ಮಡಿಕೇರಿ ಫೆ.28 NEWS DESK : ವಿವಿಧ ಕ್ಷೇತ್ರದಲ್ಲಿ ಆಯ್ಕೆಯಾದ ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಸಮಾಜದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಯಿತು. ಸೌಹಾರ್ಧ ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಲಾ ಗೌರವ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಹಾಗೂ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಪಾಧಿಕಾರಿಗಳಾಗಿ ಆಯ್ಕೆಯಾದ ಕನ್ನಂಡ ಕವಿತ ಬೊಳ್ಳಪ್ಪ ಅವರನ್ನು ಆಡಳಿತ ಮಂಡಳಿಯವರು ಸನ್ಮಾನಿಸಿ ಗೌರವಿಸಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕೇಕಡ ವಿಜುದೇವಯ್ಯ, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಬೊಪ್ಪಂಡ ಸರಳಾ ಕರುಂಬಯ್ಯ, ಮಂಡಿರ ಸದಾಮುದ್ದಪ್ಪ, ಪುತ್ತರಿರ ಕರುಣ್ ಕಾಳಯ್ಯ, ಕಾಳಚಂಡ ಅಪ್ಪಣ್ಣ, ಶಾಂತೆಯಂಡ ವಿಶಾಲ್ ಕಾರ್ಯಪ್ಪ,ಕಾಂಡೆರ ಲಲ್ಲು ಕುಟ್ಟಪ್ಪ, ವ್ಯವಸ್ಥಾಪಕಿ ಮೈನಾ ಬೋಜಮ್ಮ ಹಾಜರಿದ್ದರು.
ಲೇಖಕ: admin
ಮಡಿಕೇರಿ ಫೆ.28 NEWS DESK : ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ವಿರೋಧಿಸಿ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಸಂಘದ ಪ್ರಮುಖರು, ದೈವ ಆರಾಧಕರು ಹಾಗೂ ದೈವ ನರ್ತಕರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಮಾತನಾಡಿ, ಮನೋರಂಜನೆಯ ಕಲೆಯ ಸಾಲಿಗೆ ದೈವ ಆರಾಧನೆಯನ್ನು ಸೇರಿಸುವ ಕ್ರಮ ಸರಿಯಲ್ಲವೆಂದರು. ದೈವ ಆರಾಧನೆಯು ಕರಾವಳಿ ಸೇರಿದಂತೆ ಕೊಡಗು ಜಿಲ್ಲೆಯಲ್ಲು ಬಹುಮುಖ್ಯ ನಂಬಿಕೆ ಮತ್ತು ಆರಾಧನೆ ಪದ್ದತಿಯಾಗಿದ್ದು, ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಈಗಿನ ಸರ್ಕಾರ ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿರುವುದು ದೈವಾರಾಧನೆ ಮಾಡುವ ಕ್ಷೇತ್ರದ ಜನರಿಗೆ ನೋವುಂಟಾಗಿದೆ. ದೈವ ನರ್ತನ ಸೇವೆ ಮಾಡುವ ಕೆಲವೇ ಸೀಮಿತ ವರ್ಗದ…
ಮಡಿಕೇರಿ ಫೆ.28 NEWS DESK : ಕೊಡಗು ವಿಶ್ವವಿದ್ಯಾನಿಲಯವನ್ನು ರದ್ದುಗೊಳಿಸುವುದು ಹಾಗೂ ಇತರ ವಿಶ್ವ ವಿದ್ಯಾನಿಲಯದ ಜೊತೆ ವಿಲೀನಗೊಳಿಸುವ ಸರಕಾರದ ಚಿಂತನೆಯ ಬಗ್ಗೆ ಮಡಿಕೇರಿ ಕೊಡವ ಸಮಾಜ ಖಂಡನೆ ವ್ಯಕ್ತಪಡಿಸಿದೆ. ಮಡಿಕೇರಿ ಕೊಡವ ಸಮಾಜದಲ್ಲಿ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆಮಾಡಬೇಕೆಂಬ ಶ್ರಮದ ಫಲವಾಗಿ ಇಂದು ಕೊಡಗು ವಿಶ್ವವಿದ್ಯಾನಿಲಯ ಪ್ರಾರಂಭಗೊಂಡು ಹೆಗ್ಗಳಿಕೆಗೆ ಕಾರಣವಾಗಿತ್ತು . ಆದರೆ ಏಕಾಏಕಿ ರದ್ದುಗೊಳಿಸುವ ತೀರ್ಮಾನ ಸರಿಯಲ್ಲ, ನಾವೆಲ್ಲ ರಾಜಕೀಯ ಬಿಟ್ಟು ಹೋರಾಡಬೇಕಿದೆ. ಕೊಡಗಿನ ಈರ್ವ ಶಾಸಕರು ಇದರ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಸರಕಾರದ ಗಮನಕ್ಕೆ ತಂದು ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಿಕೊಳ್ಳಬೇಕೆಂದರು. ಅಬ್ಕಾರಿ ಇಲಾಖೆಯ ನೂತನ ಸುತ್ತೋಲೆಯಂತೆ ಯಾವುದೇ ಸಮಾಜದ ಸಭೆ ಸಮಾರಂಭಗಳಲ್ಲಿ ಮದ್ಯ ಬಳಸಲು ಅನುಮತಿ ಪಡೆಯಬೇಕೆಂಬ ಕ್ರಮ ಸರಿಯಲ್ಲ. ಕೊಡಗಿನಲ್ಲಿ ಯಾವುದೇ ಹಬ್ಬಹರಿದಿನ, ಮದುವೆ, ಸಮಾರಂಭಗಳಲ್ಲಿ ಗುರುಕಾರೊಣನಿಗೆ ಮಧ್ಯವನ್ನು ಎಡೆ ಇಟ್ಟು ಎಲ್ಲರು ಸೇವಿಸುವುದು ಸಂಪ್ರದಾಯ. ದೇಶ ಸೇವೆಯಲ್ಲಿ ಸೇವೆಸಲ್ಲಿಸಿದ…
ಕುಶಾಲನಗರ ಫೆ.28 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಇಕೋ ಕ್ಲಬ್, ಎನ್.ಎಸ್.ಎಸ್.ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ “* *ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವ ಜನತೆಯ ಸಬಲೀಕರಣ*” ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-2025 ಹಾಗೂ ವಿಜ್ಞಾನ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಜ್ಞಾನ ದಿನಾಚರಣೆಯ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವ ಕುರಿತು ಭಾರತೀಯ ಸಂವಿಧಾನದ 51 ( ಎಚ್) ವಿಧಿಯ ಮಹತ್ವ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತಾದ ಪ್ರತಿಜ್ಞಾ ವಿಧಿ ಬೋಧಿಸಿ ವಿಜ್ಞಾನ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ವಿಜ್ಞಾನ ಕಾರ್ಯಕ್ರಮಗಳ ಸಂಘಟಕ ಟಿ.ಜಿ.ಪ್ರೇಮಕುಮಾರ್, ವಿಜ್ಞಾನ ಎಲ್ಲರಿಗೂ ಅಗತ್ಯವಾಗಿದೆ. ಭಾರತವು ವಿಶ್ವಮಟ್ಟದಲ್ಲಿ ವಿಜ್ಞಾನದ ಪ್ರಗತಿಗೆ…
ಮಡಿಕೇರಿ ಫೆ.28 NEWS DESK : ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆದಿವಾಸಿ ಸಮುದಾಯಗಳ ಸಮಸ್ಯೆಗಳಿಗೆ ಮುಂದಿನ 15 ದಿನಗಳೊಳಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನೂರಾರು ಆದಿವಾಸಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಆದಿವಾಸಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಜೇನುಕುರುಬ, ಬೆಟ್ಟಕುರುಬ, ಸೋಲಿಗ, ಯರವ, ಮಲೆಕುಡಿಯ ಸೇರಿದಂತೆ ಆದಿವಾಸಿ ಸಮುದಾಯಕ್ಕೆ ಸೇರಿದ ಜನರು ತಲೆತಲಾಂತರಗಳಿಂದ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಇವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ ಆದಿವಾಸಿ ಮುಖಂಡ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಆರ್.