ಲೇಖಕ: admin

ಮಡಿಕೇರಿ ಫೆ.5 NEWS DESK : ಜಿಲ್ಲಾ ಕೇಂದ್ರ ಮಡಿಕೇರಿ ನಗರದ ಸುದರ್ಶನ ವೃತ್ತದ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಪಟ್ಟಭದ್ರ ಹಿತಾಸಕ್ತಿಗಳಿಂದ ಮುಕ್ತಗೊಳಿಸಿ, ದಲಿತ ಸಮುದಾಯದ ಬಳಕೆಗೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ‘ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ’ಯಿಂದ ಫೆ.10 ರಂದು ಅಂಬೇಡ್ಕರ್ ಭವನದ ಎದುರು ಧರಣಿ ನಡೆಸುವುದಾಗಿ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ವ್ಯಾಪ್ತಿಯ ದಲಿತ ಸಂಘಟನೆ, ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ನೆರವಿನಿಂದ ನಿರ್ಮಿಸಲ್ಪಟ್ಟ ಡಾ.ಬಿ.ಆರ್.ಅಂಬೇಡ್ಕರ್ ಭವನ ಇತ್ತೀಚಿನ ದಿನಗಳಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಇದರಿಂದ ದಲಿತ ಪರವಾದ ಕಾರ್ಯಕ್ರಮಗಳನ್ನು ಭವನದಲ್ಲಿ ಮುಕ್ತವಾಗಿ ನಡೆಸಲು ಅವಕಾಶಗಳು ದೊರಕುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಿಲ್ಲೆಯ ವಿವಿಧೆಡೆಗಳಲ್ಲಿನ ದಲಿತ ಸಂಘಟನೆಗಳು, ಸಾರ್ವಜನಿಕರು ಅಂದಿನ ದಿನಗಳಲ್ಲಿ ತಮ್ಮ ನೆರವನ್ನು ನೀಡಿದ್ದಾರೆ. ಇಂತಹ ವಿಚಾರವನ್ನು ಪ್ರಸ್ತಾಪಿಸಿದ ನನ್ನ ಮೇಲೆ ಅಂಬೇಡ್ಕರ್ ಭವನ ಸಮಿತಿಯ ಕೆಲವರು ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ಹೇಳಿಕೆಗಳಾಗಿವೆ…

Read More

ಮಡಿಕೇರಿ ಫೆ.5 NEWS DESK : ಸರ್ವ ಸಮಸ್ಯೆಗಳಿಗೂ ಶಿಕ್ಷಣವು ಪರಿಹಾರವನ್ನು ನೀಡುತ್ತದೆ. ಆ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಶ್ರಮವಹಿಸಿ ಉತ್ತಮ ಶಿಕ್ಷಣವನ್ನು ಪಡೆಯಬೇಕು. ಆ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳಾ ಕರೆ ನೀಡಿದರು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಈ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದಲ್ಲದೆ, ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಬೇಕು ಎಂದು ಶುಭಹಾರೈಸಿದರು. ದಂತ ವೈದ್ಯರಾದ ಬೆಳ್ಯನ ರಾಘವೇಂದ್ರ ಮಾತನಾಡಿ, ನಿರಂತರವಾದ ಅಧ್ಯಯನವು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಅಲ್ಲದೆ ನಾವು ಓದಿದ ಶಿಕ್ಷಣ ಸಂಸ್ಥೆ, ರಾಜ್ಯ ಮತ್ತು ರಾಷ್ಟ್ರಕ್ಕೆ ಉತ್ತಮ ಪ್ರಜೆಯಾಗುವ ಮೂಲಕ ಒಳ್ಳೆಯ ರೀತಿಯಲ್ಲಿ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಹುದೇರಿ ರಾಜೇಂದ್ರ, ಗ್ರಾಮೀಣ…

