ಮಡಿಕೇರಿ ಮಾ.3 NEWS DESK : ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಎಎಸ್ಐ ಟಿ.ಎನ್.ದಯಾನಂದ, ಬಸವರಾಜ ಶೆಟ್ಟಿ ಮತ್ತು ಡಿಎಆರ್‌ನ ಎಆರ್‌ಎಸ್‌ಐ ಬಿ.ಸಿ.ಸೋಮಯ್ಯ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಲೇಖಕ: admin
ಮಡಿಕೇರಿ ಮಾ.3 NEWS DESK : ಇತಿಹಾಸ ಪ್ರಸಿದ್ಧ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಮಾ.8 ರಿಂದ 19ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಹನ್ನೆರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.8 ರಂದು ಬೆಳಿಗ್ಗೆ 6 ಗಂಟೆಗೆ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ, ಊರಿನವರು ಮತ್ತು ಊರಿನ ಮಹಿಳೆಯರಿಂದ 12 ತಳಿಯತಕ್ಕಿ, ಬೊಳ್‍ಚ್ಚ, ದುಡಿಕೊಟ್ಟ್ ಪಾಟ್‍ನೊಂದಿಗೆ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 6.30 ಗಂಟೆಯಿಂದ ಊರಿನ ಪರವಾಗಿ ಶತರುದ್ರಾಭಿಷೇಕ, ಪ್ರಸಾದ ವಿತರಣೆ ನಡೆಯದ್ದು, ರಾತ್ರಿ 8 ಗಂಟೆಗೆ ಆರಿದ್ರ ನಕ್ಷತ್ರದ ಮೂಹೂರ್ತದಲ್ಲಿ “ಕೊಡಿಮರ” ನಿಲ್ಲಿಸುವುದು, ಶುದ್ಧ ಕಲಶ, ಉತ್ಸವ ಮೂರ್ತಿ ದರ್ಶನ, ಪ್ರಸಾದ ವಿತರಣೆ ಹಾಗೂ ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ. ಮಾ.9 ರಂದು ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ ನಡೆಯಲಿದೆ. ಮಾ.10 ರಂದು ಪ್ರಾತಃಕಾಲ 5 ಗಂಟೆಗೆ ಉತ್ಸವ ಮೂರ್ತಿದರ್ಶನ, ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ,…
ಮಡಿಕೇರಿ ಮಾ.3 NEWS DESK : ಕೊಡಗು ವಿವಿ ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಗುಡ್ಡೆಹೊಸೂರು ಗ್ರಾ.ಪಂ ಆಡಳಿತ ಮಂಡಳಿ ಖಂಡಿಸಿತು. ಕೊಡಗು ವಿವಿ ಬಡ ವಿದ್ಯಾರ್ಥಿಗಳ ಪಾಲಿನ ಜ್ಞಾನದೇಗುಲವಾಗಿದ್ದು, ಯಾವ ಕಾರಣಕ್ಕೂ ಸರ್ಕಾರ ಮುಚ್ಚಲು ಮುಂದಾಗಬಾರದು. ಕೊಡಗು ವಿವಿ ಯಿಂದ ಜಿಲ್ಲೆಯ ಬಡ ಮಕ್ಕಳು ಮೈಸೂರು, ಮಂಗಳೂರು ವಿವಿ ಗಳಿಗೆ ತೆರಳುವ ಪ್ರಯಾಸದ ಪ್ರಯಾಣ ತಪ್ಪಿದೆ. ಊರ ಬಾಗಿಲಲ್ಲಿ ವಿವಿ ಇರುವಾಗ ಅಪಾರ ಮಂದಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎಂದು ಸ್ನಾತಕೋತ್ತರ ಪದವೀಧರೆ ಹಾಗೂ ಗ್ರಾಪಂ ಸದಸ್ಯೆ ವೈ.ಬಿ.ಉಮಾ ಸಭೆಯಲ್ಲಿ ಪ್ರಸ್ತಾಪಿಸಿದಾಗ ಸದಸ್ಯರಾದ ಶಿವಪ್ಪ, ಸೌಮ್ಯ, ನಾರಾಯಣ, ಪ್ರದೀಪ್, ಚಿದಾನಂದ, ಸೇರಿದಂತೆ ಇಡೀ ಆಡಳಿತ ಮಂಡಳಿ ಮೇಜು ತಟ್ಟಿ ಸರ್ಕಾರದ ಕ್ರಮವನ್ನು ಖಂಡಿಸಿದರು. ಸಭಾಧ್ಯಕ್ಷ ಪ್ರವೀಣ್ ಕುಮಾರ್ ಈ ಬಗ್ಗೆ ಸರ್ಕಾರಕ್ಕೆ ನಿಯೋಗ ತೆರಳಲು ಸಿದ್ಧ ಎಂದರು.
