ಲೇಖಕ: admin

ಮಡಿಕೇರಿ ಫೆ.27  NEWS DESK : ಪ್ರತೀ ವರ್ಷವೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ 40 ರಿಂದ 50 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸದ ಭದ್ರತೆಯೊಂದಿಗೆ ಉತ್ತಮ ಸಂಬಳ ನೀಡಲಾಗುತ್ತದೆ. ಯಾವುದೇ ಪದವಿ ಮುಗಿಸಿರುವ ವಿದ್ಯಾರ್ಥಿಗಳು ಈ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್‍ಲೈನ್ ಪರೀಕ್ಷೆ ಮೂಲಕ ಪಾರದರ್ಶಕವಾಗಿ ನಡೆಯುವ ಈ ನೇಮಕಾತಿ ಪರೀಕ್ಷೆಗಳ ಬಗ್ಗೆ ಹೆಚ್ಚಿನ ವಿದ್ಯಾರ್ಥಿಗಳಿಗೆ ಮಾಹಿತಿ ಇರುವುದಿಲ್ಲ ಹಾಗೂ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಪಠ್ಯಕ್ರಮ, ಪರೀಕ್ಷಾ ಪ್ರಕ್ರಿಯೆ, ಇದಕ್ಕೆ ಅಗತ್ಯವಿರುವ ತಯಾರಿ ಬಗ್ಗೆ ಮಾಹಿತಿ ಇರುವುದಿಲ್ಲ. ಕರ್ನಾಟಕದೆಲ್ಲೆಡೆ ಬ್ಯಾಂಕ್‍ಗಳಲ್ಲಿ ವ್ಯವಹರಿಸುವಾಗ ಭಾಷೆಯ ಅಡಚಣೆಯಾಗಿ ಗ್ರಾಹಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಗ್ರಾಹಕರ ಸಭೆಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ವಿಷಯಗಳನ್ನು ಮನದಲ್ಲಿಟ್ಟುಕೊಂಡು ಕರ್ನಾಟಕದ ಯುವ ಜನತೆ ಬ್ಯಾಂಕ್ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಬೇಕೆಂಬ ಉದ್ದೇಶದಿಂದ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ಕೇಂದ್ರ ಕಚೇರಿ, ಬೆಂಗಳೂರಿನಲ್ಲಿ ನಡೆದ ಟ್ರಸ್ಟಿಗಳ ಸಭೆಯಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳು…

Read More

ಮಡಿಕೇರಿ ಫೆ.27 NEWS DESK : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಮಾರ್ಚ್, 2 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾ.2 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ‘ಅರೆಭಾಷೆ ಗಡಿನಾಡ ಉತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಟಿ.ಎಸ್.ಫಣಿಕುಮಾರ್ ತಿಳಿಸಿದ್ದಾರೆ.

Read More

   ಮಡಿಕೇರಿ ಮಾ.4 :  NEWS DESK : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾ.8 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ…

Read More

ಮಡಿಕೇರಿ ಫೆ.27 NEWS DESK : ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆ, ಹುದ್ದೆಯ ಸಂಖ್ಯೆ 01, ಶೈಕ್ಷಣಿಕ ವಿದ್ಯಾರ್ಹತೆ ಬಿ.ಈ ಅಥವಾ ಬಿಟೆಕ್, ಬಿಸಿಎ, ಎಂಸಿಎ, ಕಂಪ್ಯೂಟರ್ ಸೈನ್ಸ್ ಅಥವಾ ಇನ್‍ಫಾರ್ಮೇಸನ್, ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಟೆಲಿಕಾಂ, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಕಂಪನಿ, ಸಂಸ್ಥೆಗಳಲ್ಲಿ ಕನಿಷ್ಠ 2 ವóರ್ಷಗಳ ಅನುಭವ ಹೊಂದಿರಬೇಕು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷವಾಗಿರಬೇಕು. ವೇತನ ರೂ.30,053 (ಎಲ್ಲಾ ತೆರಿಗೆ ಹಾಗೂ ಇತ್ಯಾದಿ ಕಡಿತಗೊಳಿಸಿ), ಅರ್ಜಿ…