Read More

ಮಡಿಕೇರಿ ಫೆ.5 NEWS DESK : ಸವಿತಾ ಮಹರ್ಷಿಗಳು ಇಡೀ ಪ್ರಪಂಚಕ್ಕೆ ಉತ್ತಮ ಸಂದೇಶಗಳನ್ನು ತಿಳಿಸಿಕೊಟ್ಟ ಅದ್ವಿತೀಯರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಬಣ್ಣಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತಾಡಿದರು. ಒಬ್ಬ ಮನುಷ್ಯನ ಮುಖವನ್ನು ನೋಡಿ ಅವನ ಮನಸ್ಸಲ್ಲಿ ಯಾವ ರೀತಿಯ ಭಾವನೆಗಳಿದೆ ಎಂದು ತಿಳಿದುಕೊಳ್ಳುವುದನ್ನು ಕಾಲ ಕಾಲಗಳಿಂದ ಯುಗ ಯುಗಗಳಿಂದ ಇಡೀ ಸಮಾಜದ ಬಾಹ್ಯ ಸೌಂದರ್ಯದ ಮೂಲಕ ಅವರ ಮನಸ್ಸಿನ ಸೌಂದರ್ಯವನ್ನು ಹೆಚ್ಚಿಸುವ ಕೆಲಸವನ್ನು ಸವಿತಾ ಸಮಾಜದವರು ಮಾಡುತ್ತಾ ಬಂದಿದ್ದಾರೆ. ಅಲ್ಲದೆ ಆಯುರ್ವೇದವನ್ನು ಸಹ ಕುಲಕಸುಭಾಗಿಸಿಕೊಂಡಿದ್ದರು. ಆಗಿನ ಸಮಯದಲ್ಲಿ ಪ್ರತಿಯೊಂದು ಹಳ್ಳಿಹಳ್ಳಿಯಲ್ಲಿ ಆಯುರ್ವೇದ ತಿಳಿದಿದ್ದ ಸವಿತ ಸಮಾಜದವರು ಇದ್ದರು. ಒಬ್ಬ ರಾಜನಾದವರಿಗೆ ಒಂದು ರಾಜ್ಯದಲ್ಲಿ ಮಾತ್ರ ಗೌರವ ಇರುತ್ತದೆ. ಆದರೆ ಒಬ್ಬ ಪಂಡಿತರಿಗೆ ಪ್ರಪಂಚದಾದ್ಯಂತ ಗೌರವವನ್ನು ಕೊಡುತ್ತಾರೆ. ಅದಕ್ಕೆ ಒಂದು ಬಹುದೊಡ್ಡ ಉದಾಹರಣೆ ಎಂದರೆ ಆಯುರ್ವೇದ ಪಾಂಡಿತ್ಯ…

Read More

ಪುತ್ತೂರು ಫೆ.5 NEWS DESK : ಕಲಿಕೆ ಒಂದು ನಿರಂತರ ಪ್ರಕ್ರಿಯೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ವಿಷಯಗಳನ್ನು ಕಲಿತುಕೊಂಡು ಅದನ್ನು ವಿದ್ಯಾರ್ಥಿಗಳಿಗೆ ಬೋಧಿಸುವುದು ಪ್ರತಿಯೊಬ್ಬ ಅಧ್ಯಾಪಕನ ಕರ್ತವ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಇಂಡಸ್ಟ್ರಿಯಲ್ ಕೆಮಿಸ್ಟ್ರಿ ವಿಭಾಗದ ಪ್ರೊಫೆಸರ್ ಡಾ.ಸರೋಜಿನಿ.ಬಿ.ಕೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆಯುತ್ತಿರುವ 3 ದಿನಗಳ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸೂಕ್ಶ್ಮ ಸನ್ನಿವೇಶದಲ್ಲಿ ಸಮಾಜದಲ್ಲಿ ಬರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು ಆವಶ್ಯಕವಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಿ ವಿದ್ಯೆಯ ಜತೆ ನೈತಿಕ ಶಿಕ್ಷಣವನ್ನೂ ನೀಡಿ ಎಂದರು. ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್ ಮಾತನಾಡಿ ಜ್ಞಾನವನ್ನರಸಿ ಬರುವ ವಿದ್ಯಾರ್ಥಿಗಳ ಭವಿಷ್ಯವನ್ನು ಪುನರ್ರಚಿಸುವ ಮಹತ್ತರ ಜವಾಬ್ಧಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಯ ಆಸಕ್ತಿಯನ್ನು ಗಮನಿಸಿ ಸರಿಯಾದ ಪಥವನ್ನು ನಿರ್ದೇಶಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ…

