ಮಡಿಕೇರಿ ಮಾ.1 NEWS DESK : ನಗರದ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಕ್ಲಬ್ ಮಹೀಂದ್ರ ರೆಸಾರ್ಟ್ ಸಹಯೋಗದಲ್ಲಿ ನಗರದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಯ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸಪ್ತಾಹಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಭಿತ್ತಿ ಫಲಕ ಹಿಡಿದು, ಘೋಷಣೆ ಕೂಗುತ್ತ ಸಂಚಾರಿ ಅರಿವು ಮೂಡಿಸಿದರು. ಜ.ತಿಮ್ಮಯ್ಯ ವೃತ್ತದಿಂದ ಇಂದಿರಾಗಾಂಧಿ ವೃತ್ತದ ತನಕ ಜಾಥಾ ನಡೆಯಿತು. ಅನಂತರ ಮೈತ್ರಿ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ಈ ಸಂದರ್ಭ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ ಅವಘಡಗಳು ಹೆಚ್ಚಾಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ. ಇದರೊಂದಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುವ ಪ್ರಕರಣಗಳು ಅಧಿಕವಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‍ರಾಜ್, ಪ್ರೊಬೆಷನರಿ ಎಸ್.ಪಿ.ಡಾ.ಬೆನಕ ಪ್ರಸಾದ್, ಫೀ.ಮಾ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ.ಮೇ.ಬಿ.ರಾಘವ,…
ಲೇಖಕ: admin
ಮಡಿಕೇರಿ ಮಾ.1 NEWS DESK : ದೇವಸ್ತೂರಿನಲ್ಲಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಬೆನ್ನಲ್ಲೇ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಆಸ್ಪತ್ರೆಗೆ ಭೇಟಿ ನೀಡಿ ಸ್ವತಃ ತಾವೇ ಎಕ್ಸರೇ ಪರಿಶೀಲಿಸಿ ಸೂಕ್ತ ಚಿಕಿತ್ಸೆಗೆ ಸಹಕರಿಸಿದರು ಮಡಿಕೇರಿಯಿಂದ ದೇವಸ್ತೂರು ಕಾಲೂರು ಗ್ರಾಮಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಆಯ ತಪ್ಪಿಬಿದ್ದ ಪರಿಣಾಮ ಶಾಲ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಭಿವೃದ್ಧಿ ಕಾರ್ಯದ ಪ್ರಗತಿ ಪರಿಶೀಲನೆಯಲ್ಲಿದ್ದ ಡಾ.ಮಂತರ್ ಗೌಡ ಕಾರ್ಯಕ್ರಮ ಮೊಟುಕುಗೊಳಿಸಿ ಆಸ್ಪತ್ರೆಗೆ ಭೇಟಿ ನೀಡಿದರು. ತಾವೇ ಗಾಯಾಳುಗಳ ಎಕ್ಸರೇ ಪರಿಶೀಲಿಸಿ ಚಿಕಿತ್ಸೆಗೆ ಸೂಚನೆ ನೀಡುವ ಮೂಲಕ ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿ ತಮ್ಮ ವೃತ್ತಿ ಪರ ಕರ್ತವ್ಯವನ್ನು ಪಾಲಿಸಿದ್ದಾರೆ. ಬಸ್ ಅತೀ ವೇಗದಲ್ಲಿ ಚಲಿಸಿದ ಕಾರಣ ಅಪಘಾತವಾಗಿದೆ ಎಂದು ಗಾಯಾಳುಗಳು ಶಾಸಕರೊಂದಿಗೆ ವಿವರಣೆ ನೀಡಿದ ಹಿನ್ನಲೆಯಲ್ಲಿ ಬಸ್ ಚಾಲಕನ ಮೇಲೆ ಸೂಕ್ತ ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಗಾಯಾಳುಗಳಿಗೆ ಯಾವುದೇ ರೀತಿಯ…
