ಪೊನ್ನಂಪೇಟೆ ಫೆ.15 NEWS DESK : ಚೇತನ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ಪ್ರಶಸ್ತಿಗೆ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗುಂಡಿಕೆರೆ ಕೊಟ್ಟೋಳಿ ಗ್ರಾಮದ ಮೀತಲತಂಡ ಎಂ. ಇಸ್ಮಾಯಿಲ್ ಆಯ್ಕೆಯಾಗಿದ್ದಾರೆ. ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಇವರ ಸಹಯೋಗದಲ್ಲಿ ಇದೇ ತಿಂಗಳ 16ರಂದು ಭಾನುವಾರ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆಯಲಿರುವ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಅವರಿಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ವಿರಾಜಪೇಟೆ ತಾಲೂಕಿನ ಗುಂಡಿಕೆರೆಯಲ್ಲಿರುವ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಇಸ್ಮಾಯಿಲ್, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು…
ಲೇಖಕ: admin
ಮಡಿಕೇರಿ ಫೆ.15 NEWS DESK : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ನಾಗದೇವರ ನೂತನ ಆಲಯ ಮತ್ತು ಪುನರ್ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನಾಗ ದರ್ಶನ ಫೆ.22 ಮತ್ತು 23 ರಂದು ನಡೆಯಲಿದೆ. ಕ್ಷೇತ್ರ ತಂತ್ರಿಗಳಾದ ಕೆ.ಶ್ರೀಕೃಷ್ಣ ಉಪಾಧ್ಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಫೆ.22 ರಂದು ಸಂಜೆ 6 ಗಂಟೆಯಿಂದ ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾ ಸಂಕಲ್ಪ, ಮಾತೃಕಾ ಪೂಜೆ, ಋತ್ವಿಗ್ವರಣೆ, ಪ್ರಸಾದ ಪ್ರತಿಗ್ರಹ, ಸ್ಥಾನ ಶುದ್ದಿ, ಪ್ರಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತುಪೂಜೆ, ವಾಸ್ತು ಬಲಿ, ಆಶ್ಲೇಷ ಬಲಿ, ಮಹಾಮಂಗಳಾರತಿ ಜರುಗಲಿದೆ. ಫೆ.23 ರಂದು ಬೆಳಿಗ್ಗೆ 7.30 ರಿಂದ ಗುರುಗಣಪತಿ ಪೂಜೆ, ಗಣಪತಿ ಹೋಮ, 8.36ಕ್ಕೆ ನಾಗದೇವರ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಶಾಂತಿಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ನಡೆಯಲಿದ್ದು, 11.30ಕ್ಕೆ ಉಡುಪಿಯ ವೇ.ಬ್ರ.ಶ್ರೀ ಎ.ಸುಬ್ರಮಣ್ಯ ಮಧ್ಯಸ್ಥ ನಾಗಪಾತ್ರಿ ನಾಗದರ್ಶನ ಸೇವೆ ನಡೆಸಿಕೊಡಲಿದ್ದಾರೆ. ನಂತರ ಆಶೀರ್ವಾದ, ತೀರ್ಥಪ್ರಸಾದ ವಿತರಣೆ ಹಾಗೂ…
