ADVT ::: ಆತ್ಮೀಯ ಗ್ರಾಹಕರೇ ::: ನಿಮ್ಮ ವಾಹನ ವಿಮೆಯನ್ನು ನವೀಕರಣಗೊಳಿಸಲು ನಾವು ನಿಮಗೆ ಸಹಾಯ ಮಾಡಲು ಬಯಸುತ್ತೇವೆ. ನಿಮ್ಮ ಎಲ್ಲಾ ವಾಹನಗಳ ನೋಂದಣಿ ಸಂಖ್ಯೆಗಳನ್ನು ನಮಗೆ ಈ ಮೂಲಕ ಕಳುಹಿಸಿ ಕೊಡಬೇಕಾಗಿ ವಿನಂತಿ. ನಾವು ಅವುಗಳ ರಿನೀವಲ್ ದಿನಾಂಕವನ್ನು ನಿಮಗೆ ಜ್ಞಾಪಿಸುತ್ತೇವೆ. ಎಲ್ಲಾ ಕಂಪೆನಿಗಳ ವಾಹನ ವಿಮೆಯನ್ನು ಗರಿಷ್ಠ ರಿಯಾಯಿತಿಯೊಂದಿಗೆ ಮತ್ತು ಕ್ಯಾಶ್ ಬ್ಯಾಕ್ ಜೊತೆಗೆ ರಿನಿವಲ್ ಮಾಡಿಕೊಡಲಾಗುವುದು. (ಸಂಪರ್ಕಿಸಿ : ಶ್ರೀ ಸಾಯಿ ಇನ್ಶುರೆನ್ಸ್ ಪಾಯಿಂಟ್, ಕೊಡವ ಸಮಾಜ ಕಾಂಪ್ಲೆಕ್ಸ್, ಮುಖ್ಯ ರಸ್ತೆ, ಮಡಿಕೇರಿ. 97429 16784, 97429 16784, 90367 80367)
ಲೇಖಕ: admin
ಮಡಿಕೇರಿ ಫೆ.12 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರಿಗೆ ಕೃಷಿ ಇಲಾಖೆಯ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು. ಕುಶಾಲನಗರ ರೈತ ಸಂಪರ್ಕ ಕೇಂದ್ರದ ಸಭಾಂಗಣದಲ್ಲಿ ಫಲಾನುಭವಿಗಳಿಗೆ ವಿವಿಧ ಯಂತ್ರಗಳನ್ನು ವಿತರಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕರು ಹುದ್ದೆಯನ್ನು ಅರಸಿ ನಗರ ಪ್ರದೇಶಗಳಲ್ಲಿ ಸುತ್ತುವುದರ ಬದಲು ಕೃಷಿಯಲ್ಲಿ ತೊಡಗುವಂತೆ ಸಲಹೆ ನೀಡಿದರು. ಅಲ್ಲದೇ ಈಗಾಗಲೇ ಅಧುನಿಕ ತಂತ್ರಜ್ಞಾನ ವ್ಯವಸ್ಥೆ ಅಡಿಯಲ್ಲಿ ಬೇಸಾಯ ಮಾಡಲು ಅನುಕೂಲವಾಗುವಂತೆ ವಿವಿಧ ಯಂತ್ರೋಪಕರಣಗಳನ್ನು ಸಂಬಂಧಿಸಿದ ಇಲಾಖೆಯ ವತಿಯಿಂದ ಸಹಾಯಧನ ನೀಡುತ್ತಿರುವುದನ್ನು ರೈತರು ಸದುಪಯೋಗಪಡೆಸಿಕೊಳ್ಳುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಮಡಿಕೇರಿ ಕೃಷಿ ಜಂಟಿ ನಿರ್ದೇಶಕ ಬಿ.ಎಸ್.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕ ಡಿ.ಎಸ್. ಸೋಮಶೇಖರ್, ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ.ವೀರಣ್ಣ, ಕೂಡಿಗೆ ಕೃಷಿ ಕ್ಷೇತ್ರದ…
*JOB OPPORTUNITY : TEACHER VACANCY* A reputed school in Virajpet is hiring for high posting positions. We are seeking teachers for all subjects kindergarten/ elementary and head positions. Attractive salary packages and accommodation provided. Join us to shape young minds and grow your career in a supportive environment. For more details, contact 8310384621, Contact:9847490000
ಮಡಿಕೇರಿ ಫೆ.12 : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2025 ರ ಅಂಗವಾಗಿ ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಮಡಿಕೇರಿ ನಗರದ ಗಾಂಧಿ ಮೈದಾನದಿಂದ ಮುಖ್ಯ ರಸ್ತೆಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾವರು ಜಾಥಾಗೆ ಚಾಲನೆ ನೀಡಿದರು. ಜಾಥವು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು, ಚಾಲನಾ ತರಬೇತಿ ಶಾಲೆಗಳು, ಆಟೋರಿಕ್ಷಾ/ ಟ್ಯಾಕ್ಸಿ/ ಚಾಲಕ ಮಾಲೀಕರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜರುಗಿತು. ರಾಜು ಕಲಾವಿದರ ತಂಡದ ವತಿಯಿಂದ ರಸ್ತೆ ನಾಟಕಗಳ ಮುಖೇನ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪ್ರಮುಖ ಪಟ್ಟಣಗಳಲ್ಲಿ ಕರಪತ್ರ ಹಂಚಿಕೆ, ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಕೆ ಕಾರ್ಯಕ್ರಮಗಳು, ಶಾಲಾ-ಕಾಲೇಜುಗಳಲ್ಲಿ ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳನ್ನು ಜರುಗಿಸಿದ್ದು, ಮಕ್ಕಳಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಯಿತು. ಜಾಥಗೆ ಚಾಲನೆ ನೀಡಿದ ಮಾತನಾಡಿದ ಜಿಲ್ಲಾಧಿಕಾರಿ ಅವರು ಸಾರ್ವಜನಿಕರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ ರಸ್ತೆ ಅಪಘಾತಗಳನ್ನು ತಡೆಯುವುದರಲ್ಲಿ ಯಶಸ್ವಿಯಾಗುವಂತೆ ಹಾಗೂ…
ಮೈಸೂರು ಫೆ.12 NEWS DESK : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲ ಬಳಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ರಾತ್ರಿ ಪುಣ್ಯಸ್ನಾನ ಮಾಡಿ, ಗಂಗಾಪೂಜೆ, ದೀಪಾರತಿ ನೆರವೇರಿಸಿದರು.
ಕುಶಾಲನಗರ ಫೆ.12 NEWS DESK : ಕುಶಾಲನಗರ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆಯು ಕೂಡುಮಂಗಳೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸರಕಾರದ ಎಲ್ಲಾ ಇಲಾಖೆಯ ಸಂಪೂರ್ಣವಾದ ಸಮಗ್ರ ಮಾಹಿತಿಯನ್ನು ಸಾರ್ವಜನಿಕರಿಗೆ ಸಂಬಂಧಿಸಿದ ಇಲಾಖೆಯವರು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಸಭೆಗೆ ಬರದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಕಾರ್ಯನಿರ್ವಾಹಣಾಧಿಕಾರಿಗೆ ಸೂಚಿಸಿದರು. ಆಹಾರ ಇಲಾಖೆಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿರುವ ನ್ಯಾಯ ಬೆಲೆ ಅಂಗಡಿಗಳಿಗೆ ಪಡಿತರ ವಸ್ತುಗಳ ಫಲಾನುಭವಿಗಳಿಗೆ ವಿತರಣೆ ಅಗುವ ಬಗ್ಗೆ ಮತ್ತು ಪಡಿತರ ಚೀಟಿಯ ವ್ಯವಸ್ಥೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಾಲ್ಲೂಕು ಅಹಾರ ನಿರೀಕ್ಷಣಾಧಿಕಾರಿ ಸಭೆಗೆ ಮಾಹಿತಿ ಒದಗಿಸಿದರು. ಹಿರಿಯ ಕಾರ್ಮಿಕ ಇಲಾಖೆ ಅಧಿಕಾರಿ ಸಭೆಗೆ ಬರದೆ ಸಹಾಯಕ ಅಧಿಕಾರಿಯನ್ನು ಕಳುಹಿಸಿದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಿಭಾಗದ ಕಾರ್ಮಿಕರಿಗೆ ಸಂಪೂರ್ಣವಾದ ಮಾಹಿತಿಯನ್ನು ಮತ್ತು ಸರಕಾರದ ಹಣವನ್ನು ವಿವಿದ ವಿಭಾಗದ ಸೌಲಭ್ಯಗಳಿಗೆ ನೀಡಿದ ವರದಿಯನ್ನು…
ಮಡಿಕೇರಿ ಫೆ.12 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು, ನಾಪೋಕ್ಲು ಬ್ಲಾಕ್-ಭಾಗಮಂಡಲ ಹೋಬಳಿಯ ಅಯ್ಯಂಗೇರಿಯಲ್ಲಿ ರಸ್ತೆ ಕಾಮಗಾರಿ ಚಾಲನೆ ದೊರೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಅನುದಾನದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಹೇಳಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕಾಂಗ್ರೆಸ್ ಮುಖಂಡರು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಫೆ.12 NEWS DESK : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಒಳಪಡುವ ಶ್ರೀ ಆಂಜನೇಯ ಮತ್ತು ಕೋಟೆ ಗಣಪತಿ ದೇವಾಲಯದ ಕಾರ್ಯಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 3 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು(ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು). ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-3 (ಸ್ವಚ್ಛತಗಾರ ಮತ್ತು ಕಾವಲುಗಾರರು) ವೇತನ ರೂ.9,600 ಮತ್ತು ಇತರೆ, ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ. ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಯಾವುದೇ…
ಮಡಿಕೇರಿ ಫೆ.12 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25ನೇ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾಸುಬ್ಬಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯ ವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿಎ, ಬಿಕಾಂ, ಬಿಲಿಬ್ ಐಎಸ್ಸಿ, ಬಿಬಿಎ, ಬಿಸಿಎ, ಬಿಎಸ್ಸಿ, ಬಿಎಸ್‍ಡಬ್ಲ್ಯೂ) ಹಾಗು ಸ್ನಾತಕೋತ್ತರ ಪಿಜಿ ಕೋರ್ಸ್‍ಗಳಾದ(ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್‍ಐ.ಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್‍ಡಬ್ಲೂ) (ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ. ಪ್ರವೇಶಾತಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಜೆರಾಕ್ಸ್, ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್, ಪದವಿ…
ವಿರಾಜಪೇಟೆ ಫೆ.12 NEWS DESK : ಸಮಾಜದಲ್ಲಿ ಇಂದು ನೆಮ್ಮದಿಯಿಂದ ಬದುಕಲು ಪರಸ್ಪರ ಸೌಹಾರ್ದತೆ ಅಗತ್ಯ. ಜನರು ತಮ್ಮ ತಮ್ಮ ಧರ್ಮಗಳ ಮೂಲ ಆಶಯಗಳನ್ನು ಅರಿತುಕೊಂಡರೆ ದ್ವೇಷಗಳಿಗೆ ಅವಕಾಶವೇ ಇರುವುದಿಲ್ಲ. ದ್ವೇಷ ಸಂಪೂರ್ಣವಾಗಿ ದೂರವಾದರೆ ಸಹಜವಾಗಿ ಸೌಹಾರ್ದತೆ ಮೂಡುತ್ತದೆ. ಸೌಹಾರ್ತೆಯಿಂದ ಮಾತ್ರ ಸರ್ವ ಜನಾಂಗದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.)ನ ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ಅಭಿಪ್ರಾಯಪಟ್ಟರು. ಇತಿಹಾಸ ಪ್ರಸಿದ್ಧ ಅಂಬಟ್ಟಿ ಮಖಾಂ ಉರೂಸ್ ನ ಪ್ರಮುಖ ದಿನದ ಅಂಗವಾಗಿ ಮಖಾಂ ಆವರಣದಲ್ಲಿ ನಡೆದ ಸಾರ್ವಜನಿಕ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗಿನ ಕೋಮು ಸೌಹಾರ್ದತೆಯ ಅಸ್ಮಿತೆಯನ್ನು ಉಳಿಸಿಕೊಳ್ಳುವುದರಲ್ಲಿ ಉರೂಸ್ ಗಳ ಪಾತ್ರ ಮಹತ್ವದ್ದಾಗಿದೆ. ಸೂಫಿ ಸಂತರ ಹೆಸರಿನಲ್ಲಿ ನಡೆಯುವ ಜಿಲ್ಲೆಯ ಎಲ್ಲಾ ಉರೂಸ್ ಗಳು ಮನುಷ್ಯ ಸ್ನೇಹದ ಮೂಲಕ ಎಲ್ಲ ಧರ್ಮದ ಜನರನ್ನು ಪರಸ್ಪರ ಒಗ್ಗೂಡಿಸುವಲ್ಲಿ ದೊಡ್ಡ ಕೊಡುಗೆಗಳನ್ನು ನೀಡುತ್ತಿದೆ ಎಂದು ಹೇಳಿದರು. ಧಾರ್ಮಿಕ ಆಚರಣೆಯಾಗಿರುವ ಉರೂಸ್ ಗಳು ಸಂವಿಧಾನದ…






