ಮಡಿಕೇರಿ ಫೆ.19 NEWS DESK : ಮಕ್ಕಳ ವಿಶೇಷ ಪೊಲೀಸ್ ಘಟಕ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದೊಂದಿಗೆ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯ ಸಿ.ಜೆ.ರೋಹಿತ್ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳು, ಮಕ್ಕಳ ಹಕ್ಕುಗಳು ಮತ್ತು ಇತರೆ ಕಾನೂನು ಪ್ರಕ್ರಿಯೆಗಳ ಬಗ್ಗೆ ತರಬೇತಿ ನೀಡಿದರು. ಈ ಸಂದರ್ಭ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಫೆ.19 NEWS DESK : ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 21 ನೆರೆ ಸಂತ್ರಸ್ತ ಕುಟುಂಬಸ್ಥರಿಗೆ ನೀಡಲಾದ ಜಾಗದಲ್ಲಿ ಹಾಕತ್ತೂರು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ನಮ್ಮ ವಿರೋಧವಿದೆ ಹೊರತು ಶಾಸಕರು ಭೂಮಿಪೂಜೆ ಮಾಡಿದ ಜಾಗದಲ್ಲಿ ಕಟ್ಟಡ ನಿರ್ಮಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಮೇಕೇರಿ ಗ್ರಾ.ಪಂ ಸದಸ್ಯ ಎ.ಎ.ಅಬ್ದುಲ್ ಖಾದರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಳಿಗೇರಿ ಗ್ರಾಮದಲ್ಲಿ 21 ನೆರೆ ಸಂತ್ರಸ್ತ ಕುಟುಂಬಗಳಿಗೆ ಮೀಸಲಿಟ್ಟಿರುವ ಜಾಗದಲ್ಲಿ ಹಾಕತ್ತೂರು ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಮಾಡಲು ಹೊರಟಿದೆ ಎಂದು ಮೇಕೇರಿ ಗ್ರಾ.ಪಂ ಗ್ರಾಮ ಸಭೆಯಲ್ಲಿ ಬಿಳಿಗೇರಿ ಗ್ರಾಮದ ವಾರ್ಡ್ ನಂ.2ರ ಸಾರ್ವಜನಿಕರು ಆರೋಪಿಸಿದ್ದಾರೆ. ಈ ಬಗ್ಗೆ ಮೇಕೇರಿ ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ 1 ಏಕರೆ 88 ಸೆಂಟ್ ಹಾಗೂ ಹಾಕತ್ತೂರು ಪಂಚಾಯಿತಿ ಕಟ್ಟಡಕ್ಕೆಂದು 20 ಸೆಂಟ್ ಜಾಗವನ್ನು ಹದ್ದುಬಸ್ತು ಸರ್ವೆ ಮಾಡಲಾಗಿದೆ. 20 ಸೆಂಟು ಜಾಗದಲ್ಲಿ ಹಾಕತ್ತೂರು ಪಂಚಾಯಿತಿಯ ಕಟ್ಟಡ ನಿರ್ಮಿಸಲು ನಮ್ಮ ಅಭ್ಯಂತರವಿಲ್ಲ ಎಂದು ಸರ್ವ ಸದಸ್ಯರು…
ಮಡಿಕೇರಿ ಫೆ.19 NEWS DESK : ಹುಲಿ ಉಗುರು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸುಮಾರು 12 ಹುಲಿ ಉಗುರುಗಳ ಮಾರಾಟಕ್ಕೆ ವ್ಯವಹಾರ ಕುದುರಿಸುತ್ತಿರುವಾಗಲೇ ದಾಳಿ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ದಾಳಿ ಸಂದರ್ಭ ಪರಾರಿಯಾಗಿದ್ದಾನೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬಿ-ಶೆಟ್ಟಿಗೇರಿಯ ಪಿ.ಎನ್.ರಾಜಪ್ಪ ಹಾಗೂ ಬೆಂಗಳೂರು ನಗರದ ಬನಶಂಕರಿಯ ಗೀತಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. 12 ಹುಲಿ ಉಗುರು ಮತ್ತು ಕೃತ್ಯಕ್ಕೆ ಬಳಸಿದ್ದ ಮಾರುತಿ ವ್ಯಾನ್ ನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ಬೀರುಗ ಗ್ರಾಮದ ಸಂಜು ಎಂಬಾತ ಪರಾರಿಯಾಗಿದ್ದಾನೆ. ಪೊನ್ನಂಪೇಟೆಯ ಟಿ-ಶೆಟ್ಟಿಗೇರಿ-ಬೀರುಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಮಾರುತಿ ಓಮಿನಿ ಕಾರಿನ ಬಳಿ ಓರ್ವ ಮಹಿಳೆ ಸೇರಿದಂತೆ ಮೂವರು ವ್ಯವಹರಿಸುತ್ತಿರುವ ಕುರಿತು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಕ್ಕೆ ಬಂದ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಲಾಯಿತು. ಈ ಸಂದರ್ಭ ಸಂಜು ತಲೆ ಮರೆಸಿಕೊಂಡಿದ್ದಾನೆ. ಕಾರಿನ ಬಳಿ…
ಪೊನ್ನಂಪೇಟೆ ಫೆ.19 NEWS DESK : ಕೇಂದ್ರ ಸರ್ಕಾರ 13ನೇ ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ ಪಕ್ಷ ಕಟುವಾಗಿ ವಿರೋಧಿಸುತ್ತದೆ. ಈ ಮಸೂದೆ ಪಕ್ಷಪಾತದಿಂದ ಕೂಡಿದ್ದು, ಅಸಾಂವಿಧಾನಿಕ ಮತ್ತು ಮುಸ್ಲಿಂ ವಿರೋಧಿಯಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ.ಹನೀಫ್ ದೂರಿದ್ದಾರೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಸಂಘಟನೆಗಳ, ಜನ ಪ್ರತಿನಿಧಿಗಳ ಅಭಿಪ್ರಾಯವನ್ನು ಪರಿಗಣಿಸದೇ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುತ್ತಿದೆ. ಆದ್ದರಿಂದ ಕೇಂದ್ರದ ಈ ಅಸಂವಿಧಾನಿಕ ನಡೆಯ ವಿರುದ್ಧ ಪ್ರಜ್ಞಾವಂತರು ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಧ್ವನಿ ಎತ್ತಬೇಕು ಎಂದರು. ಕೇಂದ್ರ ಸರ್ಕಾರದ ಉದ್ದೇಶಿತ ನೂತನ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದರೆ ಅದು ಸಂವಿಧಾನ ಬಾಹಿರವಾಗುತ್ತದೆ. ವಕ್ಫ್ ಆಸ್ತಿ ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಹುನ್ನಾರ ಮಾಡಿದೆ ಎಂದು ಪಿ. ಎ. ಹನೀಫ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಘಟಕದ ಉಪಾಧ್ಯಕ್ಷ…
ಮಡಿಕೇರಿ NEWS DESK ಫೆ.19 : ಕುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಚೂರಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬೊಮ್ಮಾಡು ಗಿರಿಜನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ, ಕುಟ್ಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮಕ್ಕಳ ಹಕ್ಕುಗಳು ಮತ್ತು ಪೊಕ್ಸೊ ಕಾಯ್ದೆಗಳ ಕುರಿತು ಕಾನೂನು ತಿಳುವಳಿಕೆ ನೀಡಿದರು.
