ಲೇಖಕ: admin

ಸುಂಟಿಕೊಪ್ಪ NEWS DESK  ಫೆ.24 : ಸುಂಟಿಕೊಪ್ಪ ನಗರದಲ್ಲಿ ಸುಂಟಿಕೊಪ್ಪ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ದ್ವಿಚಕ್ರ ವಾಹನ ಸವಾರರಿಗೆ ಚಾಲನಾ ಸುರಕ್ಷತೆ, ರಸ್ತೆ ಸುರಕ್ಷತೆ ಮತ್ತು ವಾಹನ ಚಾಲನೆಯ ಕುರಿತು ಜಾಗೃತಿ ಮೂಡಿಸಿದರು. ವಾಹನ ಚಾಲನೆಯ ಸಮಯದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ತಿಳಿಸಿದ ಅಧಿಕಾರಿಗಳು ಮಕ್ಕಳು ಕೂಡ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ಸಲಹೆ ನೀಡಿದರು.

Read More

ಸೋಮವಾರಪೇಟೆ NEWS DESK ಫೆ.24 : ಕೊಡಗು ವಿಶ್ವವಿದ್ಯಾನಿಲಯ ಮುಚ್ಚುವ ಸರ್ಕಾರದ ಕ್ರಮ ಖಂಡನೀಯ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳ ಕೊಡಗು ವಿ.ವಿ ಕನಸನ್ನು ಈ ಹಿಂದಿನ ಸರ್ಕಾರ ಸಾಕಾರಗೊಳಿಸಿದೆ.  ಯಾವುದೇ ಸರ್ಕಾರವಾದರು ಅನುದಾನ ಒದಗಿಸಿ ಅವುಗಳನ್ನು ಉಳಿಸಿಕೊಳ್ಳಬೇಕಾಗಿರುವುದು ಅದರ ಕರ್ತವ್ಯ, ಅನುದಾನ ನೀಡದೆ ವಿ.ವಿ ಮುಚ್ಚುವ ಕ್ರಮ ಸರಿಯಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳಿಂದ ಕೊಡಗಿನ ವಿದ್ಯಾರ್ಥಿಗಳು ಮಂಗಳೂರು ವಿ.ವಿ.ಯನ್ನು ಅವಲಂಬಿಸಿ ಹೈರಾಣಾಗಿದ್ದಾರೆ ಎಂದಿರುವ ಅವರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಡಗು ಜಿಲ್ಲೆ ಈ ವಿ.ವಿ.ಪ್ರಾರಂಭದಿಂದಾಗಿ ಅಭಿವೃದ್ಧಿಯ ಹೊಸ ಚಿಗುರು ಕಂಡಂತಾಗಿತ್ತು ಆದರೆ ಸರ್ಕಾರದ ಈ ಕ್ರಮದಿಂದಾಗಿ ಜಿಲ್ಲೆಯ ಜನತೆಯ ಕನಸಿಗೆ ತಣ್ಣೀರೆರೀಚಿದಂತಾಗಿದೆ ಎಂದಿದ್ದಾರೆ. ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಲೋಕಸಭಾ ಸದಸ್ಯರು ಪಕ್ಷಾತೀತವಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಕೊಡಗು ವಿವಿ ಯನ್ನ ಉಳಿಸಿಕೊಳ್ಳುವುದರೊಂದಿಗೆ ಮುಂದಿನ ಬಜೆಟ್ ನಲ್ಲಿ ಅನುದಾನ ಒದಗಿಸಲು ಶ್ರಮವಹಿಸಬೇಕೆಂದು…

