ವಿರಾಜಪೇಟೆ NEWS DESK ಫೆ.23 : ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೈಸೂರಿನ ಸಿ ಎಫ್ ಟಿ ಆರ್ ಐ ನ ವೈದ್ಯರಾದ ಡಾ.ಕಲಾ ಅವರು ಮಕ್ಕಳಿಗೆ ವಿಜ್ಞಾನದ ಮಹತ್ವವನ್ನು ತಿಳಿಸಿದರು. ಶುಚಿತ್ವವನ್ನು ಕಾಪಾಡಬೇಕು, ಸ್ವಚ್ಛತೆಯಿಂದ ಉತ್ತಮ ಪರಿಸರವನ್ನು ನಿರ್ಮಿಸಲು ಸಾಧ್ಯ ಎಂದರು. ಆಹಾರ ಪದ್ದತಿಯ ಬಗ್ಗೆ ಮಾತನಾಡಿ ಸಮತೋಲಿತ ಆಹಾರವು ಉತ್ತಮ ಆರೋಗ್ಯಕ್ಕೆ ಪೂರಕವಾಗಿದೆ. ಜಂಕ್ ಫುಡ್ ಗಳಿಂದ ಆದಷ್ಟು ದೂರ ಇರೋಣ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ವಿಜ್ಞಾನವು ಇಂದು ಸಮಾಜದ ಹಾಗೂ ರಾಷ್ಟ್ರದ ಪ್ರಗತಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ವಿಜ್ಞಾನ ಬೆಳೆದಂತೆ ನವ ಪರಿಕಲ್ಪನೆ ಉದ್ಭವಿಸಲು ಸಾಧ್ಯ. ಕೇವಲ ಅಧ್ಯಯನ ವಿಷಯ ಮಾತ್ರವಾಗಿರದೆ ವಿಜ್ಞಾನವು ಬದುಕಿನ ಪಾಠವನ್ನು ನಮಗೆ ಕಲಿಸಿಕೊಡುತ್ತದೆ. ಅದೊಂದು ಜೀವನಶೈಲಿ ಆಗಿದೆ ಎಂದು ಹೇಳಿದರು. ಲಿಟಲ್…
ಲೇಖಕ: admin
ವಿರಾಜಪೇಟೆ NEWS DESK ಫೆ.23 : ವಿರಾಜಪೇಟೆ ಕಾವೇರಿ ಕಾಲೇಜಿನ ವತಿಯಿಂದ ಬಿ.ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಶಿಬಿರಾರ್ಥಿಗಳು ಬಿ ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಗ್ರಾಮ ಸ್ವಚ್ಛತಾ ಅಭಿಯಾನ ನಡೆಸಿದರು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ಪಿ.ಡಿ.ಓ ಪರಮೇಶ್ ಯುವ ಜನತೆ ದೇಶದ ಶಕ್ತಿ, ಯುವಜನರು ಬದಲಾದರೆ ಸಮಾಜವು ಬದಲಾಗುತ್ತದೆ. ಪ್ರತಿಯೊಬ್ಬರೂ ಅವರವರ ಜವಾಬ್ದಾರಿಯನ್ನು ಅರಿತು ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ನಿಲ್ಲಿಸಿ ಉತ್ತಮ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು. ಹಾಗೆ ಒಣಕಸ ಹಾಗೂ ಹಸಿ ಕಸವನ್ನು ಬೇರ್ಪಡಿಸಿ ಸ್ವಚ್ಛತಾ ಕಾರ್ಮಿಗರಿಗೂ ಸಹಾಯವಾಗುವಂತೆ ನಡೆದುಕೊಳ್ಳಬೇಕು. ಹಸಿ ಕಸವನ್ನು ಹೆಚ್ಚಿನ ಪ್ರಮಾಣದಲ್ಲಿ ಪುನರ್ ಬಳಕೆ ಮಾಡುವ ಕೆಲಸ ನಡೆದಾಗ ತ್ಯಾಜ್ಯದ ಪ್ರಮಾಣವೂ ಕಡಿಮೆಯಾಗಿ ನೈರ್ಮಲ್ಯತೆ ಹಾಗೂ ಉತ್ತಮ ಪರಿಸರ ನಿರ್ಮಾಣವಾಗುತ್ತದೆ ಎಂದರು. ಶಾಲೆಯ ಮುಖ್ಯ ಶಿಕ್ಷಕರಾದ ಸುಜಾತ ಮಾತನಾಡಿ ನಾವು ದೈಹಿಕ ಸ್ವಚ್ಛತೆಗೆ ಒತ್ತು ನೀಡುವಂತೆ ನಮ್ಮ ಸುತ್ತಮುತ್ತಲಿನ…
