ಮಡಿಕೇರಿ ಫೆ.15 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಕ್ಲಬ್ ಮಹೀಂದ್ರ ವತಿಯಿಂದ ರಕ್ತದಾನ ಶಿಬಿರವು ನಗರದ ಹೊರವಲಯದಲ್ಲಿರುವ ಕ್ಲಬ್ ಮಹೀಂದ್ರದಲ್ಲಿ ನಡೆಯಿತು. ಹೋಟೆಲ್ ಕ್ಲಬ್ ಮಹೀಂದ್ರದ ಸುಮಾರು 45 ಸಿಬ್ಬಂದಿಗಳು ರಕ್ತದಾನ ಮಾಡಿದರು. ಕ್ಲಬ್ ಮಹೀಂದ್ರದ ವ್ಯವಸ್ಥಾಪಕ ಫಾರೂಕ್, ಎಂಜಿನಿಯರ್ ದೀಪಕ್ ಕುಮಾರ್, ಮಾನವ ಸಂಪನ್ಮೂಲ ವಿಭಾಗದ ನವೀನ್ ನೊರೋನಾ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ವಿಭಾಗದ ಡಾ.ಕರುಂಬಯ್ಯ ಇತರರು ಇದ್ದರು.
ಲೇಖಕ: admin
ಮಡಿಕೇರಿ ಫೆ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮ ಏರ್ಪಡಿಸಲಾಗಿದ್ದು “ಶಾಲಾ ಮಕ್ಕಳಿಗೆ ಪ್ರೇರಣಾ ತುಣುಕು ಕಾರ್ಯಾಗಾರವು ಹೆಬ್ಬಾಲೆ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು. ಕುಶಾಲನಗರ ಗ್ರಾಮಂತರ ಠಾಣೆಯ ಎ.ಎಸ್.ಐ ಕುಮಾರಿ ಉದ್ಘಾಟಿಸಿ ಮಾತನಾಡಿ. ಪ್ರಸ್ತುತ ದಿನಗಳಲ್ಲಿ ಶಾಲಾ ಮಕ್ಕಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು. ಸರ್ಕಾರ ಮಕ್ಕಳಿಗಾಗಿ ಉಚಿತ ಹಾಸ್ಟೆಲ್ ವ್ಯವಸ್ಥೆಗಳನ್ನು ಕಲ್ಪಿಸಿದ್ದು ಮಕ್ಕಳು ಶಿಕ್ಷಣವಂತರಾಗುವಲ್ಲಿ ಹೆಚ್ಚಿನದಾದ ಶ್ರಮ ವಹಿಸಬೇಕು. ವಿದ್ಯಾಭ್ಯಾಸದ ಸಮಯದಲ್ಲಿ ಏಕಾಗ್ರತೆಯಿಂದ ಇರಬೇಕಾಗುತ್ತದೆ. ಮಕ್ಕಳಿಗೆ ಸಾರ್ವಜನಿಕ ವಲಯದಲ್ಲಿ ಸಮಸ್ಯೆಗಳಾದ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಿದಾಗ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಪೊಲೀಸ್ ಇಲಾಖೆಯ 112 ಗೆ…
ಮಡಿಕೇರಿ ಫೆ.15 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ (ಕೆಎಬಿಎಚ್‍ಐ) ವತಿಯಿಂದ ಅಂತಾರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆಯ ಉಪನ್ಯಾಸಕರ ಕೊಠಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಒಐಎಂಎಸ್ ಸಂಸ್ಥೆಯ ಸ್ಥಾನಿಯ ವೈದ್ಯಾಧಿಕಾರಿ ಆಡಿ ಸತೀಶ್ ಸರ್ ಅವರು ಅಂತಾರಾಷ್ಟ್ರೀಯ ಮೂರ್ಛೆರೋಗ ದಿನಾಚರಣೆ 2025 ಘೋಷವಾಕ್ಯವಾದ “ರೋಗಗ್ರಸ್ಥೆಯನ್ನು ಮೀರಿ ಅಪಸ್ಮಾರದ ಅರಿವಿನೊಂದಿಗೆ ಜೀವನವನ್ನು ಸಶಕ್ತಗೊಳಿಸುವ” ಎಂಬ ಅಪಸ್ಮಾರ ರೋಗದ ಚಿಹ್ನೆಗಳನ್ನು ಮುಂಚಿತವಾಗಿ ರೋಗಿಯಲ್ಲಿ ಗುರುತಿಸುವ ಹಾಗೂ ಅಪಸ್ಮಾರ ರೋಗ ಬಂದ ರೋಗಿಯನ್ನು ಹೇಗೆ ಚಿಕಿತ್ಸೆಯನ್ನು ಕೊಡಿಸಬೇಕೆಂದು ನೆರೆದಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೆಒಐಎಂಎಸ್ ಸಂಸ್ಥೆಯ ಸಾಮಾನ್ಯ ವೈದ್ಯಕೀಯ ವಿಭಾಗದ ವೈದ್ಯಧಿಕಾರಿಯಾದ ಆಡಿ ಚೇತನ್ ಮಾತನಾಡಿ, ಅಪಸ್ಮಾರ ಕಾಯಿಲೆಯ ಬಗೆಗೆ ನೆರೆದಿದ್ದ ವಿದ್ಯಾರ್ಥಿಗಳಿಗೆ ಅಪಸ್ಮಾರ ಖಾಯಿಲೆಯ ಉಪನ್ಯಾಸವನ್ನು ನೀಡಿದರು. ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಕೊಡಗು ಜಿಲ್ಲೆಯ…
ಮಡಿಕೇರಿ ಫೆ.15 NEWS DESK : ಕೊಡಗು ಜಿಲ್ಲೆಯಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ನಿಗದಿಪಡಿಸಲಾಗಿದ್ದ ಗುರಿಗಿಂತ ಅರ್ಜಿಗಳು ಸಲ್ಲಿಕೆಯಾಗಿರುವುದು ಕಡಿಮೆಯಾಗಿದೆ. ಈ ಸಂಬಂಧ ತಳಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಜಿ.ಪಲ್ಲವಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಲೆಮಾರಿ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಸ್ವಯಂ ಉದ್ಯೋಗ, ಉದ್ಯಮಶೀಲತಾ, ಸ್ವಾವಲಂಬಿ ಸಾರಥಿ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳಡಿ ನಿಗದಿತ ಗುರಿಗಿಂತ ಅರ್ಜಿಗಳ ಸಲ್ಲಿಕೆ ಕಡಿಮೆಯಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಪ್ರಗತಿ ಸಾಧಿಸುವಂತೆ ಸೂಚಿಸಿದರು. 2023-24 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ ನಿಗದಿಪಡಿಸಿದ 24 ರ ಭೌತಿಕ ಗುರಿಯಲ್ಲಿ 19 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿದೆ. ಉದ್ಯಮಶೀಲತಾ ಯೋಜನೆಯಡಿ 11 ರ ಗುರಿಯಲ್ಲಿ…
ಮಡಿಕೇರಿ ಫೆ.15 NEWS DESK : ವಿಶಿಷ್ಟ ಸಂಸ್ಕೃತಿ, ಪರಂಪರೆಗಳನ್ನು ಹೊಂದಿ ಕೊಡಗಿನ ನೆಲದಲ್ಲಿ ಸಹಸ್ರಾರು ವರ್ಷಗಳಿಂದ ಬದುಕಿ ಬಾಳುತ್ತಿರುವ ‘ಕುಡಿಯ’ ಸಮುದಾಯವನ್ನು ಅಲೆಮಾರಿಗಳೆನ್ನದೆ, ಆದಿವಾಸಿಗಳ ಪಟ್ಟಿಗೆ ಸೇರಿಸಬೇಕೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಿಗೆ ಕುಡಿಯ ಸಮುದಾಯದ ಪ್ರಮುಖರು ಮನವಿ ಮಾಡಿದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಅಹವಾಲುಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಜಿ.