ಮಡಿಕೇರಿ ಫೆ.24 NEWS DESK : ರಾಜ್ಯ ಸರ್ಕಾರ ಕೊಡಗು ವಿವಿಯನ್ನು ಮುಚ್ಚುವ ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಕೊಡಗು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ವಿದ್ಯಾರ್ಥಿಗಳು ಸೇರಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಬಿ.ಸಿ.ಮಂದಾರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ತಜ್ಞರ ಸಲಹೆಯನ್ನು ಪಡೆಯದೆ ರಾಜ್ಯ ಸರಕಾರ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದಡಿಯಲ್ಲಿ ಸುಮಾರು 25 ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, 10 ಸಾವಿರ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿಯೇ ವಿವಿ ಇದ್ದಾಗ ಇಲ್ಲಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ದೊರೆಯುತ್ತದೆ. ಬೇರೆ ರಾಜ್ಯಕ್ಕೆ ತೆರಳುವ ಅವಶ್ಯಕತೆ ಇರುವುದಿಲ್ಲ. ಆದ್ದರಿಂದ ವಿವಿಯನ್ನು ಮುಚ್ಚುವ ನಿರ್ಧಾರವನ್ನು ಸರಕಾರ ಕೈಬಿಡಬೇಕು ಎಂದು ಆಗ್ರಹಿಸಿದರು. ಈ ಹಿಂದಿನ ಸರಕಾರ ವಿಶ್ವವಿದ್ಯಾಲಯಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದೆ. ಇದನ್ನು ಅಭಿವೃದ್ಧಿ ಪಡಿಸುವ ಚಿಂತನೆಯನ್ನು ಈಗಿನ ಸರಕಾರ ಮಾಡಬೇಕು. ರಾಜ್ಯ…
ಲೇಖಕ: admin
ಮಡಿಕೇರಿ ಫೆ.24 NEWS DESK : ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ದೈನಂದಿನ ಜೀವನ ಸಹಾಯಕ ಸಾಧನ ಸಲಕರಣೆಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ವಿತರಿಸಿದರು. ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ನಾಗರಿಕರು ಸ್ವಾಭಿಮಾನದಿಂದ ಜೀವನ ನಡೆಸುವಂತಾಗಲು ಎಲ್ಲರೂ ಗಮನಹರಿಸಬೇಕು ಎಂದು ಕರೆ ನೀಡಿದರು. ಹಿರಿಯ ನಾಗರಿಕರ ಸಬಲೀಕರಣಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಿದೆ. ಆ ನಿಟ್ಟಿನಲ್ಲಿ ಹಿರಿಯರನ್ನು ಗೌರವಿಸಿ ಅವರ ಮಾರ್ಗದರ್ಶನ ಮತ್ತು ಪ್ರೇರೇಪಣೆಯಿಂದ ಮುನ್ನಡೆಯಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ನೀಡುವಲ್ಲಿ ಪ್ರಥಮ ಆದ್ಯತೆಯಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು. ಹಿರಿಯ ನಾಗರಿಕರು ಮತ್ತು ವಿಕಲಚೇತನರು ಗೌರವಯುತವಾಗಿ ಉತ್ತಮ ಬದುಕು ನಡೆಸಬೇಕು. ಆ ನಿಟ್ಟಿನಲ್ಲಿ ಹಿರಿಯ ನಾಗರಿಕರಿಗೆ ಸಾಧ್ಯವಾದಷ್ಟು ಅಗತ್ಯ ಸಹಕಾರ ಕಲ್ಪಿಸಬೇಕು ಎಂದರು. …
ಮಡಿಕೇರಿ ಫೆ.24 NEWS DESK : ಹಜ್ರತ್ ಸೂಫಿ ಶಹೀದ್ ಮತ್ತು ಹಜ್ರತ್ ಸೈಯದ್ ಹಸನ್ ಸಕಾಫ್ ಹಾಗೂ ಇನ್ನಿತರ ಮಹಾತ್ಮರುಗಳ ಹೆಸರಿನಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಹಾಗೂ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಎಮ್ಮೆಮಾಡು ಉರೂಸ್ ಸಮಾರಂಭದ ಸಾರ್ವಜನಿಕ ಸಮ್ಮೇಳನ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪ್ರತಿ ವರ್ಷ ಸಾಂಪ್ರದಾಯಯುಕ್ತವಾಗಿ ನಡೆಯುವ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಒದಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಸಯ್ಯಿದ್ ಮುಈನಲಿ ಶಿಹಾಬ್ ತಂಙಳ್ ಪಾಣಕಾಡ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಮೆಹರೋಜ್ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ವಲಯ ಅಧ್ಯಕ್ಷ ಹಂಸ, ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಹಾಜರಿದ್ದರು.
