ಲೇಖಕ: admin

ಮಡಿಕೇರಿ ಫೆ.27 NEWS DESK : ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಫೆ.28 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ.  ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೈವ ಆರಾಧಕರು ಮತ್ತು  ದೈವ ನರ್ತಕರಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಸುತ್ತೋಲೆ ಹಿಂಪಡೆಯುವಂತೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.27 NEWS DESK :  ಹೊದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ ಹಾಗೂ ಕಾನ್ಶಿರಾಮ್ ನಗರದಲ್ಲಿ ಸರಕಾರದಿಂದ ಬಿಡುಗಡೆಯಾದ ರೂ.2 ಕೋಟಿ ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾ.ಪಂ ಅಧ್ಯಕ್ಷ ಹೆಚ್.ಎ ಹಂಸ  ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಹೊದ್ದೂರು ಗ್ರಾಮ ಪಂಚಾಯಿತಿಯ ಬಗ್ಗೆ ಶಾಸಕರಾದ ಡಾ.ಮಂತರ್ ಗೌಡ ವಿಶೇಷ ಕಾಳಜಿ ವಹಿಸಿ ಅನುದಾನವನ್ನು ನೀಡುತ್ತಿದ್ದಾರೆ.  ಪಾಲೆಮಾಡು ಮತ್ತು ಕಾನ್ಶಿರಾಮ ಕಾಲೋನಿಗೆ ತಲಾ ಒಂದು ಕೋಟಿ ರೂ ಅನುದಾನವನ್ನು ನೀಡಿದ್ದಾರೆ‌ ಎಂದು ಹೇಳಿದರು. ಈ ಸಂದರ್ಭ ಕಾಮಗಾರಿಯ ಗುಣಮಟ್ಟವನ್ನು ಕಾಪಾಡುವಂತೆ ಗುತ್ತಿಗೆದಾರರಿಗೆ ಹೆಚ್.ಎ.ಹಂಸ ಸೂಚನೆ ನೀಡಿದ್ದರು. ಗ್ರಾ.ಪಂ  ಉಪಾಧ್ಯಕ್ಷ ಅನುರಾಧ, ಸದಸ್ಯರಾದ ಹಮೀದ್ , ಹೊನ್ನಪ್ಪ ಕುಸುಮಾವತ, ಮೊಣ್ಣಪ್ಪ ಹಾಗೂ ಗ್ರಾಮಸ್ಥರು ಇದ್ದರು.

Read More

ಸೋಮವಾರಪೇಟೆ ಫೆ.27 NEWS DESK : ಕೇಂದ್ರ ಬಜೆಟ್‍ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳಿದ್ದು, ಹಂತ ಹಂತವಾಗಿ ಅವುಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ತಿಳಿಸಿದರು. ಗೌಡಳ್ಳಿ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದ ಜಾತ್ರೋತ್ಸವ ಹಾಗೂ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಧರ್ಮದ ಮೂಲಕ ಸಮಾಜದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕ್ರೀಡೆಯನ್ನು ಬಳಸಿಕೊಳ್ಳಬೇಕಿದೆ ಎಂದರು. ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಕೊಡಗಿನ ಜನರನ್ನು ಕ್ರೀಡಾ ಕ್ಷೇತ್ರದಿಂದ ಗುರುತಿಸುತ್ತಾರೆ. ಕೀಡೆಯ ಮೂಲಕ ಬಹುದೊಡ್ಡ ಸಾಧನೆ ಮಾಡಿದ ಕೀಡಾಪ್ರತಿಭೆಗಳು ಕೊಡಗಿನವರಾಗಿದ್ದಾರೆ. ಕೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಜಾತ್ರೋತ್ಸವ ಮತ್ತು ಕ್ರೀಡಾ ಸಮಿತಿ ವತಿಯಿಂದ ಬೃಹತ್ ಕ್ರೀಡಾಕೂಟ ಆಯೋಜಿಸಿರುವುದು ಗ್ರಾಮೀಣ ಜನರ ಸಂಭ್ರಮಕ್ಕೆ ಕಾರಣವಾಗಿದೆ. ಒಂದಷ್ಟು ಮನೋರಂಜನೆ ಜನರಿಗೆ ಸಿಗುತ್ತಿದೆ. ಪ್ರತಿಭಾ ಪ್ರದರ್ಶನಕ್ಕೂ ವೇದಿಕೆಯಾಗಿದೆ ಎಂದು ಹೇಳಿದರು. ವೇದಿಕೆಯಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಬಿ.ಪಿ. ಮೊಗಪ್ಪ, ಕ್ರೀಡಾ ಸಮಿತಿ…