ವಿರಾಜಪೇಟೆ ಫೆ.15 NEWS DESK : ವಿರಾಜಪೇಟೆಯ ಆದಿಶಕ್ತಿ ಟ್ಯುಟೋರಿಯಲ್ ನ ಐದನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಟ್ಯುಟೋರಿಯಲ್ ನ ಅಧ್ಯಕ್ಷ ಅರುಣ್ ಕುಮಾರ್ ಕಳೆದ ಸಾಲಿನಂತೆ ಈ ಸಾಲಿನಲ್ಲಿಯೂ ಶೇ.100ಷ್ಟು ಫಲಿತಾಂಶ ಬಂದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾದ ಆರ್.ಕೆ.ಸಲಾಂ ಮಾತನಾಡಿ, ವಿದ್ಯೆ ಮಹತ್ವದ್ದಾಗಿದೆ. ವಿದ್ಯೆ ಇಲ್ಲದಿದ್ದರೆ ಮುಂದಿನ ಜೀವನ ದುಸ್ತರವಾಗಲಿದೆ. ಮುಂದೆ ನಾವು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕಿತ್ತು ಎಂದು ಕೊರಗುವ ಬದಲು ಇಂದೇ ಚೆನ್ನಾಗಿ ಓದಿ ಮುಂದಕ್ಕೆ ಹೋಗುವ ಸಂಕಲ್ಪವನ್ನು ಮಾಡಿ. ಯಾರು ವಿದ್ಯೆಯನ್ನು ಕಡೆಗಣಿಸದೆ ಮುಂದೆ ಬರುವ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದು ಜೀವನವನ್ನು ಯಶಸ್ವಿಯಾಗಿ ನಡೆಸುವಂತಾಗಲಿ ಎಂದು ಕರೆ ನೀಡಿದರು. ಮರಗೋಡು ಪಿ.ಯು.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ.ಟಿ.ಶಾಜಿ ಮಾತನಾಡಿ, ತಮ್ಮ 36 ವರ್ಷಗಳ ಶಿಕ್ಷಕ ವೃತ್ತಿಯ ಬಗ್ಗೆ ಮಕ್ಕಳಿಗೆ ವಿವರಿಸಿ ಚುಟುಕು ಪ್ರಶ್ನೆಗಳನ್ನು…
ಮಡಿಕೇರಿ NEWS DESK ಫೆ.15 : ಮಡಿಕೇರಿ ನಗರದ ಡಾ.ಅಂಬೇಡ್ಕರ್ ಭವನದ ಎದುರು ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಬ್ಯಾನರ್ ಮತ್ತು ಅಂಬೇಡ್ಕರ್, ಬುದ್ಧ ಸಹಿತ ಹಿರಿಯ ಚೇತನರ ಭಾವಚಿತ್ರಗಳಿದ್ದ ಮತ್ತೊಂದು ಬ್ಯಾನರ್ ನ್ನು ಸುಟ್ಟ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ನ್ಯಾಯ ಕೋರಿ ಪ್ರತಿಭಟನೆ ನಡೆಸುವ ಹಕ್ಕನ್ನು ಎಲ್ಲರಿಗೂ ಸಂವಿಧಾನ ನೀಡಿದೆ. ಡಾ.ಅಂಬೇಡ್ಕರ್ ಭವನದ ವಿಚಾರವಾಗಿ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಇದರ ಭಾಗವಾಗಿ ಬ್ಯಾನರ್ ಅಳವಡಿಸಲಾಗಿತ್ತು. ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಕಿಡಿಗೇಡಿಗಳು ಬ್ಯಾನರ್ ನ್ನು ಸುಟ್ಟು ಹಾಕಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ಯಾನರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಅದರಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ ಸೇರಿದಂತೆ ಮಹನೀಯರ ಭಾವಚಿತ್ರಗಳಿಗೆ ಅಗೌರವ ತೋರಲಾಗಿದೆ.…
ಮಡಿಕೇರಿ ಫೆ.15 NEWS DESK : ಮೈಕ್ರೋಫೈನಾನ್ಸ್ ಗಳಿಂದ ಸಾಲಪಡೆದವರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೆ ತಂದು ಕೆಲವು ನಿಯಮಗಳನ್ನು ರೂಪಿಸಿರುವುದು ಸ್ವಾಗತಾರ್ಹ. ಆದರೆ ಈ ನಿಯಮಗಳ ಅನುಷ್ಠಾಕ್ಕೂ ಮೊದಲು ಬಡವರು ಪಡೆದುಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಿ ಎಂದು ಯುವ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಮೈಕ್ರೋಫೈನಾನ್ಸ್ ಗಳ ಕಿರುಕುಳಕ್ಕೆ ಅಂಕುಶ ಹಾಕುವುದಾಗಿ ಹೇಳಿಕೊಂಡಿದೆ. ಆದರೆ ಸರ್ಕಾರದ ಘೋಷಣೆಯ ನಂತರವೂ ಮೈಕ್ರೋಫೈನಾನ್ಸ್ ನ ಸಿಬ್ಬಂದಿಗಳು ಸಾಲ ಪಡೆದವರ ಮನೆಗಳಿಗೆ ತೆರಳಿ ಸಾಲದ ಮೊತ್ತ ಪಾವತಿಸುವಂತೆ ಒತ್ತಡ ಹೇರುತ್ತಿರುವುದು ಕಂಡು ಬಂದಿದೆ. ಬಡವರ ಮೇಲೆ ಸರ್ಕಾರಕ್ಕೆ ನೈಜ ಕಾಳಜಿ ಇದ್ದರೆ ಮೊದಲು ಸಾಲಮನ್ನಾ ಮಾಡಲಿ, ನಂತರ ಕಾನೂನು ಕ್ರಮದ ಪ್ರಕ್ರಿಯೆಯನ್ನು ಆರಂಭಿಸಲಿ ಎಂದು ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ಸಾಲದಬಾಧೆ ತಾಳಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವು ಭಾಗಗಳಲ್ಲಿ ಸಾಲಗಾರರ ಕಿರುಕುಳದಿಂದ ಬೇಸತ್ತು ಊರು…