Read More

ಪುತ್ತೂರು NEWS DESK  ಫೆ.24 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಪಯನೀಯರಿಂಗ್ ಫೇಶಿಯಲ್ ಇಮೋಶನ್ ಅನಾಲಿಟಿಕ್ಸ್; ಏನ್ ಇನೋವೇಟಿವ್ ಫ್ಯೂಷನ್ ಆಫ್ ಡೀಪ್ ಲರ್ನಿಂಗ್ ಎಂಡ್ ವೈಟ್ ನಾರ್ಮಲೈಸ್ಡ್ ಗ್ರೇಡಿಯೆಂಟ್ ಬೂಸ್ಟಿಂಗ್ ಟೆಕ್ನಿಕ್ (Pioneering facial emotion analytics: An innovative fusion of deep learning and weight normalized gradient boosting technics) ಎನ್ನುವ ವಿಷಯದ ಬಗ್ಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಸುರೇಶ.ಡಿ ಹಾಗೂ ಎ.ಜೆ ಇನ್ಸ್‌ ಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಕೃಷ್ಣಪ್ರಸಾದ್.ಡಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಮಾಡಿದ್ದಾರೆ. 21 ವರ್ಷಗಳ ಬೋಧನಾ ಅನುಭವವನ್ನು ಹೊಂದಿರುವ ಇವರು ಕಾಲೇಜಿನ ಎಂಸಿಎ ವಿಭಾಗದ ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನದ ಬಗ್ಗೆ ತಮ್ಮ ಅಪಾರ ತಿಳುವಳಿಕೆಯನ್ನು…

Read More

ಮಡಿಕೇರಿ ಫೆ.24 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಟ್ಟೋಳಿ ಗ್ರಾಮದ ಪ್ರಸಿದ್ಧ ಧಾರ ಮಹೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ಸಂದರ್ಭದಲ್ಲಿ ಸಮಸ್ತ ನಾಡಿನ ಜನತೆಗೆ ಒಳಿತಾಗಲಿ ಎಂದು ಆಶಿಸಿದ ಶಾಸಕರು ತಾನು ಹಲವು ಸಮಯದಿಂದ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಭಗವಂತನ ಸನ್ನಿಧಿಯಲ್ಲಿ ಸಮಯ ಕಳೆಯಬೇಕೆಂದು ಯೋಚಿಸುತಿದ್ದೆ. ಆ ಸಮಯ ಈಗ ಒದಗಿ ಬಂದಿರುವುದು ತನ್ನನ್ನು ಪಾವನವಾಗಿಸಿದೆ ಎಂದು ಹೇಳಿದರು.

Read More

ನಾಪೋಕ್ಲು ಫೆ.24 NEWS DESK : ಶ್ರೀ ಕೃಷ್ಣನ ಕೊಳಲಿನ ಹಬ್ಬವೆಂದು ಖ್ಯಾತಿ ಪಡೆದ ಅಯ್ಯಂಗೇರಿ ಗ್ರಾಮದ ಶ್ರೀ ಚಿನ್ನತಪ್ಪ ಉತ್ಸವ ಸಂಪನ್ನಗೊಂಡಿತು. ಮೂರು ದಿನಗಳ ಕಾಲ ನಡೆದ ಶ್ರೀ ಕೃಷ್ಣನ ಕೊಳಲ ಹಬ್ಬದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಅಯ್ಯಂಗೇರಿ ಗ್ರಾಮದಲ್ಲಿ ವರ್ಷಂಪ್ರತಿ ಗ್ರಾಮಸ್ಥರು ವಿಜ್ರಂಭಣೆಯಿಂದ ಆಚರಿಸಿಕೊಂಡು ಬರುತ್ತಿರುವ ಚಿನ್ನತಪ್ಪ ಉತ್ಸವದ ಪಟ್ಟಣಿಹಬ್ಬ ಜರುಗಿತು. ಅಧಿಕ ಸಂಖ್ಯೆಯಲ್ಲಿ ಭಕ್ತರು ಉತ್ಸವಕ್ಕೆ ಆಗಮಿಸಿ ಶ್ರೀ ಕೃಷ್ಣನ ಕೊಳಲಿನ ನಾದವನ್ನು ಆಲಿಸಿ ದೇವಾಲಯದಲ್ಲಿ ಹರಕೆ, ಪೂಜೆ ಸಲ್ಲಿಸಿದರು. ಚಿನ್ನತಪ್ಪ ದೇವರ ವಾರ್ಷಿಕ ಉತ್ಸವ ಮುಂಜಾನೆ ಅನುರಾಧ ನಕ್ಷತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿತು. ಶನಿವಾರ ದೇವಾಲಯದಿಂದ ಶ್ರೀಕೃಷ್ಣನದು ಎನ್ನಲಾದ ಕೊಳಲನ್ನು ಭಕ್ತಿಪೂರ್ವಕವಾಗಿ ಹೊರತೆಗೆಯಲಾಯಿತು. ಹಬ್ಬಕ್ಕೆ ನಿಗದಿಪಡಿಸಿದ ಕುಟುಂಬದ ಹಿರಿಯರಾದ ಬಿದ್ದಂಡ ಹರೀಶ್ ಕೊಳಲನ್ನು ಹಿಡಿದು ನಿರ್ದಿಷ್ಟ ಸ್ಥಳಗಳಲ್ಲಿ ಮೂರು ಬಾರಿ ನುಡಿಸುತ್ತಾ ಊರ ಮಂದ್ ಗೆ ಆಗಮಿಸಿದರು. ಅಶ್ವತ್ಥ ವೃಕ್ಷದ ಕೆಳಗೆ ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಕೃಷ್ಣನ ಕೊಳಲನ್ನು ನುಡಿಸಲಾಯಿತು. ಶ್ವೇತವಸ್ತ್ರಧರಿಸಿದ ಮಹಿಳೆಯರು…

