ಲೇಖಕ: admin

ಮಡಿಕೇರಿ ಫೆ.21 NEWS DESK : ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವಾಲಯದ ವಾರ್ಷಿಕೋತ್ಸವವು ಫೆ.22 ಹಾಗೂ 23 ರಂದು ನಡೆಯಲಿದೆ ಎಂದು ತಕ್ಕಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಫೆ.15ರಂದು ಕೊಡಿಮರ ನಿಲ್ಲಿಸುವ ಮೂಲಕ ಆರಂಭಗೊಂಡಿದ್ದು, ಫೆ.22 ರಂದು ಸಂಜೆ 4.30 ಗಂಟೆಗೆ ಎತ್ತು ಪೋರಾಟ್ ಆಗಮಿಸುವ ಮೂಲಕ ನೆರ್ಪು ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ನಂತರ ವಿವಿಧ ಪೂಜಾವಿಧಿ ವಿಧಾನಗಳು ನಡೆಯಲಿವೆ. 23ರಂದು ಬೆಳಿಗ್ಗೆಯಿಂದಲೆ ವಿವಿಧ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ರಾತ್ರಿ 7 ಗಂಟೆಗೆ ದೇವರ ಅವಭೃತ ಸ್ನಾನ (ದೇವ ಕುಳಿಪೊ) ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ತಿಳಿಸಿದ್ದಾರೆ. ಬೊಟ್ಟಿಯತ್ ನಾಡಿಗೆ ಸೇರಿದ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಈಚೂರು ಹಾಗೂ ಅರುವತೋಕ್ಲು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಾಡ್ ದೇವಸ್ಥಾನ ಎಂದು ಖ್ಯಾತಿ ಪಡೆದಿರುವ ಕುಂದಾ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಈಶ್ವರ ದೇವಸ್ಥಾನಕ್ಕೆ ಪೂರ್ವ ಕಾಲದ…

Read More

ಮಡಿಕೇರಿ ಫೆ.20 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ಮಾ.4 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324 ಅನ್ನು ಸಂಪರ್ಕಿಸಬಹುದು.…

Read More

ಮಡಿಕೇರಿ ಫೆ.21 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದ ರೂಡಿ ಸಂಪ್ರದಾಯದಂತೆ ಪ್ರತೀ ವರ್ಷ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಫೆ.26 ರಂದು ಮಹಾಶಿವರಾತ್ರಿ ಪೂಜಾಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಭಕ್ತಾದಿಗಳು ಫೆಬ್ರವರಿ, 26 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆಯುವ ಪೂಜಾ ಪೂಜಾಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆಬ್ರವರಿ, 26 ರಂದು ಬೆಳಗ್ಗೆ 07 ಗಂಟೆಗೆ ಶತರುದ್ರಾಭಿಷೇಕ , ಬೆಳಗ್ಗೆ 9.30 ಕ್ಕೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ರುದ್ರಹೋಮದ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 06 ಗಂಟೆಗೆ ತಾಯಂಬಕ ಸೇವೆ, ಸಂಜೆ 06.30 ಕ್ಕೆ ಲಕ್ಷದೀಪೋತ್ಸವ. ಸಂಜೆ 06:30 ರಿಂದ ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ. ಸಂಜೆ 05:30 ರಿಂದ ಭಜನೆ…

Read More

ಮಡಿಕೇರಿ ಫೆ.20 NEWS DESK : ಶ್ರೀಮಂಗಲ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಮಾರ್ಗಗಳಾದ ಎಫ್1 ಬಿರುನಾಣಿ, ಎಫ್2 ಕುಟ್ಟ, ಎಫ್3 ಶ್ರೀಮಂಗಲ, ಎಫ್ 4 ಕಣ್ಣೂರು, ಎಫ್5 ಬಾಡಗ, ಎಫ್6 ಬೀರುಗ, ಎಫ್7 ಶೆಟ್ಟಿಗೇರಿ, ಮಾರ್ಗಗಳಲ್ಲಿ ಫೆಬ್ರವರಿ, 21 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಾಲ್ಲೂರು, ನಾಥಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ ಕೊಲ್ಲಿ, ಶ್ರೀಮಂಗಲ, ಹರಿಹರ, ನಾಲ್ಕೇರಿ, ಅಲುಮಡಿಕೇರಿ, ಚೀಪೆಕೊಲ್ಲಿ, ಗುಂಡಮಾಡು, ಎರ್ಮಾಡು, ಚೂರಿಕಾಡು, ಪಲ್ಲೇರಿ, ಕೆ.ಬಾಡಗ, ನಾಣಾಚಿ, ಬೊಳ್ಳೇರ ಗೇಟ್, ಕೆಟ್ಟಿಗೇರಿ, ತಾವಳಗೇರಿ, ಗೂಟುಕೊಲ್ಲಿ, ಹೊಗರೆ, ಹೊಸಕೇರಿ, ಈಸ್ಟ್-ನೆಮ್ಮಲೆ, ಕೆಕೆಆರ್, ಬಿರುಗ, ಇರ್ಪು, ಚಪ್ಪಡಿಕೊಲ್ಲಿ, ಕುಮಟೂರು, ಕಾಕೂರು, ಕುರ್ಚಿ, ವೆಸ್ಟ್-ನೆಮ್ಮಲೆ, ಬಾಡಗಕೇರಿ, ಕೂಟಿಯಾಲು, ಬಿರುನಾಣಿ, ಪೂಕೆಳ, ಕಾಳಕೊರೆ, ಪರಕಟಕೇರಿ, ತೇರಾಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗೆಯೇ 66/11ಕೆವಿ…

Read More

ಮಡಿಕೇರಿ ಫೆ.20 NEWS DESK : ಮಕ್ಕಳಿಗೆ ಮನೆಯಲ್ಲಿಯೇ ಸಾಹಿತ್ಯದ ಅಭಿರುಚಿ ಬೆಳೆಸುವಂತಾಗಬೇಕು. ಪಠ್ಯಪುಸ್ತಕದ ಜೊತೆಗೆ ಉತ್ತಮ ಸಾಹಿತ್ಯ ಕೃತಿಗಳ ಓದುವುದನ್ನು ಬೆಳೆಸಿಕೊಂಡಲ್ಲಿ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಲ್.ಮಲ್ಲೇಶ್ ಗೌಡ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕ ವತಿಯಿಂದ ‘ಪಂಜೆ ಮಂಗೇಶರಾಯರ 150 ನೇ ವರ್ಷಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪಂಜೆ ಮಂಗೇಶರಾಯರ ಕೊಡುಗೆ ಅಪಾರವಾಗಿದೆ. 20ನೇ ಶತಮಾನದ ಹಾದಿಯಲ್ಲಿ ಕೊಡಗಿನ ಶ್ರೀಮಂತಿಕೆಯನ್ನು ವರ್ಣಿಸಿದ್ದಾರೆ. ಕೊಡಗಿನ ಸಿರಿಯನ್ನು ಕನ್ನಡ ಸಾಹಿತ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ತಿಳಿಸಿದರು.’ ಕನ್ನಡ ಸಾಹಿತ್ಯವು ಜಗತ್ತಿನಲ್ಲಿಯೇ ಹೆಚ್ಚಿನ ಕೃತಿಗಳು ಪ್ರಕಟವಾಗುವಲ್ಲಿ ಪ್ರಥಮ ಸ್ಥಾನದಲ್ಲಿದೆ. ಕನ್ನಡದಲ್ಲಿ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಕನ್ನಡದ ಮಹತ್ವದ ಕೃತಿಗಳನ್ನಾದರೂ ಓದಬೇಕು. ಗ್ರಂಥಾಲಯದ ಪುಸ್ತಕ ಅಧ್ಯಯನ ಮಾಡಬೇಕು. ಇದರಿಂದ ಬದುಕನ್ನು ಗಟ್ಟಿಗೊಳಿಸಿಕೊಳ್ಳಬಹುದು ಎಂದು ಅವರು ವಿವರಿಸಿದರು. ‘ವಿದ್ಯಾರ್ಥಿಗಳು…

Read More

ಮಡಿಕೇರಿ ಫೆ.20 NEWS DESK : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.1 ರಿಂದ 20 ರವರೆಗೆ ನಡೆಯಲಿದ್ದು, ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗದಲ್ಲಿ ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶ್ರುಶೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಕಲ್ಪಿಸುವುದು ಮತ್ತಿತರ ಅಗತ್ಯ ಮೂಲ ಸೌಲಭ್ಯ ಒದಗಿಸಲು ಸಂಬಂಧಪಟ್ಟ ಇಲಾಖೆ ಹಾಗೂ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸಲಹೆ ನೀಡಿದರು. ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಗಮನಹರಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಬೇಕು ಎಂದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿ…

Read More

ಮಡಿಕೇರಿ ಫೆ.20 NEWS DESK : ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ ಇದರ ನಡುವೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಎಂ.ಎ.ಕಲೀಲ್ ಬಾಷ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉದಯಗಿರಿಯಲ್ಲಿ ಗಲಭೆ ಸೃಷ್ಟಿಸಿದ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದು, ತನಿಖೆ ನಡೆಯುತ್ತಿದೆ. ಈ ಗಲಭೆಯನ್ನು ನೆಪಮಾಡಿಕೊಂಡು ಪ್ರತಾಪ್ ಸಿಂಹ ಅವರು ಇಡೀ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜದಲ್ಲಿ ಅಶಾಂತಿ ಮೂಡಿಸುವ ಕಿಡಿಗೇಡಿಗಳು ಎಲ್ಲಾ ಧರ್ಮದಲ್ಲೂ ಇದ್ದಾರೆ. ಸಂವಿಧಾನ ಮತ್ತು ದೇಶದ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವ ಕಿಡಿಗೇಡಿಗಳ ಕೃತ್ಯವನ್ನು ನಾವು ಕೂಡ ಖಂಡಿಸುತ್ತೇವೆ. ಅಶಾಂತಿ ಮೂಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಪ್ರತಿಯೊಬ್ಬರಿಗೂ ಹಕ್ಕನ್ನು ನೀಡಿದೆ. ಆದರೆ ಗಲಭೆಯೊಂದನ್ನು ನೆಪಮಾಡಿಕೊಂಡು ಒಂದು…

