ಮಡಿಕೇರಿ NEWS DESK ಮೇ 31 : ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಸಮಾಜ ಒತ್ತಾಯಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕೊಡಗು ಗೌಡ ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಬರೆದಿರುವ ಪತ್ರದ ಸಾರಾಂಶ ಹೀಗಿದೆ >>> ಕೊಡಗಿನ ಜನತೆಯ ಆಕಾಂಕ್ಷೆ ಹಾಗೂ ವಿಶೇಷವಾಗಿ ಕೊಡಗಿನ ಒಕ್ಕಲಿಗ ಜನಾಂಗದ ನಿರೀಕ್ಷೆಯಂತೆ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯದ 25ನೇ ಮುಖ್ಯಮುಖ್ಯಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸುಸಂದರ್ಭ ಕೊಡಗಿನ ಗೌಡರ ಪರವಾಗಿ ತಮಗೆ ಹೃತೂರ್ವಕ ಅಭಿನಂದನೆ ಸಲ್ಲಿಸುತ್ತಿದ್ದೇವೆ. 2023ನೇ ಇಸವಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮಗಳ ನೇತೃತ್ವದಲ್ಲಿ ಹಾಗೂ ತಾವು ನೀಡಿದ ನೈತಿಕ ಬಲದಿಂದಾಗಿ ಕೊಡಗಿನ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಕಾಂಗ್ರೆಸ್ ಪಕ್ಷದ ಯುವ ಅಭ್ಯರ್ಥಿಗಳು ಪ್ರಚಂಡ ವಿಜಯ ಸಾಧಿಸಿರುವುದು ಅಭ್ಯರ್ಥಿಗಳಿಗೆ ತಾವು ನೀಡಿದ ನೈತಿಕ ಸ್ಥೆರ್ಯ ಎಂಬುದು ಹೊಗಳಿಕೆಯ ಮಾತಲ್ಲ. ನಂತರದ ಈ 3 ವರ್ಷಗಳಲ್ಲಿ ನಮ್ಮ ಶಾಸಕರು ಕೊಡಗು…
ಲೇಖಕ: admin
ಮಡಿಕೇರಿ NEWS DESK ಮೇ 31 : ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಸ್ಥಳೀಯ ಆದಿಮಸಂಜಾತ ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ ಮಾಡಬೇಕು, 2027ರ ಜನಗಣತಿ ಹಾಗೂ ರಾಷ್ಟ್ರೀಯ ಜಾತಿ ಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಒದಗಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜೂ.3 ರಂದು ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 10.30 ಗಂಟೆಗೆ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಗೃಹ ಸಚಿವರು, ಅಧ್ಯಕ್ಷರು, ಜನಸಂಖ್ಯಾ ಬದಲಾವಣೆ ಕುರಿತ ಉನ್ನತ ಮಟ್ಟದ ಸಮಿತಿ (High Level Committee on Demographic Change ) (H-LCDC), ಭಾರತ ಸರ್ಕಾರ, ನವದೆಹಲಿ, ಜನಗಣತಿ ಆಯುಕ್ತರು ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಮತದಾರರ ಪಟ್ಟಿಯಲ್ಲಿ ಸಂಶಯಾಸ್ಪದ ಪೌರತ್ವ…
ಮಡಿಕೇರಿ NEWS DESK ಮೇ 31 : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಕೆ.ದಿನೇಶ್ ಅವರು ಯುವ ಶಾಸಕ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಆಡಳಿತ ವ್ಯವಸ್ಥೆ ಚುರುಕುಗೊಳ್ಳಲಿದೆ. ಅಲ್ಲದೆ ಯುವಶಕ್ತಿಗೆ ಪ್ರೇರಣೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಯುವ ರಾಜಕಾರಣಿಗಳಿಗೆ ಪ್ರೋತ್ಸಾಹ ನೀಡುತ್ತಾ ರಾಜಕೀಯ ಬಲ ತುಂಬುತ್ತಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ. ಡಾ.ಮಂತರ್ ಗೌಡ ಅವರು ಜನಾನುರಾಗಿ ಶಾಸಕರಾಗಿದ್ದು, ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಯಾವುದೇ ಗುಂಪುಗಾರಿಕೆಯನ್ನು ಮಾಡದೆ ಅಭಿವೃದ್ಧಿ ಮಂತ್ರದೊಂದಿಗೆ ಪಕ್ಷ ನಿಷ್ಠೆಯನ್ನೂ ತೋರುತ್ತಿದ್ದಾರೆ. ಸಮಸ್ಯೆಗಳ…
ಮಡಿಕೇರಿ NEWS DESK ಮೇ 31 : ರಾಜ್ಯದ ನೂತನ ಮಂತ್ರಿಮಂಡಲದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಹೈಕಮಾಂಡ್ ಗೆ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು ಅವರು ಮನವಿ ಮಾಡಿದ್ದಾರೆ. ಗೋಣಿಕೊಪ್ಪಲಿನಲ್ಲಿ ಮಾತನಾಡಿದ ಅವರು ರಾಜ್ಯದ ಆರ್ಥಿಕತೆ, ಪರಿಸರ ವ್ಯವಸ್ಥೆ ಮತ್ತು ಕಾಫಿ ಪರಂಪರೆಗೆ ಕೊಡಗು ಜಿಲ್ಲೆ ಅಪಾರ ಕೊಡುಗೆಯನ್ನು ನೀಡಿದೆ. ಆದರೆ ಇಲ್ಲಿಯವರೆಗೆ ರಾಜ್ಯ ಸಚಿವ ಸಂಪುಟದಲ್ಲಿ ಜಿಲ್ಲೆಯವರಿಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ನ್ಯೂನತೆಯನ್ನು ಸರಿಪಡಿಸಲು ಇದು ಸೂಕ್ತ ಸಮಯವಾಗಿದ್ದು, ಕಾನೂನು ಮತ್ತು ಆಡಳಿತ ವ್ಯವಸ್ಥೆಯ ಕುರಿತು ಆಳವಾದ ತಿಳುವಳಿಕೆಯನ್ನು ಹೊಂದಿರುವ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು. ಆಡಳಿತಾತ್ಮಕ ಕೌಶಲ್ಯವನ್ನು ಹೊಂದಿರುವ ಪೊನ್ನಣ್ಣ ಅವರು ಸರಕಾರ ಎದುರಿಸುವ ಸಂಕೀರ್ಣ ಸಮಸ್ಯೆಗಳನ್ನು ಬಗೆಹರಿಸುವ ಶಕ್ತಿಯನ್ನು ಹೊಂದಿದ್ದಾರೆ. ಕಾಫಿ ಬೆಳೆಗಾರರು ಹಾಗೂ ಕೃಷಿ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಾಕೃತಿಕ ವಿಕೋಪದ…
ಕೊಡ್ಲಿಪೇಟೆ ಮೇ 30 NEWS DESK : ಕೊಡಗು ಜಿಲ್ಲೆಯ ಕೊಡ್ಲಿಪೇಟೆ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ 2025–26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಕರಾಗಿ 32 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಮುಖ್ಯಶಿಕ್ಷಕರಾಗಿ ವಯೋನಿವೃತ್ತಿ ಹೊಂದಿದ ಎಂ.ಎಸ್. ಅಬ್ದುಲ್ ರಬ್ ಅವರಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಗಣ್ಯರು ರಬ್ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅವರನ್ನು ಗೌರವಿಸಿ ನಿವೃತ್ತಿ ಜೀವನವು ಆರೋಗ್ಯ, ನೆಮ್ಮದಿ ಮತ್ತು ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆದ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಹೆಚ್. ಎನ್. ಚಂದ್ರಮೌಳಿ ಮಾತನಾಡಿ, ಅಬ್ದುಲ್ ರಬ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿ ಆದರ್ಶ ಶಿಕ್ಷಕರಾಗಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರದ ಜೊತೆಗೆ ಕನ್ನಡ…
ಮಡಿಕೇರಿ ಮೇ 30 NEWS DESK : 2026-27 ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆ/ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್, 02 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಈ ಕಚೇರಿ/ ವಸತಿ ಶಾಲೆ/ ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಷರತ್ತುಗಳ ಮೇರೆಗೆ ನೇಮಕ ಮಾಡಿಕೊಳ್ಳಲಾಗುವುದು: ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು. ನೇರ…
ಮಡಿಕೇರಿ ಮೇ 30 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇವರ ವತಿಯಿಂದ ನಡೆಸಿರುವ ಅಂತರ ಕೆಐಸಿಎಂ ಚರ್ಚಾ ಸ್ಪರ್ಧೆಯಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ತರಬೇತಿ ಸಂಸ್ಥೆಯ ಅಭ್ಯರ್ಥಿಗಳಾದ ಶ್ರೇಯ ಪೊನ್ನಪ್ಪ ಬಿ. ಅವರು ರಾಜ್ಯಕ್ಕೆ ಪ್ರಥಮ ಬಹುಮಾನ ಮತ್ತು ಕಾವ್ಯ ಕೆ.ಸಿ ಅವರು ದ್ವಿತೀಯ ಬಹುಮಾನ ಜೊತೆಗೆ ಪರ್ಯಾಯ ಪಾರಿತೋಷಕ ಪಡೆದಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೆಶಕರಾದ ಬಿ.