ಲೇಖಕ: admin

ಪೊನ್ನಂಪೇಟೆ ಫೆ.12 NEWS DESK : ಪೊನ್ನಂಪೇಟೆ ವ್ಯಾಪ್ತಿಯ ಬಿರುನಾಣಿ ಗ್ರಾಮದ ಅಣ್ಣಳಮಾಡ ಕುಟುಂಬಸ್ಥರ ಐನ್ ಮನೆ ಅಭಿವೃದ್ಧಿಗೆ ಹಾಗೂ ಐನ್ ಮನೆಗೆ ತೆರಳುವ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಐನ್ ಮನೆ ಮುಖ್ಯಸ್ಥರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು,  ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ  ಭರವಸೆ ನೀಡಿದರು.

Read More

ಮಡಿಕೇರಿ ಫೆ.12 NEWS DESK :  ಕ್ಷಯ ಮುಕ್ತ ಜಿಲ್ಲೆಯಾಗಿಸುವತ್ತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷಯ ರೋಗದ ಕುರಿತು ಅರಿವು ಕಾರ್ಯಾಗಾರ ಜಿ.ಪಂ.ಸಭಾಂಗಣದಲ್ಲಿ ನಡೆಯಿತು. ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ಜನರು ಸಹಕಾರ ನೀಡುವಂತಾಗಬೇಕು ಎಂದು ತಿಳಿಸಿದರು. ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರಧ ಡಾ.ಜೋಶ ತೋಮಸ್ ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿ ಕ್ಷಯ ರೋಗ ನಿರ್ಮೂಲನೆಗಾಗಿ ಕೈಗೊಂಡ ಕ್ರಮಗಳನ್ನು ಪ್ರಶಂಸಿಸಿ ಕೊಡಗು ಜಿಲ್ಲೆಗೆ ಕಂಚಿನ ಪದಕ ಲಭಿಸುವಂತೆ ಕಾರ್ಯನಿರ್ವಹಿಸಿದ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿ ಇದೀಗ 2025ರ ವೇಳೆಗೆ ಕ್ಷಯ ಮುಕ್ತ ಜಿಲ್ಲೆಯಾಗಿರುವ ಉದೇಶ ಹೊಂದಿದೆ ಎಂದರು. ಕೊಡಗು ಜಿಲ್ಲೆ 2015ಕ್ಕೆ ಹೋಲಿಸಿದರೆ 2023 ಕ್ಷಯ ರೋಗದ ಪ್ರಕರಣಗಳಲ್ಲಿ ಶೇ.20ರಷ್ಟು ಕಡಿಮೆ. ಆದ್ದರಿಂದ ಕ್ಷಯ ರೋಗ ನಿರ್ಮೂಲನೆಗೆ…

