ಕುಶಾಲನಗರ ಫೆ.20 NEWS DESK : ರಾಜ್ಯ ಸರ್ಕಾರ ನೂತನ ವಿಶ್ವವಿದ್ಯಾಲಯಗಳನ್ನು ರದ್ದುಗೊಳಿಸುವ ಚಿಂತನೆ ವಿರೋಧಿಸಿ ಕುಶಾಲನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು. ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಮುಂಭಾಗ ಸೇರಿದ ನೂರಾರು ವಿದ್ಯಾರ್ಥಿಗಳು ಸರ್ಕಾರದ ನೀತಿಯನ್ನು ಖಂಡಿಸಿ ಘೋಷಣೆ ಕೂಗಿದರು. ಜಿಲ್ಲೆಯಲ್ಲಿ ಹಿಂದುಳಿದ ಮತ್ತು ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಸಂಬಂಧ ಕೊಡಗು ವಿಶ್ವವಿದ್ಯಾಲಯ ಸ್ಥಾಪಿಸಲಾಗಿದ್ದು, ಇದೀಗ ಅದನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಪ್ರಮುಖರಾದ ಚಂದ್ರಶೇಖರ್ ಮಾತನಾಡಿ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಪ್ರತಿವರ್ಷ 50,000 ಕೋಟಿ ರೂಗಳನ್ನು ವೆಚ್ಚ ಮಾಡುತ್ತಿದೆ ಅದರಲ್ಲಿ ಶೇಕಡ ಒಂದರಷ್ಟು ಪ್ರಮಾಣದ ಹಣವನ್ನು ರಾಜ್ಯದ ಶಿಕ್ಷಣ ರಂಗಕ್ಕೆ ನೀಡಿದರೆ ಎಲ್ಲಾ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಸುಧಾರಿಸುತ್ತದೆ ಎಂದರು. ಹಿಂದಿನ ಸರ್ಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಪ್ರಾರಂಭಿಸಿದರೆ ಈಗ ಪ್ರಸಕ್ತ ಸರ್ಕಾರ ಅದನ್ನು ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಸರ್ಕಾರ ವಿಶ್ವವಿದ್ಯಾಲಯಗಳನ್ನು…
ಲೇಖಕ: admin
ಬೆಳಗಾವಿ ಫೆ.20 NEWS DESK : ಬೆಳಗಾವಿ-ಬೈಲಹೊಂಗಲ ಹೆದ್ದಾರಿಯ ಭರತೇಶ್ ಶಾಲೆಯ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್, ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತಕ್ಷಣ ಕಾರ್ಯಪ್ರವೃತ್ತರಾದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬೆಳಗಾವಿ ತಾಲ್ಲೂಕಿನ ದೇಸೂರಿನಿಂದ ಬೈಲಹೊಂಗಲದ ಕಡೆ ಹೊರಟಿದ್ದ ಟ್ಯಾಂಕರ್ (ಕೆಎ-23 ಎ 8171) ವೇಗವಾಗಿ ಸಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದು, ಹೆದ್ದಾರಿಯ ಮತ್ತೊಂದು ಬದಿಯಲ್ಲಿ ಬಿದ್ದಿದೆ. ಘಟನೆಯಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಮಣ್ಣು ಪಾಲಾಗಿದೆ.