Read More

ಗೋಣಿಕೊಪ್ಪ ಫೆ.27 NEWS DESK : ಐವತ್ತು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ಗೋಣಿಕೊಪ್ಪದ ಸೈಕ್ಲೋನ್ ನೃತ್ಯ ಶಾಲೆಯ ವಿದ್ಯಾರ್ಥಿಗಳು ನೇಪಾಳದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಗೋವಾ ರಾಜ್ಯದ ಮಾರ್ಗೋ ರವೀಂದ್ರ ಭವನ ಸಭಾಂಗಣದಲ್ಲಿ ಎರಡು ದಿನಗಳು ಸ್ಪರ್ಧೆ ನಡೆಯಿತು. ಹತ್ತನೇ ವರ್ಷದ ರಾಷ್ಟ್ರೀಯ ಸ್ಪೋರ್ಟ್ ಡಾನ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿಗಳು 12 ವರ್ಷದೊಳಗಿನ ವಿಭಾಗದಲ್ಲಿ, 15 ವರ್ಷದೊಳಗಿನ ಸ್ಪರ್ಧೆಯಲ್ಲಿ, 17 ವರ್ಷದ ವಿಭಾಗದ ಕ್ಲಾಸಿಕ್ ಮತ್ತು ಫೋಕ್, ಹಿಪ್‍ಹಾಪ್, ಪ್ರೀ ಸ್ಟೈಲ್ ನೃತ್ಯಗಳಲ್ಲಿ ಭಾಗವಹಿಸಿದರು. ಗೋವಾದ ಸ್ಪೋರ್ಟ್ ಅಸೋಸಿಯೇಷನ್, ಸ್ಪೋರ್ಟ್ ಡಾನ್ಸ್ ಫೆಡರೇಶನ್ ಆಫ್ ಇಂಡಿಯಾ, ಏಷ್ಯನ್ ಸ್ಪೋರ್ಟ್ ಡಾನ್ಸ್ ಕೌನ್ಸಿಲ್, ಇಂಟರ್ನ್ಯಾಷನಲ್ ಸ್ಪೋರ್ಟ್ ಫೆಡರೇಶನ್, ಅಂತರರಾಷ್ಟ್ರೀಯ ನೃತ್ಯ ಮಂಡಳಿ, ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ಸ್ಪೋರ್ಟ್ ಸೈನ್ಸ್ ಮತ್ತು ಫಿಸಿಕಲ್ ಎಜುಕೇಶನ್ ಸಹಯೋಗದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ನೃತ್ಯ ತರಬೇತುದಾರ ಸೈಕ್ಲೋನ್ ರಮೇಶ್, ವಿದ್ಯಾರ್ಥಿಗಳ ಪರಿಶ್ರಮಕ್ಕೆ…

Read More

ಸುಂಟಿಕೊಪ್ಪ ಫೆ.27 NEWS DESK : ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಿ.ಎಂ.ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್ ಆಯ್ಕೆಯಾಗಿದ್ದಾರೆ. ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಾಬೆಯಲ್ಲಿ ಚುನಾವಣೆಯ ಮೂಲಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಫೈರೋಜ್, ನೌಶದ್, ಪ್ರಶಾಂತ್ ಹಾಗೂ ಕೆ.ಸಂತೋಷ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್, ಖಜಾಂಚಿಯಾಗಿ ಬಿ.ಎಲ್.ವಿಶ್ವನಾಥ್, ಸಹ ಕಾರ್ಯದರ್ಶಿಯಾಗಿ ಸಿಕ್ಕಂದರ್ ಶರೀಫ್, ಸಹ ಖಜಾಂಚಿಯಾಗಿ ಯು.ಹರೀಶ್, ಗೌರವಾಧ್ಯಕ್ಷರುಗಳಾಗಿ ಎಸ್.ವಿ.ಫರೀದ್, ಶರೀಫ್, ಮತ್ತು ಫೆಲಿಕ್ಸ್ ಡಿಸೋಜ, ಸಂಘಟನಾ ಕಾರ್ಯದರ್ಶಿಗಳಾಗಿ ಪ್ರವೀದ್, ಕೇಶವ, ಬಿ.ಕೆ.ರಂಜೀತ್, ಪ್ರಕಾಶ್, ಶಂಶುದ್ದೀನ್, ಕನೀಶ್ ಬಾಬು ಮತ್ತು ವಿನು ಆಯ್ಕೆಯಾದರು. ಸಲಹೆಗಾರರಾಗಿ ಸುನಿಲ್, ಇಸ್ಮಾಹಿಲ್, ಪ್ರಶಾಂತ್ (ಕೊಕಾ), ಪ್ರಜ್ವಲ್, ಮೂಸ, ಅಕ್ಬರ್‍ಭಾಷ, ನಿದೇರ್ಶಕರುಗಳಾಗಿ ಟಿ.ಕೆ.ಪ್ರಕಾಶ್, ವಿನು, ಚೇತನ್, ಮೊಯ್ದು, ನವೀನ್ ಶಿವಪ್ಪ, ಶಾದಿಕ್ ಭಾಷ, ಅಜೀಜ್, ಆಶ್ರಫ್ ರಿಯಾಜ್, ವಿನೋದ್ ಹಾಗೂ ಪ್ರವೀಣ್ ಆಯ್ಕೆಯಾಗಿದ್ದಾರೆ.