Read More

ವಿರಾಜಪೇಟೆ ಫೆ.12 NEWS DESK :  ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕೋತ್ಸವ ಹಾಗೂ ಸಂತ ಲೂರ್ದು ಮಾತೆಯ ವಾರ್ಷಿಕ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಹಿಂದಿನ ಮೂರು ದಿವಸಗಳಿಂದಲೇ ಧ್ವಜಾರೋಹಣ, ಬಲಿಪೂಜೆ, ಪ್ರಭೋದನೆ ಹಾಗೂ ನವೇನಾ ಪ್ರಾರ್ಥನೆ ಜರುಗಿತು. ನಂತರ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ಕೆ.ಆರ್.ಪೇಟೆಯ ಬಾಲ ಯೇಸು ದೇವಾಲಯದ ಧರ್ಮಗುರುಗಳಾದ ವಂದನೀಯ ಫಾದರ್ ಪೌಲೋಸ್ ಥಾಮಸ್ ಆಡಂಬರ ಗಾಯನ ಬಲಿಪೂಜೆ ನೆರವೇರಿಸಿದರು. ಈ ಸಂದರ್ಭ ಗಾಯನ ವೃಂದದವರಿಂದ ದೇವರ ಗಾಯನ ಹಾಗೂ ಪ್ರಾರ್ಥನೆ ಜರುಗಿತು. ದೀಪಾರಾಧನೆ, ಬೈಬಲ್ ವಾಚನ ನಡೆಸಲಾಯಿತು. ನಂತರ ಸಂತ ಅನ್ನಮ್ಮ ಹಾಗೂ ಸಂತ ಲೂರ್ದು ಮಾತೆಯ ಪ್ರತಿಮೆಗಳನ್ನು ವಿದ್ಯುತ್ ಹಾಗೂ ಹೂವು ಅಲಂಕೃತ ತೇರಿನಲ್ಲಿ ಪ್ರತಿಷ್ಠಾಪಿಸಿ ವಿರಾಜಪೇಟೆ ನಗರದಾದ್ಯಂತ ಮೆರವಣಿಗೆ ನಡೆಸಲಾಯಿತು. ಚರ್ಚ್ ಆವರಣದಿಂದ ಹೊರಟು ತೆಲುಗರ ಬೀದಿ, ದೊಡ್ಡಟ್ಟಿ ಚೌಕಿ, ಗಡಿಯಾರ ಕಂಬ, ಖಾಸಗಿ ಬಸ್ ನಿಲ್ದಾಣ ಹಾಗೂ ಕೆ. ಎಸ್. ಆರ್. ಟಿ. ಸಿ. ಬಸ್ ನಿಲ್ದಾಣದ ಮೂಲಕವಾಗಿ ಮೆರವಣಿಗೆ…

Read More

ಮಡಿಕೇರಿ ಫೆ.12 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಮೊಗರಗಲ್ಲಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಅಂಗನವಾಡಿಗಳ ಮಹತ್ವವನ್ನು ಪ್ರಸ್ತಾಪಿಸಿದರು. ಸರಕಾರವು ಪುಟಾಣಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವಂತೆ ಇಂದು ಅಂಗನವಾಡಿಗಳನ್ನು ತೆರೆಯುತ್ತಿದೆ. ವಿದ್ಯಾಭ್ಯಾಸದ ಮೊದಲನೇ ಹಂತವಾದ ಅಂಗನವಾಡಿ ಕೇಂದ್ರಗಳು ಮಕ್ಕಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಮೇಲ್ವಿಚಾರಕರು ಕಾರ್ಯನಿರ್ವಹಿಸಬೇಕಾಗಿದೆ ಎಂದರು. ನಿಗದಿತ ಸಮಯದೊಳಗೆ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ಸಂದರ್ಭ ಗುತ್ತಿಗೆದಾರರಿಗೆ ಸೂಚಿಸಿದರು. ಪುರಸಭಾ ಅಧ್ಯಕ್ಷರು, ಪುರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.12 NEWS DESK : ಕಾವೇರಿ ನದಿ ಪಾತ್ರದ ನೆಲ್ಯಹುದಿಕೇರಿಯಲ್ಲಿ ಹಿಂದೂ ಸಮುದಾಯಕ್ಕೆ ಸೇರಿದ ಬಡವರು, ಕೂಲಿ ಕಾರ್ಮಿಕರಿಗೆ ‘ಸ್ಮಶಾನ’ ಜಾಗವಿಲ್ಲದೆ, ಮೃತರ ಗೌರವಯುತ ಸಂಸ್ಕಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಮಶಾನ ಹೋರಾಟ ಸಮಿತಿಯ ಪ್ರಮುಖರಾದ ಪಿ.ಆರ್.ಭರತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಮಲೆಯಾಳಿ, ತಮಿಳು ಬಾಂಧವರು, ವಿವಿಧ ಜಾತಿ ಜನಾಂಗದ ಬಡ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಸುಮಾರು ಹದಿನೈದು ಸಾವಿರ ಮಂದಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರ ಕುಟುಂಬದಲ್ಲಿ ಸಂಭವಿಸುವ ಯಾವುದೇ ‘ಸಾವು’ ತೀವ್ರ ಆತಂಕವನ್ನು ಹುಟ್ಟು ಹಾಕುತ್ತದೆ. ಕಾರಣ, ಮೃತ ವ್ಯಕ್ತಿಗೆ ಗೌರವಯುತವಾಗಿ ಸಂಸ್ಕಾರಗಳನ್ನು ಮಾಡುವ ವ್ಯವಸ್ಥೆ ಗ್ರಾಮದಲ್ಲಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಕಾವೇರಿ ನದಿ ಪಾತ್ರದಲ್ಲಿ ಸುಮಾರು ಅರ್ಧ ಏಕರೆ ಜಾಗ ಸ್ಮಶಾನವಾಗಿ ಪ್ರಸ್ತುತ ಬಳಕೆಯಾಗುತ್ತಿದೆ. ವರ್ಷಂಪ್ರತಿ ಮಳೆಗಾಲದಲ್ಲಿ ಸ್ಮಶಾನದ ಜಾಗದ ಮಣ್ಣು ಕೊಚ್ಚಿ ಹೋಗುವುದರೊಂದಿಗೆ, ಅಲ್ಲಿ ದಫನ…

