ಮಡಿಕೇರಿ ಫೆ.13 NEWS DESK : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ, ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ದೇವಾಲಯದಲ್ಲಿ ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಫೆ.11ರ ಸಂಜೆಯಿಂದಲೇ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನೆರವೇರಿತು. ರಾತ್ರಿ ದೀಪಾರಾಧನೆ, ಮಹಾಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಮರುದಿನ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಂಗಪೂಜೆ, ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನೆರವೇರಿತು.…
ಲೇಖಕ: admin
ಮಡಿಕೇರಿ ಫೆ.13 NEWS DESK : ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು. ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ನಂದಿನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಗ್ರಾ.ಪಂ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಉದ್ಘಾಟಿಸಿ ಮಾತನಾಡಿ, ಗ್ರಾ.ಪಂ ಶೇ.20ರಷ್ಟು ಅನುದಾನವನ್ನು ಶಾಲೆಗಳ ಅಭಿವೃದ್ಧಿಗಾಗಿ ಬಳಸಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗಬೇಕು ಮತ್ತು ಓದಿನ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರೀತಾ ಮಾತನಾಡಿ, ಮಕ್ಕಳ ಹಕ್ಕುಗಳು ಹಾಗೂ ಅವುಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು. ಮಕ್ಕಳು ತಮಗಾಗುವ ಅನ್ಯಾಯವನ್ನು ಶಿಕ್ಷಕರೊಂದಿಗೆ ಚರ್ಚಿಸಬೇಕೆಂದು ಕಿವಿ ಮಾತು ಹೇಳಿದರು. ಆರೋಗ್ಯ ಇಲಾಖೆ ಅಧಿಕಾರಿ ರಮ್ಯ ಮಾತನಾಡಿ, ಆರೋಗ್ಯ ಇಲಾಖೆಯಿಂದ ನೀಡಲಾಗುವ ವಿಟಮಿನ್ ಮಾತ್ರೆಗಳು ಹಾಗೂ ಇತರ ಆರೋಗ್ಯ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಭೆಯಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲ್‍ಕೋಡ್, ಶಾಲೆಯ ಮುಖ್ಯೋಪಾಧ್ಯಾಯರಾದ…
ಮಡಿಕೇರಿ ಫೆ.13 NEWS DESK : ಭಾಗಮಂಡಲ ಸಮೀಪದ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ, ಛದ್ಮವೇಷ ಸ್ಪರ್ಧೆ ಹಾಗೂ ವಿಜ್ಞಾನ ಮಾದರಿ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಗಮನ ಸೆಳೆಯಿತು. ಸಂಸ್ಥೆಯ ಕಾರ್ಯದರ್ಶಿ ಮಿಥುನ್ ಚಂಗಪ್ಪ ಹಾಗೂ ಮುಖ್ಯೋಪಾಧ್ಯಾಯರಾದ ಶ್ವೇತನ್ ಚಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಕ್ಕಳ ಸಂತೆಯನ್ನು ಅಯ್ಯಂಗೇರಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದಿಯನ ಮಿಥುನ್ ಉದ್ಘಾಟಿಸಿದರೆ, ವಿಜ್ಞಾನ ಮಾದರಿ ಪ್ರದರ್ಶನವನ್ನು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿಜ್ಞಾನ ಉಪನ್ಯಾಸಕಿ ಪೇರಿಯನ ಸಾಧನ ಉದ್ಘಾಟಿಸಿದರು. ಮಕ್ಕಳಿಗಾಗಿ, ಛದ್ಮವೇಷ ಸ್ಪರ್ಧೆ, ಪೋಷಕರಿಗೆ ವಿವಿಧ ಕ್ರೀಡಾಕೂಟುಗಳು ನಡೆದವು. ಕರಾಟೆ ಶಿಕ್ಷಕ ನಂಜುಂಡ, ಯೋಗ ಶಿಕ್ಷಕ ನಾಗರಾಜ್ ಹಾಗೂ ಎಲ್ಲಾ ಶಿಕ್ಷಕ ವೃಂದದವರ ಉಪಸ್ಥಿತಿಯಲ್ಲಿ ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿನಿ ಎಂ.ಎ.ಹಿಬಾ ಫಾತಿಮಾ ತಂಡ ಪ್ರಾರ್ಥನೆ ನೆರವೇರಿಸಿದರೆ, ಶಾಲೆಯ ಶಿಕ್ಷಕಿ ಎಂ.ಎ.ಚಿತ್ರ ಹಾಗೂ ಮಣವಟ್ಟಿರ ದಯಾ ಚಿನ್ನಪ್ಪ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಮಿಥುನ್ ಚಂಗಪ್ಪ ವಂದನಾರ್ಪಣೆ ನೆರವೇರಿಸಿದರು.