ಮಡಿಕೇರಿ NEWS DESK ಫೆ.23 : ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಶನಿವಾರಸಂತೆಯ ತ್ಯಾಗರಾಜ ಕಾಲೋನಿ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ತ್ಯಾಗರಾಜ ಕಾಲೋನಿ ನಿವಾಸಿ ಯೋಗೇಶ್ (25) ಹಾಗೂ ದೊಡ್ಡಕೊಡ್ಲಿ ನಿವಾಸಿ ಮೊಹಮ್ಮದ್ ಅಸ್ಗರ್ (40) ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಿಂದ 240ಗ್ರಾಂ ಗಾಂಜಾ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಎಎಸ್‌ಪಿ ಡಾ.ಬೆನಕಪ್ರಸಾದ್.ಎನ್.ಜೆ, ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ, ಶನಿವಾರಸಂತೆ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಗೋವಿಂದರಾಜು, ಚಂದ್ರು ಹೆಚ್.ವೈ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘಿಸಿದ್ದಾರೆ.
ಕುಶಾಲನಗರ NEWS DESK ಫೆ.23 : ಕವಿತೆಯನ್ನು ಕೇಳುವ ಸಹೃದಯರ ಕೊರತೆ ಉಂಟಾಗಿರುವುದು ವಿಷಾದನೀಯ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಹೇಳಿದರು. ಬೆಂಗಳೂರಿನ ರಂಗಮಂಡಲ ಹಾಗೂ ಕೊಡಗು ಕವಿ ಬಳಗದ ವತಿಯಿಂದ ಕೂಡ್ಲೂರು ಗ್ರಾಮದ ಪೂರ್ಣಚಂದ್ರ ಕುಟೀರದಲ್ಲಿ ಆಯೋಜಿಸಿದ್ದ ಕೊಡಗು ಕಾವ್ಯಯಾನ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಕವಿತೆಗಳು ಜನರಲ್ಲಿ ಪರಸ್ಪರ ಸ್ನೇಹ, ವಿಶ್ವಾಸ ಹಾಗೂ ಸೌಹಾರ್ದತೆಯನ್ನು ಒಡಮೂಡಿಸುತ್ತವೆ. ಮಾಧ್ಯಮಗಳು ಕಾವ್ಯಗಳನ್ನು ಜನರಿಂದ ದೂರ ಮಾಡುತ್ತಿವೆ ಎಂದು ಹೇಳಿದರು. ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಂದಾಗಿ ಕಾವ್ಯ ರಂಗದಲ್ಲಿ ಒಂದಷ್ಟು ಚಟುವಟಿಕೆಗಳು ಕಾಣುತ್ತಿವೆ. ಈ ಮೂಲಕ ನಾಡಿನೆಲ್ಲೆಡೆ ಇರುವ ಚುಟುಕು ಕವಿಗಳ ಸಮಾಗಮ ಹಾಗೂ ಸ್ನೇಹ ಸಂಗಮ ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇಂದಿನ ಆಧುನಿಕ ಕಾಲಘಟ್ಟದ ಬದಲಾದ ಪರಿಸ್ಥಿತಿಯಲ್ಲಿ ಆಧುನಿಕ ಕವಿಗಳು ಆಯಾಯ ಪರಿಸರ ಹಾಗೂ ಸಂದರ್ಭಗಳ ಕುರಿತು ರಚಿಸುವ ಕವನಗಳನ್ನು ವಾಚಿಸುವ ಸಂದರ್ಭ ಪರಂಪರೆಯ ಮರೆವು ಆಗದಂತೆ ಎಚ್ಚರ ವಹಿಸಬೇಕು. ಹೊಸ ಕವಿಗಳು ಹಾಗೂ ಕವಿತೆಗಳನ್ನು ಆಸ್ವಾದಿಸುವ ಕೆಲಸವಾಗಬೇಕು…
