ಮಡಿಕೇರಿ ಫೆ.13 NEWS DESK : 14 ದಿನಗಳ ಹಸುಗೂಸನ್ನು ಹೊಂದಿರುವ ಬಾಣಂತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ.ದಿನೇಶ್ ಎಂಬುವವರ ಪತ್ನಿ, ಕರಡ ಗ್ರಾಮದ ದಿ.ಕಟ್ಟಿ ಬಿದ್ದಪ್ಪ ಹಾಗೂ ಶೀಲಾ ದಂಪತಿಯ ಪುತ್ರಿ ಕಾವೇರಮ್ಮ (24) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕೊಟ್ಟೋಳಿ ನಿವಾಸಿ ದಿನೇಶ್ ಹಾಗೂ ಕಾವೇರಮ್ಮ ಅವರು ವಿವಾಹವಾಗಿ ನಾಲ್ಕು ವರ್ಷಗಳಷ್ಟೆ ಕಳೆದಿದೆ. ಮನೆಯಲ್ಲಿ ಪತಿ ಹಾಗೂ ಅತ್ತೆ ಇಲ್ಲದ ಸಂದರ್ಭ ಸಾಧಿಸಿ ಕಾವೇರಮ್ಮ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಫೆ.13 : ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ. ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ. ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ ಜಾನಕಿ(52) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭ ಕಾಡಾನೆ ದಿಢೀರ್ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾಫಿ ತೋಟಗಳಲ್ಲಿ ನೆಲೆ ನಿಂತಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಫೆ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, “ಸಮಗ್ರ ಮಕ್ಕಳ ಲೈಂಗಿಕ ಶಿಕ್ಷಣದ ಕುರಿತು” ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಹಿರಿಯ ಮೇಲ್ವಿಚಾರಕಿ ಸಾವಿತ್ರವ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಯಿಯ ಗರ್ಭದಿಂದ 18 ವರ್ಷದವರೆಗೆ ಮಕ್ಕಳು ಎಂದು ಹೇಳಲಾಗುತ್ತದೆ. ಮಕ್ಕಳು ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಉತ್ತಮ ಪೌಷ್ಠಿಕಯುಕ್ತ ಆಹಾರವನ್ನು ಸೇವಿಸಬೇಕು. ಸರ್ಕಾರ ಇಂದು ಮಕ್ಕಳ ಆರೋಗ್ಯ, ದೈಹಿಕ ಬೆಳವಣಿಗೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಕ್ಕಳು ಶಿಕ್ಷಣವನ್ನು ಪಡೆಯುವುದರ ಮೂಲಕ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹಾಗೆಯೇ ಮಹಿಳಾ ಮತ್ತು…
ಮಡಿಕೇರಿ ಫೆ.13 NEWS DESK : ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಕುಟುಂಬದ ಜನಸಂಖ್ಯೆಯು ಸುಮಾರು 58,765 ಇದ್ದು, ಇವರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷರಾದ ಜಿ.ಪಲ್ಲವಿ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ 9,066 ಅಲೆಮಾರಿ ಜನಸಂಖ್ಯೆ ಇದೆ. ಪರಿಶಿಷ್ಟ ವರ್ಗ ಅಲೆಮಾರಿ 32,702 ಜನಸಂಖ್ಯೆ ಇದೆ. ಹಾಗೆಯೇ ಆದಿವಾಸಿ ಬುಡಕಟ್ಟುಗಳಲ್ಲಿ 16,997 ಜನಸಂಖ್ಯೆ ಇದೆ ಎಂದು ಅವರು ವಿವರಿಸಿದರು. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರು ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಬಳಿಯ ಜೇನುಕುರುಬ ಮತ್ತು ಮೇದಾ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಪುನರ್ ವಸತಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಕುಂದುಕೊರತೆ ಆಲಿಸಿದರು. ಬಳಿಕ ದಿಡ್ಡಳ್ಳಿ ಆದಿವಾಸಿಗಳು ವಾಸಿಸುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ದೊಡ್ಡಬೆಟ್ಟಗೇರಿಯಲ್ಲಿ…
