ಲೇಖಕ: admin

ಸುಂಟಿಕೊಪ್ಪ ಫೆ.13 NEWS DESK : ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ.

Read More

ಸುಂಟಿಕೊಪ್ಪ ಫೆ.13 NEWS DESK : ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಅಭಿಯಾನ ನಡೆಯಿತು. ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಕಚೇರಿಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಹಾಗೂ ವಾಹನ ಚಾಲಕರ ಸಂಘದವರು ನಿಗಧಿತ ದಾಖಲಾತಿಗಳನ್ನು ಪರಿಶೀಲಿಸುವ ಮೂಲಕ ಚಾಲಕರಿಗೆ, ವರ್ಕ್‍ಶಾಪ್ ಸಿಬ್ಬಂದಿಗಳಿಗೆ ಸೇರಿದಂತೆ ಇತರೆ ಕಾರ್ಮಿಕರಿಗೆ ಇಲಾಖೆಯ ವತಿಯಿಂದ ಕರ್ನಾಟಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಫಲಾನುಭವಿಗಳಿಗೆ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳ ಮಾಹಿತಿ ನೀಡಲಾಯಿತು. ಅಲ್ಲದೇ ಸ್ಥಳದಲ್ಲೇ ನೋಂದಾವಣೆ ಪ್ರಕ್ರಿಯೆಯನ್ನು ನಡೆಸಿದರು. ಈ ಸಂದರ್ಭ 50ಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡರು. ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಪದಾಧಿಕಾರಿಗಳು ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕಾರಿಗಳು ಇದ್ದರು.

Read More

ಸೋಮವಾರಪೇಟೆ ಫೆ.13 NEWS DESK : 10 ಕೋಟಿ ರೂ.ಗಳ ವೆಚ್ಚದ ಐಗೂರು ಸೇತುವೆ ಕಾಮಗಾರಿಯನ್ನು ಒಂದು ವಾರದಲ್ಲಿ ಪ್ರಾರಂಭಿಸದಿದ್ದರೆ, ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಶಾಸಕ ಡಾ.ಮಂತರ್‍ಗೌಡ ಎಚ್ಚರಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕೋಪಯೋಗಿ ಇಲಾಖೆ ತಾಲ್ಲೂಕಿನಲ್ಲಿ ವೈಪಲ್ಯಗೊಂಡಿದೆ. ಅಧಿಕಾರಿಗಳು ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ವರ್ಗಾವಣೆ ಮಾಡಿಕೊಂಡು ಹೋಗಬಹುದು ಎಂದರು. ಸೋಮವಾರಪೇಟೆ ತಾಲ್ಲೂಕಿನಲ್ಲಿ 90 ಕೋಟಿ ರೂ.ಗಳ ಅನುದಾನದ ಕಾಮಗಾರಿಗಳು ಮಳೆಗಾಲದೊಳಗೆ ಮುಗಿಯಬೇಕಿದೆ. ಕಾಮಗಾರಿ ಪೂರ್ಣಗೊಂಡರೆ ಮಾತ್ರ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ. ಆದರೆ ಲೋಕೋಪಯೋಗಿ ಇಲಾಖೆಯ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿಲ್ಲ ಎಂದು ಹೇಳಿದರು. 20 ಕೋಟಿ ರೂ.ಗಳ ವೆಚ್ಚದ ತೋಳೂರುಶೆಟ್ಟಳ್ಳಿ, ಕೂತಿ ಮಾರ್ಗದ ರಸ್ತೆ ಮಾರ್ಗ ಸ್ನೈಲ್ಸ್(ಗೊಣ್ಣೆಹುಳ) ವೇಗದಲ್ಲಿದೆ. 15 ಕೋಟಿ ರೂ.ಗಳ ವೆಚ್ಚದ ಅರೆಯೂರು ಹೊಸಳ್ಳಿ, ಸೀಗೆಹೊಸೂರು ರಸ್ತೆ ಕಾಮಗಾರಿ ಪ್ರಾರಂಭವಾಗಿಲ್ಲ. ಮಳೆಗಾಲ ಪ್ರಾರಂಭವಾಗುವ ಮೊದಲು 90 ಕೋಟಿ ರೂ.ಗಳ…