ನಾಪೋಕ್ಲು ಫೆ.20 NEWS DESK : ಹೊದ್ದೂರು ಗ್ರಾಮದ ಶ್ರೀ ಶಾಸ್ತ ಈಶ್ವರ ದೇವಾಲಯದ ನಾಲ್ಕನೇ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ಶಾಸ್ತ ಈಶ್ವರ ದೇವರ ಬಲಿ ಗಣಪತಿ ಹೋಮ, ಅಲಂಕಾರ ಪೂಜೆ, ಬೇಟೆ ಅಯ್ಯಪ್ಪ ಸನ್ನಿಧಿಗೆ ಅಭಿಷೇಕ ಪೂಜೆ, ವಿಷ್ಣುಮೂರ್ತಿ ದೈವ ನೆಲೆಗೆ ಅಭಿಷೇಕ ಪೂಜೆ ಜರುಗಿತು. ಮಧ್ಯಾಹ್ನ ಶ್ರೀ ಶಾಸ್ತ ಈಶ್ವರ ದೇವರ ನೆನಪು ಬಲಿ ಬಳಿಕ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಸಂಜೆ ಶ್ರೀ ಶಾಸ್ತ ಈಶ್ವರ ದೇವರ ಆವೃತ ಸ್ನಾನ ಜರಗಿತು. ವಿವಿಧ ನೃತ್ಯ ಸಂಪ್ರೊಕ್ಷಣೆಯೊಂದಿಗೆ ದೈವಿಕ ವಿಧಿ ವಿಧಾನಗಳು ಜರುಗಿದವು. ಬಳಿಕ ವಿಷ್ಣುಮೂರ್ತಿ ದೇವರ ತಾಯತ ತೆರೆ ಹಾಗೂ ಮೇಲೇರಿಗೆ ಅಗ್ನಿ ಸ್ಪರ್ಶ ನೆರವೇರಿತು. ಪ್ರಧಾನ ಅರ್ಚಕ ಜಯರಾಮ ತಂತ್ರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಈ ಸಂದರ್ಭ ಗ್ರಾಮದ ದೇವ ತಕ್ಕ ನೆರವಂಡ ಸಂಜಯ್ ಪೂಣಚ್ಚ, ದೇವಾಲಯ ಸಮಿತಿ ಅಧ್ಯಕ್ಷ ಕೂಡಂಡ…
ಮಡಿಕೇರಿ ಫೆ.19 NEWS DESK : ಕರ್ನಾಟಕ ಸರ್ಕಾರದ ಸಚಿವರ ದರ್ಜೆಯ ಸ್ಥಾನಮಾನ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಫೆಬ್ರವರಿ, 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಧ್ಯಕ್ಷರು ಫೆಬ್ರವರಿ, 20 ರಂದು ಬೆಳಗ್ಗೆ 10 ಗಂಟೆಗೆ ನಗರದ ಜೂನಿಯರ್ ಕಾಲೇಜು ಆವರಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ನಡೆಯುವ ಪಂಜೆ ಮಂಗೇಶರಾಯರ 150 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಬಿ.ರವಿಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಫೆ.19 NEWS DESK : ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಲಕನೂರು ಹೊಸಳ್ಳಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ್ದ ಕೃಷಿ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ 2 ಯೋಜನೆಯಡಿ ಜಲಾನಯನ ಯಾತ್ರೆಗೆ ನೇರುಗಳಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್.ಕೆ.ವಿನೋದ್ ಕುಮಾರ್, ಜಂಟಿ ಕೃಷಿ ನಿರ್ದೇಶಕ ಡಾ.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕರು ಡಾ.ಸೋಮಶೇಖರ್ ಚಾಲನೆ ನೀಡಿದರು. ನಂತರ ಮಣ್ಣು ಮತ್ತು ನೀರಿನ ಮಹತ್ವದ ಬಗ್ಗೆ ಕಲಾವಿದ ಈ.ರಾಜು ಮತ್ತು ತಂಡದಿಂದ ಬೀದಿನಾಟಕ ಮೂಲಕ ರೈತರಲ್ಲಿ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸಲಾಯಿತು. ಮಹಿಳೆಯರಿಂದ ಕಳಸಹೊತ್ತು ಮುಖ್ಯ ಬೀದಿಯಲ್ಲಿ ಯಾತ್ರೆ ಸಾಗಿ ಸಭೆ ಕಾರ್ಯಕ್ರಮ ನಡೆಯಿತು. ಪ್ರಾಸ್ತಾವಿಕ ಮಾತನಾಡಿದ ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಸೋಮಸುಂದರ್ ಜಲಾನಯನದ ಮಹತ್ವ ಮಣ್ಣು ನೀರು ಅರಣ್ಯ ಗಿಡಗಳ ರಕ್ಷಣೆ ಬಗ್ಗೆ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಚಂದ್ರಶೇಖರ್ ಜಲಾನಯನ ಇಲಾಖೆ ಕಡೆಯಿಂದ ನೀಡಲಾದ ಸೌಲಭ್ಯ ಬಗ್ಗೆ ಮಾಹಿತಿ ನೀಡಿದರು.…