Read More

ಮಡಿಕೇರಿ ಫೆ.24 NEWS DESK : ನೆರೆಯ ಕೇರಳ ರಾಜ್ಯದ ಇರಿಕ್ಕುರ್ ಶಾಸಕ ಸಜೀವ್ ಜೋಸೆಫ್  ಅವರು ಮುಖ್ಯಮಂತ್ರಿಗಳ ಕಾನೂನು ಸಲಹಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು. ಶಾಸಕರ ಗೃಹ ಕಚೇರಿಯಲ್ಲಿ ಸಜೀವ್ ಜೋಸೆಫ್  ಅವರನ್ನು ಬರಮಾಡಿಕೊಂಡ ಶಾಸಕರು ಹಲವು ಪ್ರಮುಖ ವಿಷಯಗಳು ಬಗ್ಗೆ ಸಮಾಲೋಚನೆ ನಡೆಸಿದರು.  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಮುಖಂಡರಾದ ಪಿ.ಸಿ.ಹಸ್ಸೈನಾರ್  ಹಾಜರಿದ್ದರು.

Read More

ಮಡಿಕೇರಿ ಫೆ.24 NEWS DESK : ವಿರಾಜಪೇಟೆ ತಾಲ್ಲೂಕು ಮೈದಾನದಲ್ಲಿ ಸಿಸಿಬಿ ವತಿಯಿಂದ ಆಯೋಜಿಸಿದ ಫುಟ್ಬಾಲ್ ಪಂದ್ಯಾವಳಿಯನ್ನು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಫುಟ್ಬಾಲ್ ಆಟಗಾರರನ್ನು ಅಭಿನಂದಿಸಿ ಶುಭ ಕೋರಿದರು. ಚೆಂಡನ್ನು ಒದೆಯುವ ಮೂಲಕ ವಿಶಿಷ್ಟ ರೀತಿಯಲ್ಲಿ ಶುಭ ಹಾರೈಸಿದ ಶಾಸಕರು, ಕ್ರೀಡೆಯು ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಗೆಲುವು-ಸೋಲನ್ನು ಸಮಾನವಾಗಿ ಸ್ವೀಕರಿಸಿ, ಗೆದ್ದವರನ್ನು ಅಭಿನಂದಿಸುತ್ತಾ ಹಾಗು ಸೋತವರನ್ನು ಮರು ಪ್ರಯತ್ನಕ್ಕಾಗಿ ಹುರಿದುಂಬಿಸುವುದೇ ನಿಜವಾದ ಕ್ರೀಡಾ ಸ್ಪೂರ್ತಿ  ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.  ಕ್ರೀಡೆಯು ಪ್ರತಿಯೊಬ್ಬ ವ್ಯಕ್ತಿಯ ವೈಯುಕ್ತಿಕ ಬೆಳವಣಿಗೆ ಹಾಗೂ ಬಲವರ್ಧನೆಗೆ ಸಹಕಾರಿಯಾಗಿದ್ದು, ಅನೇಕ ರೀತಿಯಲ್ಲಿ ವ್ಯಕ್ತಿತ್ವ ವಿಕಾಸನಕ್ಕೆ ಪೂರಕವಾಗಿರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದಕ್ಕೂ ಮಿಗಿಲಾಗಿ ಕ್ರೀಡಾ ಮನೋಭಾವದಿಂದ ಆಟವನ್ನು ಆಸ್ವಾದಿಸಿ ಜಯಗಳಿಸುವುದು ನಮ್ಮೆಲ್ಲರ ಪ್ರಮುಖ ಗುರಿಯಾಗಿರಬೇಕು ಎಂದು ಪುನರುಚ್ಚರಿಸಿದರು. ಈ ಪಂದ್ಯಾಟವು, ನಾಡಿನ ಹಲವು ಫುಟ್ಬಾಲ್ ಪ್ರತಿಭೆಗಳು ಅನಾವರಣಗೊಳ್ಳಲು ಸಹಕಾರಿಯಾಗಿ ಕ್ರೀಡಾಂಗದಲ್ಲಿ ಉತ್ತಮ ಹೆಸರು ಗಳಿಸಲು ನಾಂದಿಯಾಗಲಿ ಎಂದು ಶುಭ ಕೋರಿದರು.…

Read More

ಮಡಿಕೇರಿ ಫೆ.24 NEWS DESK : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ನಾಗದೇವರ ನೂತನ ಆಲಯ ಮತ್ತು ಪುನರ್ ಪ್ರತಿಷ್ಠಾಪನಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಕ್ಷೇತ್ರ ತಂತ್ರಿಗಳಾದ ಕೆ.ಶ್ರೀಕೃಷ್ಣ ಉಪಾಧ್ಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಫೆ.22 ರಂದು ಸಂಜೆ ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾ ಸಂಕಲ್ಪ, ಮಾತೃಕಾ ಪೂಜೆ, ಋತ್ವಿಗ್ವರಣೆ, ಪ್ರಸಾದ ಪ್ರತಿಗ್ರಹ, ಸ್ಥಾನ ಶುದ್ದಿ, ಪ್ರಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತುಪೂಜೆ, ವಾಸ್ತು ಬಲಿ, ಆಶ್ಲೇಷ ಬಲಿ, ಮಹಾಮಂಗಳಾರತಿ ನೆರವೇರಿತು. ಫೆ.23 ರಂದು ಮುಂಜಾನೆಯಿಂದಲೇ ಗುರುಗಣಪತಿ ಪೂಜೆ, ಗಣಪತಿ ಹೋಮ, ನಾಗದೇವರ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಶಾಂತಿಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ಜರುಗಿತು. ನಂತರ ಉಡುಪಿಯ ವೇ.ಬ್ರ.ಶ್ರೀ ಎ.ಸುಬ್ರಮಣ್ಯ ಮಧ್ಯಸ್ಥ ಅವರಿಂದ ನಾಗಪಾತ್ರಿ ನಾಗದರ್ಶನ ಸೇವೆ ನಡೆಯಿತು. ಸಂಜೆ ಆಶೀರ್ವಾದ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ದೇವಾಲಯದ ಮ್ಯಾನೇಜಿಂಗ್ ಟ್ರಸ್ಟ್ ನ ಟ್ರಸ್ಟಿಗಳು ಹಾಗೂನಗರದ ವಿವಿಧೆಡೆಯಿಂದ ಭಕ್ತಾಧಿಗಳು…

