ಮಡಿಕೇರಿ NEWS DESK ಫೆ.15 : ಶನಿವಾರಸಂತೆಯಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆಗೆ ಶರಣಾದ ಹಸೀನಾ ಅವರ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಇಂದು ಭೇಟಿ ನೀಡಿದರು. ಕುಟುಂಬದ ಸದಸ್ಯರುಗಳಿಗೆ ಸಾಂತ್ವನ ಹೇಳಿದ ಅವರು ಘಟನೆಯ ಮಾಹಿತಿ ಪಡೆದರು. ನಂತರ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಕ್ಮಲ್ ಪಾಷಾ, ಸೋಮವಾರಪೇಟೆ ತಾಲ್ಲೂಕು ಕೆಡಿಪಿ ಸದಸ್ಯ ಶರತ್ ಶೇಖರ್, ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು.ಕಿರಣ್, ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ NEWS DESK ಫೆ.15 : ಪುಂಡಾನೆ ಸೆರೆ ಕಾರ್ಯಾಚರಣೆ ಕುರಿತು ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪುಂಡಾನೆ ಸೆರೆ ಹಿಡಿಯಲು ಅರಣ್ಯ ಸಚಿವರು ಆದೇಶ ನೀಡಿದ ಬಳಿಕ ಶನಿವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಕೈಗೊಂಡು ಕಾಡಾನೆಯನ್ನು ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಕಾಡಾನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಸುಮಾರು 15 ಕಿ.ಮೀ ದೂರದವರೆಗೆ ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸುಮಾರು 22 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು, ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯಕ್ಕೆ ಶೀಘ್ರವಾಗಿ ಚಾಲನೆ ನೀಡಲಾಗುವುದು ಎಂದರು. ಅರಣ್ಯ ಇಲಾಖಾಧಿಕಾರಿಗಳ ಜೊತೆ ವಿಶೇಷ ಪ್ರವಾಸ ಆಯೋಜಿಸಿ, ಬೆಳೆಗಾರರು, ಕೃಷಿಕರು, ಸ್ಥಳೀಯರೊಂದಿಗೆ ಚರ್ಚಿಸಿ, ಸೂಕ್ಷö್ಮ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು ಎಂದರು.
ಮಡಿಕೇರಿ NEWS DESK ಫೆ.15 : ಕಾರ್ಮಿಕ ಮಹಿಳೆ ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ ಜಾನಕಿ ಎಂಬುವವರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಗೋಣಿಕೊಪ್ಪಲು–ಮೈಸೂರು ರಸ್ತೆ ಸಮೀಪದ ಕಾಫಿ ತೋಟವೊಂದರಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಜಾನಕಿ ಅವರ ಮೇಲೆ ಕಾಡಾನೆ ದಾಳಿ ಮಾಡಿ ಸಾವಿಗೆ ಕಾರಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಮಾತನಾಡಿ, ಪುಂಡಾನೆಯನ್ನು ಸೆರೆ ಹಿಡಿಯಲು ಅವಕಾಶ ಕೋರಿದರು. ಈ ಹಿನ್ನೆಲೆ ಶನಿವಾರ ಬೆಳಗ್ಗೆಯಿಂದಲೇ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಿತು. ಹಾರಂಗಿ, ದುಬಾರೆ ಮತ್ತು ಮತ್ತಿಗೋಡು ಸಾಕಾನೆ ಶಿಬಿರಗಳಿಂದ 6 ಸಾಕಾನೆಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಯಿತು. ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರ ನೇತೃತ್ವದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಸ್ಥಳೀಯ ಮುಖಂಡರು, ಅರಣ್ಯಾಧಿಕಾರಿಗಳಾದ ಜಗನ್ನಾಥ್, ಭಾಸ್ಕರ್, ಸೀಮಾ, ಗೋಪಾಲ್ ಮತ್ತು ಸಿಬ್ಬಂದಿಗಳು ಅರವಳಿಕೆ ತಜ್ಞರೊಂದಿಗೆ…
ಮಡಿಕೇರಿ NEWS DESK ಫೆ.15 : ಕೊಡಗು ಜಿಲ್ಲಾ ವ್ಯಾಪ್ತಿಯ ವಿವಾಹ ಸಮಾರಂಭ ಸೇರಿದಂತೆ ಇತರೆ ಖಾಸಗಿ ಕಾರ್ಯಕ್ರಮಗಳಲ್ಲಿ ಮದ್ಯ ಬಳಕೆಗೆ ಒಂದು ದಿನದ ಸನ್ನದು ಪಡೆಯುವುದು ಕಡ್ಡಾಯವೆಂದು ಅಬಕಾರಿ ಇಲಾಖೆ ಉಪ ಆಯುಕ್ತರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಎಲ್ಲಾ ಕಲ್ಯಾಣ ಮಂಟಪಗಳು, ಹೋಂ ಸ್ಟೇ, ರೆಸಾರ್ಟ್ಸ್ ಇನ್ನಿತರೆ ಸಾರ್ವಜನಿಕ, ಖಾಸಗಿ ಸ್ಥಳಗಳಲ್ಲಿ ನಡೆಯುವ ಮದುವೆ, ಸಭೆ, ಸಮಾರಂಭಗಳಲ್ಲಿ ರಕ್ಷಣಾ ಮದ್ಯ, ಹೊರ ರಾಜ್ಯದ ಮದ್ಯ, ನಕಲಿ ಮದ್ಯ, ಅಕ್ರಮ ಮದ್ಯ ಸರಬರಾಜಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಇದು ರಾಜ್ಯ ಅಬಕಾರಿ ಕಾಯ್ದೆಯನ್ವಯ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ಹೇಳಿದ್ದಾರೆ. ಅಬಕಾರಿ ಕಾಯ್ದೆ ಅಡಿಯಲ್ಲಿ ಒಂದು ದಿನಕ್ಕೆ ಸಂಬಂಧಿಸಿದಂತೆ ಖಾಸಗಿ ಸಮಾರಂಭಗಳಲ್ಲಿ ನಿಗದಿತ ಶುಲ್ಕ ಪಾವತಿಸಿ ಸ್ಥಳದ ಮಾಲೀಕರು, ಸಮಾರಂಭದ ಆಯೋಜಕರು, ಅಬಕಾರಿ ವೆಬ್‌ಸೈಟ್ ಮೂಲಕ ಆನ್ ಲೈನ್‌ನಲ್ಲಿ ನಿಗದಿತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದಲ್ಲಿ, ಅರ್ಜಿ ಸಲ್ಲಿಸಿದ ಸ್ಥಳಕ್ಕೆ ನಿಯಮಾನುಸಾರ ಮದ್ಯ ತರಲು ಹಾಗೂ ಬಳಕೆ ಮಾಡಲು ಸಿಎಲ್-5 ಸನ್ನದು (ಸಾಂದರ್ಭಿಕ…
ಮಡಿಕೇರಿ ಫೆ.15 NEWS DESK : ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಮತ್ತು ಅದರ ಬೆಳವಣಿಗೆಯಲ್ಲಿ ಗಣನೀಯ ಸಾಧನೆ ಮಾಡಿದ ಆರು ಮಂದಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ಈ ಕುರಿತು ಮಾಹಿತಿ ನೀಡಿ, 2022ನೇ ಸಾಲಿನ ಗೌರವ ಪ್ರಶಸ್ತಿಯನ್ನು ‘ಸಂಶೋಧನೆ ಮತ್ತು ಅರೆಭಾಷೆ ಸಾಹಿತ್ಯ’ ಕ್ಷೇತ್ರದ ಸಾಧನೆಗಾಗಿ ಕೊಡಗಿನ ಡಾ.