Read More

ಮಡಿಕೇರಿ ಫೆ.20 NEWS DESK : ಶಿಕ್ಷಣ, ತರಬೇತಿ ಎಂಬುದು ಎಲ್ಲಾ ಸಂಘ ಸಂಸ್ಥೆಗಳ ಉಳಿವು, ಅಭಿವೃದ್ಧಿಗೆ ಅಗತ್ಯವಾಗಿ ಬೇಕಾಗಿದೆ. ನಮ್ಮ ಪೂರ್ವಜರು ಸ್ಥಾಪಿಸಿ ಬೆಳೆಸಿರುವ ದವಸ ಭಂಡಾರಗಳಲ್ಲಿ ಶೇ.50 ರಷ್ಟು ಸಂಘಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಬಡ್ಡಿ ಸಹಾಯಧನ ಅಥವಾ ಇತರ ಯಾವುದೇ ಅನುದಾನಗಳು ಇಲ್ಲದೆ ಇರುವುದರಿಂದ ಹಿರಿಯರು ಸ್ಥಾಪಿಸಿದ ದವಸ ಭಂಡಾರಗಳು ನಷ್ಟದಲ್ಲಿವೆ. ಆದುದರಿಂದ ಆರ್ಥಿಕವಾಗಿ ಸದೃಢವಾಗಿರುವ ಸಂಸ್ಥೆಗಳು ದವಸ ಭಂಡಾರಗಳ ಅಭಿವೃದ್ಧಿಗೆ ಕೈಜೋಡಿಸಿದಲ್ಲಿ ಅವನತಿಯತ್ತ ಸಾಗುತ್ತಿರುವ ದವಸ ಭಂಡಾರಗಳನ್ನು ಉಳಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಕಿಲನ್ ಗಣಪತಿ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಹಾಗೂ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯ ನಿ., ವಿರಾಜಪೇಟೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ ಕಾನೂನು, ಲೆಕ್ಕಪರಿಶೋಧನೆ ಹಾಗೂ…

Read More

ವಿರಾಜಪೇಟೆ ಫೆ.20 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್ ಘಟಕಗಳ ಸಹಯೋಗದಲ್ಲಿ ಫೆ.24 ರಂದು ರಕ್ತದಾನ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ, ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್  ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕುಶಾಲನಗರ ಫೆ.20 NEWS DESK  :  ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಸಂಧಾನ ಎಂಬ ಉಚಿತ ಹಾಸ್ಯ ನಾಟಕ  ಗಮನ ಸೆಳೆಯಿತು. ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ನೇತೃತ್ವದಲ್ಲಿ ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಉಚಿತವಾಗಿ ಹಮ್ಮಿಕೊಂಡ ನಾಟಕದಲ್ಲಿ ನೂರಾರು ಪ್ರೇಕ್ಷಕರು ಪಾಲ್ಗೊಂಡಿದ್ದರು.  ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಧಾತ್ರಿ ರಂಗಸಂಸ್ಥೆ ಕಲಾವಿದರ ಮೂಲಕ ಶ್ರೀ ಕೃಷ್ಣ ಸಂಧಾನ ಹಾಸ್ಯ ನಗೆ ನಾಟಕ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿತು. ನಾಟಕದ ಉದ್ಘಾಟನೆಯನ್ನು ಉದ್ಯಮಿಗಳು ಹಾಗೂ ಸಮಾಜಸೇವಕರಾದ ರಾಜೇಗೌಡ ಅವರು ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಜಿಲ್ಲಾಧ್ಯಕ್ಷರಾದ ಆವರ್ತಿ ಆರ್ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಯತ್ರಿ ಕಲ್ಯಾಣ ಮಂಟಪದ ಮಾಲೀಕರಾದ ಕೆ ಬಿ ಗಾಯತ್ರಿ ಉದ್ಯಮಿ ರಾಜೇಗೌಡ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ನಿನಾಸಂ ತಂಡದ ಸುಮಾರು 20ಕ್ಕೂ ಅಧಿಕ ನಿನಾಸಂ ಕಲಾವಿದರು ನಾಟಕ ನಡೆಸಿಕೊಟ್ಟರು.…

Read More