Read More

ಮಡಿಕೇರಿ ಫೆ.12 NEWS DESK : ನೂತನವಾಗಿ ಕಾರ್ಯಾರಂಭಗೊಂಡಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಚಿಕ್ಕಪೇಟೆ ಬಳಿ ಇರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಸಾರ್ವಜನಿಕ ಹಿತಾಸಕ್ತಿಯಲ್ಲಿ ಪುರಸಭೆ ಸದಸ್ಯರು ಶಾಸಕರಲ್ಲಿ ಶುದ್ಧ ನೀರಿನ ಘಟಕ ಮಂಜೂರು ಮಾಡುವಂತೆ ಮನವಿ ಮಾಡಿದ ಹಿನ್ನೆಲೆ ಶಾಸಕರು ವಿಶೇಷ ಅನುದಾನ ಒದಗಿಸಿದ್ದು, ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಶಾಸಕರು, ಇಂದಿನ ದಿನದಲ್ಲಿ ನೀರಿನ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು. ಅದರಲ್ಲೂ ಶುದ್ಧ ನೀರು ಸಿಗುವುದು ದುಸ್ತರ ಎಂಬಂತಾಗಿರುವ ದಿನಗಳಲ್ಲಿ ಶುದ್ಧ ನೀರಿನ ಘಟಕದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಚಿಕ್ಕಪೇಟೆಯ ಶಾಲೆಯ ಮುಖ್ಯ ಶಿಕ್ಷಕರು ಶಾಸಕರಿಗೆ ಮನವಿ ಸಲ್ಲಿಸಿದರು. ಶಾಸಕರು ಶಾಲಾ ಮಕ್ಕಳೊಂದಿಗೆ ಕೆಲ ಕ್ಷಣ ಕಳೆದರು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು, ಪುರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಅಧ್ಯಕ್ಷರು…