ನಾಪೋಕ್ಲು ಫೆ.15 NEWS DESK : ವಿದ್ಯಾರ್ಥಿಗಳೇ ಸಮಾಜದ ಉತ್ತಮ ಆಸ್ತಿ ಎಂದು ಹಾಕತ್ತೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ವನಜ ಹೇಳಿದರು. ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ, ಜಿಲ್ಲಾ ಪಂಚಾಯತ್ ಕೊಡಗು, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಹಾಕತ್ತೂರು, ರಾಷ್ಟ್ರೀಯ ಸೇವಾ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತ ವಹಿಸಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ…
ನಾಪೋಕ್ಲು ಫೆ.15 NEWS DESK : ಚೆರಿಯಪರಂಬು ಮಖಾಂ ಉರೂಸ್‍ಗೆ ಚೆರಿಯಪರಂಬು ಜಮಾಯತ್ ಅಧ್ಯಕ್ಷ ಪಿ.ಎ.ಹಂಸ ಹಾಜಿ ಧ್ವಜಾರೋಹಣ ನೆರವೇರಿಸಿಸುವ ಮೂಲಕ ಚಾಲನೆ ನೀಡಿದರು. ನಮಾಜ್ ಬಳಿಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಉರೂಸ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಜಮಾಯತ್ ಉಪಾಧ್ಯಕ್ಷ ಪಿ.ಎಂ.ಶಾದಲಿ, ಕಾರ್ಯದರ್ಶಿ ಅಸೈನರ್ ಹಾಜಿ, ಸಹ ಕಾರ್ಯದರ್ಶಿ ಎಂ.ಜೆ.ಬಶೀರ್, ಖತೀಬರಾದ ಫೈಝಲ್ ಸಖಾಪಿ, ಜಮಾಯತ್ ಹಾಲಿ ಹಾಗೂ ಮಾಜಿ ಸಮಿತಿ ಸದಸ್ಯರು ಹಾಗೂ ಜನಾಂಗಬಾಂಧವರು ಉಪಸ್ಥಿತರಿದ್ದರು. ಉರೂಸ್ ಪ್ರಯುಕ್ತ ಫೆ.18ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಫೆ.15 NEWS DESK : ಹಲ್ಲುಗಳ ರಕ್ಷಣೆಯ ಬಗ್ಗೆ ಕಾಳಜಿ ವಹಿಸಬೇಕಾದ್ದು ಅತ್ಯಗತ್ಯ ಎಂದು ಮಡಿಕೇರಿ ವಿಜ್ಞಾನ ಮಹಾ ವಿದ್ಯಾಲಯದ ನೋಡಲ್ ಅಧಿಕಾರಿ ಡಾ.ರೇವಣ್ಣ ಹೇಳಿದರು. ಮಡಿಕೇರಿ ವಿಜ್ಞಾನ ಮಹಾವಿದ್ಯಾಲಯ, ವಿರಾಜಪೇಟೆ ದಂತ ಮಹಾವಿದ್ಯಾಲಯ, ಲಯನ್ಸ್ ಕ್ಲಬ್ ನಾಪೋಕ್ಲು, ಗ್ರಾಮ ಅಭಿವೃದ್ಧಿ ಸಂಘ ವೆಸ್ಟ್ ಕೊಳಕೇರಿ ಸಂಯುಕ್ತ ಆಶ್ರಯದಲ್ಲಿ ಕೊಳಕೇರಿ ಗ್ರಾಮ ಅಭಿವೃದ್ಧಿ ಸಂಘದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎಲ್ಲರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಅದರಲ್ಲೂ ಹಲ್ಲುಗಳ ಬಗ್ಗೆ ಕಾಳಜಿ ವಹಿಸಬೇಕು. ಚಿಕ್ಕಂದಿನಲ್ಲೇ ಹುಳುಕು ಹಲ್ಲುಗಳ ರಕ್ಷಣೆ ಬಗ್ಗೆ ಕಾಳಜಿ ಹೊಂದಿರುವುದು ಅತ್ಯಗತ್ಯ. ಸಾಮಾನ್ಯವಾಗಿ ಹುಳುಕು ಹಲ್ಲುಗಳು ಮಾನವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಆರಂಭಿಕ ಹಂತದಲ್ಲಿ ಹುಳುಕು ಹಲ್ಲುಗಳ ತೊಂದರೆ ಕಾಣಿಸಿಕೊಂಡಾಗ ಚಿಕಿತ್ಸೆ ನೀಡಿ ಪರಿಹರಿಸಿಕೊಳ್ಳಬಹುದು. ಹಾಗೆಯೇ ಮನುಷ್ಯನಿಗೆ ವಸಡಿನ ತೊಂದರೆಗಳು ಕಂಡುಬರುತ್ತವೆ. ಆರಂಭದ ಹಂತದಲ್ಲಿ ಚಿಕಿತ್ಸೆ ನೀಡಿ ಸರಿಪಡಿಸಿಕೊಳ್ಳಲು ಸಾಧ್ಯ ಎಂದರು. ಜಿಲ್ಲೆಯ ಗ್ರಾಮೀಣ…