Read More

ಮಡಿಕೇರಿ ಫೆ.5 NEWS DESK : ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯಲ್ಲಿ 65 ಲಕ್ಷ ವೆಚ್ಚದ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ಹಾಗೂ ಆರಂಭಿಸುವ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಚಪ್ಪಂಡಕೆರೆಯ ಅಡ್ಕದಬಾಣೆಯಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಇನ್ನೂ ಹೆಚ್ಚಿನ ಅನುದಾನವನ್ನು ಗ್ರಾಮಕ್ಕೆ ನೀಡುವ ಭರವಸೆ ನೀಡಿದರು. ಪಂಚಾಯತ್ ವ್ಯಾಪ್ತಿಯ ಕಾಲೂರು ಗ್ರಾಮದಲ್ಲಿ ರಸ್ತೆ ಮತ್ತು ಮೂಲಭೂತ ಸೌಲಭ್ಯ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ತಾವೇ ಖುದ್ದಾಗಿ ಕಾಲೂರಿಗೆ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಚೆಸ್ಕಾಂ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ಸ್ಪಷ್ಟ ಪಡಿಸಿದರು.  ಪ್ರಮುಖರಾದ ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ವಿ.ಜಿ.ಮೋಹನ್, ಪುಷ್ಪ ಪೂಣಚ್ಚ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧೀಕಾರದ ಸದಸ್ಯರಾದ ಹರಿಪ್ರಸಾದ್ ಕೋಚನ, ಗ್ರಾ.ಪಂ ಪಿ.ಡಿ ಒ ಶಶಿಕಿರಣ್, ಸುಭಾಶ್ ಆಳ್ವ, ರೋಷನ್ ಕೊಂಬಾರನ, ಪೊನ್ನಪ್ಪ ಕಾಲೂರು, ಗಣಪತಿ ಕೊಂಬಾರನ, ಅನಂತಕುಮಾರ್ ಕೋಲುಮುಡಿಯನ ಹಾಗೂ ಗ್ರಾಮಸ್ಥರು…

Read More

ಮಡಿಕೇರಿ ಫೆ.5 NEWS DESK : ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ಫೆ.11 ರವರೆಗೆ ನಡೆಯಲಿರುವ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ನಾಗೇಶ್ ಚಾಲನೆ ನೀಡಿದರು. ಈ ಸಂದರ್ಭ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಸುಮಾರು 25 ಕ್ಕೂ ಹೆಚ್ಚು ಮಳಿಗೆ ಇದೆ.

