https://www.youtube.com/watch?v=76NRQcFiuCQ&authuser=0 ಮಡಿಕೇರಿ NEWS DESK ಫೆ.25 : ವಿರಾಜಪೇಟೆ ಮಾರ್ಗವಾಗಿ ಕೇರಳಕ್ಕೆ ಅಕ್ಕಿ ಸಾಗಿಸುತಿದ್ದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಕೊಡಗು-ಕೇರಳ ಗಡಿಯ ವಾಟೆಕೊಲ್ಲಿ ಎಂಬಲ್ಲಿ ನಡೆದಿದೆ. ಸೋಮವಾರ ನಡುರಾತ್ರಿ ಆಂಧ್ರಪ್ರದೇಶ ನೋಂದಣಿ ಹೊಂದಿದ್ದ ಲಾರಿಯಲ್ಲಿ ಅಕ್ಕಿಯನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು. ಲಾರಿ ಕೊಡಗು ಗಡಿ ಭಾಗದ ವಾಟೆಕೊಲ್ಲಿ ಎಂಬಲ್ಲಿ ಆಗಮಿಸಿದ ಸಂದರ್ಭ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿ ಸಂಪೂರ್ಣವಾಗಿ ಲಾರಿಯನ್ನು ವ್ಯಾಪಿಸಿ ಅಕ್ಕಿ ಸಹಿತ ಲಾರಿ ಬೆಂಕಗೆ ಆಹುತಿಯಾಗಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ವಿರಾಜಪೇಟೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಿಸಲು ಹರ ಸಾಹಸ ಪಡಬೇಕಾಯಿತು. ಬೆಂಕಿ ಅನಾಹುತದಿಂದ ನೂರಾರು ಚೀಲ ಅಕ್ಕಿ ಮೂಟೆಗಳು ಸುಟ್ಟು ಕರಕಲಾಗಿದ್ದು, ಸುಟ್ಟ ಮೂಟೆಗಳಿಂದ ರಾಶಿಗಟ್ಟಲೆ ಅಕ್ಕಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ.
ಲೇಖಕ: admin
ಮಡಿಕೇರಿ NEWS DESK ಫೆ.25 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷವು ಹಲವು ವರ್ಷಗಳಿಂದ ಇದೆ. ಇದರಿಂದ ಸ್ಥಳೀಯರು ತುಂಬಾ ತೊಂದರೆಯಾಗಿದೆ. ಶಾಶ್ವತವಾಗಿ ವನ್ಯಪ್ರಾಣಿ ಹಾವಳಿ ನಿಯಂತ್ರಿಸಲು ಅಗತ್ಯವಿರುವ ಕಡೆ…
ಮಡಿಕೇರಿ NEWS DESK ಫೆ.25 : ಕೊಡಗು ಮತ್ತು ನೆರೆಯ ಕೇರಳದ ಪಯ್ಯವೂರಿನ ಈಶ್ವರ ದೇವಸ್ಥಾನದ ನಡುವೆ ಧಾರ್ಮಿಕ ಕಟ್ಟುಪಾಡುಗಳು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿದೆ. ಅಲ್ಲಿನ ದೇವಸ್ಥಾನದ ಕೊಡಗಿನ ತಕ್ಕಮುಖ್ಯಸ್ಥ ಕುಟುಂಬಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗಿದೆ. ಸಮುದಾಯಗಳ ಸಂಘರ್ಷಕ್ಕೆ ಕಾರಣವಾಗುವ ಹೇಳಿಕೆಗಳನ್ನು ಹಾಕಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಡಿಯತ್‌ನಾಡಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಯ್ಯವೂರಿನ ಈಶ್ವರ ದೇವಸ್ಥಾನದ ತಕ್ಕ ಮುಖ್ಯಸ್ಥರು ಹಾಗೂ ಟ್ರಸ್ಟಿಗಳಾದ ಮುಂಡ್ಯೋಳಂಡ ಅಜಿತ್ ಪೂವಯ್ಯ ಸಾಮಾಜಿಕ ಜಾಲತಾಣದಲ್ಲಿ ದೇವಾಲಯದ ವಿಚಾರದ ಹಿನ್ನೆಲೆ ಸಮುದಾಯಗಳ ನಡುವೆ ಸಂಘರ್ಷ ಹುಟ್ಟು ಹಾಕುವಂತಹ ಹೇಳಿಕೆಗಳನ್ನು ಹಾಕಿರುವವರ ವಿರುದ್ಧ ನಾಪೋಕ್ಲು ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದರು. ಕೇರಳದ ಕಣ್ಣೂರು ಜಿಲ್ಲೆಯ ಪಯ್ಯವೂರು ಈಶ್ವರ ದೇವಸ್ಥಾನದ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ವಾರ್ಷಿಕ ಉತ್ಸವದಲ್ಲಿ ಕೊಡಗಿನ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಈ ದೇವಾಲಯಕ್ಕೆ ಕೊಡಗಿನ ಬೊವ್ವೇರಿಯಂಡ ಮತ್ತು ಮುಂಡ್ಯೋಳಂಡ ಕುಟುಂಬಸ್ಥರು ತಕ್ಕ ಮುಖ್ಯಸ್ಥರಾಗಿದ್ದಾರೆ. ಪಯ್ಯವೂರು ಈಶ್ವರ ದೇವಸ್ಥಾನದ ನೈವೇದ್ಯಕ್ಕೆ…
ಮಡಿಕೇರಿ ಫೆ.25 NEWS DESK : ನಗರದ ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯಲ್ಲಿರುವ ‘ಅಂಬೇಡ್ಕರ್ ಭವನ’ಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ಗೊಂದಲವನ್ನು ಮುಂದಿನ ಮೂರು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಗೆಹರಿಸಬೇಕು, ಇಲ್ಲವಾದಲ್ಲಿ ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕರು ಹಾಗೂ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷರಾದ ಹೆಚ್.ಎಲ್.ದಿವಾಕರ್, ಅಂಬೇರ‍್ಕರ್ ಭವನಕ್ಕೆ ಜಾಗವನ್ನು ಪಡೆದುಕೊಳ್ಳುವ ಹಾಗೂ ಭವನ ನಿರ್ಮಾಣ ಹಂತದಲ್ಲಿ ರಚಿಸಲಾಗಿದ್ದ ಬಿ.ಆರ್.ಅಂಬೇಡ್ಕರ್ ಭವನ ಸಮಿತಿಯಲ್ಲಿ ಜಿಲ್ಲೆಯ ಎಲ್ಲಾ ಭಾಗಗಳ ದಲಿತ ಪ್ರಮುಖರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲಾಗಿತ್ತು. ಆ ನಂತರ ಸಮಿತಿಯ ಅಧ್ಯಕ್ಷರ ಬದಲಾವಣೆಯೊಂದಿಗೆ ಸಮಿತಿಯಲ್ಲಿದ್ದ ಸದಸ್ಯರುಗಳನ್ನು ತೆಗೆಯುತ್ತಾ ಬಂದಿದ್ದು, ಪ್ರಸ್ತುತ ಕೇವಲ 12 ಸದಸ್ಯರು ಮಾತ್ರ ಇದ್ದಾರೆ ಎಂದು ತಿಳಿಸಿದರು. ಭವನ ನಿಮಾಣದ ಸಂದರ್ಭ ಅದಕ್ಕಾಗಿ ಜನಪ್ರತಿನಿಧಿಗಳ ಹಾಗೂ ನಗರಸಭೆಯ ಅನುದಾನವನ್ನು ವಿನಿಯೋಗಿಸಲಾಗಿದೆ. ದಲಿತರ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಭವನ ಮೀಸಲಾಗಿದೆ.…
ಮಡಿಕೇರಿ ಫೆ.25 NEWS DESK : ಕೊಡಗು ವಿಶ್ವವಿದ್ಯಾಲಯ ಉಳಿಸಿ ಅಭಿವೃದ್ಧಿಗೊಳಿಸುವ ಸಂಬಂಧ ಸಂಪುಟದಲ್ಲಿ ಪ್ರಸ್ತಾಪ ಮಾಡುವುದರೊಂದಿಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದುಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ರಾವ್ ಹೇಳಿದರು. ಅವರು ಕುಶಾಲನಗರದಲ್ಲಿ ಕನ್ನಡ ಸ್ನೇಹ ಸಿರಿ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಕಳೆದ ಒಂದು ವರ್ಷದಿಂದ ಹಮ್ಮಿಕೊಂಡು ಬರಲಾದ ಕಾರ್ಯಕ್ರಮಗಳ ಪೈಕಿ 50ನೇ ಸಂಭ್ರಮಾಚರಣೆಯ ಕುಶಲ್ಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಕೆಲವು ವಿವಿಗಳ ನಿರ್ವಹಣೆ ಕೊರತೆ ಹಾಗೂ ಸ್ಥಳೀಯ ಜನರ ಇಚ್ಚಶಕ್ತಿ ಇಲ್ಲದ ಹಿನ್ನೆಲೆಯಲ್ಲಿ ವಿಲೀನಗೊಳಿಸುವ ಪ್ರಸ್ತಾವನೆ ಇರುವುದಾಗಿ ಹೇಳಿದ ಅವರು ಕೊಡಗು ಜಿಲ್ಲೆಗೆ ವಿಶೇಷ ಆದ್ಯತೆಯೊಂದಿಗೆ ವಿವಿ ರದ್ಧತಿ ಪ್ರಸ್ತಾವನೆ ಕೈಬಿಡುವಂತೆ ಮಾಡುವ ಭರವಸೆ ದಿನೇಶ್ ಗುಂಡೂರಾವ್ ವ್ಯಕ್ತಪಡಿಸಿದರು. ಅಂದಿನ ಮುಖ್ಯಮಂತ್ರಿಗಳಾಗಿದ್ದ ವೀರೇಂದ್ರ ಪಾಟೀಲ್ ನಂತರ ತನ್ನ ತಂದೆಯವರು ಹಾಗೂ ಮುಖ್ಯಮಂತ್ರಿಗಳಾಗಿದ್ದ ಆರ್ ಗುಂಡುರಾಯರು ಕುಶಾಲನಗರದಲ್ಲಿ ಅನೇಕ ಅಭಿವೃದ್ಧಿ ಜನಪರ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳುವ ಕಾಳಜಿ ವಹಿಸಿದ್ದರು ಎಂದು ಸ್ಮರಿಸಿದರು. …
ಮಡಿಕೇರಿ ಫೆ.25 NEWS DESK : ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಅಥವಾ ಮತ್ತೊಂದು ವಿವಿಯೊಂದಿಗೆ ವಿಲೀನಗೊಳಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವನ್ನು ಕೊಡಗಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಪುನರ್ ಪರಿಶೀಲಿಸಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಕೊಡಗು ವಿವಿ ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಗುರಿ ಸಾಧನೆಗೆ ಹೆಚ್ಚು ಉಪಯುಕ್ತವಾಗಿದೆ. ಇದನ್ನು ಮುಚ್ಚುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ದೊಡ್ಡ ನಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡ ಕೊಡಗು ವಿವಿ ಈಗಷ್ಟೇ ತನ್ನ ಕ್ಷೇತ್ರವನ್ನು ವಿಸ್ತರಿಸಿಕೊಂಡು ಚೇತರಿಸಿಕೊಳ್ಳುತ್ತಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತವಾರಣ ಸೃಷ್ಟಿಯಾಗುತ್ತಿದೆ, ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಹೊರ ಜಿಲ್ಲೆಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ತಪ್ಪಿದೆ. ಉದ್ಯೋಗ ಸೃಷ್ಟಿ, ಶೈಕ್ಷಣಿಕ ಪ್ರಗತಿ ಮತ್ತು ಜಿಲ್ಲೆಯ ಅಭಿವೃದ್ಧಿಗೂ ವಿವಿ ಪೂರಕವಾಗಿದೆ. ಕೊಡಗಿನ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸದೃಢರಾಗಬೇಕಾದರೆ ಕೊಡಗು…