ಮಡಿಕೇರಿ NEWS DESK ಮಾ.1 : ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಚಿಕ್ಕ ಇಂದುವಾಡಿಯಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮೈಸೂರಿನ ಲಿಖಿತ, ಶ್ರೀಲಕ್ಷಿö್ಮ, ಮಂಡ್ಯದ ಸುಹಾಸ್, ಶ್ರೇಯಸ್ ಹಾಗೂ ನಿತಿನ್ ಮೃತ ದುರ್ದೈವಿಗಳು. ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಾ.1ರಂದು (ಇಂದು) ಬೆಳಿಗ್ಗೆ ಮಲೈಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಎದುರಿಗೆ ಬಂದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟರು. ಭೀಕರ ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಟಿಪ್ಪರ್ ಮಗುಚಿಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಘಟನೆಯಿಂದ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಮಡಿಕೇರಿ ಮಾ.1 NEWS DESK : ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕೊಡಗು ಜಿಲ್ಲೆ ಡಿಎಆರ್ ಘಟಕದ ಹೆಡ್ ಕಾನ್ಸ್ಟೇಬಲ್ ಮನಮೋಹನ್ ಅವರ ಗರಡಿಯಲ್ಲಿ ತರಬೇತಿ ಪಡೆಯುತ್ತಿರುವ ಶ್ವಾನ “ಕಾಪರ್” ಬೆಳ್ಳಿಯ ಪದಕ (ದ್ವಿತೀಯ ಬಹುಮಾನ) ಪಡೆದಿರುವ ನಿಟ್ಟಿನಲ್ಲಿ ಮನಮೋಹನ್ ಅವರನ್ನು ಸನ್ಮಾನಿಸಲಾಯಿತು. ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್‍ರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಸಶಸ್ತ್ರ ಘಟಕ ಮಡಿಕೇರಿಯ ನಿರೀಕ್ಷಕ ಆರ್‍ಪಿಐ ಚೆನ್ನನಾಯಕ್, ಆರ್‍ಎಸ್‍ಐ ಹನುಮಂತ ಕೌಜಲಗಿ, ಸಿಬ್ಬಂದಿಗಳಾದ ಅನಿಲ್, ಸುಧೀರ್, ವಿಜಯ್, ಶಶಿಕುಮಾರ್, ಮಂಜುನಾಥ್ ಮತ್ತು ಮಹಾವೀರ ಇತರ ಸಿಬ್ಬಂದಿಗಳು ಹಾಜರಿದ್ದರು. ಶಾಸಕರಿಂದ ಶ್ಲಾಘನೆ :: ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟ ದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕೊಡಗು ಜಿಲ್ಲೆ ಡಿಎಆರ್ ಘಟಕದ ಹೆಡ್ ಕಾನ್ಸ್ಟೇಬಲ್ ಮನಮೋಹನ್ ಅವರ ಗರಡಿಯಲ್ಲಿ ತರಬೇತಿ ಪಡೆಯುತ್ತಿರುವ ಶ್ವಾನ “ಕಾಪರ್“ ಬೆಳ್ಳಿಯ ಪದಕ (ದ್ವಿತೀಯ ಬಹುಮಾನ) ಪಡೆದಿರುವ ನಿಟ್ಟಿನಲ್ಲಿ ಮನಮೋಹನ್ ಅವರನ್ನು ಶಾಸಕ…
ವಿರಾಜಪೇಟೆ ಮಾ.1 NEWS DESK : ವಿಕಸಿತ ಭಾರತದ ಗುರಿ ತಲುಪಲು ವಿಜ್ಞಾನದ ಪಾತ್ರ ಅತೀ ಮಹತ್ವದ್ದಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾಗತಿಕ ನಾಯಕತ್ವದಲ್ಲಿ ಭಾರತೀಯ ಯುವಕರು ತನ್ನದೇಯಾದ ಕೊಡುಗೆಯನ್ನು ನೀಡುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಗುರುತಿಸುವುದರ ಮೂಲಕ ವಿಕಸಿತ ಭಾರತಕ್ಕೆ ಮುನ್ನಡಿಯಾಗಿರುತ್ತಾರೆ ಎಂದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹಾಗೂ ಉಪನ್ಯಾಸಕಿ ಹೇಮ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ವಿಜ್ಞಾನ ವಿಭಾಗದ ಉಪನ್ಯಾಸಕರಾದ ನಿಶಾ, ಜೋಶಿಕಾ, ಸೌಮ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಗಳು ನಡೆಯಿತು.
ಮಡಿಕೇರಿ ಮಾ.1 NEWS DESK : ಕೊಡಗು ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಗೃಹ ರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿ ಇದ್ದು ತುರ್ತಾಗಿ ಅರ್ಹರನ್ನು ಅರ್ಹತೆಯ ಮೇರೆಗೆ ಸರ್ಕಾರದ ಮಟ್ಟದಲ್ಲಿ ಆಯ್ಕೆ ಮಾಡಬೇಕಾಗಿರುತ್ತದೆ. ಈ ಗೌರವ ಹುದ್ದೆಗೆ ಇಚ್ಛೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಚ್ಛೆಯುಳ್ಳ ಅಭ್ಯರ್ಥಿಗಳು ಜಿಲ್ಲಾಧಿಕಾರಿಗಳಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ 2025ರ ಏ.4 ರೊಳಗೆ ಸಲ್ಲಿಸುವಂತೆ ಪೌರರಕ್ಷಣೆ ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು, ಆರಕ್ಷಕ ಮಹಾ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಮಾ.1 NEWS DESK : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಲು ತಿಳಿಸಿದ್ದು, ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾ.8 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದು,್ದ ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ಮಡಿಕೇರಿ ಮಾ.1 NEWS DESK : ಕೊಡಗು ಜಿಲ್ಲೆಯಲ್ಲಿ ಕೊಡವ, ಅರೆಭಾಷಿಕರು ಸೇರಿದಂತೆ ಹಲವು ಸಣ್ಣ ಸಣ್ಣ ಭಾಷಿಕ ಸಮಾಜದವರು ಬದುಕಿನ ಬಂಡಿ ಸಾಗಿಸುತ್ತಿದ್ದು, ಎಲ್ಲಾ ಭಾಷಿಕರೂ ಕೊಡಗಿನ ಇತಿಹಾಸ ತಿಳಿದು, ಅಭಿವೃದ್ಧಿಯತ್ತ ಮುನ್ನಡೆಯಬೇಕು. ಸಣ್ಣ ಭಾಷೆಗಳನ್ನು ಉಳಿಸಿ ಬೆಳೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ಶುಕ್ರವಾರ ನಡೆದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಜಾತಿ, ಭಾಷೆ ಮೇಲೆ ಸಂಘರ್ಷ ಮಾಡದೆ ಸಾಮರಸ್ಯದ ಬದುಕು ಕಾಣಬೇಕಿದೆ. ಎಲ್ಲರೂ ಒಂದಾಗಿ ಸಾಗಬೇಕಿದೆ. ಯಾವುದೇ ಸಣ್ಣ ಭಾಷೆಯಾದರೂ ಅದು ಉಳಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರತಿಪಾದಿಸಿದರು.’ ಮಕ್ಕಳಿಗೆ ಅರೆಭಾಷೆ ಜೊತೆಗೆ ನಾಡಿನ ಭಾಷೆ ಕನ್ನಡ ಹಾಗೆಯೇ ಸಂಪನ್ಮೂಲ ಭಾಷೆಯಾದ ಇಂಗ್ಲೀಷ್ ಭಾಷೆ ಕಲಿಸೋಣ. ಆದರೆ…
ಮಡಿಕೇರಿ ಮಾ.1 NEWS DESK : ಇದೇ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1 ನಡೆಯಲಿZ್ವ. ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ಬಾರಿ 5240 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತೆಗೆದುಕೊಂಡಿದ್ದು, 4865 ಹೊಸ ವಿದ್ಯಾರ್ಥಿಗಳು, 375 ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 5, ಸೋಮವಾರಪೇಟೆ ತಾಲ್ಲೂಕಿನಲ್ಲಿ 8 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ :: ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಾರ್ಚ್, 21 ರಿಂದ ಏಪ್ರಿಲ್, 04 ರವರೆಗೆ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಶಾಲೆಗಳ ಸಂಖ್ಯೆ 171. ಕೊಡಗು ಜಿಲ್ಲೆಯಲ್ಲಿ ಈ ಬಾರಿ 6997 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ವಾರ್ಷಿಕ…
ಕುಶಾಲನಗರ ಫೆ.28 NEWS DESK : ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗಿರುವ ರಾಜ್ಯ ಸರ್ಕಾರ ಈಗ ಶಿಕ್ಷಣ ಕ್ಷೇತ್ರವನ್ನು ಹೊಸಕಿ ಹಾಕಲು ಮುಂದಾಗಿದ್ದು, ಹೊಸದಾಗಿ ಸ್ಥಾಪಿಸಲಾಗಿರುವ ಹತ್ತು ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತನ್ನು ಮುಚ್ಚಲು ನಿರ್ಧರಿಸಿರುವುದು ಸರಿಯಲ್ಲ. ನಮ್ಮ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಲು ನಿರ್ಧರಿಸಿವುದನ್ನು ಖಂಡಿಸಿ ಕುಶಾಲನಗರದಲ್ಲಿ ಪಾದಯಾತ್ರೆ ನಡೆಸಲಾಗಿದೆ. ಈ ನಿರ್ಧರ ಹಿಂತೆಗೆದುಕೊಳ್ಳುವವರೆಗೂ ನಮ್ಮ ದನಿಯನ್ನು ಗಟ್ಟಿಗೊಳಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ವಿಶ್ವವಿದ್ಯಾಲಯದಿಂದ ಕುಶಾಲನಗರದವರೆಗೂ ನಡೆದ ಪಾದಯಾತ್ರೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಸಂಸದ ಯದುವೀರ್ ಮಾತನಾಡಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಇಂಥ ನಿರ್ಧಾರಗಳನ್ನು ಕೈಗೊಂಡಿರುವ ಸರ್ಕಾರಕ್ಕೆ ಆಡಳಿತ ನಡೆಸುವ ನೈತಿಕತೆ ಇಲ್ಲ. ಆಡಳಿತ ನಡೆಸಲು ಆಗದಿದ್ದರೆ ಕೆಳಗಿಳಿಯಲಿ ಎಂದು ಸಂಸದ ಯದುವೀರ್ ಗುಡುಗಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಅತ್ತ ಫಲಾನುಭವಿಗಳಿಗೆ ಹಣ ನೀಡುತ್ತಿಲ್ಲ, ಇತ್ತ ಅಭಿವೃದ್ಧಿ…






