ಲೇಖಕ: admin

ಮಡಿಕೇರಿ ಫೆ.19 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಳೆಯಡ ಕುಟುಂಬಸ್ಥರ ಮೆನೆಗೆ ತೆರಳುವ ಸಂಪರ್ಕ ರಸ್ತೆ ಹಾಗೂ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಕೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕುಟುಂಬಸ್ಥರ ಮನವಿಗೆ ಸ್ಪಂದಿಸಿದ ಶಾಸಕರಿಗೆ ಹಾಗೂ ಸಹಕರಿಸಿದ ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ ಬಾಳೆಯಡ ಕುಟುಂಬಸ್ಥರು  ಅಭಿನಂದನೆ ಸಲ್ಲಿಸಿದ್ದಾರೆ. ನಾಪೋಕ್ಲು ಕೊಡವ ಸಮಾಜದ ಎದುರುಗಡೆ ಹಾದುಹೋಗುವ ರಸ್ತೆಯು ದಶಕಗಳಿಂದ ದುಸ್ಥಿತಿಯಲ್ಲಿದ್ದು ಸಂಚಾರಿಸಲು ದುಸ್ತರವಾಗಿತ್ತು. ಈ ರಸ್ತೆಯು ಬಾಳೆಯಡ ಕುಟುಂಬಸ್ಥರ ಮನೆಗೆ ಹೋಗುವ ಸಂಪರ್ಕ ರಸ್ತೆಯಾಗಿದ್ದು, ದಿನಕ್ಕೆ ನೂರಾರು ವಾಹನಗಳು ಓಡಾಡುವ ರಸ್ತೆಯ ಡಾಂಬರೀಕರಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದ ರೂ.5 ಲಕ್ಷದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಯಿತು. ಹಲವಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಯ ಕಾಮಗಾರಿ ಬಗ್ಗೆ ಶಾಸಕರ ಗಮನಕ್ಕೆ ತಂದಾಗ, ತಕ್ಷಣವೇ ಕಾಮಗಾರಿಯನ್ನು ಕೈಗೊಳ್ಳಲು ನಿರ್ದೇಶಿಸಿದ್ದರು. ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಕೆ :: ಈ ಭಾಗದಲ್ಲಿದ್ದ ಮನೆಗಳಿಗೆ…

Read More

ಮಡಿಕೇರಿ ಫೆ.19 NEWS DESK :  ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಫೆ.20 ರಂದು ಆಯೋಜಿತ ಖ್ಯಾತ ಸಾಹಿತಿ ಪಂಜೆ ಮಂಗೇಶರಾಯರ 150 ನೇ ವಷೋ೯ತ್ಸವದಂದು ಹುತ್ತರಿ ಹಾಡಿನ ದೃಶ್ಯ ನಮನ ಅನಾವರಣಗೊಳ್ಳಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ತಿಳಿಸಿದ್ದಾರೆ. ನಗರದ ಜೂನಿಯರ್ ಕಾಲೇಜಿನಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಪಂಜೆ ಮಂಗೇಶರಾಯರ ಪ್ರಸಿದ್ದ ಹಾಡಾಗಿರುವ ಹುತ್ತರಿ ಹಾಡಿಗೆ ದೃಶ್ಯ ಸಂಕಲನಗೊಳಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಬಿಡುಗಡೆ ಮಾಡಲಾಗುತ್ತದೆ. ಈ ಮೂಲಕ ಕೊಡಗಿನ ನಾಡಗೀತೆಯಾದ ಹುತ್ತರಿ ಹಾಡು ವಿಶ್ವವ್ಯಾಪಿ ಜನರನ್ನು ತಲುಪಲಿದೆ. ಈ ದೖಶ್ಯ ನಮನವನ್ನು ಪತ್ರಕರ್ತರಾದ ಅನಿಲ್ ಹೆಚ್.ಟಿ ಅವರ ಪರಿಕಲ್ಪನೆ ಮತ್ತು ಜೀವಿತಾ ಶೇಖರ್ ಸಂಕಲನದಲ್ಲಿ ಸಿದ್ದಗೊಳಿಸಿದೆ ಎಂದೂ ಕೇಶವಕಾಮತ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿ ಜಲಜ ಶೇಖರ್ ಅವರ ಕೃತಿ ಅಗ್ನಿಕುಂಡ ಮತ್ತು ಉಳುವಂಗಡ ಕಾವೇರಿ ಉದಯ ಆವರ ಕೃತಿ ಮುಕ್ತಕ ಮಾಣಿಕ್ಯ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ…