Read More

ಮಡಿಕೇರಿ NEWS DESK ಫೆ26 : ಮಡಿಕೇರಿ ನಗರ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯ ನಾಗರಿಕರ ಸಭೆ ನಡೆಯಿತು. ಸಭೆಯಲ್ಲಿ ಅಪರಾಧ ತಡೆಗಟ್ಟುವಿಕೆ, ಸಂಚಾರ ನಿಯಮ ಪಾಲನೆ, ಸಿಸಿಟಿವಿ ಆಳವಡಿಕೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ನಾಗರೀಕರ ಸಹಕಾರದ ಕುರಿತು ಚರ್ಚಿಸಲಾಯಿತು.

Read More

ಮಡಿಕೇರಿ NEWS DESK ಫೆ.26 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆಯಿಂದಲೇ ರುದ್ರಹೋಮ, ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಿತು. ಅಲ್ಲದೆ ವಿವಿಧ ವಿಶೇಷ ಪೂಜಾ ಕೈಂಕರ್ಯ ಮತ್ತು ಅರ್ಚನೆಗಳಿಗೆ ಸಾಕ್ಷಿಯಾದ ನೂರಾರು ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Read More

ಮಡಿಕೇರಿ NEWS DESK ಫೆ.26 : ನಗರದ ಕೊಡಗು ವಿದ್ಯಾಲಯದಲ್ಲಿ  ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರುರಾದ ಸುಮಿತ್ರಾ, ಆಡಳಿತ ನಿರ್ವಹಣಾಧಿಕಾರಿ  ಪಿ.ರವಿ ಮತ್ತು ವಿಜ್ಞಾನ ಶಿಕ್ಷಕರು ಸಸಿಗೆ  ನೀರು ಸಿಂಪಡಿಸುವ  ಮೂಲಕ ಉದ್ಘಾಟಿಸಿದರು. ವಿಜ್ಞಾನ ದಿನಾಚರಣೆಯ ಮುಖ್ಯ ಆಕರ್ಷಣೆಯಾಗಿ 3 ರಿಂದ  5ನೇ ತರಗತಿಯ ವಿದ್ಯಾರ್ಥಿಗಳು ವೈವಿಧ್ಯಮಯ ವಿಜ್ಞಾನ ಪ್ರದರ್ಶನ ನಡೆಸಿದರು. ಪ್ರತಿ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿ  ಕೊಠಡಿಗಳಲ್ಲಿ ವೈಜ್ಞಾನಿಕ ಮಾದರಿಗಳನ್ನು ನಿರ್ಮಿಸಿ, ಅವುಗಳ ಕಾರ್ಯವಿಧಾನವನ್ನು ವಿವರಿಸಿದರು. ಈ ಮಾದರಿಗಳು ವಿಜ್ಞಾನ ಪ್ರಕ್ರಿಯೆಗಳ ತಿಳುವಳಿಕೆಯನ್ನು ಜಾಗೃತಗೊಳಿಸಿ,  ವಿದ್ಯಾರ್ಥಿಗಳ ಉತ್ಸಾಹ ಮತ್ತು ಸೃಜನಶೀಲತೆಯನ್ನು ಪ್ರತಿಬಿಂಬಿಸಿದವು. 6 ರಿಂದ 9ನೇ ತರಗತಿಯ ವಿದ್ಯಾರ್ಥಿ  ತಂಡಗಳು ಫ್ರಾತ್ಯಕ್ಷಿಕೆಗಳ   ಮೂಲಕ ವ್ಯಜ್ಯಾನಿಕ  ವಿಚಾರಗಳನ್ನು ವಿವರಿಸಿದರು.  ವಿಶೇಷವಾಗಿ, ಕೊಡಗಿನ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಸುಧಾರಿತ ಪರಿಹಾರಗಳನ್ನು ಕಂಡುಹಿಡಿದ   ವಿದ್ಯಾರ್ಥಿಗಳ ತಂಡದ ಪ್ರಸ್ತುತಿ ನೋಡುಗರ  ಮೆಚ್ಚುಗೆ ಪಡೆಯಿತು.  ವಿಜ್ಞಾನ ಶಿಕ್ಷಕಿ  ಶ್ರುತಿ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು. ಶಾಲಾ…