Read More

ಮಡಿಕೇರಿ ಫೆ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಫೆಬ್ರವರಿ, 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ  ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಶಿಕ್ಷಕರಾದ ಮೆ.ನ.ವೆಂಕಟನಾಯಕ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.13 NEWS DESK :  ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುರಕ್ಷಿತ ಅಂತರ್ಜಾಲ ದಿನ (safer internet day) ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಉದ್ಘಾಟಿಸಿ ಮಾತನಾಡಿ, ಸುರಕ್ಷಿತ ಅಂತರ್ಜಾಲ ದಿನದ ಬಗ್ಗೆ ಮಾಹಿತಿಯನ್ನು ನೀಡಿದರು. ಎನ್‍ಐಸಿ ಅಧಿಕಾರಿಗಳಾದ ಸಿಂಧೂರ ತಳವಾರ ಅವರು ಸುರಕ್ಷಿತ ಇಂಟರ್ನೆಟ್ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದರು.  ಜಿಲ್ಲೆಯ ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿಗಳು ಮತ್ತು ಎನ್‍ಐಸಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ ಫೆ.13 NEWS DESK : ನಗರದಲ್ಲಿ ಮೂರು ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕರ ವಿಶೇಷ ಅನುದಾನದಲ್ಲಿ ಒಟ್ಟು ಮೂರು ಕೋಟಿ ರೂ ಗಳನ್ನು ಮಡಿಕೇರಿ ನಗರದ ಅಭಿವೃದ್ಧಿಗೆ ಮೀಸಲಿರಿಸುವುದಾಗಿ ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದ ಎಲ್ಲಾ ರಸ್ತೆಗಳನ್ನು ಉತ್ತಮ ಗುಣಮಟ್ಟದ ಸರ್ವಖುತು ರಸ್ತೆ ನಿರ್ಮಾಣದ ಆಶಯ ತಮ್ಮದಾಗಿದ್ದು, ಅದನ್ನು ಈಡೇರಿಸಲು ಬದ್ದನಾಗಿದ್ದೇನೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ನಗರದ ಕಾನ್ವೆಂಟ್ ಸಮೀಪ ರಸ್ತೆ, ಎಫ್.ಎಂ.ಸಿ. ಕಾಲೇಜು ಹಿಂಭಾಗದ ರಸ್ತೆ, ಮುಳಿಯ ಬಡಾವಣೆ ರಸ್ತೆ, ಮೋಣಪ್ಪ ಗ್ಯಾರೆಜ್ ರಸ್ತೆ, ಕೋಟೆ ಮಾರಿಯಮ್ಮ ದೇವಾಲಯ ಮುಂಭಾಗದ ರಸ್ತೆ, ಗೌಳಿಬೀದಿ ರಸ್ತೆ , ಬಸಪ್ಪ ಶಿಶುವಿಹಾರ ರಸ್ತೆ, ಅಬ್ದುಲ್ ಕಲಾಂ ಬಡಾವಣೆ ಮೈದಾನದ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಏಪ್ರಿಲ್ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿಗಳು ಮುಗಿಯಬೇಕು…

Read More

ಮಡಿಕೇರಿ ಫೆ.13 NEWS DESK : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಫೆ.14 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10.30 ಗಂಟೆಯಿಂದ 11.30ರ ವರೆಗೆ ಸತ್ಯಾಗ್ರಹ ನಡೆಸಿ ಕೊಡವರ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. 2026ರಲ್ಲಿ ಸಂಸತ್ತಿನ ಮತ್ತು…

Read More

ಮಡಿಕೇರಿ ಫೆ.12 : ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ(50) ಎಂಬುವವರೇ ಮೃತಪಟ್ಟ ಮಹಿಳೆಯಾಗಿದ್ದಾರೆ. ಸಾಲದ ಬಾಧೆ ತಾಳಲಾರದೆ ಸಾವಿಗೆ ಶರಣಾಗಿರುವುದಾಗಿ ಆರೋಪಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಹಸೀನಾ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ಮೃತ ಮಹಿಳೆ ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read More