ಮಡಿಕೇರಿ ಫೆ.24 NEWS DESK : ಖ್ಯಾತ ವೈದ್ಯರು ಹಾಗೂ ಸಾಹಿತಿಗಳಾದ ಡಾ.ಕೆ.ಬಿ.ಸೂರ್ಯಕುಮಾರ್ ಅವರು ರಚಿಸಿರುವ ಕೆನಡಾ ದೇಶದ ಪ್ರವಾಸ ಕಥನ “ಪ್ರಯಾಸವಲ್ಲದ ಪ್ರವಾಸ” ಪುಸ್ತಕ ಬಿಡುಗಡೆಗೊಂಡಿದೆ.
ಮಡಿಕೇರಿ ಫೆ.24 NEWS DESK : ಕ್ರೈಸ್ತ ಧರ್ಮಗುರುಗಳಾಗಿ 25 ವರ್ಷಗಳನ್ನು ಪೂರೈಸಿದ ಮಡಿಕೇರಿಯ ಸಂತ ಮೈಕಲರ ದೇವಾಲಯದ ಧರ್ಮಗುರು ಬೆಳ್ಳಿಗುರು ಜಾರ್ಜ್ ದೀಪಕ್ ಅವರನ್ನು ಫೆ.26 ರಂದು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂತ ಮೈಕಲರ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಬುಧವಾರ ಸಂಜೆ 5 ಗಂಟೆಗೆ ಸಂತ ಮೈಕಲರ ದೇವಾಲಯದಲ್ಲಿ ಆಡಂಬರ ಕೃತಜ್ಞತಾ ಗಾಯನ ಬಲಿಪೂಜೆ, 7 ಗಂಟೆಗೆ ಬೆಳ್ಳಿಗುರು ಜಾರ್ಜ್ ದೀಪಕ್ ರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ನಂತರ ಸಹಭೋಜನದ ವ್ಯವಸ್ಥೆ ಇದ್ದು ಸಂತ ಮೈಕಲರ ದೇವಾಲಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ವಿರಾಜಪೇಟೆ, ಫೆ.24 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರನ್ನು ನೇಮಕಮಾಡಿ, ಜಿಲ್ಲಾ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಆದೇಶಿಸಿದ್ದಾರೆ. ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಪಾಲೇರ ಮಂದಣ್ಣ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಅಪ್ಪುಡ ಸುದೀಶ್ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಿಜಯ್ ಪೂಜಾರಿ, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಬೊಟ್ಟಂಗಡ ಸುಮನ್ ಸೀತಮ್ಮ, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾಗಿ ಸಿಂಚನ ಸಿ.ಮೋಹನ್ ಅವರುಗಳನ್ನು ಆಯ್ಕೆ ಮಾಡಲಾಗಿದ್ದು, ತಕ್ಷಣದಿಂದ ತಾಲ್ಲೂಕು ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಒಳಗೊಂಡಂತೆ ಸದಸ್ಯರನ್ನು ನೇಮಿಸಿ, ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಬೆಳವಣಿಗೆಗೆ ಪೂರಕ ಕಾರ್ಯಯೋಜನೆ ಸಿದ್ದಪಡಿಸುವಂತೆ ತಿಳಿಸಲಾಗಿದೆ ಎಂದು ಚಾಮೆರ ದಿನೇಶ್ ಬೆಳ್ಯಪ್ಪ ಹೇಳಿದ್ದಾರೆ.