ಮಡಿಕೇರಿ ಮಾ.3 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡಗು ಜಿಲ್ಲಾ ಕಾರಾಗೃಹದ ಸಂದರ್ಶಕರ ಸಮಿತಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ಹನೀಫ್ ಕೊರ್ತಿ, ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಕೆ.ಆರ್ ಹಾಗೂ ವಿಮಲ ಹೆಚ್.ಬಿ ಅವರನ್ನು ಆಯ್ಕೆ ಮಾಡಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆದೇಶಿಸಿದ್ದಾರೆ. ಹಿರಿಯ ಕಾಂಗ್ರೆಸ್ಸಿಗ ಹನೀಫ್ ಕೊರ್ತಿ ಅವರು 5ನೇ ಬಾರಿಗೆ ನಾಮ ನಿರ್ದೇಶಿತ ಸದಸ್ಯರಾಗಿದ್ದಾರೆ.
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ “ದಿ.ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ” ಯು ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು ರಚಿಸಿದ “ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ ಬಿ.ಎಸ್.ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ ಕೃತಿಗಳನ್ನು ಆಹ್ವಾನಿಸಿದಾಗ ಹತ್ತು ಸಾಹಿತಿಗಳು ತಮ್ಮ ಕೃತಿಗಳನ್ನು ಪ್ರಸ್ತುತಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಹತ್ತು ಜನ ಲೇಖಕರಲ್ಲಿ ಅತಿ ಹೆಚ್ಚು ಅಂಕ ಪಡೆದ “ಶ್ರೀ ಕಾವೇರಿ ದರ್ಶನಂ -ಸಮಗ್ರ ಕಾವೇರಿ ಚರಿತೆ” ಕೃತಿಯ ಲೇಖಕ ನಾಗೇಶ್ ಕಾಲೂರು ಪಡೆದುಕೊಂಡಿದ್ದಾರೆ. ಮುಂದೆ ನಡೆಯುವ…
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಪಿ.ಎಂ.ಶ್ರೀ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ 2024 -25 ನೇ ಸಾಲಿನ 22ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಸಣ್ಣಕತೆಗಳ ಗೌರಮ್ಮ ದತ್ತಿ ನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವು ಮಾ.7 ರಂದು ಮೂರ್ನಾಡುವಿನಲ್ಲಿ ನಡೆಯಲಿದೆ. ಮೂರ್ನಾಡಿನ ಪಿ.ಎಂ.ಶ್ರೀ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಈ ಬಾರಿಯ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ವಿಜೇತರಾದ ಕೂಡಕಂಡಿ ಓಂ ಶ್ರೀ ದಯಾನಂದರವರಿಗೆ ಮೈಸೂರಿನ ಯುವರಾಜ ಕಾಲೇಜಿನ ಸಾಹಿತಿಗಳಾದ ಎಚ್.ನಿವೇದಿತಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್…