ಮಡಿಕೇರಿ ಫೆ.13 NEWS DESK : ಫೆಬ್ರವರಿ 12 ರನ್ನು ಇನ್ನು ಮುಂದೆ ಜಾಗತಿಕ ‘ಕೊಡವ ಹೆಣ್ಣುಮಕ್ಕಳ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಯುನೈಟೆಡ್ ಕೊಡವ ಆರ್ಗನೈಜೇಷನ್ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಘೋಷಿಸಿದ್ದಾರೆ. ಯುಕೊ ಸಂಘಟನೆಯ 6ನೇ ವರ್ಷದ ‘ಬೇದ ಚಂಗ್ರಾಂದಿ’ ಪ್ರಯುಕ್ತ ಸಾಂಪ್ರದಾಯಿಕವಾಗಿ ನಡೆದ ‘ನಡುಬೇದ’ ಆಚರಣೆಯ ನಂತರ ನಡೆದ ಸಭೆಯಲ್ಲಿ ಮಾತನಾಡುತ್ತಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಕೊಡವರ ಸಾಂಪ್ರದಾಯಿಕವಾದ ಬೇದ ಚಂಗ್ರಾಂದಿ ಆಚರಣೆಯಲ್ಲಿ ‘ನಡುಬೇದ’ವನ್ನು ಭೂಮಿಗೆ ಮುಟ್ಟಾದ ದಿನವೆಂಬ ನಂಬಿಕೆಯೊಂದಿಗೆ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮೊದಲಿಗೆ, ಯುಕೊ ಸಂಘಟನೆಯ ನೇತೃತ್ವದಲ್ಲಿ, ಕೊಡವ ಮಹಿಳೆಯರೆಲ್ಲಾ ಸೇರಿ ಕಿರುಗೂರಿನ ಚೆಪ್ಪುಡಿರ ಸುಜು ಕರುಂಬಯ್ಯನವರ ಭತ್ತದ ಗದ್ದೆಗೆ ತೆರಳಿ, ಸಂಪ್ರದಾಯದಂತೆ ಭೂಮಿಗೆ ‘ತೋರ ತೊಪ್ಪು’ ಎಂದು ಕರೆಯಲ್ಪಡುವ ವಿಶೇಷ ಎಲೆಯಲ್ಲಿ ಅಕ್ಕಿಯನ್ನು ಇಟ್ಟು, ಭೂಮಿಗೆ ಕೈ ಎಣ್ಣೆ ಸುರಿದು, ಪಕ್ಕದಲ್ಲಿ ಮಿಳ್ಳಿಯಲ್ಲಿ ನೀರು, ಮರದ ಬಾಚಣಿಕೆಯನ್ನಿಟ್ಟು “ಭೂಮಿತಾಯಿ, ನೀಡ ಉಟ್ಟಿ ಮಂಡೆ ಕಾಂಜದ್ ತಂಪಾಡ್, ಕುಂಬ್ಯಾತ್ ಮಳೆಯಾಯಿತ್, ಕುಂದ್’ಲೂ ಕೂಳಾಡ್”…
ಮಡಿಕೇರಿ NEWS DESK ಫೆ.13 : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ಎಂ.ಅಮಿತ್(17)ನ ಮೃತದೇಹ ಸಮೀಪದ ಕುಟುಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ. ನವೋದಯ ವಿದ್ಯಾಸಂಸ್ಥೆಯ ಸಿಬ್ಬಂದಿ ಆನಂದ್ ಎಂಬುವವರ ಪುತ್ರ ಎಂ.ಎ.ಅಮಿತ್ ಫೆ.11ರಂದು ಬೆಳಗ್ಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ ಶಾಲೆಗೆಂದು ತೆರಳಿದಾತ ಮುಖ್ಯ ದ್ವಾರದ ಮೂಲಕ ರಸ್ತೆಯತ್ತ ಸಾಗಿದ್ದಾನೆ ಎಂದು ತಿಳಿದು ಬಂದಿತ್ತು. ಇದನ್ನು ಗಮನಿಸಿದ ವಿದ್ಯಾಸಂಸ್ಥೆಯ ರಕ್ಷಣಾ ಸಿಬ್ಬಂದಿಯೊಬ್ಬರು, ಆನಂದ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಆನಂದ್ ಸ್ಥಳಕ್ಕೆ ಆಗಮಿಸಿದರಾದರು, ಪುತ್ರನ ಪತ್ತೆಯಾಗಿರಲಿಲ್ಲ. ಬಳಿಕ ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ವಿದ್ಯಾಸಂಸ್ಥೆಯ ಬಳಿಯಲ್ಲೆ ಮಡಿಕೇರಿ ನಗರಕ್ಕೆ ನೀರು ಸರಬರಾಜು ಮಾಡುವ ಕೂಟುಹೊಳೆ ಜಲಾಗಾರವಿದೆ. ಇದರ ಹಿನ್ನೇರಿನ ದಡದಲ್ಲಿ ವಿದ್ಯಾರ್ಥಿ ಅಮಿತ್‌ನ ಚಪ್ಪಲಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ರ‍್ಯಾಫ್ಟರ್ ಮೂಲಕ ಕಾರ್ಯಾಚರಣೆ ನಡೆಸಿದರು.…