ಮಡಿಕೇರಿ NEWS DESK ಫೆ.23 : ಗ್ರಾಮೀಣ ಕ್ರೀಡೆಯಾಗಿ ಖ್ಯಾತಿ ಪಡೆಯುತ್ತಿರುವ ಕಬ್ಬಡಿ ಬಗ್ಗೆ ಮಕ್ಕಳಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ಕಾಯ೯ವಾಗಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಜಿಲ್ಲೆ 3181 ನಲ್ಲಿ ರೋಟರಿ ಸದಸ್ಯರಿಗಾಗಿ ಮೊದಲ ಬಾರಿಗೆ ಆಯೋಜಿತ ಕಬ್ಬಡಿ ಪಂದ್ಯಾಟ ಉದ್ಠಾಟಿಸಿ ಮಾತನಾಡಿದ ಅವರು, ಇತ್ತೀಚಿನ ವಷ೯ಗಳಲ್ಲಿ ಪ್ರೀಮಿಯರ್ ಲೀಗ್ ಮೂಲಕ ಹೆಸರುವಾಸಿಯಾಗುತ್ತಿರುವ ಕಬ್ಬಡಿ ಬಗ್ಗೆ ಮಕ್ಕಳಲ್ಲಿಯೂ ಆಸಕ್ತಿ ಮೂಡಿಸಿ ಪ್ರೋತ್ಸಾಹ ನೀಡುವಂತಾದಲ್ಲಿ ಗ್ರಾಮೀಣ ಕ್ರೀಡೆಯಾದ ಕಬ್ಬಡಿಗೆ ಹೆಚ್ಚಿನ ಬೆಂಬಲ ದೊರಕಿದಂತಾಗುತ್ತದೆ ಎಂದರು. 120 ವಷ೯ಗಳನ್ನು ಜಾಗತಿಕವಾಗಿ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಪೂರೈಸಿರುವ ರೋಟರಿ ಸಂಸ್ಥೆಯು ಸಾಮಾಜಿಕ ಕಳಕಳಿಯೊಂದಿಗೆ ಕ್ರೀಡಾಕ್ಷೇತ್ರದಲ್ಲಿಯೂ ಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಪ್ರಶಂಶಿಸಿದರು. ರೋಟರಿ ಜಿಲ್ಲೆ 3181 ನ ಗವನ೯ರ್ ವಿಕ್ರಂದತ್ತ ಸಭಾ ಕಾಯ೯ಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಕ್ರಿಕೆಟ್ ಸೇರಿದಂತೆ ವಿವಿಧ…
ಮಡಿಕೇರಿ NEWS DESK ಫೆ.23 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಬ್ಲಾಕ್ ಎಮ್ಮೆಮಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ನೂತನವಾಗಿ ಕಾಂಕ್ರೀಟೀಕರಣಗೊಂಡ ಪರಂಬು ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಇದೇ ಸಂದರ್ಭ ಶಾಸಕರು ದೋಣಿ ಕಡಾವ್ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಈ ಎರಡೂ ಕಾಮಗಾರಿಗಳಿಗೆ ಶಾಸಕರ ವಿಶೇಷ ಅನುದಾನದಡಿ ಹಣ ಒದಗಿಸಲಾಗಿದೆ. ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿರುವ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಪ್ರತಿಯೊಂದೂ ಕಾಮಗಾರಿಯನ್ನು ಜನರ ಹಿತದೃಷ್ಟಿಯಿಂದ ಕೈಗೊಳ್ಳಲಾಗುತ್ತಿದೆ. ಗುಣಮಟ್ಟದ ಕಾಮಗಾರಿಗೆ ಎಲ್ಲರೂ ಸಹಕರಿಸಬೇಕು. ಜನರ ಬೇಡಿಕೆಗಳಿಗೆ ಸ್ಪಂದಿಸಲು ಹೆಚ್ಚು ಉತ್ಸುಕನಾಗಿದ್ದು, ಸರ್ವರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಸ್ಥಳೀಯ ಗ್ರಾಮಸ್ಥರು ಮಾತನಾಡಿ ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದೆ. ಕ್ಷೇತ್ರದ್ಯಾಂತ ಅದರಲ್ಲೂ ವಿಶೇಷವಾಗಿ ಈ ಭಾಗದಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಸ್ಮರಿಸಿಕೊಂಡರು ಮತ್ತು ಧನ್ಯವಾದ ಅರ್ಪಿಸಿದರು.…
ಸೋಮವಾರಪೇಟೆ NEWS DESK ಫೆ.23 : ಸೋಮವಾರಪೇಟೆಯ ಇಂದಿರಾ ಗಾಂಧಿ ಅಭಿಮಾನಿ ಸಂಘದ ವತಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಸಂಘದ ಅಧ್ಯಕ್ಷ ಎಚ್.ಈ.ನಾಗರಾಜು ಅವರ ನೇತೃತ್ವದಲ್ಲಿ ಇಂದು ಪಟ್ಟಣದ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ದೇಶದಲ್ಲಿ ಶಾಂತಿ, ಸುಭಿಕ್ಷೆ ನೆಲಸಿ ಜನತೆ ನೆಮ್ಮದಿಯಿಂದ ಬದುಕು ನಡೆಸುವಂತಾಗಲಿ ಎಂಬ ಸಂಕಲ್ಪ ಮಾಡಿ 36ನೇವರ್ಷದ ಪಾದಯಾತ್ರೆ ಆರಂಭಿಸಿದರು. ಸಂಘದ ಸದಸ್ಯರುಗಳಾದ ರವೀಂದ್ರ, ಮುರುಳಿ, ಫಾರೂಕ್, ಸತ್ಯನಾರಾಯಣ, ನರಸಿಂಹ, ರಮೇಶ್ ಹಾಗೂ ಕ್ಯಾಂಟೀನ್ ದೀಪು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಕುಶಾಲನಗರ NEWS DESK ಫೆ.23 : ಜಿಲ್ಲೆಯ ಕುಶಾಲನಗರ ಸಮೀಪ ಅಳುವಾರ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ಇತರೆ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ಕುಶಾಲನಗರ ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು ಕೊಡಗು ವಿಶ್ವವಿದ್ಯಾಲಯದಲ್ಲಿ ಕುಶಾಲನಗರ ಮತ್ತು ಸುತ್ತಮುತ್ತ ಜಿಲ್ಲೆಯ ಹಲವೆಡೆ ನೆಲೆಸಿರುವ ಬಡತನ ರೇಖೆಯ ಹಾಗೂ ಮಧ್ಯಮ ವರ್ಗದ ಹಿಂದುಳಿದ ಜನರಿಗೆ ಉನ್ನತ ಶಿಕ್ಷಣವನ್ನು ಜಿಲ್ಲೆಯಲ್ಲೇ ನೀಡುವ ನಿಟ್ಟಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿವಿಯನ್ನು ಕಲ್ಪಿಸಿದೆ. ಈ ಮೂಲಕ ನೂರಾರು ಸಂಖ್ಯೆಯ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಅನುಕೂಲ ಕಲ್ಪಿಸುವುದರೊಂದಿಗೆ ವಿದ್ಯಾರ್ಥಿಗಳ ಹಾಗೂ ಪೋಷಕರ ಕನಸು ನನಸಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಇದನ್ನು ರದ್ದುಗೊಳಿಸಿ ಬೇರೆ ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸುವ ಚಿಂತನೆ ಮಾಡಿರುವುದು ವಿಪರ್ಯಾಸ. ಸರ್ಕಾರದ ನಿರ್ಧಾರದ ವಿರುದ್ಧ ಕುಶಾಲನಗರ ಕೊಡವ ಸಮಾಜ ಸೇರಿದಂತೆ ಜಿಲ್ಲೆಯ…