ಮಡಿಕೇರಿ ಫೆ.13 NEWS DESK : ಪೊನ್ನಂಪೇಟೆ ತಾಲ್ಲೂಕು ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿಯಾರ ಗಿರೀಶ್ ಕುಟುಂಬಸ್ಥರ ಮನೆಗೆ ಹೋಗುವ ತೋಡಿಗೆ ಕಾಲು ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಕಣಿಯಾರ ಕುಟುಂಬಸ್ಥರು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಸ್ಥಳದಲ್ಲಿ ಉಪಸ್ಥಿತರಿದ್ದ ಕುಟುಂಬಸ್ಥರು ಶಾಸಕರಿಗೆ ಧನ್ಯವಾದಗಳು ಅರ್ಪಿಸಿದರು. ಮಳೆಗಾಲದಲ್ಲಿ ನೀರಿನ ರಭಸ ಹೆಚ್ಚಾಗಿದ್ದು, ಈ ಭಾಗದ ನಿವಾಸಿಗಳಿಗೆ ತಮ್ಮ ಮನೆಗಳಿಗೆ ತೆರಳಲು ಅಪಾಯಕಾರಿ ಬಿದಿರಿನ ಪಾಲಗಳನ್ನು ಬಳಸಿ ಹೋಗುವ ಸನ್ನಿವೇಶ ನಿರ್ಮಾಣವಾಗಿತ್ತು. ಈ ಬಗ್ಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಶಾಸಕರು ಮಂಜೂರು ಮಾಡಿದ್ದರು.
ಬೆಂಗಳೂರು ಫೆ.13 NEWS DESK : ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು. ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೊಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, `ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು,…
ನಾಪೋಕ್ಲು ಫೆ.13 NEWS DESK : ಪಂಚಾಯತಿ ವ್ಯಾಪ್ತಿಯ ಮಾರುಕಟ್ಟೆ ಬಳಿ ನೂತನವಾಗಿ ಅಳವಡಿಸಿರುವ ಹೈ ಮಾಸ್ಟ್ ಸೋಲಾರ್ ದೀಪವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಲೋಕಾರ್ಪಣೆ ಮಾಡಿದರು. ಈ ಭಾಗದಲ್ಲಿ ಹಲವು ಕಾಲದಿಂದ ರಾತ್ರಿ ಹೊತ್ತು ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಇದನ್ನು ಗಮನಿಸಿ ಪಂಚಾಯತಿ ವತಿಯಿಂದ ಮೂರು ಲಕ್ಷ ರೂ.ವೆಚ್ಚದಲ್ಲಿ 3 ಹೈ ಮಾಸ್ಟ್ ಸೋಲಾರ್ ದೀಪ ವ್ಯವಸ್ಥೆ ಕಲ್ಪಿಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಕಾಂಗ್ರೆಸ್ ಪ್ರಮುಖ ಬಿದ್ದಾತಂಡ ತಮ್ಮಯ್ಯ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಹೇಮಾ ಅರುಣ್, ಬಿ.ಆರ್.ಗಂಗಮ್ಮ ನಾಯಕಂಡ ಕುಞ್ಞಣ್ಣ, ಎಲ್ತಂಡ ಶಾಂತಿ ಸೇರಿದಂತೆ ಇನ್ನಿತರರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ವಿರಾಜಪೇಟೆ ಫೆ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಬಿಸಿ ಟ್ರಸ್ಟ್ ವತಿಯಿಂದ ನೆಲ ಜಲ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ಪೊನ್ನಂಪೇಟೆ ವಲಯದ ಅರವತ್ತೊಕ್ಲು ಕಾರ್ಯಕ್ಷೇತ್ರದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂತ ಅಂತೋಣಿ ಪ್ರೌಢಶಾಲೆ ಸಹ ಶಿಕ್ಷಕಿ ಬೆಂಜಂಡ ರಶ್ಮಿ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೆಲ-ಜಲ ಸಂರಕ್ಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ. ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆಗೂ ನೀರು ಕೊಡುವ ಯೋಜನೆ ಇದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ನೆಲ ಜಲ ಸಂರಕ್ಷಣೆ ಪರಿಸರ ಸಂರಕ್ಷಣೆಯ ಅಂಶವಾಗಿದೆ. ನೆಲ ಸಂರಕ್ಷಣೆಯು ಮಣ್ಣಿನ ಸಾರವನ್ನು ಉಳಿಸುವುದು, ನೀರಾವರಿ ಮತ್ತು ನೀರು ಸಂಗ್ರಹಣೆಯನ್ನು ಉತ್ತೇಜಿಸುವುದು, ಮಣ್ಣಿನ ಕ್ಷಯ ಮತ್ತು ಮಾಲಿನ್ಯವನ್ನು ತಡೆಯುವ ಬಗ್ಗೆ ಉತ್ತಮ ಮಾಹಿತಿ ಮಾರ್ಗದರ್ಶನ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್ ನೆಲ ಜಲ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರಾದ ಗಣೇಶ್ ಹಾಗೂ ಪದಾಧಿಕಾರಿಗಳಾದ ಪಿ.ಕೆ.ರೇಷ್ಮಾ, ಶೋಭ ಮೋಹನ್, ಶಕುಂತಲಾ,…