ಮಡಿಕೇರಿ ಫೆ.24 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ರೋಟರಿ ಜಿಲ್ಲಾ ಮಟ್ಟದ ಪ್ರಥಮ ವಷ೯ದ ಕಬ್ಬಡಿ ಪಂದ್ಯಾವಳಿಯಲ್ಲಿ ಮಿಸ್ಟಿ ಹಿಲ್ಸ್ ತಂಡವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿನ ಕಬ್ಬಡಿ ಪಂದ್ಯಾಟದಲ್ಲಿ ಮಿಸ್ಟಿ ಹಿಲ್ಸ್ ತಂಡವು ತಂಡದನಾಯಕ ಕಪಿಲ್ ನೇತೖತ್ವದಲ್ಲಿ ಪಿರಿಯಾಪಟ್ಟಣ ಮಿಡ್ ಟೌನ್ ತಂಡವನ್ನು ಮಣಿಸಿ ಕಬ್ಬಡಿ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 25 ಸಾವಿರ ನಗದು ಮತ್ತು ಟ್ಪೋಫಿಯನ್ನು ಮಿಸ್ಟಿ ಹಿಲ್ಸ್ ಪಡೆದುಕೊಂಡಿದೆ. ದ್ವಿತೀಯ ಬಹುಮಾನವನ್ನು ಪಿರಿಯಾಪಟ್ಟಣ ಮಿಡ್ ಟೌನ್ ತಂಡ ಪಡೆದುಕೊಂಡು 15 ಸಾವಿರ ರು. ನಗದು ಮತ್ತು ಟ್ರೋಫಿಯನ್ನು ಪಡೆದರೆ, ಸೆಂಟ್ರಲ್ ಪುತ್ತೂರು ತಂಡವು ತೖತೀಯ ಮತ್ತು ಹುಣಸೂರು ರೋಟರಿ ತಂಡವು ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮಡಿಕೇರಿ ರೋಟರಿ ವುಡ್ಸ್ ತಂಡವು ಅತ್ಯಂತ ಶಿಸ್ತು ಬದ್ದ ತಂಡಕ್ಕಾಗಿನ ಪ್ರಶಸ್ತಿ ಪಡೆಯಿತು. ಆಲ್ ರೌಂಡರ್ ಆಟಗಾರ ಪ್ರಶಸ್ತಿಯನ್ನು ಪಿರಿಯಾಪಟ್ಟಣ ಮಿಡ್…
ಮಡಿಕೆಕೇರಿ ಫೆ.24 NEWS DESK : ರಕ್ತದಾನವು ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು, ಮತ್ತೊಂದು ಜೀವವನ್ನು ಉಳಿಸುವ ಪುಣ್ಯ ಕೆಲಸ ಮಾಡಿದಂತೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್.ಎಸ್.ಎಸ್.ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ಮೈಸೂರಿನ ಸಂತ ಜೋಸೆಫರ ರಕ್ತನಿಧಿ ಘಟಕದ ಸಹಯೋಗದಲ್ಲಿ ವಿರಾಜಪೇಟೆ ನಗರದ ಸಂತ ಅನ್ನಮ್ಮ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುಗದಲ್ಲಿ ರಕ್ತದಾನವು ಶ್ರೇಷ್ಠದಾನವಾಗಿದ್ದು, ಹಲವು ಜನರ ಜೀವ ರಕ್ಷಣೆ ಮಾಡುವುದರಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಾನ ಮಾಡುವುದರೊಂದಿಗೆ ದಾನಿಗಳ ಆರೋಗ್ಯ ವೃದ್ಧಿಸುವುದರೊಂದಿಗೆ ಒಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಿದ ಸಂತೃಪ್ತಿ ರಕ್ತದಾನಿಗಳಿಗೆ ಒದಗಲಿದೆ ಎಂದು ಹೇಳಿದರು. ಇಂತಹ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸಿದ ಆಯೋಜಕರಿಗೆ ಅಭಿನಂದನೆ ಸಲ್ಲಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ ಎಂದು ಹಾರೈಸಿದರು. ವಿದ್ಯಾರ್ಥಿಗಳು ಉತ್ತಮ ಪರಿಸರ…