ಮಡಿಕೇರಿ ಫೆ.19 NEWS DESK : ಪೆರುಂಬಾಡಿ ಶಂಸುಲ್ ಉಲಮಾ ಎಜುಕೇಶನ್ ಅಕಾಡೆಮಿಯ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಯಾದ ಮೊಬೈಲ್ ಬಳಕೆ, ಶಿಕ್ಷಣದ ಭವಿಷ್ಯವನ್ನೇ ಹಾಳು ಮಾಡುತ್ತಿರುವ ಸಾಮಾಜಿಕ ಜಾಲತಾಣ, ಪರಿಸರ ಉಳಿವಿಗಾಗಿ ಜಾಗೃತಿ, ದುಶ್ಚಟಗಳಿಂದ ದೂರವಾಗಿ ಆರೋಗ್ಯವಂತ ಸಮಾಜ ನಿರ್ಮಾಣವಾಗಲಿ ಎಂಬ ಸಂದೇಶ, ತಂದೆ ತಾಯಿಯ ಪ್ರೀತಿಯ ವಾತ್ಸಲ್ಯದ ಮಕ್ಕಳಾಗೋಣ, ಆಚಾರ ವಿಚಾರ ಸಂಸ್ಕೃತಿ ಪರಂಪರೆಯನ್ನ ಬಿಂಬಿಸುವ ಕಿರು ನಾಟಕ ಪ್ರದರ್ಶನದೊಂದಿಗೆ ಯೋಧರ ಸ್ಮರಣೆ, ಸೇವಾ ಮನೋಭಾವದ ಸಾಮಾಜಿಕ ಕಳಕಳಿಯ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಗಮನ ಸೆಳೆಯಿತು. ಇದೇ ಸಂದರ್ಭ ಸಾಹಿತ್ಯ ಸಂಸ್ಕೃತಿಯನ್ನು ಬಿಂಬಿಸುವ ಯಕ್ಷಗಾನ, ಕೋಲಾಟ, ಕೊಡವ ನೃತ್ಯ, ಆದಿವಾಸಿ ನೃತ್ಯ ಸೇರಿದಂತೆ ವಿವಿಧ ಭಾಷಾ ಸಂಸ್ಕೃತಿಯ ಹಾಡು, ನೃತ್ಯೋತ್ಸವ ರಂಜಿಸಿತು. ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡ ಶಾಲಾ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳನ್ನು…
ಮಡಿಕೇರಿ NEWS DESK ಫೆ.19 : ಮಾದಕ ವಸ್ತು ಎಂಡಿಎAಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶ್ವಿಯಾಗಿದ್ದಾರೆ. ಕುಶಾಲನಗರದ ಮದಲಾಪುರ ಗ್ರಾಮದ ನಿವಾಸಿ ಅಜರುದ್ದೀನ್ (29) ಹಾಗೂ ಗುಮ್ಮನಕೊಲ್ಲಿ ನಿವಾಸಿ ಮೊಹಮದ್ ಮುಸ್ತಾಕ್ (29) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ 13 ಗ್ರಾಂ ಮಾದಕ ವಸ್ತು ಎಂಡಿಎಂಎ, ಒಂದು ದ್ವಿಚಕ್ರ ವಾಹನ ಮತ್ತು 3 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗುಮ್ಮನಕೊಲ್ಲಿಯಲ್ಲಿ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು. ಸೋಮವಾರಪೇಟೆ ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ, ಕುಶಾಲನಗರ ಸಿಪಿಐ ರಾಜೇಶ್ ಕೆ., ಪಿಎಸ್‌ಐ ಗೀತಾ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಕಾರ್ಯಾಚರಣೆ ನಡೆಸಿತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಿಷೇಧಿತ ಮಾದಕ ವಸ್ತುಗಳನ್ನು…