Read More

ಮಡಿಕೇರಿ NEWS DESK ಫೆ.18 : ಕ್ರೀಡಾ ಚಟುವಟಿಕೆಗಳ ಮೂಲಕ ಉತ್ತಮ ಆರೋಗ್ಯ ಹಾಗೂ ಪರಸ್ಪರ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಕೂಡಿಗೆ  ಕ್ರೀಡಾಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಕುಂತಿ ಭೋಪಯ್ಯ ಹೇಳಿದರು. ಅವರು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ಕೊಡಗು ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಆಶ್ರಯದಲ್ಲಿ ತಾಲೂಕು ಸಂಘಗಳ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ  ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕೊಡಗು ಜಿಲ್ಲೆಯ ಸೌಂದರ್ಯ ತಜ್ಞರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಒಗ್ಗಟ್ಟಿನ ಮೂಲಕ ತಮ್ಮ ಸಮಸ್ಯೆಗಳ ಪರಿಹಾರ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ನಗರಸಭಾ ಸದಸ್ಯರಾದ ಸವಿತಾ ರಾಕೇಶ್ ಮಾತನಾಡಿ ಕಟ್ಟುಪಾಡುಗಳನ್ನು ಬಿಟ್ಟು ಸಮಾಜದಲ್ಲಿ ಸ್ವಾವಲಂಬಿ ಬದುಕು ಕಾಣುವ ಮಹಿಳೆಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೂಲಕ ಕುಟುಂಬದಲ್ಲಿ ಆರ್ಥಿಕ ಸಬಲೀಕರಣ ಸಾಧ್ಯ. ಪ್ರತಿ ಮನೆಗಳು ಯಶಸ್ವು ಕಂಡಲ್ಲಿ ಮಾತ್ರ ಸಮಾಜದ ಅಭಿವೃದ್ಧಿ ಏಳಿಗೆ ಕಾಣಬಹುದು ಎಂದರು. ಕ್ರೀಡಾ ಕೂಟಕ್ಕೆ ಚಾಲನೆ ನೀಡಿದ…

Read More

ಮಡಿಕೇರಿ NEWS DESK ಫೆ.18 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯಂಜಯ ಮಾದೇಶ್ವರ ದೇವಾಲಯದ ವಸ್ತ್ರ ಸಂಹಿತೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಅವರ ಸಮ್ಮುಖದಲ್ಲಿ ಗ್ರಾ.ಪಂ ಪ್ರತಿನಿಧಿಗಳು, ಗ್ರಾಮದ ಪ್ರಮುಖರು ಹಾಗೂ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳ ಸಭೆ ನಡೆಯಿತು. ಕಟ್ಟೆಮಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಭೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶವನ್ನು ಪಾಲಿಸುವಂತೆ ಮತ್ತು ಶಾಂತಿಯನ್ನು ಕಾಪಾಡುವಂತೆ ಅಧಿಕಾರಿಗಳು ಸೂಚನೆ ನೀಡಿದರು. ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 13ರವರೆಗೆ 163 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಜಾರಿ ಇರುವುದರಿಂದ ದೇವಾಲಯಕ್ಕೆ 5 ಮಂದಿಗಿಂತ ಹೆಚ್ಚಿನ ಜನರು ತೆರಳುವಂತಿಲ್ಲ. ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆಗೆ ಗ್ರಾಮಸ್ಥರಿಂದ ಸಮಸ್ಯೆಯಾಗದಂತೆ ಸೌಹಾರ್ಧತೆ ಕಾಪಾಡಿಕೊಳ್ಳಬೇಕೆಂದು ತಹಶೀಲ್ದಾರ್ ಪ್ರವೀಣ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಮನವಿ ಮಾಡಿದರು. ದೇವಾಲಯ ಸಮಿತಿಯ ಕೆಲವು ಪದಾಧಿಕಾರಿಗಳು, ಮರಗೋಡು ಗ್ರಾ.ಪಂ…