Read More

ಮಡಿಕೇರಿ ಫೆ.5 NEWS DESK : ಮಡಿಕೇರಿಯಲ್ಲಿ ಫೆ.7 ರಂದು ನಡೆಯುವ ಕೊಡವರ ಒಮ್ಮತದ ಬೃಹತ್ ರ‍್ಯಾಲಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬೆಂಬಲವನ್ನು ನೀಡಲಿದೆ ಮತ್ತು ಒಗ್ಗಟ್ಟು ವ್ಯಕ್ತಪಡಿಸಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿಎನ್‍ಸಿ ಸಂಘಟನೆ ಕಳೆದ 35 ವರ್ಷಗಳಿಂದ ಆದಿಮಸಂಜಾತ ಕೊಡವ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ಹಿತಾಸಕ್ತಿಗಳಿಗಾಗಿ ಪ್ರತಿಪಾದಿಸುತ್ತಾ ಬಂದಿದೆ. 1956 ರಲ್ಲಿ ಕೊಡವ ತಾಯ್ನಾಡಿನ ವಿಲೀನದ ನಂತರ ನಗಣ್ಯ ಸಂಖ್ಯೆಯಾಗಿ ಉಳಿದಿರುವ ಕೊಡವರು ಆಪತ್ತಿನ ಅಂಚಿನಲ್ಲಿದ್ದು, ತಾರತಮ್ಯವನ್ನು ಎದುರಿಸುತ್ತಿದ್ದಾರೆ. ರಾಜ್ಯದ ಪ್ರಬಲ ಸಮುದಾಯ ತಮ್ಮ ಜನಸಂಖ್ಯಾ ತೂಕದ ಮೂಲಕ ಕೊಡವರನ್ನು ಹತೋಟಿಯಲ್ಲಿಟ್ಟುಕೊಳ್ಳಲು, ಮೇಲುಗೈ ಸಾಧಿಸಲು, ನಮ್ಮ ಪೂರ್ವಜರ ತಾಯ್ನಾಡು ಕೊಡವಲ್ಯಾಂಡ್‍ನ ಮೇಲೆ ಪ್ರಾಬಲ್ಯ ಪ್ರತಿಪಾದಿಸಲು, ಜನಾಂಗೀಯ ಪ್ರಭಾವವನ್ನು ಆದಿಮಸಂಜಾತ ಕೊಡವ ಜನರ ಮೇಲೆ ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅತಿಸೂಕ್ಷ್ಮ, ಆದಿಮಸಂಜಾತ ಮತ್ತು ಅಳಿವಿನಂಚಿನಲ್ಲಿರುವ ಕೊಡವರು ಸ್ವಂತ ತಾಯ್ನಾಡಿನಲ್ಲಿ ರಾಜ್ಯಾಂಗದತ್ತ ಹಕ್ಕನ್ನು ಮರು ಸ್ಥಿರೀಕರಿಸಲು ಸಿಎನ್‍ಸಿ ಸಂಘಟನೆಯು…

Read More

ಮಡಿಕೇರಿ ಫೆ.5 NEWS DESK : ಕರ್ನಾಟಕದ ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಭಾದಿಸಿದ ಹೊಸ ಶಿಲೀಂಧ್ರ ರೋಗವನ್ನು ಐ.ಸಿ.ಎ.ಆರ್. ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ (ICAR-IISR), ಕೋಜಿಕೋಡ್ ನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಶುಂಠಿಯಲ್ಲಿ ಕಂಡುಬಂದಿರುವ ಈ ರೋಗವು ಪೈರಿಕ್ಯುಲೇರಿಯಾsp.ಎಂಬ ಶಿಲೀಂಧ್ರದಿಂದ ಹರಡುತ್ತದೆ. ಪೈರಿಕ್ಯುಲೇರಿಯಾವು ಭತ್ತ, ಗೋಧಿ ಮತ್ತು ಬಾರ್ಲಿಯಂತಹ ಏಕದಳ ಸಸ್ಯಗಳಲ್ಲಿ ಬ್ಲಾಸ್ಟ್ ರೋಗವನ್ನು ಉಂಟುಮಾಡುತ್ತದೆ, ಶುಂಠಿಯಲ್ಲಿ ಇದು ಮೊದಲ ಬಾರಿಗೆ ವರದಿಯಾಗಿದೆ.ಈ ರೋಗಬಂದ ಶುಂಠಿ ಗಿಡದ ಎಲೆಗಳು ಹಳದಿಯಾಗಿ ಕಾಣಿಸಿಕೊಳ್ಳುತ್ತವೆಮತ್ತು ಆರಂಭಿಕ ಹಂತದಲ್ಲಿ ಕಪ್ಪುಅಥವಾ ಆಲಿವ್-ಹಸಿರು ಬಣ್ಣದ ಚುಕ್ಕೆಗಳು ಜೊತೆಗೂಡಿರುತ್ತದೆ ಒಮ್ಮೆ ಸೋಂಕು ತಗುಲಿದರೆ, ಅದು ವೇಗವಾಗಿ ಹರಡುತ್ತದೆ ಮತ್ತು ಕೆಲವೇ ಗಂಟೆಗಳಲ್ಲಿ ಇಡೀ ಹೊಲವನ್ನು ಆವರಿಸುತ್ತದೆ, ಇದು ತೀವ್ರವಾದ ಬೆಳೆ ನಷ್ಟ ಮತ್ತು ಶುಂಠಿಯಎಲೆ ಮತ್ತು ಕಾಂಡದ ಒಣಗುವಿಕೆಗೆ ಕಾರಣವಾಗುತ್ತದೆ. ರೋಗಪೀಡಿತ ಸಸ್ಯಗಳ ಗೆಡ್ಡೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಖಚಿತಪಡಿಸಿರುತ್ತಾರೆ. ಸಮಸ್ಯೆಯು ಎಲೆಗಳ ಅಕಾಲಿಕ ಹಳದಿ…