Read More

ಕೂಡಿಗೆ ಫೆ.12 NEWS DESK :  ಆಧುನಿಕತೆ ಎಲ್ಲೆಡೆ ವಿಜೃಂಭಿಸುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲಿ ನೋಡಿದರಲ್ಲಿ ಟಿವಿ, ಕಂಪ್ಯೂಟರ್ ಹಾಗೂ ಮೊಬೈಲ್ ಗಳಿಂದಾಗಿ ಪುಸ್ತಕಗಳನ್ನು ಓದುವ ಹವ್ಯಾಸವೇ ಮಾಯವಾಗುತ್ತಿದೆ ಎಂದು ಸಾಹಿತಿ ಹಾಗೂ ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಲೀಲಾಕುಮಾರಿ ತೊಡಿಕಾನ ವಿಷಾದಿಸಿದರು. ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಹಾರಂಗಿ ರಸ್ತೆಯ ಮೂಕಾಂಬಿಕಾ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಪುಸ್ತಕಗಳನ್ನು ಓದುವುದರಿಂದ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ನಾಡಿನ ಅಗ್ರಮಾನ್ಯ ಕವಿ, ಸಾಹಿತಿಗಳ, ಶರಣರ ವಿಚಾರಧಾರೆಗಳನ್ನು ಅರಿತು ನಮ್ಮಗಳ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.   ಇದರಿಂದಾಗಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಾಡು ಕಂಡ ಹೆಸರಾಂತ ನವ್ಯ ಕವಿ ಡಾ. ಶಿವರುದ್ರಪ್ಪ ಅವರು ರಚಿಸಿರುವ ಎದೆ ತುಂಬಿ ಹಾಡುವೆನು, ಕಾಣದಾ ಕಡಲಿಗೆ ಹಂಬಲಿಸಿದೇ ಮನಾ ಇತ್ಯಾದಿ ರಚನೆಗಳು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿವೆ. ಇಂದಿನ ವಿದ್ಯಾರ್ಥಿಗಳೂ ಕೂಡ ಕಥೆ, ಕವನಗಳನ್ನು ಬರೆಯುವ ಮೂಲಕ ಸಾಹಿತ್ಯದ ಅಭಿರುಚಿ…

Read More

ಮಡಿಕೇರಿ ಫೆ.12 NEWS DESK : ಬಾಳುಗೋಡು ಕೊಡವ ಸಮಾಜದ ಮೈದಾನ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಬಾಳುಗೋಡು ಕೊಡವ ಸಮಾಜ ಇದೇ ರೀತಿ ಕಾರ್ಯನಿರ್ವಹಿಸುತ್ತ ಮುಂದಿನ ದಿನಗಳಲ್ಲಿ ಸಮಾಜದ ಯುವಕರಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಮೈದಾನದ ಅಭಿವೃದ್ಧಿ ಕೈಗೊಂಡಿರುವುದಾಗಿ ತಿಳಿಸಿದರು. ಸಮಾಜ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳವಂತೆ ಸಲಹೆ ನೀಡಿದರು. ಗುತ್ತಿಗೆದಾರರಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಇದೇ ಸಂದರ್ಭ ಸೂಚಿಸಿದರು. ಸಮಾಜದ ಪ್ರಮುಖರ ಕೋರಿಕೆ ಮೇರೆಗೆ ಸಮಾಜದ ಮೈದಾನ ಅಭಿವೃದ್ಧಿಗೆ ಈಗ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಕೊಡವ ಸಮಾಜದ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದಿನಿಂದಲೂ ಅನೇಕ ಅನುದಾನಗಳನ್ನು ನೀಡುತ್ತಾ ಬಂದಿರುವುದಾಗಿ ಸಮಾಜದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿದರು. ಈ ಸಂದರ್ಭ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ, ಬಾಳುಗೋಡು ಕೊಡವ ಸಮಾಜ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಕುಶಾಲನಗರ ಫೆ.12 NEWS DESK : ಎನ್‍ಸಿಸಿಯ ವಿಶೇಷ ಸಾಧನೆಗಳಿಗಾಗಿ  ಕುಶಾಲನಗರ ತಾಲ್ಲೂಕಿನ ಹುಲುಸೆ ಗ್ರಾಮದ ಎನ್.ಸಿ.ಸಿ ಕೆಡೆಟ್ ಕ್ಯಾಪ್ಟನ್ ಹೆಚ್.ಎಸ್.ಕಿಶನ್‍ಗೆ ಮುಖ್ಯಮಂತ್ರಿಗಳ ಪ್ರಶಂಸಾ ಪದಕ ಲಭಿಸಿದೆ. ಮೈಸೂರಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‍ನಲ್ಲಿ ಬಿಇ ವಿದ್ಯಾರ್ಥಿಯಾಗಿರುವ ಕೆಡೆಟ್ ಕ್ಯಾಪ್ಟನ್ ಕಿಶನ್ ಎಚ್. ಎಸ್. ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್ (ಎನ್‍ಸಿಸಿ)ಗೆ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ಮುಖ್ಯಮಂತ್ರಿಗಳ ಪ್ರಶಂಸೆ ದೊರೆತಿದೆ. ಈ ಪ್ರಶಸ್ತಿಯನ್ನು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್  ಪ್ರದಾನ ಮಾಡಿದರು. ಕೆಡೆಟ್ ಕ್ಯಾಪ್ಟನ್ ಕಿಶನ್ ಎನ್‍ಸಿಸಿ ಪ್ರಯಾಣವು ಹಲವಾರು ಪ್ರತಿಷ್ಠಿತ ಸಾಧನೆಗಳಿಂದ ಗುರುತಿಸಲ್ಪಟ್ಟಿದೆ. 2023 ರಲ್ಲಿ ಉಡುಪಿಯ  ಅರೇಬಿಯನ್ ಸಮುದ್ರದಲ್ಲಿ ಸಾಗರ ನೌಕಾಯಾನ ದಂಡಯಾತ್ರೆಯಲ್ಲಿ ಭಾಗವಹಿಸಿ  240 ಕಿಮೀ (Whaler) ವೇಲರ್  ನೌಕಾಯಾನವನ್ನು ಯಶಸ್ವಿಯಾಗಿ ಕ್ರಮಿಸಿದ್ದರು. ಕರಾವಳಿಯುದ್ದಕ್ಕೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, 2024 ರಲ್ಲಿ ಆಲ್ ಇಂಡಿಯಾ ನೌಕಾ  ಸೈನಿಕ್ ಕ್ಯಾಂಪ್ (INS ಶಿವಾಜಿ, ಲೋನಾವಾಲ) ನಲ್ಲಿ ಕರ್ನಾಟಕ…