ಕುಶಾಲನಗರ ಫೆ.15 NEWS DESK : ಪ್ರೇಮಿಗಳ ದಿನವನ್ನು ಕಾವೇರಿಯ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಕಾಲೇಜು ವಿದ್ಯಾರ್ಥಿಗಳು ವಿಶೇಷವಾಗಿ ಆಚರಣೆ ಮಾಡಿ ಯುವ ಪೀಳಿಗೆಗೆ ಹೊಸ ಸಂದೇಶ ನೀಡಿದರು. ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ನದಿಯಲ್ಲಿ ಇಳಿದು ಐ ಲವ್ ಕಾವೇರಿ ಅನ್ನುವ ಘೋಷಣೆಯೊಂದಿಗೆ ನದಿಯಲ್ಲಿದ್ದ ತ್ಯಾಜ್ಯಗಳ ತೆರವು ಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಂಡ ದೃಶ್ಯ ಕಂಡು ಬಂತು. ಕುಶಾಲನಗರ ಕೊಪ್ಪ ಕಾವೇರಿ ನದಿ ಸೇತುವೆ ಮೇಲ್ಭಾಗದಿಂದ ಜನರು ಎಸೆದ ಪೂಜಾ ಸಾಮಗ್ರಿಗಳು, ಬಳಕೆಗೆ ಯೋಗ್ಯವಲ್ಲದ ವಸ್ತುಗಳನ್ನು ನೂರಕ್ಕೂ ಅಧಿಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ತೆರವುಗೊಳಿಸಿ ಕುಶಾಲನಗರ ಪುರಸಭೆ ಮತ್ತು ಕೊಪ್ಪ ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳಿಗೆ ತುಂಬಿಸಿ ನದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಳೆದ ವರ್ಷ ಫೆಬ್ರುವರಿ 14ರಂದು ಕೂಡ ಇದೇ ರೀತಿಯ ಅಭಿಯಾನದಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ತೊಡಗಿಸಿಕೊಂಡು ಕಾವೇರಿ ನದಿಯ…
ಮಡಿಕೇರಿ ಫೆ.15 NEWS DESK : ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸೇವಾಭಾರತಿ ಸಂಸ್ಥೆಯ ವತಿಯಿಂದ ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಮತ್ತು ಗಾಲಿಕುರ್ಚಿ ಜಾಥಾ ನಡೆಯಿತು. ಮಡಿಕೇರಿಯ ವಿಕಾಸ್ ಜನ ಸೇವಾ ಟ್ರಸ್ಟ್ ಆಶ್ರಮ, ಸ್ವಾಮಿ ವಿವೇಕಾನಂದ ಯೂತ್ ಮೂಮ್ ಮೆಂಟ್ ಕೊಡಗು ಶಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋದಕ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಶಿಬಿರ ನಡೆಸಲಾಗಿದ್ದು, ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸಲು ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದಾಗಿ ಗಾಲಿಕುರ್ಚಿ ಜಾಥಾವನ್ನು ನಡೆಸಲಾಯಿತು. ಈ ಸಂದರ್ಭ ಸೇವಾ ಭಾರತಿ ಖಜಾಂಚಿ ಹಾಗೂ ಸೇವಾ ಧಾಮ ಸಂಸ್ಥೆಯ ಸ್ಥಾಪಕ ಕೆ.ವಿನಾಯಕ ರಾವ್, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸ್ಥಾಯಿ ಸಮಿತಿ ಸದಸ್ಯ ಅಜಯ್ ಸೂದ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.