Read More

ಮಡಿಕೇರಿ NEWS DESK ಫೆ.26 : ಅನ್ನಭಾಗ್ಯದ ಅಕ್ಕಿಗೆ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಅಲ್ಲದೆ ಕೆಲವರು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಮಾಹಿತಿ ಲಭಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಎಚ್ಚರಿಕೆ ನೀಡಿದೆ. ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ವಿಷಯ ಪ್ರಸ್ತಾಪಿಸಿದ ಸಮಿತಿಯ ಅಧ್ಯಕ್ಷ ಜಾನ್ಸನ್ ಮಾರ್ಚ್ ತಿಂಗಳಲ್ಲಿ ಅನ್ನಭಾಗ್ಯದ ಅಕ್ಕಿ ಅರ್ಹ ಫಲಾನುಭವಿಗಳಿಗೆ ವಿತರಣೆಯಾಗಲಿದೆ ಎಂದರು. ಈ ಹಿಂದೆ ಅಕ್ಕಿಯ ಬದಲಾಗಿ ಹಣ ನೀಡಲಾಗುತ್ತಿತ್ತು, ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಅಕ್ಕಿಯನ್ನು ವಿತರಿಸಲಾಗುವುದು. ಕೆಲವು ತಾಂತ್ರಿಕ ಸಮಸ್ಯೆಗಳಿದ್ದು, ಶೀಘ್ರ ಬಗೆಹರಿಸಲಾಗುವುದು ಎಂದು ತಿಳಿಸಿದರು. ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯದ ಅಕ್ಕಿಗೆ ಹೆಚ್ಚುವರಿ ಹಣವನ್ನು ಪಡೆಯುತ್ತಿರುವ ಪ್ರಕರಣಗಳು ಕಂಡುಬಂದಿದೆ. ಅಂತಹ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಮತ್ತು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸುವಂತೆ…

Read More

ಮಡಿಕೇರಿ NEWS DESK ಫೆ.25 : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರಪೇಟೆ ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಎಸ್.ಎ.ಅಶೋಕ್ (65) ಎಂಬವರೇ ಮೃತ ದುರ್ದೈವಿಯಾಗಿದ್ದಾರೆ. ಕೃಷಿಕರಾಗಿದ್ದ ಅಶೋಕ್ ಅವರು ಹೆಬ್ಬಾಲೆಯ ಕಡೆ ಬರುತ್ತಿದ್ದಾಗ ಕುಶಾಲನಗರದಿಂದ ಸಿದ್ದಲಿಂಗಪುರ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ NEWS DESK ಫೆ.25 ಕಾಫಿ ಕೊಯ್ಲು ಸಂದರ್ಭ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪೂದ್ದುಮಾನಿ ಗ್ರಾಮದಲ್ಲಿ ನಡೆದಿದೆ. ಹೆಚ್.ಸಿ.ಲೋಹಿತ್(32) ಎಂಬವರೇ ಮೃತಪಟ್ಟ ದುರ್ದೈವಿ ಕಾರ್ಮಿಕರಾಗಿದ್ದಾರೆ. ಲೋಹಿತ್ ಸೋಮವಾರದಿಂದ ನಾಪತ್ತೆಯಾಗಿದ್ದು, ಆತನನ್ನು ಹುಡುಕಾಡುತ್ತಿದ್ದಾಗ ಮಂಗಳವಾರ ಕಾಫಿ ತೋಟದಲ್ಲಿ ಮೃತ ದೇಹ ಪತ್ತೆಯಾಗಿದೆ. ಘಟನೆ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More