ಮಡಿಕೇರಿ ಫೆ.19 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಬಾಗಿತ್ವದಲ್ಲಿ, ಫೆ.23 ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ರೋಟರಿ ಜಿಲ್ಲೆ 3181 ಗೆ ಸೇರಿದ ರೋಟರಿ ಕ್ಲಬ್ ತಂಡಗಳ ನಡುವೆ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಧುಸೂದನ್, ಫೆ.23 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಇದೇ ಮೊದಲ ಬಾರಿಗೆ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿ ಕಬ್ಬಡಿ ಪಂದ್ಯಾವಳಿ ಆಯೋಜಿಸಲಾಗಿದೆ. ಇದೇ ಸಂದಭ೯ ಮಿಸ್ಟಿ ಹಿಲ್ಸ್ ವತಿಯಿಂದ ರೆಡ್ ಕ್ರಾಸ್ ಕೊಡಗು ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು. ರೋಟರಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿ ಸಮಿತಿ ಅಧ್ಯಕ್ಷ ಜಯಂತ್ ಪೂಜಾರಿ ಮಾಹಿತಿ ನೀಡಿ, ಫೆ.23 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ…
ಮಡಿಕೇರಿ ಫೆ.19 NEWS DESK : ಚೆಟ್ಟಳ್ಳಿ ಸಮೀಪದ ಕಂಡಕರೆಯ ಸುನ್ನಿ ಮಸ್ಜಿದ್ ತಖ್ವಾ ಕಮಿಟಿಯ ನೂತನ ಅಧ್ಯಕ್ಷರಾಗಿ ಅಲಿ ಮುಸ್ಲಿಯಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಎ.ಹುಸೈನ್, ಪ್ರಧಾನ ಕಾರ್ಯದರ್ಶಿಯಾಗಿ ಸರ್ಫುದ್ದೀನ್, ಸಹ ಕಾರ್ಯದರ್ಶಿಯಾಗಿ ಪಿ.ಎಂ.ಅಬ್ದುಲ್ ಗಫೂರ್ , ಖಜಾಂಚಿಯಾಗಿ ಹಾರಿಸ್ ಆಯ್ಕೆಯಾಗಿದ್ದಾರೆ. ರಿಸೀವರ್ ಗಳಾಗಿ ಇಸ್ಮಾಯಿಲ್ ಸಿಎಸ್, ಮೊಹಮ್ಮದ್ ಒ, ಸದಸ್ಯರಾಗಿ ಕೆ.ಹೆಚ್.ಅಬ್ದುಲ್ ಗಫೂರ್, ಪಿ.ಎಂ.ಅಲಿ, ಕೆ.ಹೆಚ್.ಹಂಸ ರಹ್ಮಾನಿ, ಎ.ಹಂಸ , ಪಿ.ಎಂ.ಮಜೀದ್ , ಕೆ.ಹೆಚ್.ಹುಸೈನ್ , ಮೊಹಮ್ಮದ್ ರಫಿ, ಕೆ.ಹೆಚ್.ಫಾರೂಖ್ , ಹೆಚ್.ಎ.ಆಬಿದ್ , ಎಂ.ವೈ.ರಶೀದ್, ಕೆ.ಎ.ಸಮೀರ್, ಟಿ.ಎ.ನಿಝಾಮ್, ಕೆ.ವೈ.ರಜಾಕ್ ಆಯ್ಕೆಯಾಗಿದ್ದಾರೆ. ಸ್ವಲಾತ್ ಕಮಿಟಿ ಅಧ್ಯಕ್ಷರಾಗಿ ಟಿ.ಎಸ್.ನಜೀರ್ , ಕಾರ್ಯದರ್ಶಿಯಾಗಿ ಪಿ.ಎಂ.ಅಲಿ ಹಾಗೂ ಖಜಾಂಚಿಯಾಗಿ ಕೆ.ಹೆಚ್.ಗಫೂರ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಫೆ.19 NEWS DESK : ಶ್ರೀಮಂಗಲ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11ಕೆವಿ ಈ2 ಕುಟ್ಟಮಾರ್ಗದಲ್ಲಿನಿರ್ವಹಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆ.20 ರಂದು ಬೆಳಿಗ್ಗೆ 10.00 ರಿಂದ ಸಂಜೆ 5 ಗಂಟೆಯವರೆಗೆ ಈ ಮಾರ್ಗಗಳ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಾಲ್ಲೂರು, ನಾಥಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ.ಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.