ಕೆ.ಚಂದ್ರ ಅವರ ನೇತೃತ್ವದಲ್ಲಿ ಹಲವು ಹಾಡಿಗಳ ನಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದಿದ್ದರೂ ಕೊಡಗು ಜಿಲ್ಲೆಯ ಮೂಲ ನಿವಾಸಿಗಳಾದ ಆದಿವಾಸಿಗಳು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಇಂದಿಗೂ ಸ್ವಂತ ಸೂರಿಲ್ಲದೆ, ಟಾರ್ಪಲ್ ಶೀಟ್ ನಂತಹ ಗುಡಿಸಲುಗಳಲ್ಲಿ…
ಮಡಿಕೇರಿ ಫೆ.28 NEWS DESK : ತಮ್ಮ ಗ್ರಾಮಕ್ಕೆ ಹೆದ್ದಾರಿಯಿಂದ ರಸ್ತೆ ಸಂಪರ್ಕ ಹೊಂದಲು ಹತ್ತಾರು ರೈತರು ಸ್ವಯಂ ಪ್ರೇರಣೆಯಿಂದ ತಮ್ಮ ಜಮೀನುಗಳನ್ನು ನೀಡಲು ಮುಂದಾಗಿದ್ದು, ರೈತರ ನಡೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ತಾಲೂಕಿನ ಅರ್ವತ್ತೋಕ್ಲು ಗ್ರಾಮಕ್ಕೆ ಮಡಿಕೇರಿ-ಭಾಗಮಂಡಲ ರಸ್ತೆಯ ಅಪ್ಪಂಗಳದಿಂದ ಎರಡು ಕಿ.ಮೀ ನಷ್ಟು ದೂರದ ಕಾಲು ದಾರಿಯಿದೆ. ಆದರೆ ವಾಹನದ ಮೂಲಕ ಗ್ರಾಮ ತಲುಪಬೇಕು ಅಂದರೆ ತಾಳತ್ ಮನೆ, ಮೇಕೇರಿ, ಬಿಳಿಗೇರಿ ಗ್ರಾಮದ ಮೂಲಕ ಸುಮಾರು 10 ಕಿ.ಮೀ ದೂರ ಕ್ರಮಿಸಬೇಕು. ಹಾಗಾಗಿ ಗ್ರಾಮಸ್ಥರು ವಾಹನದಲ್ಲಿ ತ್ರಾಸದಾಯಕ ಒಡಾಟವನ್ನು ಮಾಡುತ್ತಿದ್ದರು. 2003 ರಲ್ಲಿ ಒಮ್ಮೆ ಎರಡು ಕಿ.ಮೀ ಕಾಲುದಾರಿಯನ್ನು ವಾಹನ ಸಂಚಾರದ ರಸ್ತೆಯಾಗಿ ಮಾರ್ಪಾಡು ಮಾಡಲು ಸಭೆ ನಡೆಸಿದ್ದರು. ಆದರೆ ರೈತರು ಜಮೀನು ಕಳೆದುಕೊಳ್ಳಲು ಒಪ್ಪದೇ ಇರುವುದರಿಂದ ಯೋಜನೆ ಕಾರ್ಯಗತವಾಗಿರಲಿಲ್ಲ. ಈಗ ಆ ಹಾದಿಯಲ್ಲಿರುವ ಸುಮಾರು ಹದಿನಾರು ರೈತರು ಗ್ರಾಮದ ಜನತೆಯ ಒಳಿತಿನ ದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಜಮೀನನ್ನು…
ಬೆಂಗಳೂರು ಫೆ.28 NEWS DESK : ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ, ತಮ್ಮ ಬೇಡಿಕೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ನಗರದ ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು. ರಸ್ತೆ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ತಲಾ ₹100 ಕೋಟಿ ಅನುದಾನಕ್ಕೆ ಒತ್ತಾಯಿಸಿದರು. ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ನಿಯೋಗದಲ್ಲಿ ಬಿಜೆಪಿ ಪಕ್ಷದ ಶಾಸಕರು,…