Read More

ಮಡಿಕೇರಿ ಫೆ.18 NEWS DESK : ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ರ 2 ನೇ ಆವೃತ್ತಿಯು ಫೆಬ್ರವರಿ 26 ರಿಂದ 28 ರ ವರೆಗೆ ಬೆಂಗಳೂರು ಇಂಟನ್ರ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವು ರಾಜ್ಯದ ಪ್ರವಾಸೋದ್ಯಮ ವಲಯವನ್ನು ಪ್ರದರ್ಶಿಸಲು, ವ್ಯಾಪಾರ ಅವಕಾಶ ಆಕರ್ಷಿಸಲು ಮತ್ತು ಪ್ರಮುಖ ಜಾಗತಿಕ ಪ್ರಯಾಣ ತಾಣವಾಗಿ ಕರ್ನಾಟಕದ ಸ್ಥಾನ ಬಲಪಡಿಸಲು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ಪ್ರವಾಸೋದ್ಯಮದ ಪ್ರಮುಖ ಪಾಲುದಾರರನ್ನು ಒಟ್ಟುಗೂಡಿಸುತ್ತದೆ, ಇದು ಜಗತ್ತಿನಾದ್ಯಂತದ ಪ್ರಯಾಣ ಮತ್ತು ವ್ಯಾಪಾರ ಸಮುದಾಯದೊಂದಿಗೆ ಸಂಪರ್ಕ ಸಾಧಿಸಲು ಒಂದು ಅನನ್ಯ ಅವಕಾಶ ನೀಡುತ್ತದೆ. ಕಾರ್ಯಕ್ರಮದ ಮುಖ್ಯಾಂಶಗಳು: ಭಾರತ ಮತ್ತು 30 ಕ್ಕೂ ಹೆಚ್ಚು ದೇಶಗಳಿಂದ 400 ಕ್ಕೂ ಹೆಚ್ಚು ಅತಿಥೇಯ ಖರೀದಿದಾರರು, ದೇಶದಲ್ಲಿ ಇದುವರೆಗಿನ ಅತಿದೊಡ್ಡ ಬಿ2ಬಿ ಇನ್ ಬೌಂಡ್ ಮತ್ತು ದೇಶೀಯ ಬಿ2ಬಿ…

Read More

ಮಡಿಕೇರಿ ಫೆ.18 NEWS DESK :  ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ಸು ಮಾಲೀಕರಿಗೆ ತೊಂದರೆಯಾಗಿದೆ. ತೆರಿಗೆ ಪಾವತಿಸಲು ಕೂಡ ಕಷ್ಟವಾಗಿದೆ ಎಂದು ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಖಾಸಗಿ ಬಸ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬಸ್ಸು ಸಂಚಾರಕ್ಕೆ ಸಂಬಂಧಿಸಿದಂತೆ ಎಲ್ಲರ ಹಿತಾಸಕ್ತಿ ಕಾಪಾಡುವುದು ಸಾರಿಗೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಬಸ್ಸು ಸೇವೆ ಒದಗಿಸಲು ಎಲ್ಲರೂ ಮುಂದಾಗಿದ್ದಾರೆ. ಆ ನಿಟ್ಟಿನಲ್ಲಿ ಯಾರಿಗೂ ತೊಂದರೆ ಆಗದಂತೆ ಗಮನ ಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಖಾಸಗಿ ಬಸ್ಸು ಮಾಲೀಕ ಪುಟ್ಟಸ್ವಾಮಿ ಅವರು ಮಾತನಾಡಿ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳು ಎಲ್ಲೆಲ್ಲಿ ಸಂಚಾರ ಮಾಡುತ್ತಿದೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು ಎಂದರು. ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ಸು ಮಾಲೀಕರಿಗೆ ತುಂಬಾ ತೊಂದರೆಯಾಗಿದೆ.…