ವಿರಾಜಪೇಟೆ ಫೆ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ಬಿ,ಸಿ ಟ್ರಸ್ಟ್ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಪೊನ್ನಂಪೇಟೆ ವಲಯದ ಟಿ-ಶೆಟ್ಟಿಗೇರಿ ಕಾರ್ಯಕ್ಷೇತ್ರದಲ್ಲಿ ನೆಲ ಜಲ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ತಡಿಯಂಗಡ ಸೌಮ್ಯ, ನೀರು ಮಾನವನ ಆರೋಗ್ಯವನ್ನು ಕಾಪಾಡುವ ಅವಶ್ಯಕವಾದ ಜೀವ. ಹನಿ ನೀರಿಲ್ಲದೆ ಸಕಲ ಜೀವಿಗಳ ಬದುಕು ಅಸಾಧ್ಯ. ನೆಲ ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್ ಪ್ರಾಸ್ತವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷರಾದ ಸುಶೀಲ, ಒಕ್ಕೂಟದ ಪದಾಧಿಕಾರಿಗಳಾದ ಸರಸ್ವತಿ, ಎಂ.ಡಿ.ಲತಾ, ಉಷಾ, ಸೇವಾ ಪ್ರತಿನಿಧಿ ಗೀತಾ, ರಂಜಿತಾ ಸಂಘದ ಸದಸ್ಯರು ಊರಿನ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.13 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದ ಶ್ರೀ ಜ್ಯೋತಿ ಯುವಕ ಸಂಘದ ವತಿಯಿಂದ ಇದೇ ಪ್ರಥಮ ಬಾರಿಗೆ, ನಗರದ ದಶಮಂಟಪಗಳಿಗೆ ಸಂಬಂಧಿಸಿದಂತೆ ‘ದಶಮಂಟಪ ಪ್ರೀಮಿಯರ್ ಲೀಗ್’ (ಡಿಪಿಎಲ್) ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.15 ಮತ್ತು 16 ರಂದು ನಗರದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಶ್ರೀಜ್ಯೋತಿ ಯುವಕ ಸಂಘದ ಉಪಾಧ್ಯಕ್ಷ ಹೆಚ್.ಎನ್.ಮಹೇಶ್ ಪಂದ್ಯಾವಳಿ ಬಗ್ಗೆ ಮಾಹಿತಿ ನೀಡಿ, ದೇಚೂರು ಶ್ರೀ ಬಾಲಕ ಬಲರಾಮಮಂದಿರ ಸಮಿತಿ, ಶ್ರೀ ಕೋದಂಡ ರಾಮ ದೇವಾಲಯ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀ ಕೋಟೆ ಮಾರಿಯಮ್ಮ, ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ಶ್ರೀ ಕೊಟೆ ಮಹಾ ಗಣಪತಿ ದೇವಾಲಯ, ಶ್ರೀ ಕರವಲೆ ಭಗವತಿ ಮಹಿಷಮರ್ಧಿನಿ ದೇವಸ್ಥಾನದ ಮಂಟಪ ಸಮಿತಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ. ಅನಿವಾರ್ಯ ಕಾರಣಗಳಿಂದ ಪೇಟೆ ಶ್ರೀ ರಾಮಮಂದಿರ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಚೌಡೇಶ್ವರಿ ದೇವಸ್ಥಾನದ ಮಂಟಪ ಸಮಿತಿಗಳು ಪಾಲ್ಗೊಳ್ಳುತ್ತಿಲ್ಲವೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಮಡಿಕೇರಿ ತಾಲ್ಲೂಕಿಗೆ…
