೋಟಗಾರಿಕೆ ಗಿಡಗಳು ಹಾಗೂ ಬಿತ್ತನೆ ಬೀಜಗಳ ವಿತರಣಾ ಕಾರ್ಯಕ್ರಮ ನಡೆಯಿತು.  ಬಾಳೆಗುಂಡಿ, ವಾಲ್ನೂರು-ತ್ಯಾಗತ್ತೂರು ವ್ಯಾಪ್ತಿಯ 50 ಜನ ಫಲಾನುಭವಿಗಳಿಗೆ, ಸೋಲಾರ್ ಮನೆದೀಪಾ, ಹಣ್ಣಿನ ಗಿಡ, ಅಡಕೆಗಿಡ, ತೆಂಗಿನ ಸಸಿಗಳು, ಮೆಣಸು ಬಳ್ಳಿ, ಹಾಗೂ ತರಕಾರಿ ಬಿತ್ತನೆ ಬೀಜಗಳನ್ನು ವಿತರಿಸಲಾಯಿತು.  ಸಾವಯವ ಕೃಷಿ, ಮಣ್ಣು ಮತ್ತು ನೀರು ಪರೀಕ್ಷೆ, ಜಾಲಬಂಧ, ಸರ್ಕಾರಿ ಸೌಲಭ್ಯಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು ಓ.ಡಿಪಿ ಸಂಸ್ಥೆಯ ನಿರ್ದೇಶಕರಾದ ಫಾದರ್ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ ಮಾತನಾಡಿ ವಾಲ್ನೂರು, ಬಾಳೆಗುಂಡಿ, ತ್ಯಾಗತ್ತೂರು ಹಾಡಿಗಳಲ್ಲಿ ನಬಾರ್ಡ್ ಬೆಂಗಳೂರು ಹಾಗೂ ಓ.ಡಿ.ಪಿ ಸಂಸ್ಥೆಯ ಸಹಕಾರದಿಂದ ಬುಡಕಟ್ಟು ಜನರ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲೂ ಜನರ ಸಹಕಾರ ಮುಖ್ಯವಾಗಿದೆ. ಇಲ್ಲಿಯ…

Read More

ವಿರಾಜಪೇಟೆ ಮಾ.5 NEWS DESK : ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ, ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಜಿ.ಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಬೇಟೋಳಿ ಗ್ರಾಮದ ಹೆಗ್ಗಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಶಿಬಿರದವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಮಾಜಕ್ಕೆ ಮೌಲ್ಯಾಧರಿತ ಸೇವೆಗಳ ಅವಶ್ಯಕತೆಯಿದೆ. ರೈತನು ಹೊಲದಲ್ಲಿ ದುಡಿದು. ಜನಸಾಮಾನ್ಯರ ಹಸಿವು ನೀಗಿಸುತ್ತಾನೆ. ಸೈನಿಕ ದೇಶದ ಗಡಿ ಕಾಯುತ್ತಾ ದೇಶವನ್ನು ಕಪಾಡುತ್ತಾನೆ. ಸಮಾಜದಲ್ಲಿ ಗುರುತಿಸಿಕೊಳ್ಳಲು ಉತ್ತಮ ನಾಯಕತ್ವ ಗುಣಗಳು, ಸೇವೆಗೆ ಮುಡಿಪಾಗಿಟ್ಟ ವ್ಯಕ್ತಿತ್ವದಿಂದ ಮಾತ್ರ ಸಾಧ್ಯ. ಆದ್ದರಿಂದ ವಿದ್ಯಾರ್ಥಿ ಜೀವನದಿಂದಲೇ ಸೇವಾ ಮನೋಭಾವ ಬೆಳಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಸಂತ ಅನ್ನಮ್ಮ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮುದಲೈ ಮುತ್ತು ಶಿಬಿರಾರ್ಥಿಗಳಿಗೆ ಪ್ರಮಾಣ ವಚನ ಭೋದಿಸಿ ಮಾತನಾಡಿ, ಯಾಂತ್ರಿಕೃತ ಸಮಾಜದಲ್ಲಿ ಕೃತಕ ಬುದ್ದಿಮತ್ತೆ…