Read More

ಮಡಿಕೇರಿ ಫೆ.18 NEWS DESK : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಸ್ತುವಾರಿಯಲ್ಲಿರುವ ಸೈನಿಕ ವಿಶ್ರಾಂತಿ ಗೃಹಕ್ಕೆ ಹೊರಗುತ್ತಿಯ ಆಧಾರದ ಮೇಲೆ ಒಬ್ಬ ಮೇಟಿ ಕ0-ವಾಚ್ ಮೆನ್ ಹುದ್ದೆ ಖಾಲಿ ಇದ್ದು, ಆಸಕ್ತ ಮಾಜಿ ಸೈನಿಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರ್ಯಾಲಯ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.

Read More

ಮಡಿಕೇರಿ ಫೆ.18 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಹಯೋಗದೊಂದಿಗೆ. ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು. ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯದರ್ಶಿಗಳಿಗೆ ಲೆಕ್ಕಪರಿಶೋಧನೆ, ಲೆಕ್ಕಪತ್ರ ನಿರ್ವಹಣೆ ಮತ್ತು ಸಹಕಾರ ಕಾಯ್ದೆ ಕಾನೂನು ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 11 ಗಂಟೆಗೆ ವಿರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಲಯದ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಲಯದ ಉಪಾಧ್ಯಕ್ಷರಾದ ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಲಯದ ನಿರ್ದೇಶಕರಾದ ಎನ್.ಎ.ರವಿ ಬಸಪ್ಪ, ಕೆ.ಎಂ.ತಮ್ಮಯ್ಯ, ಸಿ.ಎಸ್.ಕೃಷ್ಣ ಗಣಪತಿ, ಎಂ.ಕೆ ರೋಹಿತ್, ಕೆ.ಐ.ಸಿ.ಎಂ ಮೈಸೂರು ಉಪನ್ಯಾಸಕರಾದ ಎಸ್. ಮಹದೇವಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.18 NEWS DESK :  ಅರಮೇರಿ ಕಳಂಚೇರಿ ಮಠದ 228ನೇ ತತ್ತ್ವ ಚಿಂತನಾಗೋಷ್ಠಿಯ ಅಂಗವಾಗಿ ‘ಮಕ್ಕಳ ಭವಿಷ್ಯದ ನಿರ್ಧಾರದಲ್ಲಿ ಪೋಷಕರ ಶಿಕ್ಷಕರ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಬಳಗದ ಸದಸ್ಯೆ ಕೆ.ಜಯಲಕ್ಷ್ಮಿ 65ನಿಮಿಷಗಳ ಉಪನ್ಯಾಸ ನೀಡಿ ವಿದ್ಯಾರ್ಥಿಗಳು ಹಾಗೂ ಹಿರಿಯ ಸಭಾ ಸದಸ್ಯರ ಗಮನ ಸೆಳೆದರು. ಕೇಳುಗರ ಮೆಚ್ಚುಗೆಯನ್ನು ಗಳಿಸಿದ ಕೆ.ಜಯಲಕ್ಷ್ಮಿ ಅವರಿಗೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕೃತಜ್ಞತೆ ಸಲ್ಲಿಸಿದರು. ವರದಿ : ಕಿಗ್ಗಾಲು ಎಸ್.ಗಿರೀಶ್ 

Read More