ಶಿವಸ್ವಾಮಿ ಮತ್ತು ಕಾರ್ಯದರ್ಶಿಗಳಾದ ಅಶ್ವತ್ಥ ನಾರಾಯಣ ಅವರು ಬಹುಮಾನ ವಿತರಿಸಿದ್ದಾರೆ ಎಂದು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಪುಟ್ಟಸ್ವಾಮಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಸೋಮವಾರಪೇಟೆ ಮೇ 30 NEWS DESK : ಆರೋಗ್ಯ ಸಮಸ್ಯೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ. ಜಿಲ್ಲಾಸ್ಪತ್ರೆಯಲ್ಲಿ ದೊರೆಯುವ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಡೀನ್ ಡಾ.ಲೋಕೇಶ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸೋಮವಾರಪೇಟೆ ತಾಲೂಕು ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ-ಬೋಧಕ ಆಸ್ಪತ್ರೆ ಹಾಗೂ ಮಾದಾಪುರ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಆರೋಗ್ಯ ತಪಾಸಣೆಯನ್ನು ನಿರ್ಲಕ್ಷಿಸದೆ ನಿಯಮಿತವಾಗಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್ ಸೇರಿದಂತೆ ಆರೋಗ್ಯ ವಿಜ್ಞಾನ ಕೋರ್ಸ್‍ಗಳು ಲಭ್ಯವಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ…
ಮಡಿಕೇರಿ ಮೇ 30 NEWS DESK : ತಮಿಳುನಾಡು ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡು ಟಿವಿಕೆ ಪಕ್ಷದ ವಿಜಯ್ ನೇತೃತ್ವದ ಹೊಸ ಸರಕಾರ ರಚನೆಯಾದ ಹಿನ್ನೆಲೆಯಲ್ಲಿ ಅಲ್ಲಿನ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಪುತ್ರ ಉದಯ್ ನಿಧಿ ಸ್ಟಾಲಿನ್ ಅವರುಗಳು ಕೊಡಗು ಪ್ರವಾಸ ಹಮ್ಮಿಕೊಂಡಿದ್ದರು. ಮೇ 28ರಂದು ತಮಿಳುನಾಡಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ್ದ ಮಾಜಿ ಸಿ.ಎಂ. ಸ್ಟಾಲಿನ್ ಮತ್ತವರ ಪುತ್ರ ಉದಯ್ ನಿಧಿ ಸ್ಟಾಲಿನ್ ಅವರು ಮಡಿಕೇರಿ ಹೊರ ವಲಯದ ಲೀಲಾ ಪ್ಯಾಲೇಸ್ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದರು. ಮೇ 30ರಂದು ರೆಸಾರ್ಟ್ ವಾಸ್ತವ್ಯ ಪೂರ್ಣಗೊಳಿಸಿ ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಿ ಅಲ್ಲಿಂದ ವಿಶೇಷ ವಿಮಾನದಲ್ಲಿ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ.
ಮಡಿಕೇರಿ ಮೇ 30 NEWS DESK : ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ತರಬೇಕು ಮತ್ತು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿರುವ 4 ಕಾರ್ಮಿಕ ಸಂಹಿತೆಗಳನ್ನು ತಡೆದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕೊಡಗು ಜಿಲ್ಲಾ ಸಮಿತಿ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ ನಡೆಸಿತು. ಸಿಐಟಿಯು ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ರಾಜ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿರುವ ಸಂಘಟಿತ, ಅಸಂಘಟಿತ ಮತ್ತು ಯೋಜನಾ ಕಾರ್ಮಿಕರ ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರಕಾರ ಜಾರಿಗೆ ತರುತ್ತಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನ ನೀಡಿರುವ ಅಧಿಕಾರವನ್ನು ರಾಜ್ಯ ಸರಕಾರ ಬಳಸಿಕೊಂಡು ಇದನ್ನು ತಡೆಯಬೇಕು. ಆ ಮೂಲಕ ಸೂಕ್ತ ತಿದ್ದುಪಡಿಗಳೊಂದಿಗೆ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್ 2025ರಲ್ಲಿ ಕನಿಷ್ಠ ವೇತನದ…