ಪಲ್ಲವಿ ಅವರು ಸ್ವೀಕರಿಸಿದರು. ಈ ಸಂದರ್ಭ ಕುಡಿಯ ಸಮುದಾಯದ ಪ್ರಮುಖರಾದ ಕುಡಿಯರ ಮುತ್ತಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕುಡಿಯ ಜನಾಂಗಕ್ಕೆ 5 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಕುಡಿಯ ಸಮುದಾಯವನ್ನು ಅಲೆಮಾರಿಗಳೆಂದು ಹೇಳದೆ ಆದಿವಾಸಿಗಳ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ನಿಗಮದ ವಿಶೇಷ ಕರ್ತವ್ಯ ಅಧಿಕಾರಿ ಆನಂದ್ ಕುಮಾರ್, ಸೂಕ್ಷ್ಮ, ಸಣ್ಣ ಸಣ್ಣ…
ಮಡಿಕೇರಿ ಫೆ.15 NEWS DESK : ನೊಬೆಲ್ ಪ್ರಶಸ್ತಿ ವಿಜೇತ ಟಿಬೆಟಿಯನ್ ಧಾರ್ಮಿಕ ಗುರು 14ನೇ ದಲಾಯಿಲಾಮ ಅವರ ಆಶೀರ್ವಾದ ಪಡೆಯಲು ರಾಜ್ಯ ಗೃಹ ಸಚಿವ ಪರಮೇಶ್ವರ್ ಕುಶಾಲನಗರ ಸಮೀಪ ಬೈಲುಕುಪ್ಪೆಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು. ದಂಪತಿ ಸಮೇತರಾಗಿ ಆಗಮಿಸಿದ ಪರಮೇಶ್ವರ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಕ್ಕೆ ಅವರ ಭೇಟಿ ಸಂದರ್ಭ ಪ್ರತಿ ಬಾರಿ ಆಶೀರ್ವಾದ ಪಡೆದಿದ್ದೇನೆ ಎಂದ ಗೃಹ ಸಚಿವ ಪರಮೇಶ್ವರ್ ಬೈಲುಕುಪ್ಪೆಗೆ ಏಳು ವರ್ಷಗಳ ನಂತರ ದಲೈಲಾಮ ಅವರು ಭೇಟಿ ನೀಡಿದ್ದಾರೆ. 90 ವರ್ಷ ದಾಟಿರುವ ದಲೈಲಾಮ ಅವರಿಗೆ ಅಲ್ಪಸ್ವಲ್ಪ ಆರೋಗ್ಯದ ಸಮಸ್ಯೆ ಇರುವುದಾಗಿ ಮಾಹಿತಿ ನೀಡಿದ ಅವರು, ಭಗವಂತ ಇನ್ನೂ ಹೆಚ್ಚಿನ ಆಯಸ್ಸು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ದಲೈಲಾಮ ಅವರಿಗೆ ಜೀವ ಬೆದರಿಕೆ ಬಗ್ಗೆ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಭದ್ರತೆಯನ್ನು ನೀಡಲಾಗುತ್ತಿದೆ ರಾಜ್ಯದ ಅತಿಥಿಯಾಗಿ ಬಂದಿರುವ ಕಾರಣ ರಾಜ್ಯ ಸರ್ಕಾರ…
ಮಡಿಕೇರಿ NEWS DESK ಫೆ.14 : ಇತ್ತೀಚೆಗೆ ಕೂಟುಹೊಳೆಯಲ್ಲಿ ಮೃತಪಟ್ಟ ಮಡಿಕೇರಿ ನವೋದಯ ಶಾಲೆಯ ಪಿಯುಸಿ ವಿದ್ಯಾರ್ಥಿ ಅಮಿತ್ ನ ಮನೆಗೆ ಶಾಸಕ ಡಾ.ಮಂತರ್ ಗೌಡ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಮಡಿಕೇರಿ NEWS DESK ಫೆ.14 : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿ ಕೊಡವರ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು. 2026ರಲ್ಲಿ ಸಂಸತ್ತಿನ ಮತ್ತು ಅಸೆಂಬ್ಲಿಯ ಕ್ಷೇತ್ರದ ಗಡಿ ಹಾಗೂ ಸಂಖ್ಯೆ ಪುನರ್ ನಿರ್ಣಯಿಸಲಾಗುತ್ತಿದ್ದು, ಇದಕ್ಕಾಗಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ರಾಜ್ಯದಲ್ಲಿ ಗರಿಷ್ಠ ಪ್ರಾತಿನಿಧ್ಯವನ್ನು ಹೊಂದಿರುವ…