Read More

ಗುಂಡ್ಲುಪೇಟೆ NEWS DESK ಮಾ.5 : ಕಾಡಾನೆ ದಾಳಿಗೆ ಸಿಲುಕಿದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಂಡೀಪುರದ ಕುಂದಕೆರೆ ವಲಯ ವ್ಯಾಪ್ತಿಯ ಹಾಡಿನ ಕಣಿವೆ-ಮಂಗಲ ರಸ್ತೆಯಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ಮಸಣಿಗುಡಿ ಮೂಲದ ಕರಿಯ(48) ಎಂಬುವವರೇ ಮೃತ ದುರ್ದೈವಿ. ಕರಿಯ ಸೇರಿದಂತೆ ಮೂವರು ಮಂಗಲ ಗ್ರಾಮದ ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಿಢೀರ್ ದಾಳಿ ಮಾಡಿದೆ. ಈ ಸಂದರ್ಭ ಕಾಡಾನೆಗೆ ಸಿಲುಕಿಕೊಂಡ ಕರಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದವರು ಓಡಿ ಜೀವ ಉಳಿಸಿಕೊಂಡಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಕೆ.ಪಿ.ದಿಥ್ಯಗೆ ಕನ್ನಡ ಮಾಣಿಕ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆದ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಕೆ.ಪಿ.ದಿಥ್ಯಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿರಾಜಪೇಟೆಯ ಚಿಕ್ಕಪೇಟೆಯ ನಿವಾಸಿ ಕೆ.ಪಿ. ಪ್ರಥ್ವಿಕುಮಾರ್ ಹಾಗೂ ಭವ್ಯ ದಂಪತಿಗಳ ಪುತ್ರಿಕೊಂಪುಳೀರ ಪಳಂಗಪ್ಪ ಹಾಗೂ ತಾರಾಮಣಿಯವರ ಮೊಮ್ಮಗಳಾಗಿರುವ ದಿಥ್ಯ, ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಾಟ್ಯಾಂಜಲಿ ನೃತ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾಳೆ.

Read More

ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸ್ವಸಾಯ ಸಂಘಗಳ ಒಕ್ಕೂಟಗಳು ಸಂಯುಕ್ತಾಶ್ರಯದಲ್ಲಿ ಕೃಷಿ ಕಾರ್ಯಕ್ರಮದಡಿಯಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಗೋಣಿಕೊಪ್ಪ ವಲಯದ ದೇವರಪುರ ಕಾರ್ಯಕ್ಷೇತ್ರದ ಶಿವಣ್ಣ ಅವರ ಕೃಷಿ ತಾಕುವಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಶೇಖರ್ ಮಾತನಾಡಿ, ಅಣಬೆ ಕೃಷಿ ಮನೆಯಲ್ಲಿಯೇ ಬೆಳೆಯಿರಿ, ಹೆಚ್ಚು ಆದಾಯಗಳಿಸಬಹುದು, ಅಣಬೆ ಕೃಷಿಯು ಒಂದು ಲಾಭದಾಯಕ ಕೃಷಿ ಉದ್ಯಮವಾಗಿದೆ. ಮಹಿಳೆಯರಿಗೆ ಉದ್ಯೋಗವನ್ನು ಕಲ್ಪಿಸುತ್ತದೆ. ಕೋಳಿ ಸಾಕಾಣಿಕೆ ಹೇಗೆ ಮಾಡುವುದು ಮತ್ತು ವಾಣಿಜ್ಯ ನರ್ಸರಿ ಬಗ್ಗೆ ಮಾಹಿತಿ ನೀಡಿದರು. ಪ್ರಗತಿಪರ ಕೃಷಿಕರಾದ ಶಿವಣ್ಣ ಮಾತನಾಡಿ, ಬಾಳೆ ಕೃಷಿಯ ವಿವಿಧ ತಳಿಗಳ ಬಗ್ಗೆ ಮತ್ತು ಏಲಕ್ಕಿ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್, ಒಕ್ಕೂಟದ ಅಧ್ಯಕ್ಷರಾದ ನವೀನ್, ಸೇವಾ ಪ್ರತಿನಿಧಿ ಸರೋಜಾ, ಸಿಎಸ್‍ಸಿ ಸೇವಾದಾರರು ಸೌಜನ್ಯ, ಸಂಘದ ಸದಸ್ಯರು, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಮಾ.5 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಆದೇಶದ ಮೇರೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ನಿಯಂತ್ರಣದ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಸಮಿತಿಯ ಪದಾಧಿಕಾರಿಗಳು ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಸರಕಾರಿ ಶಾಲೆಗಳು ಮತ್ತು ಸರಕಾರಿ ಹಾಸ್ಟೆಲ್‍ಗಳು ಮತ್ತು ಸಾರ್ವಜನಿಕರ ಸ್ಥಳಗಳಲ್ಲಿ ಹಾಡಿನ ಮೂಲಕ ಅರಿವು ಮೂಡಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಮಂಜುನಾಥ್ ಅಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಂಚಾಲಕ ಹೆಚ್.ಜಿ.ಗೋಪಾಲ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.5 NEWS DESK : ನಿಟ್ಟೂರು ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.ನಿಟ್ಟೂರು ಗ್ರಾ.ಪ0 ಉಪಾಧ್ಯಕ್ಷರಾಗಿದ್ದ ಚಕ್ಕೇರ ಸೂರ್ಯ ಅಯ್ಯಪ್ಪ ಅಂತರಿಕ ಒಳ ಒಪ್ಪಂದಂತೆ ಕಾಟಿಮಾಡ ಶರೀನ್ ಮುತ್ತಣ್ಣನವರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಉಪಾಧ್ಯಕ್ಷರ  ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದರು. ಇಂದು ಚುನಾವಣಾ ಅಧಿಕಾರಿಗಳಾದ ತಾಲ್ಲೂಕು ಮೀನುಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ಸಚಿನ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರೀಯೆಯಲ್ಲಿ ಕಾಟಿಮಾಡ ಶರೀನ್ ಮುತ್ತಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು. ನಂತರ ನಡೆದ ಸರಳ ಸಮಾರಂಭದಲ್ಲಿ ನಿಕಟಪೂರ್ವ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ ಅವರ ಅಧಿಕಾರ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಶ್ಲಾಘಿಸಿ ನೂತನ ಉಪಾಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಅವರನ್ನು ಅಭಿನಂದಿಸಿದರು. ಗ್ರಾ.ಪಂ ಅದ್ಯಕ್ಷ ಅಮ್ಮಣಿ ಬೆಂಡೆಕುತ್ತಿ, ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು, ರಾಜು, ಅಮ್ಮಯ್ಯ, ಸುಮತಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್, ಪ್ರಮುಖರಾದ ಕೊಟ್ಟಂಗಡ ಮಂಜುನಾಥ್, ಮಾಚಂಗಡ ವಿಕಾಸ್, ಪೊನ್ನಿಮಾಡ ಸಂತೋಷ್, ಅಳಮೇಂಡ ಸೋಮಯ್ಯ, ಚಕ್ಕೇರ…