Read More

ನಾಪೋಕ್ಲು ಫೆ.24 NEWS DESK : ಭಾಗಮಂಡಲ ಕೋರಂಗಲ ಗ್ರಾಮದ ವಾಜಪೇಯಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರುಗಳು ಸೇರಿ ವಿನೂತನ ರೀತಿಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಆಚರಿಸಿದರು. ವಾಜಪೇಯಿ ವಸತಿ ಶಾಲೆಯಲ್ಲಿ ಇರುವ ಎಲ್ಲಾ ಗುರುಗಳನ್ನು, ಸಿಬ್ಬಂದಿಗಳಿಗೆ ಗುರುದಕ್ಷಿಣೆಯನ್ನು ನೀಡಿ ತಮ್ಮ ಕೃತಜ್ಞತೆ ಸಲ್ಲಿಸಿದಲ್ಲದೆ ಊಟೋಪಚಾರ ಸಿಹಿ ಹಂಚಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಭ್ರಮಿಸಿದರು. ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ಮಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಮಕ್ಕಳ ಮುಂದಿನ ಭವಿಷ್ಯವನ್ನು ರೂಪಿಸುವ ಗುರುಗಳಿಗೆ ಇಂಥ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಆಯೋಜಿಸುವುದು ಇತರರಿಗೆ ಮಾದರಿ. ಮಾತ್ರವಲ್ಲದೆ ಸ್ಪೂರ್ತಿ ದಾಯಕವಾಗಿದೆ ಎಂದರು. ಅಧ್ಯಕ್ಷತೆಯನ್ನು ಪೋಷಕರಾದ ಮಂಜುಳಾ ಮನೋಜ್ ವಹಿಸಿದ್ದು, ಶಿವ ಪಂಜಿಕೋಡಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಶೋಭಾ ವಂದಿಸಿದರು, ಶಾಲೆಯ ಮುಖ್ಯ ಶಿಕ್ಷಕ ಲೋಕೇಶ್, ಸಿಬ್ಬಂದಿಗಳು, ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಫೆ.24 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿಗೆ ರೂ.24700 ಮೌಲ್ಯದ ಕ್ರೀಡಾ ಚಟುವಟಿಕೆಗಳ ಕಿಟ್ ವಿತರಿಸಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು ಈ ಹಿಂದಿನಿಂದಲೂ ಕ್ರೀಡೆಗಳಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದು, ದೇಶೀಯ ಕ್ರೀಡೆಗಳಲ್ಲೂ ಸಾಧನೆ ಮಾಡಿದ್ದಾರೆ. ಇದೆಲ್ಲವನ್ನು ಗುರುತಿಸಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿಗೆ ಕ್ರೀಡಾ ಉಪಕರಣಗಳನ್ನು ನೀಡಲಾಯಿತು. ಕ್ರೀಡಾ ಉಪಕರಣಗಳ ಕಿಟ್ ಪಡೆದುಕೊಂಡ ಕಾಲೇಜಿನ ಪ್ರಾಂಶುಪಾಲ ಫ್ರೊ. ಮೇಜರ್ ಬಿ.ರಾಘವ ಮಾತನಾಡಿ, ಹಳೆ ವಿದ್ಯಾರ್ಥಿ ಸಂಘ ಕಾಲೇಜಿಗೆ ಬಹಳಷ್ಟು ಸಹಕಾರ ನೀಡುತ್ತಿದ್ದು, ಕಾಲೇಜಿನ ಕುಂದುಕೊರತೆಗಳಿಗೆ ಸ್ಪಂದನೆ ನೀಡುತ್ತಿದ್ದಾರೆ. ನಮ್ಮ ವಿದ್ಯಾರ್ಥಿಗಳಿಗೆ ಈ ಉಪಕರಣಗಳು ಕ್ರೀಡಾ ಸ್ಪರ್ಧೆಗಳಿಗೆ ಭಾಗವಹಿಸಲು ತರಬೇತಿಗೆ ನೆರವಾಗುತ್ತದೆ ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ, ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಕ್ರೀಡಾ ಸಾಮಗ್ರಿಗಳ ಕಿಟ್ ಅನ್ನು ಕಾಲೇಜಿನ ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಕಾಲೇಜಿನ…

Read More