ಮಡಿಕೇರಿ ಫೆ.19 NEWS DESK : 2018-19ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ 252 ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’ ಕಾರ್ಯವು ನಗರದ ಜಿ.ಪಂ.ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇನ್ಫೋಸಿಸ್ ಸಂಸ್ಥೆಯ ಸುನಿಲ್ ಕುಮಾರ್, ಸಂತೋಷ್ ಹಾಗೂ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರ ಉಪಸ್ಥಿತಿಯಲ್ಲಿ ಲಾಟರಿ ಮೂಲಕ ‘ಮನೆ ಹಂಚಿಕೆ’ ಕಾರ್ಯವು ಪಾರದರ್ಶಕವಾಗಿ ನಡೆಯಿತು. ‘ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ 200 ಮನೆಗಳು ಸೇರಿದಂತೆ ಜಂಬೂರಿನಲ್ಲಿ ಇಂಡಿಯನ್ ಹ್ಯಾಬಿಟೇಟ್ ಸಂಸ್ಥೆಯಿಂದ ನಿರ್ಮಾಣವಾಗಿರುವ 4 ಮನೆಗಳು, ಜೊತೆಗೆ ಮದೆನಾಡು ಬಳಿ 4, ಕೆ.ನಿಡುಗಣೆ ಬಳಿ 2, ಗಾಳಿಬೀಡು ಬಳಿ 42 ಸೇರಿದಂತೆ ಒಟ್ಟು 252 ಮನೆಗಳ ಹಂಚಿಕೆ ಕಾರ್ಯವು ಸಂತ್ರಸ್ತರ ಸಮ್ಮುಖದಲ್ಲಿ ಮಾಡಲಾಯಿತು. ಲಾಟರಿ ತೆಗೆಯುವ ಮೂಲಕ ಸಂತ್ರಸ್ತರೇ ತಮ್ಮ ಮನೆ ಸಂಖ್ಯೆ ಆಯ್ಕೆ ಮಾಡಿಕೊಂಡರು.’ ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, 2018-19 ರಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡಿದ್ದ…
ಕುಶಾಲನಗರ ಫೆ.19 NEWS DESK : ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಕೂಡಿಗೆ ಕ್ಲಸ್ಟರ್ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೂಡಿಗೆ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್.( ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ) ನ ಕಲಿಕಾ ಹಬ್ಬವು ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಕಲಿಕಾ ಹಬ್ಬದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಕ್ಕಳೊಂದಿಗೆ ಕಲಿಕಾ ಸಂತಸ ಹಂಚಿಕೊಂಡು ಮಾತನಾಡಿದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಉಪ ನಿರ್ದೇಶಕ( ಅಭಿವೃದ್ಧಿ)ರೂ ಆದ. ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್, ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದ ಕಲಿಕೆಯೊಂದಿಗೆ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದರು. ಮಕ್ಕಳ ಸ್ಪರ್ಧಾ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಂತಹ ಕಾರ್ಯಕ್ರಮಗಳು ಮಕ್ಕಳನ್ನು ಕಲಿಕೆಗೆ ಪ್ರೇರೇಣೆ ನೀಡುತ್ತವೆ ಎಂದರು. ಮಕ್ಕಳ ಕಲಿಕಾ ಹಬ್ಬದ ಮಹತ್ವ ಕುರಿತು ಮಾತನಾಡಿದ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಎಸ್…