ಮಡಿಕೇರಿ NEWS DESK ಫೆ.24 : ಬೇಂಗ್ ನಾಡ್ ಕೊಡವ ಸಮಾಜದ ನೂತನ ಪ್ರವೇಶದ್ವಾರ ಮತ್ತು ಅಡುಗೆ ಮನೆಯನ್ನು ದಾನಿಗಳಾದ ತೇಲಪಂಡ ಪ್ರದೀಪ್ ಪೂವಯ್ಯ ಹಾಗೂ ನೂರೆರ ಮಿಟ್ಟು ಸುಬ್ಬಯ್ಯ ಅವರು ಉದ್ಘಾಟಿಸಿದರು. ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಮಾಜದ ಸದಸ್ಯರು ಮತ್ತಿತರರು ಹಾಜರಿದ್ದರು. *ವಾರ್ಷಿಕ ಮಹಾಸಭೆ* ಇದೇ ಸಂದರ್ಭ ಬೇಂಗ್ ನಾಡ್ ಕೊಡವ ಸಮಾಜದ ವಾರ್ಷಿಕ ಮಹಾಸಭೆ ಬಾಚರಣಿಯಂಡ ದಿನೇಶ್ ಗಣಪತಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಮಾಜದ ಸ್ಥಾಪಕ ಅಧ್ಯಕ್ಷರನ್ನು, ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ ಅಧ್ಯಕ್ಷರನ್ನು ಹಾಗೂ ಬೇರೆ ಸಂಘ ಸಂಸ್ಥೆಗಳಲ್ಲಿ ಚುನಾಯಿತರಾಗಿ ಅಧಿಕಾರದಲ್ಲಿರುವ ಸಮಾಜದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಥಾಪಕ ಅಧ್ಯಕ್ಷ ದಿ.ಕಲ್ಮಾಡಂಡ ಅಯ್ಯಣ್ಣ ಅವರ ಪರವಾಗಿ ಪುತ್ರ ಕೆ.ಎ.ರವಿ ದೇವಯ್ಯ, ಮಾಜಿ ಅಧ್ಯಕ್ಷ ದಿ.ಮಂದಪಂಡ ತಿಮ್ಮಯ್ಯ ಅವರ ಪುತ್ರ ಎಂ.ಟಿ.ಸುಬ್ಬಯ್ಯ, ಮಾಜಿ ಅಧ್ಯಕ್ಷ ದಿ.ಪಟ್ಟಮಾಡ ಜೋಯಪ್ಪ ಅವರ ಪುತ್ರ ಪಿ.ಜೆ.ಗವಿನ್, ಮಾಜಿ ಅಧ್ಯಕ್ಷ ದಿ.ಕಲ್ಮಾಡಂಡ ಕೆ.ಗಣಪತಿ ಅವರ ಪುತ್ರ ಕೆ.ಜಿ.ಕುಟ್ಟಪ್ಪ, ಮಾಜಿ ಅಧ್ಯಕ್ಷರುಗಳಾದ…
ಮಡಿಕೇರಿ NEWS DESK ಫೆ.24 : ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸದ್ಬಳಕೆಯಾಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಕರೆ ನೀಡಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ನ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ತಿಂಗಳಿಗೊಂದು ಕಾರ್ಯಕ್ರಮದಡಿ ಮಿಡಿದ ಪೊಲೀಸ್ ಹೃದಯಗಳಿಂದ ಘೋಷವಾಕ್ಯದ “ಪ್ರತಿಭೋತ್ಸವ” ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಿತು. ಜನಪದ ಗೀತೆ ಮತ್ತು ಭಾವಗೀತೆಗಳ ಸಂಗಮದ “ಪ್ರತಿಭೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂ.ಪಿ.ಕೇಶವ ಕಾಮತ್, ಕಾನೂನನ್ನು ಕಾಪಾಡುವ ಪೊಲೀಸರಲ್ಲಿ ಕೂಡ ಕಲಾವಿದನಿರುತ್ತಾನೆ. ಈ ಕಲಾವಿದನ ಪ್ರತಿಭೆಯನ್ನು ಪ್ರತಿಬಿಂಬಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಹೆಚ್ಚು ಉಪಯುಕ್ತವಾಗಿದೆ. ಇದೇ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳ ಪ್ರತಿಭೆ ಕೂಡ ಅನಾವರಣಗೊಳ್ಳಬೇಕು. ಇದರಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ದೊರೆತಂತ್ತಾಗುತ್ತದೆ ಮತ್ತು ಶಾಲಾ, ಕಾಲೇಜುಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ…