ಮಡಿಕೇರಿ NEWS DESK ಜ.12 :  ಬ್ರೈನೋಬ್ರೈನ್  ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ 13ನೇ ಅಂತರಾಷ್ಟ್ರೀಯ ಆನ್‌ಲೈನ್  ಬ್ರೈನೋಬ್ರೈನ್  ಸ್ಪರ್ಧೆ-2025”ರಲ್ಲಿ ಮಡಿಕೇರಿಯ  ಬ್ರೈನೋಬ್ರೈನ್  ಕೇಂದ್ರದ 89 ವಿದ್ಯಾರ್ಥಿಗಳು ಕೇವಲ 4 ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. 38 ಚಾಂಪಿಯನ್ ಟ್ರೋಫಿ, 34 ಚಿನ್ನದ ಪದಕ ಮತ್ತು 17 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 78 ರಾಷ್ಟ್ರಗಳ ಒಟ್ಟು 23,128 ವಿದ್ಯಾರ್ಥಿಗಳು ವಿವಿಧ ರಾಷ್ಟ್ರದ ಬ್ರೈನೋಬ್ರೈನ್   ಕೇಂದ್ರಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೊಡಗು ಜಿಲ್ಲೆಯ ಮಡಿಕೇರಿಯ  ಬ್ರೈನೋಬ್ರೈನ್  ಕೇಂದ್ರದಿಂದ ಒಟ್ಟು 89 ವಿದ್ಯಾರ್ಥಿಗಳು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದ್ದರು. ಆನ್‌ಲೈನ್ ಸ್ಪರ್ಧೆಯಲ್ಲಿ 4 ನಿಮಿಷಗಳ ನಿಗಧಿತ ಸಮಯ ಮಾತ್ರವಿದ್ದು, ಮಡಿಕೇರಿ ಗುಡ್ಡಗಾಡು ಪ್ರದೇಶವಾಗಿದ್ದರಿಂದ ಇಂಟರ್‌ನೆಟ್ ಕನೆಕ್ಷನ್ ಹಾಗೂ ನೆಟ್‌ವರ್ಕ್ ಸಮಸ್ಯೆ ಇದ್ದರು ಸಹ ಸವಾಲಾಗಿ ಸ್ವೀಕರಿಸಿ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿ ಭಾಗವಹಿಸಿದ ಎಲ್ಲಾ 89 ಮಕ್ಕಳು…

Read More

ಮಡಿಕೇರಿ ಫೆ.12 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ, ರಾಜಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕರೇಶ್ವರ, ಜಿ.ಟಿ ರಸ್ತೆ, ಮಕ್ಕಂದೂರು, ಕೆ.ಎಸ್.ಆರ್.ಟಿ.ಸಿ, ಫೀಡರ್‍ನಲ್ಲಿ ವಿದ್ಯುತ್ ಸಹ ನಿರ್ವಾಹಣಾ ಕಾಮಗಾರಿಯನ್ನು ಫೆಬ್ರವರಿ, 13 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ಮಡಿಕೇರಿ ನಗರ, ಮೇಕೇರಿ, ಭಾಗಮಂಡಲ, ಸಂಪಾಜೆ, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಗಾಳಿಬೀಡು, ಚೆಟ್ಟಿಮಾನಿ. ಚೇರಂಬಾಣೆ, ಮಕ್ಕಂದೂರು, ಬೋಯಿಕೇರಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಕುಶಾಲನಗರ 220/66/11 ಕೆವಿ, ಸುಂಟಿಕೊಪ್ಪ 66/11 ಕೆವಿ, 66/11 ಕೆವಿ ಆಲೂರು ಸಿದ್ದಾಪುರ ಹಾಗೂ 33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ, 13 ರಂದು ಬೆಳಗ್ಗೆ 10 ರಿಂದ ಸಂಜೆ 5…

Read More