ಮಡಿಕೇರಿ ಮಾ.3 NEWS DESK : 2017-18, 2018-19 ಹಾಗೂ 2019-20ರ ತೆರಿಗೆ ಬಾಕಿ ಪಾವತಿಸಿ ದಂಡ ಹಾಗೂ ಬಡ್ಡಿಯ ಮನ್ನಾ ಮಾಡುವ ಯೋಜನೆಯ ಉಪಯೋಗ ಪಡೆದುಕೊಳ್ಳುವಂತೆ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಪಿ.ಪರಮೇಶ್ವರ ಗೌಡ ಜಿಎಸ್ ಟಿ ನೊಂದಾಯಿತರಿಗೆ ಕರೆ ನೀಡಿದರು. ಮೈಸೂರು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು (ಆಡಳಿತ) ನೇತೃತ್ವದಲ್ಲಿ ಕೊಡಗು ಜಿಲ್ಲಾ ಕೈಗಾರಿಕಾ ಮಂಡಳಿ, ಲೆಕ್ಕಪರಿಶೋಧಕರ ಸಂಘ ಹಾಗೂ ತೆರಿಗೆ ಸಲಹೆಗಾರರ ಸಹಕಾರದೊಂದಿಗೆ ಮಡಿಕೇರಿ ನಗರದ ಹೋಟೆಲ್ ಲೀ ಕೂರ್ಗ್ ಸಭಾಂಗಣದಲ್ಲಿ “ಜಿಎಸ್‌ಟಿ ಆಮ್ನೆಸ್ಟಿ ಯೋಜನೆ” ಕುರಿತು ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು. ಈ ಯೋಜನೆಯು ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 73ರಡಿ 2017-18 ರಿಂದ 2019-20 ರ ಆರ್ಥಿಕ ವರ್ಷಗಳಿಗೆ ಸಂಬಂಧಿಸಿದಂತೆ ಹೊರಡಿಸಲಾದ ಆದೇಶಗಳಿಗೆ, 2017-18 ರಿಂದ 2020-21ರವರೆಗೆ ಸೆಕ್ಷನ್ 16(4)ರಡಿ ನಿಗದಿತ ಅವಧಿಯ ನಂತರ ಪಡೆದುಕೊಂಡಿರುವ ಹೂಡುವಳಿ ತೆರಿಗೆ ಪ್ರಕರಣಗಳಿಗೆ ಅನ್ವಯಿಸುವುದಾಗಿ ತಿಳಿಸಿದರು. ವಾಣಿಜ್ಯ ತೆರಿಗೆ ಅಧಿಕಾರಿ ನಾಗೇಂದ್ರ ಮಾತನಾಡಿ, ಜಿಎಸ್‌ಟಿ ಕಾಯ್ದೆಯ ಅಡಿಯಲ್ಲಿ ಜಾರಿಗೆ ತರಲಾಗಿರುವ…
ವಿರಾಜಪೇಟೆ ಮಾ.3 NEWS DESK : ಪವಿತ್ರ ರಮ್‍ಝಾನ್ ತಿಂಗಳಿನಲ್ಲಿ ಮಸೀದಿಗಳಲ್ಲಿ ಬೆಳಗ್ಗಿನ ನಮಾಜ್ ಕರೆ (ಆಝಾನ್)ಗೆ ಧ್ವನಿವರ್ಧಕ ಬಳಸಲು ಅನುಮತಿ ನೀಡುವಂತೆ ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ಶಾಖೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಶಾಸಕರ ನಿವಾಸದಲ್ಲಿ ಮನವಿ ಸಲ್ಲಿಸಿದ ಶಾಖೆಯ ಪ್ರಮುಖರು ಹಾಗೂ ಪದಾಧಿಕಾರಿಗಳು, ಈ ಹಿಂದಿನ ಸರಕಾರ ಹೊರಡಿಸಿರುವ ಆದೇಶವನ್ನು ನಾವು ಗೌರವಿಸಿ ಪಾಲಿಸುತ್ತಿದ್ದೇವೆ. ಆದರೆ ಕನಿಷ್ಟ ರಮ್‍ಝಾನ್ ತಿಂಗಳಿನ ವೇಳೆಯಲ್ಲಾದರೂ ಆದೇಶಕ್ಕೆ ವಿನಾಯ್ತಿ ನೀಡಬೇಕೆಂಬುದು ಮನವಿ ಮಾಡಿದರು. ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ಶಾಖೆಯ ಅಧ್ಯಕ್ಷ ಸಿ.