Read More

ಸುಂಡಿಕೊಪ್ಪ ಫೆ.27 NEWS DESK : ಮಹಾ ಶಿವರಾತ್ರಿ ಪ್ರಯುಕ್ತ ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಆರಾಧನೆ ನಡೆಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಬೈತೂರಪ್ಪ ಭಜನಾ ಮಂಡಳಿಯಿಂದ 3 ಗಂಟೆಗಳ ಕಾಲ ಭಕ್ತಿಗೀತೆ ಮತ್ತು ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿಯ ಮಹಾಪೂಜೆಯ ಬಳಿಕ ನೇರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ಪ್ರಧಾನ ಅರ್ಚಕ ರಾಘವೇಂದ್ರಭಟ್ ಮತ್ತು ಸಹಾಯಕರಾಗಿ ನರಸಿಂಹಭಟ್ ನೇರವೇರಿಸಿದರು. ದೇವಾಲಯ ಟ್ರಸ್ಟ್ ಅಧ್ಯಕ್ಷ ಕೊಕ್ಕಲೆರ ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಟ್ರಸ್ಟಿ ಕೆ.ಎಸ್.ಮಂಜುನಾಥ್, ಪಾರುಪಾತ್ಯದಾರರಾದ ಅಕ್ಕಪಂಡ ಎ.ರಾಜೇಂದ್ರ, ಮುಕ್ಕಾಟಿ ಅಡಿಕೇರ ಸುಭಾಷ್, ಮಂಡುವಂಡ ಪುನೀತ್ ಪೂಣ್ಣಚ್ಚ ಸೇರಿದಂತೆ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಮೀಪದ ಕಂಬಿಬಾಣೆ ಮ್ಯಾಗಡೂರ್ ವಿಶ್ವನಾಥ ದೇವಾಲಯ, ನಾಕೂರು ಶಿವ ದೇವಾಲಯ, ಕೆದಕಲ್ ಭದ್ರಕಾಳಿ ದೇವಾಲಯಗಳಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆದವು.

Read More

ಸುಂಟಿಕೊಪ್ಪ ಫೆ.27 NEWS DESK : ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಪ್ರಭಾಕರ್ ಕುದ್ದಣ್ಣಯ್ಯ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆಯಿತು. ನಂತರ ನೆರದಿದ್ದ ಭಕ್ತರ ಸಮ್ಮುಖದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ಜರುಗಿತು. ನಂತರ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಹಾಯಕರಾಗಿ ಪ್ರಕಾಶ್ ಕುದ್ದಣ್ಣಯ್ಯ ಮತ್ತು ಪ್ರಜ್ವಲ್ ಕುದ್ದಣ್ಣಯ್ಯ ಸಹಕರಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ್ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್, ಸಮಿತಿಯ ಪದಾಧಿಕಾರಿಗಳಾದ ಜಯಂತ್, ರವಿ, ಸುಬ್ರಯ, ಚಿದಾನಂದ, ಗಂಗಾಧರ, ಮಂಜುನಾಥ್ ರೈ ಸೇರಿದಂತೆ ಗ್ರಾಮದ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಚೆಟ್ಟಳ್ಳಿ ಫೆ.27 NEWS DESK :  ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಚೆಟ್ಟಳ್ಳಿಯಲ್ಲಿ 5ನೇ ವರ್ಷದ ಮಹಾ ಶಿವರಾತ್ರಿ ಹಬ್ಬದ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಸಂಜೆ ಈರಳೆ ವಳಮುಡಿ ಗ್ರಾಮದಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿಗೆ ಹಾಗೂ ಸಂಘದ ಮುಖ್ಯ ಕಛೇರಿಯ ಮುಂದಿರುವ ಪಶುಪತಿನಾಥನಿಗೆ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಪುತ್ತರಿರ ಕರುಣ್ ಕಾಳಯ್ಯ ಆರತಿ ಬೆಳಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶ್ರೀ ವಿನಾಯಕ, ಶ್ರೀ ಕಾವೇರಿಮಾತೆ, ಶ್ರೀ ಕೃಷ್ಣ, ಗೋಮಾತೆ, ಶ್ರೀ ಆಂಜನೇಯ ಮತ್ತು ಶ್ರೀ ಮಹಾವಿಷ್ಣು ಮೂರ್ತಿಗಳಿಗೆ ಅರ್ಚಕರಾದ ಯೋಗೆಶ್ ಭಟ್  ಪೂಜಾ ಕೈಂಕರ್ಯ ನೆರವೇರಿಸಿದರು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು. ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಕಳೆದ 5 ವರ್ಷಗಳಿಂದ ಚೆಟ್ಟಳ್ಳಿಯಲ್ಲಿ ಶಿವರಾತ್ರಿ ಅಚರಣೆಯನ್ನು ಮಾಡಲಾಗುತಿದ್ದು ಎಲ್ಲರಿಗೂ ಒಳಿತನ್ನು ಮಾಡಲೆಂದು ಬೇಡಿಕೊಂಡರು. ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಅಣತೆ ಬೆಳಗಿದರು. ರಾತ್ರಿ ಪಂಜ…