ಕಾವೇರಿಮನೆ ಬೋಜಪ್ಪ, ‘ಅರೆಭಾಷೆ ಮತ್ತು ಸಂಸ್ಕೃತಿಯ ಸೇವೆ’ಗಾಗಿ ತುಂತಜೆ ವೆಂಕಟೇಶ್(ಗಣೇಶ್) ಮತ್ತು ‘ಶಿಕ್ಷಣ ಮತ್ತು ವೈದ್ಯಕೀಯ ಸೇವೆ’ಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಕೆ.ವಿ.ಚಿದಾನಂದ ಅವರು ಪಡೆದುಕೊಂಡಿದ್ದಾರೆಂದರು. 2023ನೇ ಸಾಲಿನ ಗೌರವ ಪ್ರಶಸ್ತಿಗೆ ‘ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿ ಸೇವೆ’ಗಾಗಿ ಕೊಡಗಿನ ಕುಯಿಂತೋಡು ದಾಮೋದರ, ‘ಅರೆಭಾಷಾ ಅಧ್ಯಯನ ಮತ್ತು ಸಂಶೋಧನೆ’ಗಾಗಿ ದಕ್ಷಿಣ ಕನ್ನಡದ ಎ.ಕೆ. ಹಿಮಕರ ಮತ್ತು ‘ಅರೆಭಾಷಾ ಸಾಧನೆ ಮತ್ತು ಕಲಾ ಪೋಷಕ’ರ ನೆಲೆಯಲ್ಲಿ ಕೊಡಗಿನ ಕೂಡಕಂಡ ಕಾವೇರಮ್ಮ ಸೋಮಣ್ಣ ಅವರುಗಳು ಆಯ್ಕೆಯಾಗಿದ್ದಾರೆಂದು ತಿಳಿಸಿದರು.…
ಸೋಮವಾರಪೇಟೆ ಫೆ.15 NEWS DESK : ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು ಅವರ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್‍ಗೌಡ ಅಭಿಪ್ರಾಯಿಸಿದರು. ಕೊಡಗು ಜಿಲ್ಲಾ ಜಾನಪದ ಪರಿಷತ್ ಸೋಮವಾರಪೇಟೆ ಘಟಕ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯಡೂರು ಗ್ರಾಮದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಜಾನಪದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಜಾನಪದ ಕಲೆ ಮತ್ತು ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗ್ರಾಮೀಣ ಹಾಗು ನಗರ ಪ್ರದೇಶಗಳಲ್ಲಿ ಜಾನಪದ ಕ್ರೀಡಾಕೂಟಗಳು ನಡೆಯುತ್ತಿರಬೇಕು. ಪ್ರತಿಯೊಬ್ಬರು ಭಾಗವಹಿಸಬೇಕು ಎಂದರು. ಗ್ರಾಮೀಣ ಭಾಗದಲ್ಲಿ ಮಾತ್ರ ಜಾನಪದ ಕಲೆ ಮತ್ತು ಕ್ರೀಡೆಯಲ್ಲಿ ಮಕ್ಕಳು ತೊಡಗಿಸಿಕೊಳ್ಳುತ್ತಿದ್ದಾರೆ. ಪ್ರತಿ ಶಾಲಾ ಕಾಲೇಜಿನಲ್ಲಿ ಜಾನಪದ ಕ್ರೀಡಾಕೂಟಗಳನ್ನು ಅಯೋಜಿಸಬೇಕು ಎಂದು ಹೇಳಿದರು. ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಅನಂತಶಯನ ಮಾತನಾಡಿ, ಜಾನಪದ ಸೊಗಡಿನ ಆಟಗಳು ಜನ ಮಾನಸದಿಂದ ದೂರ ಸರಿಯದಂತೆ ಮಾಡುವುದೆ ಜಾನಪದ ಪರಿಷತ್‍ನ ಕಾಯಕವಾಗಿದೆ ಎಂದು ಹೇಳಿದರು. ಜಾನಪದ ಆಟಗಳಲ್ಲಿ…
ಮಡಿಕೇರಿ ಫೆ.15 NEWS DESK : ನಗರದ ‘ಅಂಬೇಡ್ಕರ್ ಭವನ’ದ ಕುರಿತು ಅನಗತ್ಯ ಗೊಂದಲಗಳನ್ನು ಹುಟ್ಟು ಹಾಕಿ, ಹೋರಾಟಕ್ಕೆ ಮುಂದಾಗುವುದಕ್ಕೆ ಬದಲಾಗಿ ಅದನ್ನು ಕೈಬಿಟ್ಟು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ದಲಿತ ಮುಖಂಡರು ಮುಂದಾಗಬೇಕೆಂದು ಮೂರ್ನಾಡಿನ ಜೈ ಭೀಮ್ ಯುವಕ ಸಂಘದ ಅಧ್ಯಕ್ಷರಾದ ಈರ ಸುಬ್ಬಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವನಕ್ಕೆ ಸಮಬಂಧಿಸಿದಂತೆ ಇತ್ತೀಚೆಗೆ ನಿರಾಧಾರ ಆರೋಪಗಳನ್ನು ಮಾಡಲಾಗುತ್ತಿದೆ. ಭವನವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಂಡು ಬರಲಾಗುತ್ತಿದ್ದು, ಸಮುದಾಯ ಬಾಂಧವರ ಕಾರ್ಯಕ್ರಮಗಳಿಗೆ, ಅಂಬೇಡ್ಕರ್ ಕುರಿತ ಸರ್ಕಾರಿ ಕಾರ್ಯಕ್ರಮಗಳಿಗೆ ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಹೇಳಿದರು. ಅಂಬೇಡ್ಕರ್ ಭವನ ನಿರ್ಮಾಣದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರ ಪಾತ್ರ ಮಹತ್ವದ್ದೆಂದು ತಿಳಿಸಿದ ಈರ ಸುಬ್ಬಯ್ಯ, ಉತ್ತಮವಾಗಿ ನಡೆಯುತ್ತಿರುವ ಅಂಬೇಡ್ಕರ್ ಭವನದ ಕುರಿತು ಗೊಂದಲದ ಹೇಳಿಕೆ ನೀಡುವ ಬದಲಾಗಿ, ವಿವಿಧೆಡೆಗಳಲ್ಲಿ ನಿರ್ವಹಣೆ ಇಲ್ಲದೆ ಹಾಳಾಗುತ್ತಿರುವ ಭವನಗಳ ನಿರ್ವಹಣೆಗೆ ಆರೋಪ ಮಾಡುವವರು ಮುಂದಾದಲ್ಲಿ ತಮ್ಮ ಬೆಂಬಲವೂ ಇರುವುದಾಗಿ ತಿಳಿಸಿದರು. ಮೂರ್ನಾಡು ಜೈ ಭೀಮ್ ಯುವಕ…
ಸಿದ್ದಾಪುರ ಫೆ.15 NEWS DESK : ಅಮ್ಮತ್ತಿಯ ಶ್ರೀ ಚಾಮುಂಡೇಶ್ವರಿ ಪಾಷಣ ಮೂರ್ತಿ ದೇವಾಲಯದ 25ನೇ ವಾರ್ಷಿಕೋತ್ಸವ ಹಾಗೂ ನೇಮೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ದೈವ ದೇವರಿಗೆ ವಾದ್ಯದೊಂದಿಗೆ ಅಭಿಷೇಕ ಪೂಜೆ, ಅಲಂಕಾರ ಪೂಜೆ, ನಾಗ ಪೂಜೆ, ನಾಗಹೋಮ, ಅಶ್ಲೇಷ ಬಲಿ, ದುರ್ಗಾ ಪೂಜೆ, ದುರ್ಗ ಹೋಮ ನಡೆಯಿತು. ರಾತ್ರಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ನಂತರ ಪಂಜುರ್ಲಿ, ಪಾಷಾಣ ಮೂರ್ತಿ ಹಾಗೂ ಗುಳಿಗ ದೇವರುಗಳ ತೆರೆಮೋತ್ಸವ ಬೆಳಗಿನವರೆಗೆ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ರಾತ್ರಿ ಹಾಗೂ ಹಗಲು ದೇವಾಲಯದ ಆಡಳಿತ ಮಂಡಳಿ ವತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬಾನಂಗಲದಲ್ಲಿ ಆಕರ್ಷಕ ಪಟಾಕಿಗಳ ಶಬ್ದ ಉತ್ಸವ ಕ್ಕೆ ಮೆರಗು ತಂದಿತು. ಜಿಲ್ಲೆಯ ವಿವಿಧೆಡೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆ ಮಹೋತ್ಸವಕ್ಕೆ ಆಗಮಿಸಿದ್ದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರಾದ ಕುಟ್ಟಂಡ ಸರಸ್ವತಿ ಹಾಗೂ ಲೋಕೇಶ್ ಮುತ್ತಪ್ಪ. ಖಜಾಂಜಿ…