ಮಡಿಕೇರಿ ಫೆ.14 NEWS DESK : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಮಡಿಕೇರಿ ತಾಲ್ಲೂಕಿನ ಮೂರು ಸಾಮಾನ್ಯ ಹಾಗೂ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕಾಗಿ ಫೆ.16 ರಂದು ಚುನಾವಣೆ ನಡೆಯಲಿದೆ. ಸುಮಾರು 9 ಸಾವಿರಕ್ಕಿಂತಲೂ ಅಧಿಕ ಸದಸ್ಯರಿರುವ ಈ ಸಂಘದಲ್ಲಿ ಮತ ಚಲಾಯಿಸಲು ಕೇವಲ 487 ಮಂದಿಗೆ ಮಾತ್ರ ಅವಕಾಶ ಲಭಿಸಿರುವುದು ಹಾಸ್ಯಾಸ್ಪದ ಮತ್ತು ಸಂಘದ ಹಿನ್ನಡೆಗೆ ಸಾಕ್ಷಿಯಾಗಿದೆ ಎಂದು ಕೊಡಗು ಏಲಕ್ಕೆ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ನಿರ್ದೇಶಕ ಕಿಮ್ಮುಡಿರ ಜಗದೀಶ್ ಆರೋಪಿಸಿದ್ದಾರೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಘದ ಹಾಲಿ ಆಡಳಿತ ಮಂಡಳಿಯವರ ನಿಷ್ಕ್ರಿಯ ಆಡಳಿತವೇ ಈ ಸಂಘದ ಹಿನ್ನಡೆಗೆ ಕಾರಣವಾಗಿದೆ. ಸದಸ್ಯರು ಮತದಾನದಿಂದ ವಂಚಿತರಾಗಿರುವುದರಿಂದಲೇ 11 ಸ್ಥಾನಗಳನ್ನು ಅವಿರೋಧವಾಗಿ ಗೆಲ್ಲಲು ಸಾಧ್ಯವಾಗಿದೆ. ಕೊಡಗು ಕಾಫಿ ನಾಡಾಗಿದ್ದರೂ ಕಳೆದ ಹಲವು ವರ್ಷಗಳಿಂದ ಕಾಫಿ ಖರೀದಿಯ ವ್ಯವಹಾರ ನಿಲ್ಲಿಸಲಾಗಿದೆ. ಪರ್ಯಾಯ ವ್ಯವಸ್ಥೆಯನ್ನು…
ಮಡಿಕೇರಿ ಫೆ.14 NEWS DESK : ವೈದ್ಯಕೀಯ ವ್ಯಾಸಂಗ ಮಾಡಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮೂಲತಃ ವಿಜ್ಞಾನದ ವಿದ್ಯಾರ್ಥಿಯೇ ಆಗಿದ್ದಾರೆ. ಇವರಿಂದು ಕೆಲ ಕಾಲ ತಮ್ಮೆಲ್ಲ ಕೆಲಸ ಕಾರ್ಯಗಳ ಜಂಜಡ ಮರೆತು ಶಿಕ್ಷಕರಾಗಿ ವಿಜ್ಞಾನ ವಿಷಯವನ್ನು ಮಕ್ಕಳಿಗೆ ಬೋಧಿಸಿದ ಕುತೂಹಲಕಾರಿ ವಿದ್ಯಮಾನ ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಸಮಾಜ ಕಲ್ಯಾಣ ಇಲಾಖೆ ಅಧೀನದ ಬಾಲಕರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕಲಿಕೆಯಲ್ಲಿ ನಿರತರಾಗಿದ್ದ ಮಕ್ಕಳನ್ನು ಗಮನಿಸಿದರು. ಮಕ್ಕಳ ಓದಿನ ಬಗ್ಗೆ ಕುತೂಹಲಿಗಳಾದ ಶಾಸಕರು ಕೆಲ ಕಾಲ ತಾವೇ ಪುಸ್ತಕ ಹಿಡಿದು ಮಕ್ಕಳಿಗೆ ವಿಜ್ಞಾನ ಪಾಠ ಮಾಡುವ ಮೂಲಕ ಅಚ್ಚರಿ ಮೂಡಿಸಿದರು. ಪಾಠ ಮಾಡಿದ್ದಷ್ಟೆ ಅಲ್ಲ, ಮಕ್ಕಳಿಗೆ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದ್ದು ವಿಶೇಷ. ಶಾಸಕರಾದ ಡಾ. ಮಂತರ್ ಗೌಡ, ಮಕ್ಕಳೊಂದಿಗೆ ಬೆರೆತು, ಕೆಲ ಕಾಲ ತಾವೊಬ್ಬ ಉತ್ತಮ ಶಿಕ್ಷಕರೂ ಹೌದೆಂಬುದನ್ನು ಸಾಬೀತು ಪಡಿಸಿದ್ದು ವಿಶೇಷ. ಈ ಸಂದರ್ಭ…