Read More

ಮಡಿಕೇರಿ ಫೆ.12 NEWS DESK : ಅಧಿಕಾರಿಗಳ ತಂಡದ ಸಮೇತ ಗ್ರಾಮಸ್ಥರ ಅಳಲನ್ನು ಸ್ವತಃ ಆಲಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನಡೆಗೆ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ ಕಾಲೂರು ಗ್ರಾಮದ ನಿವಾಸಿಗಳು ಮೆಚ್ಚಗೆ ವ್ಯಕ್ತಪಡಿಸಿದರು. ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಅಹವಾಲುಗಳನ್ನು ಆಲಿಸಬೇಕು ಎಂದು ಕಾಲೂರು ಗ್ರಾಮಸ್ಥರು ಸಲ್ಲಿಸಿದ ಮೇರೆಗೆ ಡಾ.ಮಂತರ್ ಗೌಡ  ಕಂದಾಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಕುಡಿಯುವ ನೀರಿನ ಇಲಾಖೆ, ಚೆಸ್ಕಾಂ , ತಾಲ್ಲೂಕು ಪಂಚಾಯತ್ ಇ.ಒ, ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳ ದಂಡಿನೊಂದಿಗೆ ತೆರಳಿ ಸುಮಾರು ಎರಡು ಗಂಟೆಗಳ ಕಾಲ ಜನ ಸ್ಪಂದನ ಸಭೆ ನಡೆಸಿ ವಸ್ತುಸ್ಥಿತಿಯ ವಿವರ ಪಡೆದರು. ಆಡಳಿತ ವ್ಯವಸ್ಥೆಯೇ ಶಾಸಕರೊಂದಿಗೆ ತಮ್ಮ ಬಳಿ ಬಂದಿದ್ದನ್ನು ಕಂಡು ಗ್ರಾಮದ ಜನತೆ ತಮ್ಮ ಬಹುಕಾಲದ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು. ಹದಿನೈದು ವರ್ಷಗಳಿಂದ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳದ ಸೇತುವೆ ಕಾಮಗಾರಿ, ದಶಕಗಳ ಕಾಲದಿಂದ ಹದಗೆಟ್ಟಿರುವ ರಸ್ತೆಗಳು, ವಿಪುಲವಾಗಿ ಜಲಮೂಲ…

Read More