ಮಡಿಕೇರಿ ಫೆ.19 NEWS DESK : ಕಳೆದ ಎರಡು ದಶಕಗಳ ನಿರಂತರ ಪರಿಶ್ರಮದಿಂದ ಪಡೆದುಕೊಂಡ ‘ಕೊಡಗು ವಿಶ್ವ ವಿದ್ಯಾನಿಲಯ’ಯನ್ನು ಮುಚ್ಚುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು, ತಪ್ಪಿದಲ್ಲಿ ಕೊಡಗು ಬಂದ್ ನಂತಹ ಹೋರಾಟಕ್ಕೂ ಸಿದ್ಧವಿರುವುದಾಗಿ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1994ರಲ್ಲಿ ತಾನು ಶಾಸಕನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರು ವಿಶ್ವ ವಿದ್ಯಾಲಯದ ಸೆನೆಟ್ ಸದಸ್ಯನಾಗಿ ಮೂರು ಅವಧಿ ಕಾರ್ಯ ನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ವಿಶ್ವ ವಿದ್ಯಾಲಯದ ಸ್ಥಾಪನೆಯ ವಿಚಾರವನ್ನು ಮಂಡಿಸುತ್ತಲೆ ಬಂದಿದ್ದೆ. ಇದರ ಫಲಸ್ವರೂಪವಾಗಿ 2010ರಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಚಿಕ್ಕಅಳುವಾರದಲ್ಲಿ ಸ್ನಾತಕೋತ್ತರ ಕೇಂದ್ರಕ್ಕೆ ಭೂಮಿಪೂಜೆ ನೆರವೇರಿಸಿ 15 ಕೋಟಿ ರೂ. ಅನುದಾನವನ್ನು ಒದಗಿಸಿದ್ದರು. ನಮ್ಮ ನಿರೀಕ್ಷೆಯಂತೆ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕೊಡಗನ್ನು ಒಳಗೊಂಡಂತೆ ರಾಜ್ಯದಲ್ಲಿ 10 ನೂತನ ವಿವಿಗಳ ಆರಂಭಕ್ಕೆ ಹಸಿರು ನಿಶಾನೆ ತೋರಿದ್ದರು. ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಚಿಕ್ಕಾಸನ್ನು ನೀಡದಿದ್ದರು…
ವಿರಾಜಪೇಟೆ ಫೆ.19 NEWS DESK : ಸೇವೆಗೆ ಕೊನೆಯಿಲ್ಲ. ಸೇವೆ ಎಂಬುವುದು ಏನು ಎಂಬುದನ್ನು ಅರಿತಲ್ಲಿ ಮಾತ್ರ ಗಾಂಧಿಜೀ ಕಂಡ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಹೆಚ್.ಎನ್.ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಕೊಡಗು ವಿಶ್ವವಿದ್ಯಾನಿಲಯ, ವಿರಾಜಪೇಟೆ ಕಾವೇರಿ ಪದವಿ ಕಾಲೇಜು ಸಹಯೋಗದಲ್ಲಿ ಬಿ.ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸೇವಾ ಮನೋಭಾವವು ವಿದ್ಯಾರ್ಥಿ ಜೀವನ ದಿಸೆಯಲ್ಲಿ ಆರಂಭವಾಗಬೇಕು ಎಂಬ ಪರಿಕಲ್ಪನೆಯಿಂದ ಗಾಂಧಿಜೀ ಅವರು ಕಾಲೇಜುಗಳಲ್ಲಿ ಸೇವಾ ಘಟಕವನ್ನು ಆರಂಭಿಸಿದರು. ನಾಯಕತ್ವ ಗುಣಗಳನ್ನು ವಿದ್ಯಾರ್ಥಿ ಜೀವನದಿಂದಲೇ ಆರಂಭವಾದಲ್ಲಿ ಮಾತ್ರ ಉತ್ತಮ ನಾಯಕನಾಗಬಹುದು. ಸಾಮಾಜಿಕ ಪ್ರಜ್ಞೆ ಸರ್ವರಲ್ಲಿ ಜಾಗೃತವಾಗಬೇಕು. ದೇಶದಲ್ಲಿ ಹಲವು ರೀತಿಯಲ್ಲಿ ಸಂಭವಿಸಿದ್ದ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಸೇವಾ ಸಂಸ್ಥೆಗಳು ನಡೆಸಿದ ಕಾರ್ಯಗಳು ದೇಶ ಮೆಚ್ಚಿದೆ. ಅದರಂತೆ ಶಿಬಿರದಲ್ಲಿ ಕಲಿಯುವ ಪ್ರತಿಯೊಂದು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಸಂಸ್ಕೃತವಾದ ಸಮಾಜ ನಿರ್ಮಾಣ…
ಬೆಂಗಳೂರು ಫೆ.19 NEWS DESK : ಬೆಂಗಳೂರಿನಲ್ಲಿ ನಡೆದ ಏರ್ ಶೋ ಅತ್ಯಂತ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಸೇನೆಯ ಹಿರಿಯ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.






