ಮಡಿಕೇರಿ ಫೆ.28 NEWS DESK : ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ದೈವ ಆರಾಧಕರು ಮತ್ತು ದೈವ ನರ್ತಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಮಾತನಾಡಿ, ದೈವ ಆರಾಧನೆಯು ಕರಾವಳಿ ಸೇರಿದಂತೆ ಕೊಡಗು ಜಿಲ್ಲೆಯಲ್ಲು ಅನೇಕ ವರ್ಷದಿಂದ ಬಹುಮುಖ್ಯ ನಂಬಿಕೆ ಮತ್ತು ಆರಾಧನೆ ಪದ್ದತಿಯಾಗಿದ್ದು, ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮ ಖಂಡನೀಯ, ಸರಕಾರ ತಕ್ಷಣವೇ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಪ್ರಮುಖರಾದ ಹರೀಶ್ ಜಿ.ಆಚಾರ್ಯ, ಬಿ.ಎ.ಜನಾರ್ಧನ, ದಿನೇಶ್, ರಮೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಬೇಡಿಕೆಯ…
ಲೇಖಕ: admin
ವಿರಾಜಪೇಟೆ ಫೆ.28 NEWS DESK : ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಕೊಡವಾಮೇ ಬಾಳೋ ಪಾದಯಾತ್ರೆಗೆ ಶ್ರಮಿಸಿದ ಸಂಘಟನೆಗಳ ಪ್ರಮುಖರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಕೊಡವ ಸಮಾಜದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಂಸ್ಕೃತಿ, ಪದ್ಧತಿ, ಪರಂಪರೆಯ ರಕ್ಷಣೆ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುವ ದಿಸೆಯಲ್ಲಿ ಕೊಡವರು ಹಾಗೂ ಕೊಡವ ಭಾಷಿಕ ಸಮುದಾಯದವರಿಂದ ದಕ್ಷಿಣ ಕೊಡಗಿನ ಕುಟ್ಟದಿಂದ ಮಡಿಕೇರಿವರೆಗೆ ‘ಕೊಡವಾಮೆ ಬಾಳೋ’ ಪಾದಯಾತ್ರೆ ಅತ್ಯಂತ ಶಾಂತಿಯುತವಾಗಿ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಪಾದಯಾತ್ರೆ ಯಶಸ್ವಿಗೆ ಶ್ರಮಿಸಿದವರನ್ನು ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಅಲ್ಲಪಂಡ ತಾರ ಗಾಂಧಿ ಅವರು ತಪ್ಪಡಕ ಕಟ್ಟುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಕೊಡವರು ಮತ್ತು ಕೊಡವ ಭಾಷಿಕ ಸಮುದಾಯದವರು ಒಗ್ಗಟ್ಟಿನಿಂದ ನಡೆಸಿದ ಕೊಡವಾಮೆ ಬಾಳೋ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ. ಪಾದಯಾತ್ರೆ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ…
ಮಡಿಕೇರಿ ಫೆ.28 NEWS DESK : ಪ್ರತಿವರ್ಷದಂತೆ ಈ ಬಾರಿಯೂ ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಸಂಪ್ರದಾಯದಂತೆ ಮಹಾಶಿವರಾತ್ರಿಯ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆ.26 ರಂದು ಮುಂಜಾನೆಯಿಂದಲೇ ಶತರುದ್ರಾಭಿಷೇಕ, ರುದ್ರಹೋಮ ನಡೆಯಿತು. ಮಧ್ಯಾಹ್ನ ರುದ್ರಹೋಮದ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಂಜೆ ತಾಯಂಬಕ ಸೇವೆ, ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ ನಡೆಯಿತು. ಇದೇ ಸಂದರ್ಭ ಭಜನೆ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ರಾತ್ರಿ ದೇವರ ತ್ರಿವೇಣಿ ಸಂಗಮ ಬೇಟಿ, ದೇವರ ಕಟ್ಟೆಪೂಜೆ ಮತ್ತು ಬಾಣಬಿರುಸು ಕಾರ್ಯಕ್ರಮ ನೆರವೇರಿತು. ನಂತರ ಯಕ್ಷ ಕಾವ್ಯ ತರಂಗಿಣಿ ಭಾಗವತ ದಿ|| ಚಂದಪ್ಪ ಪೂಜಾರಿ ಪ್ರತಿಷ್ಠಾನ (ರಿ) ದರ್ಬೆ ಬಂಟ್ವಾಳ ದಕ್ಷಿಣ ಕನ್ನಡ ಇವರಿಂದ ಸ್ವರ ಮಾಧುರಿ ಕಾವ್ಯ ಕನ್ನಿಕೆ ಬಿರುದಾಂಕಿತ ಸಂದ್ಯಾ ಪೂಜಾರಿ ದರ್ಬೆ ಇವರ ದಕ್ಷ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ-ಪ್ರಸಂಗ “ಹರಿ ಹರ ಸುತ…
ಮಡಿಕೇರಿ ಫೆ.28 NEWS DESK : ಮನುಷ್ಯ ಕೋಟಿ ಕೋಟಿ ಸಂಪಾದಿಸುವುದು ಸಾಧನೆ ಈ ರೀತಿಯ ಸಂಪಾದನೆ ಆತನಿಗೆ ಸಂತೋಷವನ್ನು ನೀಡುತ್ತದೆ. ಆದರೆ ತೃಪ್ತಿ ಬೇಕಾದರೆ ತಾನು ಸಂಪಾದಿಸಿದರಲ್ಲಿ ಸ್ವಲ್ಪ ಸಮಾಜ ಸೇವೆ ಮಾಡಬೇಕು ಎಂದು ವಿರಾಜಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಣವ್ ಎಂ.ಚಿತ್ರ ಬಾನು ಅಭಿಪ್ರಾಯ ವ್ಯಕ್ತಪಡಿಸಿದರು. ಬಿ.ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವೇರಿ ಪದವಿ ಕಾಲೇಜಿನ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನು ಎಲ್ಲವನ್ನು ಸಮಾಜದಿಂದ ಸಂಪಾದಿಸುತ್ತಾನೆ. ಈ ರೀತಿ ತಾನು ಸಂಪಾದಿಸಿದ ಸಂಪತ್ತಿನ ಅಲ್ಪ ಭಾಗವನ್ನು ಇತರರಿಗೆ ದಾನ ನೀಡಿದರೆ ಅಥವಾ ಸಮಾಜ ಸೇವೆಗೆ ಬಳಸಿದರೆ ದಾನ ನೀಡಿದವನಿಗೆ ಸಂತೋಷ ಹಾಗೂ ತೃಪ್ತಿಯನ್ನು ತಂದುಕೊಡುತ್ತದೆ ಎಂದರು. ಶಾಲೆಯ ಮುಖ್ಯ ಶಿಕ್ಷಕರಾದ ಸುಜಾತ ಮಾತನಾಡಿ, ಇಂತಹ ಶಿಬಿರಗಳು ನಡೆದಾಗ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ನಾವು ಕೇವಲ ನಾಯಕರಾದರೆ ಸಾಲದು ನಾಯಕರಲ್ಲಿ ಉತ್ತಮ ನಾಯಕರಾಗಬೇಕು. ವಿದ್ಯಾರ್ಥಿ…
ಕುಶಾಲನಗರ NEWS DESK ಫೆ.27 : ಜಿಲ್ಲೆಯ ಕುಶಾಲನಗರದಲ್ಲಿ ಈಗಾಗಲೇ ಸ್ಥಾಪಿತವಾಗಿರುವ ಕೊಡಗು ವಿಶ್ವವಿದ್ಯಾಲಯವನ್ನು ರದ್ದುಗೊಳಿಸಿ ಇತರ ವಿವಿಗಳಿಗೆ ವಿಲೀನಗೊಳಿಸಲು ಚಿಂತನೆ ಹರಿಸಿರುವ ಸರ್ಕಾರದ ಸಚಿವ ಸಂಪುಟದ ಉಪಸಮಿತಿಯ ಪ್ರಸ್ತಾವನೆಯನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಕುಶಾಲನಗರ ತಾಲೂಕು ಘಟಕ ಒತ್ತಾಯಿಸಿದೆ. ಈ ಸಂಬಂಧ ತಾಲೂಕು ಸಂಘದ ಅಧ್ಯಕ್ಷರಾದ ಎಂ ಬಿ ಮೊಣ್ಣಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರಕಾರ ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿದ್ದು, ಪ್ರಸಕ್ತ ಆಡಳಿತದಲ್ಲಿರುವ ಸರ್ಕಾರ ವಿವಿಯನ್ನು ಉಳಿಸಿ ಅಭಿವೃದ್ಧಿಗೊಳಿಸಬೇಕು ಎಂದು ಹೇಳಿದರು. ಜಿಲ್ಲೆಯ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಇಲ್ಲಿಯೇ ಅವಕಾಶ ನೀಡಬೇಕು ಆ ಮೂಲಕ ಎಲ್ಲರಿಗೂ ಉನ್ನತ ಶಿಕ್ಷಣದ ವ್ಯಾಸಂಗ ಮಾಡುವ ಅವಕಾಶ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದರು. ಈ ಸಂಬಂಧ ಹೋರಾಟಕ್ಕೆ ತಮ್ಮ ಸಂಘ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ತಿಳಿಸಿದರು. ಸಂಘದ ಸ್ಥಾಪಕ ಅಧ್ಯಕ್ಷರು ಹಾಗೂ ಸಲಹೆಗಾರರು ಆಗಿರುವ ಎಂ ಎಚ್ ನಜೀರ್…
ಕುಶಾಲನಗರ NEWS DESK ಫೆ.27 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯ ಹಾಗೂ ನೆರೆಯ ವಿವಿಧೆಡೆಯ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ಮಾರ್ಚ್ 2ರಂದು ಅರೆ ಭಾಷೆ ಗಡಿನಾಡ ಉತ್ಸವ-2025 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪೊನ್ನಚ್ಚನ ಮೋಹನ್ ತಿಳಿಸಿದ್ದಾರೆ. ಅವರು ಕುಶಾಲನಗರದ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಗಡಿ ಭಾಗದಲ್ಲಿ ಉತ್ಸವ ಮೂಲಕ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ ಎಂದರು. ಭಾಷೆ ಅಳಿದಲ್ಲಿ ಸಮುದಾಯದ ಸಂಸ್ಕೃತಿ ನಾಶ ಆಗುವ ಆತಂಕ ವ್ಯಕ್ತಪಡಿಸಿದ ಅವರು ಈ ಹಿನ್ನೆಲೆಯಲ್ಲಿ ಮಾರ್ಚ್ ಎರಡರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಅಂದು ಬೆಳಗ್ಗೆ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿಯಿಂದ 9 ಗಂಟೆಗೆ ಮೆರವಣಿಗೆ ಹೊರಡಲಿದೆ. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ…
ಕುಶಾಲನಗರ NEWS DESK ಫೆ.27 : ಕೊಡಗು ವಿವಿ ರದ್ದುಗೊಳಿಸಿ ಮಂಗಳೂರು ವಿವಿಗೆ ವಿಲೀನಗೊಳಿಸುವ ಸರ್ಕಾರದ ಚಿಂತನೆಯನ್ನು ವಿರೋಧಿಸಿ (28) ಅಳುವಾರ ವಿಶ್ವವಿದ್ಯಾಲಯದಿಂದ ಕುಶಾಲನಗರಕ್ಕೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಎರಡು ದಶಕಗಳ ಅವಧಿಯಿಂದ ಕೊಡಗು ಜಿಲ್ಲೆಗೆ ಪ್ರತ್ಯೇಕ ವಿವಿ ಬಗ್ಗೆ ಕಾಳಜಿ ವಹಿಸಿ ತಮ್ಮ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಶಂಕು ಸ್ಥಾಪನೆ ಮಾಡುವುದರೊಂದಿಗೆ ಸ್ಥಾಪನೆಗೊಂಡ ವಿಶ್ವವಿದ್ಯಾಲಯವನ್ನು ನಂತರ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇದೀಗ ಕೊಡಗು ವಿವಿ ರದ್ದುಗೊಳಿಸಿ ಮಂಗಳೂರು ವಿವಿಗೆ ವಿಲೀನಗೊಳಿಸುವ ಚಿಂತನೆ ನಡೆಸಿರುವುದು ಖಂಡನೀಯ. ಕೊಡಗು ಜಿಲ್ಲೆಯ ತಳಸ್ತರದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅನಾನುಕೂಲವಾಗಲಿದೆ. ತಕ್ಷಣ ಸರ್ಕಾರದ ಚಿಂತನೆಯನ್ನು ಹಿಂಪಡೆಯಬೇಕು. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಹೋರಾಟಗಳು ನಡೆಯುತ್ತಿವೆ. ಈ ಸಂಬಂಧ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ನೇತೃತ್ವದಲ್ಲಿ ನಡೆಯಲಿರುವ ಬೃಹತ್ ಜಾಥಾ ಕಾರ್ಯಕ್ರಮಕ್ಕೆ ಬಿಜೆಪಿ ಸಂಪೂರ್ಣ…
ಮಡಿಕೇರಿ ಫೆ.27 NEWS DESK : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು 2025 ರ ಮಾರ್ಚ್, 31 ರ ಸಂಜೆ 5.30 ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾ ಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ…
ಮಡಿಕೇರಿ ಫೆ.27 NEWS DESK : ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 ಸಹಾಯವಾಣಿ 1912 ಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ಹಾಗೆಯೇ ಕೊಡಗು ಜಿಲ್ಲೆಯಾದ್ಯಂತ ರೈತರು ತಮ್ಮ ತೋಟಗಳಲ್ಲಿ ಕಾಳುಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ, ಕಬ್ಬಿಣದ ಏಣಿ ಬದಲು ಪೈಬರ್…
ಮಡಿಕೇರಿ ಫೆ.27 NEWS DESK : ಗತಕಾಲದ ಆದಿಮಸಂಜಾತ ಕೊಡವ ಯೋಧರು ಹಾಗೂ ದಂತಕಥೆಗಳ ಪ್ರತಿಮೆಗಳನ್ನು ಸ್ಥಾಪಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಮಡಿಕೇರಿ ಕೋಟೆ, ಭಾಗಮಂಡಲ ಮತ್ತು ತಲಕಾವೇರಿ ವ್ಯಾಪ್ತಿಯಲ್ಲಿ ದಂತಕಥೆಗಳಾಗಿ ಉಳಿದುಕೊಂಡಿರುವ ಹುತಾತ್ಮ ಯೋಧರ ಶೌರ್ಯವನ್ನು ಪುರಾತತ್ವ ಶಾಸ್ತ್ರದ ಸ್ಮಾರಕಗಳಾಗಿ ಅನಾವರಣಗೊಳಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಧ್ಯೆಯುಗದ ಆದಿಮಸಂಜಾತ ಕೊಡವರು ಕೊಡವಲ್ಯಾಂಡ್ ಅನ್ನು ಶೌರ್ಯದ ಕೇಂದ್ರವಾಗಿ ಮತ್ತು ಸಮರ ರಂಗದ ತೂಗು ತೊಟ್ಟಿಲನ್ನಾಗಿ ರೂಪಿಸಿದರು. ಪ್ರತಿಯೊಂದು ಕೊಡವ ಕುಲದಲ್ಲಿಯೂ, ತಮ್ಮ ಶೌರ್ಯವನ್ನು ಪ್ರದರ್ಶಿಸಿದ ಮತ್ತು ಈ ಪವಿತ್ರ ಭೂಮಿಯನ್ನು ಆಕ್ರಮಣದಿಂದ ರಕ್ಷಿಸಿದ ಅಪ್ರತಿಮ ವೀರಯೋಧರಿದ್ದರು. ದೇವಟ್ ಪರಂಬು ಹತ್ಯಾಕಾಂಡ ದುರಂತ, ಅರಮನೆಯಲ್ಲಿನ ಪಿತೂರಿ, ಕೊಡವರ ರಾಜಕೀಯ ಹತ್ಯೆ ಮತ್ತು ಮುಳ್ಳುಸೋಗೆ ಹಾಗೂ ಉಲುಗುಲಿಯಲ್ಲಿ ಟಿಪ್ಪು-ಹೈದರ್ ವಿರುದ್ಧ 32 ಬಾರಿ ನಡೆದ ಗೆರಿಲ್ಲಾ ಯುದ್ಧಗಳು, ಹಾಗೆಯೇ ಲಕ್ಕಡಿಕೋಟೆ, ಪಾಲ್ತೋಪ್ ಮತ್ತು ಪಾಲ್ಪರೆಯಂತಹ ಸಮರ ಭೂಮಿಗಳಲ್ಲಿ ಇತರ ಬಾಹ್ಯ…