Read More

ಮಡಿಕೇರಿ ಫೆ.5 NEWS DESK : ಅಯ್ಯಂಗೇರಿ ಗ್ರಾಮದ ಸರಕಾರಿ ಶಾಲೆಯ ಮೈದಾನದ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸದಿದ್ದಲ್ಲಿ ಭಾಗಮಂಡಲ-ಅಯ್ಯಂಗೇರಿ ರಸ್ತೆತಡೆ ಪ್ರತಿಭಟನೆ ನಡೆಸುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಯ್ಯಂಗೇರಿ ಶಾಖೆಯ ಅಧ್ಯಕ್ಷ ಉಸ್ಮಾನ್ ಎಚ್ಚರಿಕೆ ನೀಡಿದ್ದಾರೆ. ಶಾಲಾ ಮೈದಾನದ ಕಾಮಗಾರಿ ಸ್ಥಗಿತಗೊಂಡು ಎರಡು ತಿಂಗಳುಗಳೇ ಕಳೆದಿದೆ. ಮಸೀದಿಗೆ ತೆರಳುವ ಮಾರ್ಗವೂ ಇಲ್ಲೇ ಇದ್ದು, ಪಾದಾಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದೆ. ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಈ ಪ್ರದೇಶ ಸಂಪೂರ್ಣವಾಗಿ ದೂಳುಮಯವಾಗಿದೆ. ಶಾಲಾ ವಿದ್ಯಾರ್ಥಿಗಳು ದೂಳಿನ ವಾತಾವರಣ ಮತ್ತು ಮಣ್ಣಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮುಂದಿನ ಏಳು ದಿನಗಳ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ರಸ್ತೆತಡೆ ಪ್ರತಿಭಟನೆ ನಡೆಸುವುದು ಖಚಿತವೆಂದು ಉಸ್ಮಾನ್ ತಿಳಿಸಿದ್ದಾರೆ.

Read More

ನವದೆಹಲಿ NEWS DESK ಫೆ.5 : ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದೆ. ರಾಷ್ಟ್ರದ ರಾಜಧಾನಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಚಳಿಯನ್ನೂ ಲೆಕ್ಕಿಸದೆ ಮತದಾರರು ಅತಿ ಉತ್ಸಾಹದಿಂದ ಮತ ಚಲಾವಣೆ ಮಾಡುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ತಮ್ಮ ಹಕ್ಕು ಚಲಾಯಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ರಾಷ್ಟಿçÃಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಅನೇಕ ಮುಖಂಡರು ಮತ ಚಲಾಯಿಸಿದರು. ಸಂಜೆ 6:30 ಗಂಟೆಯವರೆಗೆ ಮತದಾನ ನಡೆಯಲಿದ್ದು, ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಫೆ.8 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

Read More