ಮಡಿಕೇರಿ NEWS DESK ಫೆ.23 : ಹಲವು ವರ್ಷಗಳ ನಂತರ ಕೊಡಗು ಜಿಲ್ಲೆಗೆ ವರದಾನವಾಗಿ ಸಿಕ್ಕಿರುವ ಕೊಡಗು ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾಗಿ ಬೆಳವಣಿಗೆಯ ಹಾದಿಯಲ್ಲಿರುವಾಗಲೇ ಇದನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿಗಳ ಸಂಘ ತೀವ್ರವಾಗಿ ವಿರೋಧಿಸುವುದಾಗಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಗತ್ತಿನ ಯಾವುದೇ ದೇಶದಲ್ಲಿ ಹಣಕಾಸಿನ ಕ್ಷುಲ್ಲಕ ಕಾರಣ ನೀಡಿ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ಮುಚ್ಚಿದ ನಿದರ್ಶನಗಳು ಇಲ್ಲ. ಆದ್ದರಿಂದ ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಉಪಸಮಿತಿಯ ಈ ಅವೈಜ್ಞಾನಿಕ ಹಾಗೂ ಅವಾಸ್ತವಿಕ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸಬೇಕು. 2025ರ ಆಯವ್ಯಯದಲ್ಲಿ ಅಗತ್ಯ ಅನುದಾನ ಕೊಡಗು ವಿಶ್ವವಿದ್ಯಾಲಯಕ್ಕೆ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಗುಣಮಟ್ಟದ ನಾಗರಿಕ ಮೂಲಭೂತ ಸೌಕರ್ಯಗಳಿಲ್ಲ. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರಗಳು ಇಲ್ಲ. ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು…
ಕುಶಾಲನಗರ NEWS DESK ಫೆ.22 : ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ 50ನೇ ಕಾರ್ಯಕ್ರಮವಾಗಿ ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ನುಡಿನಮನ ಹಾಗೂ ಮಾಜಿ ಮುಖ್ಯಮಂತ್ರಿ ದಿ.ವೀರೇಂದ್ರ ಪಾಟೀಲರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಫೆ.25 ರಂದು ರೈತ ಸಹಕಾರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕುಶಾಲನಗರ ತಾಲ್ಲೂಕಿನ ಅಭಿವೃದ್ಧಿ ಹರಿಕಾರ ದಿ.ಗುಂಡೂರಾವ್ ಹಾಗೂ ರೈತರ ಜೀವನಾಡಿ ಹಾರಂಗಿ ಜಲಾಶಯದ ನಿರ್ಮಾತೃ ವೀರೇಂದ್ರ ಪಾಟೀಲರನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿದ್ದು,ಅಂದು ಬೆಳಿಗ್ಗೆ 8 ಗಂಟೆಗೆ ಕೊಡಗು ಮೈಸೂರು ಗಡಿಭಾಗದ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪದ ಮೆರವಣಿಗೆ ನಡೆಯಲಿದೆ.ಈ ಮೆರವಣಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡುವರು. ಬೆಳಿಗ್ಗೆ 10.30 ಗಂಟೆಗೆ ರೈತ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರು ಆದ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು.ಶಾಸಕ ಡಾ.ಮಂತರ್ ಗೌಡ…