Read More

ನಾಪೋಕ್ಲು ಫೆ.27 NEWS DESK : ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ವಿಶೇಷ  ಪೂಜೆ, ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು.     ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನೆರವೇರತು. ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ನಂತರ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ನಡೆಯಿತು. ಬಳಿಕ ಇಗ್ಗುತ್ತಪ್ಪ ದೇವರ ಪ್ರದರ್ಶನ, ನೃತ್ಯ ಬಲಿ ಹಾಗೂ ಭಕ್ತಾದಿಗಳಿಂದ ಹರಕೆ ಕಾಣಿಕೆ ಒಪ್ಪಿಸುವುದು, ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಎಲ್ಲರಿಗೂ ಆರೋಗ್ಯ ಭಾಗ್ಯ ಹಾಗೂ ಸಕಾಲದಲ್ಲಿ ಮಳೆ ಬೆಳೆ ಬಂದು ನಾಡಿನಲ್ಲೆಡೆ  ಭಕ್ತಾದಿಗಳಿಗೆ ಸುಭಿಕ್ಷೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ತಂತ್ರಿಗಳಾಗಿ ಗೋಪಾಲಕೃಷ್ಣ ಕೆದಿಲಾಯ  ರುದ್ರಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ವಿವಿಧೆಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತ…

Read More

ಮಡಿಕೇರಿ ಫೆ.27 NEWS DESK : ತಮಿಳುನಾಡಿನ ಚೆನ್ನೈ ನಲ್ಲಿ ನಡೆದಿದ್ದ ಕರಾಟೆ ವಿಭಾಗದ ಗುಂಪಿನಲ್ಲಿ 30 ನಿಮಿಷಗಳ ತಡೆರಹಿತ ಕತಾ ಮೂಲಕ ಗಿನ್ನಿಸ್ ದಾಖಲೆ ಜೊತೆಗೆ ಕುಮಿತೆ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಪಡೆದ ನಾಪೋಕ್ಲುವಿನ ಶಝಾ ಫಾತಿಮಾ ಅವರನ್ನು ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಹೊದ್ದೂರು ಗ್ರಾಮ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ.ಹಂಸ ಅವರು ಸನ್ಮಾನಿಸಿ ಗೌರವಿಸಿದರು.  ಶಝಾ ಫಾತಿಮಾ ಅವರಿಗೆ ವೈಯುಕ್ತಿಕವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ ಹಂಸ ಧನ ಸಹಾಯವನ್ನು ನೀಡಿ ಪ್ರೋತ್ಸಾಹಿಸಿದರು.ಈ ಸಂದರ್ಭ ಗ್ರಾಮ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ.ಮೊಣ್ಣಪ್ಪ, ಹೊದ್ದೂರು ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ.ಬಿ.ಹಮೀದ್,ಗ್ರಾಮ ಪಂಚಾಯಿತಿ ಸದಸ್ಯರಾದ ಚೌರೀರ ನಾಣಯ್ಯ(ನವೀನ್), ಕುಸುಮಾವತಿ ,ಲಕ್ಷ್ಮಿ, ಟೈನಿ ಕಡ್ಲೆರ,ಚೌರೀರ ಅನಿತಾ, ತಹಶೀಲ್ದಾರ್ ಪ್ರವೀಣ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ರಘು,ಭೂ ದಾಖಲೆಗಳ…

Read More