ಮಡಿಕೇರಿ ಫೆ.28 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ನಗರದ ಗೌಡ ಕೊಡಗು ಗೌಡ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಬರಹಗಾರರಿಗೆ ಪ್ರೋತ್ಸಾಹ ಬಹುಮಾನ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಇಂತಹ ಕಾರ್ಯಕ್ರಮಗಳು ಸಮುದಾಯದ ಬರಹಗಾರರನ್ನು ಪ್ರೋತ್ಸಾಹಿಸುವುದರೊಂದಿಗೆ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಅಕಾಡೆಮಿಯ ಎಲ್ಲಾ ಕಾರ್ಯಕ್ರಮಗಳು ಸಮುದಾಯದ ಏಳಿಗೆಗೆ ಹಾಗೂ ಅಭಿವೃದ್ಧಿಗೆ ಪೂರಕ ಆಗಿರುವುದರೊಂದಿಗೆ ಅರೆಭಾಷೆ ಜನಾಂಗದ ಇತಿಹಾಸ ಹಾಗೂ ಸಮಗ್ರ ಚಟುವಟಿಕೆಗಳನ್ನು ಜಗತ್ತಿಗೆ ತಿಳಿಸುವಂತೆ ಕಾರ್ಯಪ್ರವೃತ್ತರಾಗಲಿ ಎಂದು ಹೇಳಿದರು. ಅರೆಭಾಷೆ ಸಮುದಾಯಕ್ಕೆ ತನ್ನಿಂದ ಆಗುವ ಎಲ್ಲಾ ರೀತಿಯ ಸಹಾಯವನ್ನು ಒದಗಿಸಲು ಸಿದ್ಧರಿರುವುದಾಗಿ ಹೇಳಿದ ಶಾಸಕರು, ಐನ್ ಮನೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಮನೆಯ ಇತಿಹಾಸವನ್ನು ಜಗತ್ತಿಗೆ ಹೇಳುವ…
ಕುಶಾಲನಗರ ಫೆ.28 NEWS DESK : ಜಾನಪದ ಗೀತೆಗಳನ್ನು ರಚಿಸಿದವರು ಯಾರೆಂದು ಎಲ್ಲೂ ಉಲ್ಲೇಖವಾಗಿರುವುದಿಲ್ಲ. ವಿಶ್ವದಲ್ಲೇ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ ಎಂದು ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಂಡ್ರಂಗಿ ನಾಗರಾಜ್ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯ ಬೃಂದಾವನ ಬಡಾವಣೆಯಲ್ಲಿ ಆಯೋಜಿಸಿದ್ದ ಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡು ದತ್ತಿ ಕಾರ್ಯಕ್ರಮದ ಅಂಗವಾಗಿ ಜಾನಪದ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು, ಜಾನಪದವನ್ನು ಈಗಲೂ ಗ್ರಾಮೀಣ ಭಾಗಗಳಲ್ಲಿ ಕೇಳಬಹುದು. ಇದನ್ನು ಮನುಷ್ಯ ಜೀವನದ ಎಲ್ಲ ಘಟ್ಟಗಳಲ್ಲೂ ಬಳಸುತ್ತಾರೆ. ಸುಖ, ದುಃಖಗಳ ಸಂದರ್ಭಗಳ ಅನುಸಾರ ಸ್ಥಳದಲ್ಲೇ ಗೀತೆಗಳನ್ನು ರಚಿಸಿ ಹಾಡುವ ಅದ್ಬುತ ಜ್ಞಾನ ಹೊಂದಿರುವ ಜನರನ್ನು ಕಾಣಬಹುದು. ಜಾನಪದ ಗೀತೆಗಳನ್ನು ಹೆಚ್ಚಾಗಿ ಗ್ರಾಮೀಣ ಜನರು ಬಳಸಿ, ತಾನು ಮಾಡುವ ಕೆಲಸಗಳಲ್ಲಿ ತನ್ಮಯತೆ ಮತ್ತು ಶಕ್ತಿ ಪಡೆಯುತ್ತಾರೆ ಅಂತಹ ಶ್ರೇಷ್ಠ ಶಕ್ತಿಯಿದೆ ಎಂದರು. ಜನಪದ ಮತ್ತು ಜಾನಪದ ಎನ್ನುವ ಎರಡು ವಿಧವನ್ನು ವಿವರಿಸಿದರು.…
ನಾಪೋಕ್ಲು ಫೆ.28 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಉಪಾಧ್ಯಕ್ಷರರಾಗಿ ಸಿ.ಎಸ್.ಸುಮಿತ್ರಾ, ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಧ್ಯಾನಿ ಕುಶಾಲಪ್ಪ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಮಲ್ಲಂಡ ಶ್ರುತಿ ಮುದ್ದಪ್ಪ, ಮೀತಲತಂಡ ಎಂ.ಇಸ್ಮಾಯಿಲ್, ಶರಣಗೌಡ ಹರಗ, ಕಡೆಮಾಡ ಸುವಿತ್ ಸೋಮಣ್ಣ, ಚೊಕ್ಕಂಡ ನಜೀರ್ ಪಾಲಿಬೆಟ್ಟ, ಎಂ.ಬಿ ವಿನ್ಸೆಂಟ್ ವಿನೋದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.