ಹೆಚ್.ರಫೀಖ್, ಉಪಾಧ್ಯಕ್ಷ ಮನಾಫ್, ಸಮಿತಿ ಸದಸ್ಯರುಗಳಾದ ಅರ್ಬಾಸ್, ಹಕೀಂ ಮುಸ್ಲಿಯಾರ್, ಅನೀಸ್ ಹಾಗೂ ಅನ್‍ಸಬ್ ಹಾಜರಿದ್ದರು. ಮನವಿ ಪತ್ರವನ್ನು ಸ್ವೀಕರಿಸಿದ ಶಾಸಕರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಕೆ.ಎಸ್.ಎಸ್.ಎಫ್ ಪದಾಧಿಕಾರಿಗಳು “ಪವಿತ್ರ ರಮಝಾನ್ ತಿಂಗಳಿನಲ್ಲಿ ಮುಂಜಾನೆಯ ಸಹರಿ ಮತ್ತು ನಮಾಝಿನ ವೇಳೆಯನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು ಆಝಾನ್…
ಪುತ್ತೂರು ಮಾ.3 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಪ್ರೊ.ಪ್ರದೀಪ್ ಕೆ.ಜಿ.ಕುಮಾರ್ ಪದ ಸ್ವೀಕಾರ ಮಾಡಿದ್ದಾರೆ. ಹದಿನೈದು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ನಿರ್ವಹಣೆಯಲ್ಲಿಯೂ ಚಾಕಚಕ್ಯತೆಯನ್ನು ಹೊಂದಿರುವ ಇವರು ವಿಭಾಗವನ್ನು ಸಮರ್ಥವಾಗಿ ಮುನ್ನಡೆಸಬಲ್ಲವರಾಗಿದ್ದಾರೆ. ಮಾಹಿತಿ ತಂತ್ರಜ್ಞಾನದಲ್ಲಿ ಪ್ರತಿಬಿಂಬ ಸಂಸ್ಕರಣೆ ಎನ್ನುವ ವಿಷಯದಲ್ಲಿ ಸಂಶೋಧನೆಯನ್ನು ನಡೆಸುತ್ತಿದ್ದು, ಇವರ ಸಂಶೊಧಿತ ಬರಹಗಳು 10ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.
ಪೊನ್ನಂಪೇಟೆ, ಮಾ.3 NEWS DESK : ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿ ಪುರಸ್ಕೃತರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಕೆದಮುಳ್ಳೂರು ಗ್ರಾ.ಪಂ. ಸದಸ್ಯರಾದ ಮೀತಲತಂಡ ಎಂ. ಇಸ್ಮಾಯಿಲ್ ಅವರನ್ನು ಕೆದಮುಳ್ಳೂರು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಸಾಧನೆಗಾಗಿ ಇಸ್ಮಾಯಿಲ್ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ಕಂಪ್ಯೂಟರ್ ಆಪರೇಟರ್ ಎಂಬ ವಿಶೇಷ ಪುರಸ್ಕಾರಕ್ಕೆ ಭಾಜನರಾದ ಕೆದಮುಳ್ಳೂರು ಗ್ರಾ.ಪಂ ಯ ಡಾಟಾ ಎಂಟ್ರಿ ಆಪರೇಟರ್ ಬಿ.ಜಿ.ಕಾವ್ಯ ಅವರನ್ನು ಕೆದಮುಳ್ಳೂರು ಗ್ರಾ.ಪಂ ಅಧ್ಯಕ್ಷ ಮಾಳೇಟಿರ ಜಫ್ರಿ ಉತ್ತಪ್ಪ ಹಾಗೂ ಸದಸ್ಯರು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಳೇಟಿರ ಜಫ್ರಿ ಉತ್ತಪ್ಪ, ಸತತವಾಗಿ 3ನೇ ಬಾರಿಗೆ ಗ್ರಾ. ಪಂ. ಸದಸ್ಯರಾಗಿ ಚುನಾಯಿತರಾಗಿರುವ ಇಸ್ಮಾಯಿಲ್ ಅವರ ಸಾಧನೆ…