ಕಾರವಾರ ಫೆ.13 NEWS DESK : ಪದ್ಮಶ್ರೀ, ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದಿಂದ (91) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು. ಇತ್ತೀಚೆಗೆ ಶಿರೂರಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತಕ್ಕೆ ಮರುಗಿದ್ದರು.ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ…
ನಾಪೋಕ್ಲು ಫೆ.13 NEWS DESK : ವಿದ್ಯಾರ್ಥಿಗಳು ನಿರಂತರವಾದ ಅಧ್ಯಯನ ಮತ್ತು ಪರಿಶ್ರಮದಿಂದ ಮಾತ್ರ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಗೌಡ ಸಮಾಜದ ಅಧ್ಯಕ್ಷ ಕೇಕಡ ನಾಣಯ್ಯ ಹೇಳಿದರು. ಚೇರಂಬಾಣೆ ಅರುಣ ವಿದ್ಯಾ ಸಂಸ್ಥೆಯಲ್ಲಿ ಓಜಸ್ವಿ ಚೈತನ್ಯ ಫೌಂಡೇಶನ್ ವತಿಯಿಂದ ಬೆಂಗಳೂರು ಕೊಡಗು ಗೌಡ ಸಮಾಜ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ “ನಾನು ಮತ್ತು ನನ್ನ ಭವಿಷ್ಯ” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಗುರಿಯ ಸ್ಪಷ್ಟತೆಯನ್ನು ಹೊಂದಿರಬೇಕು ಎಂದ ಅವರು ಜೀವನದಲ್ಲಿ ಯಾವುದೇ ವ್ಯಸನಕ್ಕೆ ಬಲಿಯಾಗದೆ ಸಮಾಜ ಮತ್ತು ದೇಶದ ಹಿತವನ್ನು ಕಾಪಾಡುವ ಸಜ್ಜನಿಕೆಯನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಸಮಾರಂಭದಲ್ಲಿ ಬೆಂಗಳೂರು ಗೌಡ ಸಮಾಜದ ಉಪಾಧ್ಯಕ್ಷರಾದ ಅಯ್ಯಟಿರ ಮೋಹನ್, ಬೇಕಲ್ ಬಿಪಿನ್, ಅಳ್ಮಂಡ ಮೋಹನ್ ದೇವಯ್ಯ, ಅರುಣ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ.ಎಸ್.ಸುಬ್ಬಯ್ಯ, ಬೋಧಕರು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು. ಓಜಸ್ವಿ ಚೈತನ್ಯ ಫೌಂಡೇಶನ್ ಸಂಪನ್ಮೂಲ ವ್ಯಕ್ತಿಗಳಾದ…
ನಾಪೋಕ್ಲು ಫೆ.13 NEWS DESK : ಧಾರ್ಮಿಕ ಕೇಂದ್ರಗಳಲ್ಲಿ ಆಚರಿಸಲ್ಪಡುವ ಹಬ್ಬಗಳು ದೇಶದ ನೈಜ ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಕಕ್ಕಬೆ ಗ್ರಾಮ ಪಂಚಾಯಿತಿಯ ಕುಂಜಿಲ ಗ್ರಾಮದ ಪಯ್‍ನರಿ ದರ್ಗಾದ ವಾರ್ಷಿಕ ಉರುಸ್ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಎಲ್ಲರೂ ಅವರವರ ಧರ್ಮ ಪಾಲನೆ ಮತ್ತು ಆಚರಣೆಗಳನ್ನು ಸ್ವತಂತ್ರವಾಗಿ ಆಚರಿಸುವಂತಾಗಬೇಕು ಎಂಬುದೇ ಈ ದೇಶದ ಸಂವಿಧಾನದ ಮೂಲ ಉದ್ದೇಶ. ಒಂದೂವರೆ ವರ್ಷದಲ್ಲಿ ರಾಜ್ಯಾದ್ಯಂತ ಹಲವಾರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ನ್ಯಾಯ ಒದಗಿಸುವಂತಹ ಯೋಜನೆಗಳನ್ನು ಸರ್ಕಾರ ರೂಪಿಸಿದೆ. ವಿರಾಜಪೇಟೆ ಕ್ಷೇತ್ರದಲ್ಲೂ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇದರಲ್ಲಿ ಹಲವು ಕಾಮಗಾರಿಗಳು ಮುಕ್ತಾಯವಾಗಿದೆ. ಕುಂಜಿಲ ವ್ಯಾಪ್ತಿಯಲ್ಲಿ ಚುನಾವಣೆಗೆ ಮುನ್ನ ಜನರಿಗೆ ಕೊಟ್ಟ ಭರವಸೆಯಂತೆ ರಸ್ತೆ ಹಾಗೂ ವಿವಿಧ ಕಾಮಗಾರಿಗಳು ನಡೆಸಲಾಗಿದೆ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಎಲ್ಲರೂ…