ಸುಂಟಿಕೊಪ್ಪ ಫೆ.15 NEWS DESK : ಕೊಡಗರಹಳ್ಳಿ ಸಮೀಪದ ಜೋಡಿ ಕೆರೆಯಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ ಅಳವಡಿಸಲಾಗಿರುವ ನೂತನ ಸಿಲಿಕಾನ್ ಚೇಂಬರ್ ಅನ್ನು ಲೋಕಾರ್ಪಣೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸೋಮವಾರಪೇಟೆ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಈ ಸಿಲಿಕಾನ್ ಚೇಂಬರನ್ನು ನಿರ್ಮಿಸಲಾಗಿದೆ. ಈ ಸಂದರ್ಭ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಡ್ಡಹೊಸೂರು ವಲಯದ ಮೇಲ್ವಿಚಾರಕ ಯತೀಶ್, ಯೋಜನೆಯ ವತಿಯಿಂದ ಗ್ರಾಮದ ಅಭಿವೃದ್ಧಿಯ ಲ್ಲಿ ತೊಡಗಿಸಿಕೊಂಡು ಸಾಮಾಜಿಕ ಕಾರ್ಯ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾರಂಗಿ ಮತ್ತು ಕೊಡಗರಹಳ್ಳಿಯಲ್ಲಿ ಸಿಲಿಕಾನ್ ಚೇಂಬರ್ ನಿರ್ಮಾಣಗೊಳಿಸಲಾಗಿದ್ದು, 7ನೇ ಹೊಸಕೋಟೆ ಮತ್ತು ಕಂಬಿಬಾಣೆ ಕಾರ್ಯಕ್ಷೇತ್ರಗಳಲ್ಲಿ ಬೇಡಿಕೆಯಿದ್ದು ಇದನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಿಲಿಕಾನ್ ಚೇಂಬರ್ ಅಳವಡಿಕೆ ಯಲ್ಲಿ ಶ್ರಮಿಸಿದ ಯತೀಶ್, ಯೋಜನೆಯ ಸೇವಾಪ್ರತಿನಿಧಿ ಹೇಮಾವತಿ, ಬಾಬುಪೂಜಾರಿ, ಧನಂಜಯ ಮತ್ತು ಸುಮಿತ್ರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಿಡಿಒ ರವೀಶ್, ಕಾಫಿ ಬೆಳೆಗಾರರಾದ ಪಿ.ಹರಿಶ್ಚಂದ್ರ ಪೈ, ಪಿ.ಕೆ.ಜಗದೀಶ್, ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ…
ಮಡಿಕೇರಿ ಫೆ.15 NEWS DESK : ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರಾಜಪೇಟೆ ಬಿಜೆಪಿ ಮಂಡಲ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು, ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ಎಂಬ ಗುರಿಯೊಂದಿಗೆ ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ನೂತನ ವಿವಿಯನ್ನು ಸ್ಥಾಪಿಸಿತು. ಆದರೆ ಇದೀಗ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯವನ್ನು ಕಡೆಗಣಿಸಿ ವಿವಿಗಳನ್ನು ಮುಚ್ಚುವ ನಿರ್ಧಾರ ಮಾಡಿರುವುದು ಖಂಡನೀಯವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ಯಂತ ಮಹತ್ವಾಕಾಂಕ್ಷೆಯಿಂದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂದಿನ ಬಿಜೆಪಿ ಸರ್ಕಾರ ನೂತನ ವಿವಿಯನ್ನು ಸ್ಥಾಪಿಸಿತು. ಈ ಹಂತದಲ್ಲೇ ವಿಧಾನಸಭಾ ಚುನಾವಣೆಯೂ ಘೋಷಣೆಯಾದ ಹಿನ್ನೆಲೆ ವಿವಿಗಳಿಗೆ ನೀಡಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ಪೂರೈಸಲು ಸಾಧ್ಯವಾಗಿರಲಿಲ್ಲ. ಒಂದು ವೇಳೆ ರಾಜ್ಯದಲ್ಲಿ ಮತ್ತೆ…