ಮಡಿಕೇರಿ ಫೆ.25 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಸುಂಟಿಕೊಪ್ಪನಾಡು ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ‘ಸುಂಟಿಕೊಪ್ಪ ನಾಡ್ ಕೊಡವ ಸಾಂಸ್ಕೃತಿಕ ನಮ್ಮೆ’ಯನ್ನು ಮಾ.21ರಂದು ನಡೆಸಲು ತೀರ್ಮಾನಿಸಲಾಗಿದೆ. ಸುಂಟಿಕೊಪ್ಪ ಕೊಡವ ಸಮಾಜ ಅಧ್ಯಕ್ಷ ಚೇಂದ್ರಿಮಾಡ ಕರುಂಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡೊರ್ಮೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ಸುಂಟಿಕೊಪ್ಪ ಭಾಗದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಸಾಂಸ್ಕೃತಿಕ ನಮ್ಮೆಯನ್ನು ಇದೇ ಮೊಟ್ಟ ಮೊದಲಾಗಿ ಆಯೋಜಿಸುತ್ತಿರುವುದು ಸಂತೋಷದ ವಿಷಯ. ನಮ್ಮೆಗೆ ಈ ನಾಡಿನ ಸರ್ವ ಜನಾಂಗಬಾಂಧವರ ಸಹಕಾರ ಹಾಗೂ ಸಹಭಾಗಿತ್ವ ಅತ್ಯವಶ್ಯವಾಗಿದ್ದು, ನಾಡೊರ್ಮೆಯನ್ನು ಸುಂಟಿಕೊಪ್ಪ ಪಟ್ಟಣದಲ್ಲಿ ಮೆರವಣಿಗೆ ನಡೆಸುವುದರೊಂದಿಗೆ ಸಾಹಿತಿಕ-ಸಾಂಸ್ಕೃತಿಕಸಿರಿವಂತಿಕೆಯಲ್ಲಿ ನೆರವೇರಿಸುವಂತೆ ಮನವಿ ಮಾಡಿದರು. ನಾಡೊರ್ಮೆಯಲ್ಲಿ ಸುಂಟಿಕೊಪ್ಪ ಭಾಗದಲ್ಲಿ ಜನಾಂಗ, ಸಾಂಸ್ಕೃತಿಕ, ಸಾಹಿತ್ಯ ಹಾಗೂ ನುಡಿಗೆ ದುಡಿದ ಖ್ಯಾತವೆತ್ತ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವಂತೆ ತೀರ್ಮಾನಿಸಲಾಯಿತು. ಸ್ಥಳೀಯ ಪ್ರತಿಭೆಗಳಿಗೆ ವೇದಿಕೆಯಲ್ಲಿ ಅವಕಾಶ ಕಲ್ಪಿಸುವುದಲ್ಲದೆ ಸ್ಥಳೀಯ ವಿಚಾರವಂತರಿಂದ ವಿಚಾರಮಂಡನೆ, ಕವಿಗೋಷ್ಠಿಯಂತಹ ಕಾರ್ಯಕ್ರಮಗಳನ್ನು ನಾಡೊರ್ಮೆಯಲ್ಲಿ ನಡೆಸುವಂತೆ…
ವಿರಾಜಪೇಟೆ ಫೆ.25 NEWS DESK : ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾದ ಸಾಹಿತ್ಯವಾಗಿದ್ದು ಎಲ್ಲರೂ ಸಾಹಿತಿಗಳಾಗಿದಿದ್ದರೂ ನಮ್ಮ ಕನ್ನಡದ ಕವಿಗಳು ಬರೆದಿರುವ ಕತೆ, ಕವನ, ಕಾದಂಬರಿಗಳನ್ನಾದರೂ ಓದುವಂತೆ ಗೋಣಿಕೊಪ್ಪ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ವಿಜಯಲಕ್ಷ್ಮಿ ಮಂಜುನಾಥ್ ಕರೆ ನೀಡಿದರು. ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬಿ.ಜಿ.ರಘುನಾಥ್ ನಾಯ್ಕ್ ಹಾಗೂ ಬಿ.ಆರ್ ಸಾಯಿನಾಥ್ ದತ್ತಿನಿಧಿ ಕಾರ್ಯಕ್ರಮ ನಡೆಯಿತು. ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು, ಮಾತನಾಡಿದರು. ಹಳೆಗನ್ನಡ , ನಡುಗನ್ನಡ, ಆಧುನಿಕ ಕನ್ನಡದ ಮಹಾನ್ ಕವಿಗಳ ಕಾವ್ಯಗಳ ವಿಚಾರಧಾರೆಯ ಮಾತನಾಡಿ, ಕನ್ನಡದ ಕವಿಗಳು ರಾಜಾಶ್ರಯವಿದ್ದಾಗ ಯಾವ ರೀತಿಯ ಸಾಹಿತ್ಯ ಬರೆದರು, ಸಾಮಾಜಿಕವಾಗಿ ಜನಸಾಮಾನ್ಯರ ಜೊತೆ ಬೆರೆತಮೇಲೆ ಯಾವ ಬಗೆಯ ಸಾಹಿತ್ಯ ಹೊರಹೊಮ್ಮಿತು. ಜಗತ್ತು ಆಧುನಿಕತೆಗೆ ತೆರೆದುಕೊಂಡಾಗ ಬಿ.ಎಂಶ್ರೀ ಅಂಥವರು ಟಿ.ಪಿ ಕೈಲಾಸಂ ಹೇಗೆ ಸಾಹಿತ್ಯ ರಚನೆ ಮಾಡಿದರು ಎಂದು ವಿವರಿಸಿದರು. ಅಲ್ಲದೇ ಹೊಸಬಗೆಯ ಸಾಹಿತ್ಯ ಪ್ರಕಾರಗಳು ಎಷ್ಟು ವಿಭಿನ್ನ ನೆಲೆಗಟ್ಟಿನಲ್ಲಿ ಓದುಗರ…