ಮಡಿಕೇರಿ ಫೆ.13 NEWS DESK : ದುರ್ಬಲ ವರ್ಗದ ಮತ್ತು ಬಡ ಮಂದಿಯ ಮೂಲಭೂತ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ನಡೆಸಬೇಕಾದ ದಲಿತ ಸಂಘಟನೆಗಳ ಮುಖಂಡರು, ಮಡಿಕೇರಿಯಲ್ಲಿರುವ ‘ಡಾ.ಅಂಬೇಡ್ಕರ್ ಭವನ’ದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವುದು ಸರಿಯಲ್ಲ. ಈ ಹೋರಾಟವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ಸಲಿತ ಸಂಘರ್ಷ ಸಮಿತಿ(ನಾಗರಾಜು ಬಣ)ಯ ರಾಜ್ಯ ಸಂಘಟನಾ ಸಂಚಾಲಕ ರಾಜಶೇಖರ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸುದರ್ಶನ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಭವನವನ್ನು ಅಲ್ಲಿನ ಭವನ ಸಮಿತಿ ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿದೆ. ಭವನವನ್ನು ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಉಚಿತವಾಗಿಯೂ ನೀಡುತ್ತಿದ್ದಾರೆ. ಇದರ ನಡುವೆಯೇ ಅಂಬೇಡ್ಕರ್ ಭವನದ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುವುದು ಸರಿಯಾದ ಕ್ರಮವಲ್ಲವೆಂದು ತಿಳಿಸಿದರು. ಅಂಬೇಡ್ಕರ್ ಭವನಕ್ಕೆ ಸಂಬಂಧಿಸಿದಂತೆ ಲೋಪಗಳಾಗಿದ್ದಲ್ಲಿ, ಭ್ರಷ್ಟಾಚಾರಗಳಿದ್ದರೆ ಜಿಲ್ಲಾಧಿಕಾರಿಗೆ ದೂರು ನೀಡಲಿ. ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಭ್ರಷ್ಟಾಚಾರ ಲೋಪಗಳು ಕಂಡುಬಂದರೆ ಕ್ರಮಕೈಗೊಳ್ಳುತ್ತಾರೆ. ಅದನ್ನು ಬಿಟ್ಟು ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಹೋರಾಟಗಳನ್ನು ನಡೆಸಬೇಡಿ ಎಂದರು. ದಸಂಸ(ಡಿ.ಜೆ.ಸಾಗರ್ ಬಣದ)…
ಮಡಿಕೇರಿ ಫೆ.13 NEWS DESK : ಜೆಸಿಐ ನ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ 14ನೇ ಅಧ್ಯಕ್ಷರಾಗಿ ತೀತಮಾಡ ಡಿ.ನಿತನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಚಿಂಡಮಾಡ ಜೆ.ಚೇತನ್, ಖಜಾಂಚಿಯಾಗಿ ಚೋನಿರ ಬಿ.ಸೋಮಣ್ಣ ಹಾಗೂ ಸಹ ಕಾರ್ಯದರ್ಶಿಯಾಗಿ ತೀತಮಾಡ ಎಸ್.ಸುಜೀತ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ತೀತಮಾಡ ಬಿ.ಅಯ್ಯಪ್ಪ (ಘಟಕ), ಅಪ್ಪಡೇರಂಡ ಎಂ.ಬೋಪಣ್ಣ (ವ್ಯಾಪಾರ), ಪೆಮ್ಮಂಡ ಎ.ಸೋಮಣ್ಣ (ಪಿಆರ್ ಮತ್ತು ಮಾರ್ಕೆಟಿಂಗ್), ಕೊಟ್ರಮಾಡ ನಿತಿನ್ (ತರಬೇತಿ), ಬೊಜ್ಜಂಗಡ ಎಂ.ಚಂಗಪ್ಪ (ಕಮ್ಯೂನಿಟಿ ಡೆವಲಪ್‍ಮೆಂಟ್), ಚೇಂದಂಡ ಟಿ.ದೀಪಕ್ (ಬೆಳವಣಿಗೆ ಹಾಗೂ ಅಭಿವೃದ್ಧಿ) ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಟಿ.ಎಸ್.ಅಕ್ಷಯ್, ಬೊಜ್ಜಂಗಡ ಸಂಪತ್, ತೀತಿಮಾಡ ಲಿಖಿತ್, ತೀತಿಮಾಡ ಬೋಪಣ್ಣ, ತೀತಿಮಾಡ ಗಿರೀಶ್ ಹಾಗೂ ಜೂನಿಯರ್ ಜೆಸಿಯಾಗಿ ತಸ್ವಿ ನಿತಿನ್ ನೇಮಕಗೊಂಡಿದ್ದಾರೆ. 2024ನೇ ಸಾಲಿನ ಅಧ್ಯಕ್ಷ ಪೆಮ್ಮಂಡ ಪಿ.ಮಂಜು ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪೂರ್ವಾಧ್ಯಕ್ಷರಾದ ಅಪ್ಪಂಡೇರಂಡ ದಿನು ದೇವಯ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪೂರ್ವಾಧ್ಯಕ್ಷರುಗಳಾದ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಹಾಗೂ ಬಿ.ಇ.ಕಿರಣ್ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕಾರ ನೀಡಿದರು. ಮಾ.7 ರಂದು…