Read More

ಮಡಿಕೇರಿ ಮಾ.4 NEWS DESK : ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ಮೈಸೂರು ವಿಭಾಗಿಯ ಕಚೇರಿ ವತಿಯಿಂದ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ದಾಖಲೆಗಳ ಅಧಿನಿಯಮ-2010 ಮತ್ತು ನಿಯಮಗಳು-2013 ಹಾಗೂ ದಾಖಲೆಗಳ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಕಾಲ, ಆರ್‍ಟಿಐ, ಸೇವಾಸಿಂಧು ಯೋಜನೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಇಲಾಖೆಗಳ ಕಡತ/ ದಾಖಲೆಗಳನ್ನು ಸುಲಭವಾಗಿ ಪಡೆಯಲು ಮುಕ್ತ ಅವಕಾಶವಿದೆ. ಇಂತಹ ಸಂದರ್ಭದಲ್ಲಿ ದೈನಂದಿನ ಕಚೇರಿ ಕಡತಗಳ ನಿರ್ವಹಣೆ ಅಗತ್ಯವಾಗಿದೆ. ಸರ್ಕಾರಿ ಕಡತಗಳನ್ನು ಸಾರ್ವಜನಿಕ ಉದ್ದೇಶದಿಂದ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು. ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕರಾದ ಡಾ.ಗವಿಸಿದ್ದಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ನಾಡು ನುಡಿಗೆ ಸಂಬಂಧಿಸಿದ ಐತಿಹಾಸಿಕ ಮಹತ್ವದ ದಾಖಲೆ ಸಂಗ್ರಹಿಸಿ ಸಂರಕ್ಷಣೆ ಮಾಡುತ್ತ ಬರುತ್ತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಯ ಕಚೇರಿಗಳ ಕಡತಗಳ ನಿರ್ವಹಣೆ ಮತ್ತು ಸಂರಕ್ಷಣೆಯಲ್ಲಿ ಪಾರದರ್ಶಕತೆ ತರುವ…

Read More