ಮಡಿಕೇರಿ ಫೆ.25 NEWS DESK : ಮೈಸೂರಿನ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 40ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕೊಡಗಿನ ಬರಹಗಾರ್ತಿ, ಚಿತ್ರ ನಿರ್ಮಾಪಕಿ, ನಟಿ ಹಾಗೂ ಸಹನಿರ್ದೇಶಕಿ ಈರಮಂಡ ಹರಿಣಿ ವಿಜಯ್ ಅವರಿಗೆ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಡ್ಡಿ ಕೆರೆ ಗೋಪಾಲ್, ಹಿರಿಯ ಸಾಹಿತಿಗಳಾದ ಡಾ.ಸಿ.ಪಿ.ಕೆ, ಕನ್ನಡಪರ ಚಿಂತಕ ಡಾ.ರಾಜಶೇಖರ್, ಪತ್ರಕರ್ತ ಡಾ.ಭೇರ್ಯ ರಾಮಕುಮಾರ್, ಮಹಾಕವಿ ಡಾ.ಲತಾ ರಾಜಶೇಖರ್, ಸಾಹಿತಿಗಳಾದ ಡಾ.ರೇವಣ್ಣ ಬಳ್ಳಾರಿ, ಡಾ.ಸೌಜನ್ಯ ಶರತ್, ನೂತನ ಕುಮಾರ್ ಬಿ.ಕೆ ಹಾಗೂ ರೈತಪರ ಚಿಂತಕ ಸರಗೂರು ನಟರಾಜು ಅವರುಗಳ ಸಮ್ಮುಖದಲ್ಲಿ ಈರಮಂಡ ಹರಿಣಿ ವಿಜಯ್ ಪ್ರಶಸ್ತಿ ಸ್ವೀಕರಿಸಿದರು. ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಮತ್ತು ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ವತಿಯಿಂದ ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್…
ಮಡಿಕೇರಿ ಫೆ.25 NEWS DESK : ವಿರಾಜಪೇಟೆ ಕ್ಷೇತ್ರದ ಜ್ವಲಂತ ಸಮಸ್ಯೆಯಾಗಿರುವ ಕಾಡಾನೆ ದಾಳಿ ಹಾಗೂ ಕಾಡು ಪ್ರಾಣಿಗಳ ಉಪಟಳವನ್ನು ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿಯಿಂದ ಮುಖ್ಯಮಂತ್ರಿಗಳು ಮಂಜೂರು ಮಾಡಿರುವ ರೂ.21 ಕೋಟಿಯಲ್ಲಿ ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣ ಮತ್ತಿತರ ಮುಂಜಾಗ್ರತಾ ಕ್ರಮದ ಕಾಮಗಾರಿ ನಡೆಸಲು ಸ್ಥಳ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಶಾಸಕರು ವನ್ಯಜೀವಿ ಉಪಟಳ ಇರುವ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಕಾಮಗಾರಿಗಳನ್ನು ತುರ್ತು ಗತಿಯಲ್ಲಿ ಪ್ರಾರಂಭಿಸಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು. ಈ ಸಂದರ್ಭ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಹಿರಿಯ ಅರಣ್ಯ ಅಧಿಕಾರಿಗಳು, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಂಗ್ರೆಸ್ ಮುಖಂಡರು, ಸ್ಥಳೀಯ ಪ್ರಮುಖರು ಹಾಗೂ ಗ್ರಾಮಸ್ಥರ ತಂಡದೊಂದಿಗೆ…






